ತಾಜಾ ಸುದ್ದಿ

ʼದಾಂಡಿಯಾ ನೈಟ್ಸ್ʼಗೆ ಷರತ್ತುಬದ್ಧ ಅನುಮತಿ: ಪ್ರತಿಭಟನೆಯ ಎಚ್ಚರಿಕೆ ನೀಡಿದ ಬಜರಂಗದಳ

ಮಂಗಳೂರು: ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮಂಗಳೂರು ನಗರ ಪೊಲೀಸ್ ಇಲಾಖೆಗೆ ಹಿಂದೂ ಪರ ಸಂಘಟನೆಗಳು ಇವೆಂಟ್ ಗೆ ಅವಕಾಶ ನೀಡದಂತೆ ಮನವಿ ಮಾಡಿವೆ. ದಾಂಡಿಯಾ ನೃತ್ಯ ಉತ್ತರಭಾರತದ ಪವಿತ್ರ ಧಾರ್ಮಿಕ ಕಾರ್ಯಕ್ರಮ. ಈ ಕಾರ್ಯಕ್ರಮದ ಹೆಸರಿನಲ್ಲಿ ಮೋಜು ಮಸ್ತಿ ಮಾಡಲಾಗುತ್ತೆ, ಅಸಭ್ಯವಾಗಿ ವರ್ತಿಸಲಾಗುತ್ತೆ ಎಂದು ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ವಿಶ್ವ ಹಿಂದೂ ಪರಿಷತ್ ಮನವಿ ಬೆನ್ನಲ್ಲೇ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ತುರ್ತು ಸಭೆ ಕರೆದಿದ್ದಾರೆ. ಸಭೆಯ ಬಳಿಕ ಷರತ್ತುಬದ್ಧವಾಗಿ ದಾಂಡಿಯಾ ಇವೆಂಟ್ಸ್ …

Read More »

ವಿಟ್ಲ: ದನ ಮಾಂಸದ ತ್ಯಾಜ್ಯ ರಸ್ತೆಬದಿ ಬಿಸಾಡಿದ ದುಷ್ಕರ್ಮಿಗಳು…!

ಬಂಟ್ವಾಳ: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲಡ್ಕ – ವಿಟ್ಲ ರಸ್ತೆಯ ಮಧ್ಯ ಭಾಗದ ಕೆಲಿಂಜ ಎಂಬಲ್ಲಿ ಬಸ್ ನಿಲ್ದಾಣದ ಬಳಿ ರಸ್ತೆಯ ಬದಿಯಲ್ಲಿ ದನದ ಬೇರೆ ಬೇರೆ ಭಾಗವನ್ನು ಎಸೆದು ಹೋದ ಘಟನೆ ನಡೆದಿದ್ದು, ಇದನ್ನು ನೋಡಿದ ಸ್ಥಳೀಯರು ಗ್ರಾ.ಪಂ.ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಗ್ರಾ.ಪಂ.ಸದಸ್ಯರು ವಿಟ್ಲ ಪೋಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ವಿಟ್ಲ ಪೋಲಿಸರು ‌ಬೇಟಿ ನೀಡಿ ತ್ಯಾಜ್ಯ …

Read More »

ಮಂಗಳೂರು:ಅ.23ರಂದು “ಪಿಲಿ ನಲಿಕೆ-2023” ಸ್ಪರ್ಧಾಕೂಟ

ಮಂಗಳೂರು: ಪಿಲಿನಲಿಕೆ ಪ್ರತಿಷ್ಠಾನ(ರಿ.) ಹಾಗೂ ನಮ್ಮ ಟಿ.ವಿ.ಯ ಜಂಟಿ ಆಶ್ರಯದಲ್ಲಿ ಜಿಲ್ಲೆಯ ಆಯ್ದ 10 ಪ್ರಸಿದ್ಧ ಹುಲಿವೇಷ ತಂಡಗಳ ಮಧ್ಯೆ “ಪಿಲಿ ನಲಿಕೆ-2023″ 8ನೇ ಆವೃತ್ತಿ ಸ್ಪರ್ಧೆಯು ಅ. 23ರಂದು ಸೋಮವಾರ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವುದು” ಎಂದು ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ತುಳುನಾಡಿನ ಅಪ್ರತಿಮ ಕಲಾ ಪರಂಪರೆಯಲ್ಲೊಂದಾದ ಹುಲಿವೇಷ ಇಂದು ಕುಣಿತ, ಬಣ್ಣಗಾರಿಕೆ, ನರ್ತನ, ಹಿನ್ನಲೆ ಸಂಗೀತ ಹೀಗೆ ಎಲ್ಲಾ ವಿಭಾಗದಲ್ಲೂ ತನ್ನ ಮೂಲ ಸ್ವರೂಪವನ್ನು ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಮೂಲ ಸೊಗಡಿನೊಂದಿಗೆ ಉಳಿಸಿ, …

Read More »

BREAKING:ಚರಂಡಿ ಸ್ವಚ್ಛಗೊಳಿಸುವ ವೇಳೆ ಸಾವನ್ನಪ್ಪಿದವರ ಕುಟುಂಬಕ್ಕೆ ಸರ್ಕಾರ 30 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ:ದೇಶದಲ್ಲಿನ ಒಳಚರಂಡಿ ಸಾವಿನ ಘಟನೆಗಳನ್ನು ಕೇಳಿರುವ ಸುಪ್ರೀಂ ಕೋರ್ಟ್ ಶುಕ್ರವಾರ, ಚರಂಡಿಗಳನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಾವನ್ನಪ್ಪುವವರ ಕುಟುಂಬಕ್ಕೆ ಸರ್ಕಾರವು 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕೆಂದು ಹೇಳಿದೆ. ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್ ಮತ್ತು ಅರವಿಂದ್ ಕುಮಾರ್ ಅವರನ್ನೊಳಗೊಂಡ ಪೀಠವು, ಒಳಚರಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಶಾಶ್ವತ ಅಂಗವೈಕಲ್ಯಕ್ಕೆ ಒಳಗಾಗುವವರಿಗೆ ಕನಿಷ್ಠ ಪರಿಹಾರವಾಗಿ 20 ಲಕ್ಷ ರೂ.ನೀಡಬೇಕು. ‘ಹಸ್ತಚಾಲಿತ ಕಸವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಖಚಿತಪಡಿಸಿಕೊಳ್ಳಬೇಕು’ ಎಂದು ಪೀಠ ಹೇಳಿದೆ. ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಭಟ್, ಕ್ಲೀನರ್ ಇತರ ಅಂಗವೈಕಲ್ಯವನ್ನು ಅನುಭವಿಸಿದರೆ …

Read More »

ಮಂಗಳೂರು: ಪುರುಷನ ಬಾಯೊಳಗೆ, ಮಹಿಳೆಯ ಹೇರ್ ಬ್ಯಾಂಡ್ ನಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ

ಮಂಗಳೂರು: ನಗರದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 11 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ವಿಮಾನದಲ್ಲಿ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ, ಇವರು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈ ವಿಮಾನದಲ್ಲಿದ್ದ ಮುಖ ಗವಸು ಧರಿಸಿದ್ದ ಪುರುಷ ಪ್ರಯಾಣಿಕನೊಬ್ಬನ ಕೆನ್ನೆಯ ಭಾಗ ಅಸಹಜವಾಗಿ ಕಂಡು ಬರುತ್ತಿತ್ತು. ಅದರಂತೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನ ಬಾಯಲ್ಲಿ ಎರಡು ಚಿನ್ನದ ತುಂಡುಗಳು ಪತ್ತೆಯಾಗಿದೆ‌. ಈತ ಚಿನ್ನವನ್ನು …

Read More »

ಸುರತ್ಕಲ್: ಕುಳಾಯಿ ಬೀಚ್ ನಲ್ಲಿ ಮುಳುಗಿ ಬಾಲಕಿ ಸಾವು..!

ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಶಾ ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಳ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾಳೆ. ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ …

Read More »

ಉಡುಪಿ: ಭಾರತ್ ಮೊಬೈಲ್ ಸಂತೆಕಟ್ಟೆ 2 ನೇ ವರ್ಷಕ್ಕೆ ಪಾದಾರ್ಪಣೆ – ನವರಾತ್ರಿ ಪ್ರಯುಕ್ತ ವಿಶೇಷ ಕೊಡುಗೆ

ಉಡುಪಿ: ಭಾರತ್ ಮೊಬೈಲ್ಸ್ ಸಂತೆಕಟ್ಟೆ ಇದರ 2ನೇ ವರ್ಷಕ್ಕೆ ಪಾದಾರ್ಪಣೆ ಹಾಗೂ ನವರಾತ್ರಿ ಪ್ರಯುಕ್ತ ವಿಶೇಷ ಕೊಡುಗೆಯನ್ನು ಅಕ್ಟೋಬರ್ 15ರಿಂದ ಡಿಸೆಂಬರ್ 31ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ಕೊಡುಗೆಯಲ್ಲಿ ಸ್ಕ್ರಾಚ್ ಆಂಡ್ ವಿನ್ ನಲ್ಲಿ ಬಹುಮಾನವನ್ನು ಹಾಗೂ ಖಚಿತ ಉಡುಗೊರೆಯನ್ನು ಪಡೆಯಬಹುದಟಗಿದೆ. ಇಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಲೋನ್ ನಲ್ಲಿ ಮೊಬೈಲ್ ಖರೀದಿಸಿ ನಂತರ ಪಾವತಿಸುವ ವಿಧಾನವು ಇದ್ದು,ಅದಲ್ಲದೇ ಗ್ರಾಹಕರ ಗ್ರಾಹಕರ ಕನಸಿನ ಐ ಫೋನ್ ಅತೀ ಕಡಿಮೆ ಡೌನ್ ಪೇಮೆಂಟಿನೊಂದಿಗೆ ಯಾವುದೇ ಬಡ್ಡಿ ದರ ಇಲ್ಲದೇ ಪಡೆದುಕೊಳ್ಳಬಹುದಾಗಿದೆ. ಹಾಗೂ ಇಲ್ಲಿ ಆನ್ ಲೈನ್ …

Read More »

ಲಲಿತಾ ಪಂಚಮಿ- ಕಟೀಲು ಕ್ಷೇತ್ರದಲ್ಲಿ ಮಹಿಳಾ ಭಕ್ತರಿಗೆ ವಿತರಿಸಲು 20 ಸಾವಿರ ಶೇಷ ವಸ್ತ್ರ

ಕಟೀಲು: ನವರಾತ್ರಿ ಮಹೋತ್ಸವ ಶುಭ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲಲಿತಾ ಪಂಚಮಿ ಆಚರಣೆ ನಡೆದಿದ್ದು, ಇಂದು ಮುಂಜಾನೆಯಿಂದಲೇ ಸಾವಿರಾರು ಮಂದಿ ಭಕ್ತರು ಕಟೀಲು ಕ್ಷೇತ್ರಕ್ಕೆ ಭೇಟಿ ನೀಡಿದರು.ದೇಗುಲದಲ್ಲಿ ಚಂಡಿಕಾ ಹೋಮ, ವಿವಿಧ ಸೇವೆಗಳು ನಡೆಯುತ್ತಿದ್ದು, ರಾತ್ರಿ ಅನ್ನಪ್ರಸಾದ ಸ್ವೀಕರಿಸುವ ಮಹಿಳಾ ಭಕ್ತರಿಗೆ ದೇವರ ಶೇಷ ವಸ್ತ್ರ ವಿತರಿಸಲಾಗುತ್ತದೆ, ಈಗಾಗಲೇ ಸುಮಾರು ‌20 ಸಾವಿರ ಶೇಷವಸ್ತ್ರಗಳನ್ನು ವಿತರಿಸಲು ಸಿದ್ಧತೆ ಮಾಡಿ‌ ಕೊಳ್ಳಲಾಗಿದೆ. ಸಂಜೆಯಿಂದಲೇ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಜನಸಂದಣಿಯನ್ನು ನಿಭಾಯಿಸಲು ಸರತಿ ಸಾಲಿನ ವ್ಯವಸ್ಥೆ ಕಲ್ಪಿಸಲಾಗಿದೆ.

Read More »

ಮಂಗಳೂರು ಪಣಂಬೂರು ಬೀಚ್‌ನಲ್ಲಿ ಬೆಂಗಳೂರು ಮೂಲದ ಜೋಡಿ ಶವ ಪತ್ತೆ..!

ಮಂಗಳೂರು: ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಬೆಂಗಳೂರಿನ ಜೋಡಿ ಶವ ರೂಪದಲ್ಲಿ ಪತ್ತೆಯಾಗಿದೆ. ಮಧ್ಯ ವಯಸ್ಸಿನ ವ್ಯಕ್ತಿ ಮತ್ತು ಮಹಿಳೆ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ . ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದೆ. ಮೃತರನ್ನು ಲಕ್ಷ್ಮಿ(40) ಮತ್ತು ಬೋರಲಿಂಗಯ್ಯ (45) ಎಂದು ಗುರುತ್ತಿಸಲಾಗಿದ್ದು, ಬೆಂಗಳೂರು ಮೂಲದವರಾಗಿದ್ದಾರೆ, ನಿನ್ನೆ ಬೆಂಗಳೂರಿನಿಂದ ಆಗಮಿಸಿದದ್ದ ಈ ಜೋಡಿ ಇಂದು ಮುಂಜಾನೆ 5 ಗಂಟೆ ಸುಆರಿಗೆ ಪಣಂಬೂರಿಗೆ ಬಂದು ಸಮುದ್ರಕ್ಕೆ ಧುಮುಕಿದ್ದಾರೆ. ಸಮುದ್ರಕ್ಕೆ ಹಾರುವ ಮುಂಚೆ ತಮ್ಮ ಮೋಬೈಲ್ ಮತ್ತಿರ ಸೊತ್ತುಗಳನ್ನು ತೀರದಲ್ಲೇ ಬಿಟ್ಟಿದ್ದರಿಂದ ಪೊಲೀಸರು ಸಂಬಂಧಿಕರನ್ನು ಸಂಪರ್ಕಿಸಿ ಮಾಹಿತಿ …

Read More »

ಸೌಜನ್ಯಳ 28 ಹುಟ್ಟುಹಬ್ಬ : ಸಮಾಧಿ ಬಳಿ ಮೂರ್ತಿ ಪ್ರತಿಷ್ಠಾಪನೆ

ಬೆಳ್ತಂಗಡಿ: 2012ರಲ್ಲಿ ದುಷ್ಟರ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ  28ನೇ ವರ್ಷದ ಹುಟ್ಟುಹಬ್ಬದಂದು ಆಕೆಯ ಸಮಾಧಿ ಬಳಿಯೇ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಸೌಜನ್ಯ ಜೀವಂತವಾಗಿದ್ದರೆ ಆಕೆ ತನ್ನ 28ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಳು. ಬುಧವಾರ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ನಿರ್ಮಿಸಿದ ಅಂದಾಜು ಒಂದುವರೆ ಅಡಿ ಎತ್ತರದ ಕೂತಿರುವ ಶೈಲಿಯ ಕಲ್ಲಿನ ಪ್ರತಿಮೆ ಪ್ರತಿಷ್ಠಾಪನೆಗೊಳಿಸಿ ನವರಾತ್ರಿ ಪ್ರಯುಕ್ತ 9 ತಂಡದ ಭಜನೋತ್ಸವ ನಡೆಯಿತು. ಸೌಜನ್ಯ ನಿವಾಸದಲ್ಲಿ ಆಕೆಯ ಸಮಾಧಿ ಬಳಿಯೇ ಈ  ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಆ ಸಂದರ್ಭ ಹಲವು ಸುಳ್ಯ ಭಾಗದ …

Read More »

You cannot copy content of this page.