ತಾಜಾ ಸುದ್ದಿ

ಬ್ರಹ್ಮಾವರ: ಮೂರು ಬೈಕ್‌ಗಳು ಮುಖಾಮುಖಿ ಡಿಕ್ಕಿ- ಓರ್ವ ಮೃತ್ಯು

ಬ್ರಹ್ಮಾವರ: ಮೂರು ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದು ಓರ್ವ ಯುವಕ ಮೃತಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣದ ಅಂಗನವಾಡಿ ಸಮೀಪ ನಡೆದಿದೆ. ಮೃತಪಟ್ಟ ಯುವಕ ಪಾರಂಪಳ್ಳಿಯ ರವಿಯಾನೆ ರವೀಂದ್ರ ಪೂಜಾರಿ(30) ಎಂದು ಗುರುತಿಸಲಾಗಿದೆ. ಕೋಡಿ ಕನ್ಯಾಣದಿಂದ ಪಾರಂಪಳ್ಳಿಗೆ ಹೋಗುತ್ತಿದ್ದ ಎರಡು ಬೈಕ್ ಗಳು ಪಾರಂಪಳ್ಳಿಯಿಂದ ಬರುತ್ತಿದ್ದ ಬೈಕ್ ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಲ್ಲದೆ ಅಪಘಾತ ನಡೆದ ಸ್ಥಳದ ವಿರುದ್ದ ದಿಕ್ಕಿನಲ್ಲಿ ಯಾವುದೇ ಪಾರ್ಕಿಂಗ್ ಸಿಗ್ನಲ್ ಇಲ್ಲದೆ ರಸ್ತೆ ಬದಿಯಲ್ಲಿ ಕಾರೊಂದು …

Read More »

ಸುರತ್ಕಲ್: ಕ್ರಿಕೆಟ್ ಬೆಟ್ಟಿಂಗ್ ಆರೋಪ- ಇಬ್ಬರ ಬಂಧನ

ಸುರತ್ಕಲ್: ವಾಟ್ಸ್ ಆ್ಯಪ್ ಗ್ರೂಪ್‌ ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ ಸುರತ್ಕಲ್ ಕಟ್ಲ ನಿವಾಸಿ ಮೂಢಾ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ವ್ಯಾಪಾರ ಮಾಡುತ್ತಿದ್ದ ಪ್ರವೀಣ್ ಮತ್ತು ಚೊಕ್ಕಬೆಟ್ಟು ಕ್ರಾಸ್ ವಿಶಾಲ್ ಮಾರ್ಟ್ ಬಳಿಯ ನಿವಾಸಿ ಮೂಢಾ ಮಾರುಕಟ್ಟೆಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುವ ಮುನವ್ವರ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪ್ರವೀಣ್ ವಾಟ್ಸ್‌ ಆ್ಯಪ್ ಗ್ರೂಪ್‌ಗಳನ್ನು ಮಾಡಿಕೊಂಡು ಅದರಲ್ಲಿ ಕ್ರಿಕೆಟ್ ಬೆಟ್ಟಿಂಗ್‌ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ …

Read More »

ಮಂಗಳೂರು :ವಿದೇಶದಲ್ಲಿ ತಲೆಮರೆಸಿಕೊಂಡಿದ್ದ, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಅಂದರ್

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ ಆರೋಪಿ. ಈತ ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ, ಪೊಲೀಸರಿಗೂ ಸಿಗದೇ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ. ಆದ್ದರಿಂದ ಮಂಗಳೂರು ಗ್ರಾಮಾಂತರ ಪೊಲೀಸರು ಈತನ ವಿರುದ್ಧ ಲುಕ್ ಔಟ್ ನೋಟೀಸ್ ಹೊರಡಿಸಿತ್ತು. ಅಕ್ಟೋಬರ್ 14ರಂದು ಈತನು ಸೌದಿ ಅರೇಬಿಯಾದಿಂದ …

Read More »

ಈಜಲು ತೆರಳಿ ನಾಪತ್ತೆಯಾದ ವಿದ್ಯಾರ್ಥಿಯ ಮೃತದೇಹ ಪತ್ತೆ

ಪುತ್ತೂರು: ಕೆಯ್ಯೂರು ಗ್ರಾಮದ ಎರಕ್ಕಲ ಬಳಿ ಸ್ನೇಹಿತರೊಂದಿಗೆ ಈಜಲು ತೆರಳಿ ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17) ಎಂದು ಗುರುತಿಸಲಾಗಿದೆ. ಈತ ಸುಳ್ಯದ ಅರಂತೋಡಿನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದು ರಜೆಯಲ್ಲಿ ಊರಿಗೆ ಬಂದಿದ್ದ ಎನ್ನಲಾಗಿದೆ. ತಸ್ಲೀಮ್ ಅ. 15ರಂದು ಸಂಜೆ ಸ್ನೇಹಿತರೊಂದಿಗೆ ಎರಕ್ಕಲ ಸಮೀಪದ ಗೌರಿ ಹೊಳೆಗೆ ಈಜಲು ತೆರಳಿದ್ದ ವೇಳೆ ಘಟನೆ ನಡೆದಿದೆ. ತಸ್ಲೀಮ್ ನಾಪತ್ತೆಯಾಗುತ್ತಿದ್ದಂತೆ ಉಳಿದ ಸ್ನೇಹಿತರು ಮನೆಯವರಿಗೆ, ಸ್ಥಳೀಯರಿಗೆ ವಿಷಯ ತಲುಪಿಸಿದ್ದರು ತಕ್ಷಣ ಸ್ಥಳೀಯರು, ಮುಳುಗು …

Read More »

ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಮಂಗಳೂರು ದಸರಾಕ್ಕೆ ಚಾಲನೆ

ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾದ ಹಿನ್ನಲೆಯಲ್ಲಿ ನಗರದ ಶ್ರೀಕ್ಷೇತ್ರ‌ ಕುದ್ರೋಳಿಯ ಕೊರಗಪ್ಪ ಸಭಾಂಗಣದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ರವಿವಾರ ಬೆಳಗ್ಗೆ ನೆರವೇರಿತು. ಶ್ರೀಕ್ಷೇತ್ರ ಕುದ್ರೋಳಿಯ ಅಭಿವೃದ್ಧಿ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಉಪಸ್ಥಿತಿಯಲ್ಲಿ ಶಾರದಾಮಾತೆಯ ಪ್ರತಿಷ್ಠಾಪನೆ ನೆರವೇರಿತು. ಕರ್ಣಾಟಕ ಬ್ಯಾಂಕ್ ಸಿಇಒ ಪ್ರದೀಪ್ ಕುಮಾರ್ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಈ ಬಾರಿ ಕಣ್ಮನ ಸೆಳೆಯುವ ದಸರಾ ದರ್ಬಾರ್ ಮಂಟಪ ಎಲ್ಲರ ವಿಶೇಷವಾಗಿದೆ. ಶಿಲಾಬಾಲಿಕೆಯರು, ವಿವಿಧ ದೇವರುಗಳ ಕಲಾಕೃತಿಗಳು ದರ್ಬಾರ್ ಮಂಟಪದ ಕಂಬಕಂಬಗಳಲ್ಲಿ ರಾರಾಜಿಸುತ್ತಿದ್ದಾರೆ. …

Read More »

ಕಾರ್ಕಳ : ಇದ್ದಕ್ಕಿದ್ದಂತೆ ಕಾಣೆಯಾದ ಪರುಶುರಾಮನ ಮೂರ್ತಿ- ದೂರು ದಾಖಲು

ಕಾರ್ಕಳ : ಬೈಲೂರಿನ ವಿವಾದಿತ ಪರಶುರಾಮ ಮೂರ್ತಿಯ ಅಸಲಿ ಬಣ್ಣ ಇದೀಗ ಬಯಲಾಗಿದ್ದು, ಪರುಶುರಾಮ ಮೂರ್ತಿ ಇದೀಗ ಇದ್ದಕ್ಕಿದ್ದಂತೆ ಕಾಣೆಯಾಗಿದ್ದು, ಮೂರ್ತಿಯ ಸುತ್ತ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದ್ದು, ಇದೀಗ ಡ್ರೋಣ್ ಕ್ಯಾಮರಾದಲ್ಲಿ ಕಪ್ಪು ಪ್ಲ್ಯಾಸ್ಟಿಕ್ ಹೊದಿಕೆಯ ಒಳಗಿನ ಪರುಶುರಾಮ ಮುೂರ್ತಿ ಅಸಲಿ ಬಣ್ಣ ಬಯಲಾಗಿದ್ದು, ಇದೀಗ ಪರುಶುರಾಮನ ಪಾದ ಮತ್ತು ಕಾಲು ಬಿಟ್ಟು ಉಳಿದ ಭಾಗ ಮಾಯವಾಗಿರುವುದು ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ನಕಲಿ ಎನ್ನುವುದು ಇದೀಗ ಸಾಬೀತಾಗಿದ್ದು, ಇದೀಗ ಪರುಶುರಾಮ ಮೂರ್ತಿಯ ನಕಲಿ ಎಂಬ ವಿರುದ್ದ …

Read More »

ಮಂಗಳೂರು: ಹಮಾಸ್ ಉಗ್ರರನ್ನು ಬೆಂಬಲಿಸಿ ವಿಡಿಯೋ – ವ್ಯಕ್ತಿ ಅರೆಸ್ಟ್

ಮಂಗಳೂರು: ಇಸ್ರೇಲ್ ಮೇಲೆ ದಾಳಿ ನಡೆಸಿ ಸಾವು – ನೋವುಗಳಿಗೆ ಕಾರಣವಾದ ಹಮಾಸ್ ಬಂಡುಕೋರರನ್ನು ಬೆಂಬಲಿಸಿದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಸುಮೋಟೊ ಪ್ರಕರಣದಲ್ಲಿ ಬಂಧಿಸಿದ್ದಾರೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಯಬಿಟ್ಟಿದ್ದ ಮಂಗಳೂರು ಬಂದರಿನ ಝಾಕಿರ್ ನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ಯಾಲೆಸ್ತೈನ್ ಹಾಗೂ ಇಸ್ರೇಲ್‌ ಮಧ್ಯೆ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್ ಬಂಡುಕೋರರ ಬಗ್ಗೆ ಎಲ್ಲರೂ ಪ್ರಾರ್ಥನೆ ಮಾಡಬೇಕೆಂದು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ವಾಟ್ಸಾಪ್‌ನಲ್ಲಿ ಹರಿಯಬಿಟ್ಟಿದ್ದ. ಈ ವೀಡಿಯೋ ವ್ಯಾಪಕವಾಗಿ ವೈರಲ್ ಆಗಿತ್ತು‌. ಆದ್ದರಿಂದ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆಯಿದ್ದು, …

Read More »

ಕಾಪು: ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಕಾಪು: ಹತ್ತು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ, ಕರೆ ತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉದ್ಯಾವರ ಅಂಕುದ್ರು ನಿವಾಸಿ ಗಣೇಶ್‌ ಪೂಜಾರಿ (44) ಬಂಧಿತ ಆರೋಪಿ. 2013 ಮತ್ತು 2014ರಲ್ಲಿ ಕಾಪು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮೂರು ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯು ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ವಾರಂಟ್‌ ಮತ್ತು ಪ್ರೋಕ್ಲಮೇಷನ್‌ ಹೊರಡಿಸಲಾಗಿತ್ತು. ಆರೋಪಿಯನ್ನು ಕಾಪು ಎಸೈ ಅಬ್ದುಲ್‌ ಖಾದರ್‌ ಮತ್ತು ಕ್ರೈಂ ಎಸೈ ಪುರುಷೋತ್ತಮ್‌ ಅವರ …

Read More »

ಹಮಾಸ್ ಉಗ್ರರಿಗೆ ಬೆಂಬಲ ನೀಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಮಂಗಳೂರಿನ ವ್ಯಕ್ತಿ

ಮಂಗಳೂರು: ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ. ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳೆಂದು ಮಂಗಳೂರಿನ ಝಾಕಿರ್ ಕರೆದಿದ್ದಾನೆ. ಅಲ್ಲದೆ ಹಮಾಸ್ ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ  ಝಾಕಿರ್ ಕರೆ ನೀಡಿದ್ದಾನೆ. ಪ್ಯಾಲಿಸ್ಟೈನ್ , ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸೋಣ, ಹಮಾಸ್ ಉಗ್ರರರು ದೇಶ ಪ್ರೇಮಿ ಯೋಧರು ಎಂದು ಬಣ್ಣಿಸಿದ್ದಾನೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್‌ ಎಂಬ ಹೆಸರಿನಲ್ಲಿ ಝಾಕಿರ್ ಗುರುತಿಸಿಕೊಳ್ಳುತ್ತಿದ್ದ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸುವಂತೆ …

Read More »

ಬಂಟ್ವಾಳ: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿಯ ಬಂಧನ

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು. ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ …

Read More »

You cannot copy content of this page.