ತಾಜಾ ಸುದ್ದಿ

ಹಮಾಸ್ ಉಗ್ರರಿಗೆ ಬೆಂಬಲ ನೀಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಮಂಗಳೂರಿನ ವ್ಯಕ್ತಿ

ಮಂಗಳೂರು: ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಘಟನೆ ನಡೆದಿದೆ. ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳೆಂದು ಮಂಗಳೂರಿನ ಝಾಕಿರ್ ಕರೆದಿದ್ದಾನೆ. ಅಲ್ಲದೆ ಹಮಾಸ್ ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ  ಝಾಕಿರ್ ಕರೆ ನೀಡಿದ್ದಾನೆ. ಪ್ಯಾಲಿಸ್ಟೈನ್ , ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲು ಪ್ರಾರ್ಥಿಸೋಣ, ಹಮಾಸ್ ಉಗ್ರರರು ದೇಶ ಪ್ರೇಮಿ ಯೋಧರು ಎಂದು ಬಣ್ಣಿಸಿದ್ದಾನೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬನ್‌ ಎಂಬ ಹೆಸರಿನಲ್ಲಿ ಝಾಕಿರ್ ಗುರುತಿಸಿಕೊಳ್ಳುತ್ತಿದ್ದ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸುವಂತೆ …

Read More »

ಬಂಟ್ವಾಳ: 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರು ಮಂದಿಯ ಬಂಧನ

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು. ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ …

Read More »

ಉಡುಪಿ: ಮಹಿಷಾ ದಸರಾಗೆ ಪೊಲೀಸರಿಂದ ಅನುಮತಿ ನಿರಾಕರಣೆ- ಜಯನ್ ಮಲ್ಪೆ ಆಕ್ರೋಶ

ಉಡುಪಿ: ಅಂಬೇಡ್ಕರ್ ಯುವ ಸೇನೆ ಉಡುಪಿಯಲ್ಲಿ ಅಕ್ಟೋಬರ್ 15ರಂದು ನಡೆಸಲು ಉದ್ದೇಶಿಸಿರುವ ಮೂಲನಿವಾಸಿಗಳ ಸಾಂಸ್ಕೃತಿಕ ಹಬ್ಬವಾದ ಮಹಿಷಾ ದಸರಾಕ್ಕೆ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯ ನೆಪವೊಡ್ಡಿ ಪೊಲೀಸರು ಅನುಮತಿ ನಿರಾಕರಿಸಿರುವುದು ಸಂವಿಧಾನದ ಮೇಲೆ ಅತ್ಯಾಚಾರ ಎಂದು ಜನಪರ ಹೋರಾಟಗಾರ ಜಯನ್ ಮಲ್ಪೆಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವದ ತತ್ವಗಳ ಆಧಾರದ ಮೇಲೆ ರಚಿತವಾಗಿರುವ ನಮ್ಮ ಸಂವಿಧಾನದ ಅನುಛೇದ 25ರ ಪ್ರಕಾರ ಧರ್ಮ ಪ್ರಚಾರ ಮತ್ತು ಪಾಲನೆಗೆ ಸ್ವತಂತ್ರ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಪ್ರಜೆಗೆಳಿಗೆ ತನ್ನ 18(1)(ಎ)ವಿಧಿಯಲ್ಲಿ ಅಭಿವ್ಯಕ್ತಿ ಸ್ವಾತಂತ್ರವನ್ನು ಕೊಟ್ಟಿದೆ. ಆದರೂ ಉಡುಪಿ …

Read More »

ಶಿರ್ವ: ನಾಪತ್ತೆಯಾದ ಯುವತಿ ಮೃತದೇಹ ನದಿಯಲ್ಲಿ ಪತ್ತೆ

ಶಿರ್ವ: ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಆ.13ರ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಮೃತ ಯುವತಿಯಾಗಿದ್ದಾಳೆ. ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಸಮೀಪದ ನದಿ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಹಿಂತಿರುಗದ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿ.ಕಾಂ. ಪದವೀಧರೆಯಾಗಿದ್ದ ವಿನಿತಾ …

Read More »

ಉಡುಪಿ :ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ..!

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಕಾಣೆಯಾಗಿದ್ದಾರೆ. ಅ.6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಕ್ಕಳೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತುಳು ಭಾಷೆ ಮಾತನಾಡುತ್ತಾರೆ. ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ …

Read More »

ಸುಳ್ಯ: ವಿಮಾನ ಯಾನ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವ ಅಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚನೆ..!

ಸುಳ್ಯ: ವಿಮಾನ ಯಾನ ಸಂಸ್ಥೆಯಲ್ಲಿ ಉದ್ಯೋಗ ಕೊಡಿಸುವ ಅಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಳಕಿಗೆ ಬಂದಿದೆ. ಇದೀಗ ವಿಮಾನದಲ್ಲಿ ಹಾರುವ ಕನಸು ಕಂಡಿದ್ದ ಯುವತಿ ಬೆಳ್ಳಾರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿಯಾಗಿರುವ ಯುವತಿಗೆ ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದಾನೆ. ತಾನು ವಿಸ್ತಾರ ಏರ್ ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದಾನೆ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು …

Read More »

ಅಯೋಧ್ಯೆ ಬ್ರಹ್ಮಕಲಶಕ್ಕೆ ಕನ್ನಡಿಗನ ಪೌರೋಹಿತ್ಯ

ಮಂಗಳೂರು: ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದಾರೆ ಎನ್ನಲಾಗ್ತಿದೆ. ಹಾಗಾಗಿ ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆಯುವ ಭವ್ಯ ಶ್ರೀರಾಮ ಮಂದಿರದ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಕರ್ನಾಟಕ ಕರಾವಳಿಯ ಕನ್ನಡಿಗರೊಬ್ಬರ ಉಸ್ತುವಾರಿಯಲ್ಲಿ ನಡೆಯಲಿದೆ. ಇಡೀ ಬ್ರಹ್ಮಕಲಶೋತ್ಸವದ ಪ್ರಧಾನ ಅಧ್ವರ್ಯ ಸ್ಥಾನ ಕೂಡ ಕನ್ನಡಿಗರೇ ಆದ ಉಡುಪಿ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ಒದಗಿ ಬಂದಿದೆ. ಕರ್ನಾಟಕ-ಕೇರಳ ಗಡಿಭಾಗ ತಲಪಾಡಿಯ ರಾಜಪುರೋಹಿತ ಬಿರುದಾಂಕಿತ ವಿದ್ವಾನ್‌ ವಿಷ್ಣುಮೂರ್ತಿ ಆಚಾರ್ಯ ಅವರ ಉಸ್ತುವಾರಿಯಲ್ಲಿ ಬ್ರಹ್ಮಕಲಶಾಭಿಷೇಕ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದೆ. …

Read More »

ಬಂಟ್ವಾಳ: ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು..!

ಬಂಟ್ವಾಳ: ಕಾರುಡಿಕ್ಕಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಬಾಯಿಲ ನಿವಾಸಿ ಪಾವನಾ (23) ಮೃತಪಟ್ಟ ಯುವತಿ. ಪಾವನಾ ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ವೇಳೆಗೆ ಕೆಲಸ ಮುಗಿಸಿ ಅವರು ದಾಸಕೋಡಿಯಲ್ಲಿ ಬಸ್ಸಿನಿಂದ ಇಳಿದು ಮನೆಗೆ ಮರಳುತ್ತಿದ್ದರು. ಸಂಜೆ ಸುಮಾರು 6.30ರ ವೇಳೆಗೆ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಸ್ತೆ ಬದಿಯ ತೋಡಿಗೆ ಪಾವನಾ ಎಸೆಯಲ್ಪಟ್ಟಿದ್ದಾರೆ. ಕಾರು ಕೂಡ ಪಲ್ಟಿಯಾಗಿದೆ. ಅಪಘಾತದ ಪರಿಣಾಮ …

Read More »

ವಿಟ್ಲ : ಅನ್ಯಕೋಮಿನ ಇಬ್ಬರು ಯುವಕರೊಂದಿಗೆ ಹಿಂದೂ ಯುವತಿ ಪತ್ತೆ

ವಿಟ್ಲ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ ಮೂಲದವರೆನ್ನಲಾಗಿದೆ.ಪೆರುವಾಯಿ ಬಸ್ ನಿಲ್ದಾಣದ ಬಳಿ ಮೂವರು ಅನುಚಿತವಾಗಿ ವರ್ತಿಸುತ್ತಿದ್ದರೆನ್ನಲಾಗುತ್ತಿದ್ದು, ಈ ಬಗ್ಗೆ ಗಮನಿಸಿದ ಸ್ಥಳೀಯರು ಅವರನ್ನು ವಿಚಾರಿಸಿದ್ದು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ದೌಡಾಯಿಸಿದ್ದಾರೆಂದು ವರದಿಯಾಗಿದೆ.

Read More »

ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂಬ ಕಾರಣಕ್ಕೆ ಮಗಳ ಕತ್ತನ್ನೇ ಕೊಯ್ದು ತಂದೆ..!

ಚಿಕ್ಕಬಳ್ಳಾಪುರ: ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂಬ ಕಾರಣಕ್ಕೆ ಮುದ್ದು ಮಗಳ ಕತ್ತನ್ನೇ ಕೊಯ್ದು ತಂದೆ ಕೊಲೆ ಮಾಡಿದ ಘಟನೆ ಬುಧವಾರ ತಡರಾತ್ರಿ ದೇವನಹಳ್ಳಿಯ ಬಿದಲೂರು ಗ್ರಾಮದಲ್ಲಿ ನಡೆದಿದೆ. ಕವನ (20) ಮೃತ ದುರ್ದೈವಿ ಯುವತಿಯಾಗಿದ್ದಾಳೆ, ಆರೋಪಿ ತಂದೆ ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿದ್ದಾನೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ಚಿಕನ್ ಅಂಗಡಿ ಇಟ್ಟುಕೊಂಡಿದ್ದ ತಂದೆ ಮಂಜುನಾಥ್ ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ, ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ …

Read More »

You cannot copy content of this page.