ತಾಜಾ ಸುದ್ದಿ

ಮೊಬೈಲ್‌ನಲ್ಲಿ ಸೈರನ್ ಶಬ್ದ ಕೇಳಿ ಜನ ಶಾಕ್, ಕೇಂದ್ರ ಸರ್ಕಾರದಿಂದ ‘Emergency Alert’ ಪರೀಕ್ಷೆ

ಬೆಂಗಳೂರು: ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಎಲ್ಲಾ ಮೊಬೈಲ್ ಬಳಕೆದಾರರಿಗೆ ಪ್ರಾಯೋಜಿಕ ಸಂದೇಶವೊಂದನ್ನು ರವಾನಿಸಿದೆ. ಇಂದು ಬೆಳಿಗ್ಗೆ ದೇಶಾದ್ಯಂತ ಬಹುತೇಕರ ಮೊಬೈಲ್‍ಗಳಿಗೆ ಈ ರೀತಿಯ ಸಂದೇಶಗಳು ಬಂದಿವೆ. ಅದರಲ್ಲಿ ಇದು ಭಾರತ ಸರ್ಕಾರದ ದೂರ ಸಂಪರ್ಕ ಇಲಾಖೆಯಿಂದ ಸೇಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್ ಇಂಡಿಯಾ ತುರ್ತು ಎಚ್ಚರಿಕೆಯ ಸಂದೇಶವನ್ನು …

Read More »

ಮಂಗಳೂರು ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 61.42 ಲಕ್ಷ ರೂ. ಮೌಲ್ಯದ ಚಿನ್ನ ವಶ, ಓರ್ವನ ಬಂಧನ

ಮಂಗಳೂರು: ದುಬೈಯಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಅ.11 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತ 61,42,500 ರೂ. ಮೌಲ್ಯದ 1050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಗುದದ್ವಾರದಲ್ಲಿ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸುತ್ತಿರುವುದು ತಪಾಸಣೆ ವೇಳೆ ತಿಳಿದುಬಂದಿದೆ.

Read More »

ಮಂಗಳೂರು : ಮಹಿಳಾ ಸಿಬ್ಬಂದಿಗೆ ಹಲ್ಲೆ ಆರೋಪ- ಆಪತ್ಬಾಂಧವ ಆಸಿಫ್ ಅರೆಸ್ಟ್

ಮಂಗಳೂರು: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ ಮುಲ್ಕಿ ನಿವಾಸಿ ಆಪತ್ಥಾಂಧವ ಎಂದೇ ಗುರುತಿಸಲ್ಪಟ್ಟಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆಸ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು ಎನ್ನಲಾಗಿದೆ. ಈ ಸಂದರ್ಭ ಸೆಕ್ಯುರಿಟಿ ಗಾರ್ಡ್ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದಾಗ ತಾನು ರೋಗಿಗಳನ್ನು ಅಡ್ಮಿಷನ್ ಮಾಡಿಸುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ. ಆದರೆ ಕೆಲವು ಹೊತ್ತಿನ ಬಳಿಕವೂ …

Read More »

ಹಳಿ ತಪ್ಪಿ ಉರುಳಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು- ನಾಲ್ವರ ದುರ್ಮರಣ, 80ಕ್ಕೂ ಹೆಚ್ಚು ಮಂದಿಗೆ ಗಾಯ

ಪಾಟ್ನಾ: ದೆಹಲಿ- ಕಾಮಾಕ್ಯ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಸೂಪರ್‌ಫಾಸ್ಟ್ ರೈಲು ರಾತ್ರಿ 9.35ರ ಸುಮಾರಿಗೆ ರಘುನಾಥಪುರ ನಿಲ್ದಾಣದ ಬಳಿ ಹಳಿ ತಪ್ಪಿದೆ. ಎರಡು ಎಸಿ 3 ಟೈರ್ ಬೋಗಿಗಳು ಬುಡಮೇಲಾಗಿದ್ದು, ಇತರ ನಾಲ್ಕು ಬೋಗಿಗಳು ಹಳಿಯಿಂದ ಆಚೆಗೆ ಎಸೆಯಲ್ಪಟ್ಟಿವೆ.   “ಆನಂದ್ ವಿಹಾರ್ ಟರ್ಮಿನಲ್ ನಿಂದ ಕಾಮಾಕ್ಯಗೆ ತೆರಳುತ್ತಿದ್ದ ರೈಲುಗಾಡಿ ಸಂಖ್ಯೆ 12506 ನಾರ್ತ್ಈಸ್ಟ್ ಎಕ್ಸ್ಪ್ರೆಸ್ …

Read More »

ವೇಣೂರು: ಭಜನಾ ಸ್ಪರ್ಧಿಗಳಿಗೆ ಮಚ್ಚು ತೋರಿಸಿ ಬೆದರಿಕೆ-ಪ್ರಕರಣ ದಾಖಲು

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ‌ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಮುಂಡೂರಿನ ಆನಂದ ಆಚಾರ್ಯ (38 ವರ್ಷ) ಎಂಬಾತ ಮೇಲೆ ಪ್ರಕರಣ ದಾಖಲಾಗಿದೆ. ಈತ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ಧೆಗೆ ಮಹಿಳೆಯರು, ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು. ಈ ವೇಳೆ ಪ್ರವಾಸಿಗರೂ …

Read More »

ಮಂಗಳೂರು: ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ವ್ಯಕ್ತಿ ಆತ್ಮಹತ್ಯೆ..!

ಪಣಂಬೂರು: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗೋಪಾಲ ಅವರು ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನದ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸರು ಪ್ರಕರಣ …

Read More »

ಪಠಾಣ್ ಕೋಟ್ ದಾಳಿ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ನನ್ನು ಗುಂಡಿಕ್ಕಿ ಹತ್ಯೆ

ಕರಾಚಿ: ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾದ ಮತ್ತು ಪಠಾಣ್ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎನ್ನಲಾಗಿದೆ. ಸಿಯಾಲ್ಕೋಟ್ನಲ್ಲಿ ಅಪರಿಚಿತ ದಾಳಿಕೋರರು ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಶಾಹಿದ್ ಲತೀಫ್ ಭಾರತದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಆರೋಪಗಳನ್ನು ಎದುರಿಸುತ್ತಿದ್ದ ಮತ್ತು ಭಾರತ ಸರ್ಕಾರವು ಅವನನ್ನು ಭಯೋತ್ಪಾದಕ ಎಂದು ಪಟ್ಟಿ ಮಾಡಿತ್ತು. ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ನ ಪ್ರಮುಖ ಸದಸ್ಯನಾಗಿದ್ದನು. ಭಾರತದಲ್ಲಿ 16 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ ನಂತರ ಲತೀಫ್ ನನ್ನು …

Read More »

ಉಳ್ಳಾಲ ನಿವಾಸಿ ಪುಣೆಯಲ್ಲಿ ಅನುಮಾನಸ್ಪದ ಸಾವು

ಉಳ್ಳಾಲ: ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ತೌಡುಗೋಳಿ ಕ್ರಾಸ್ ಗುರಿಕಾರಮೂಲೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರಿ ಸುಜಾತ ಶೆಟ್ಟಿ (38) ಎಂಬವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯ ಭಾರತೀಯ ವಿದ್ಯಾಪೀಠ ಎಂಬಲ್ಲಿ ನಡೆದಿದೆ. ಪಜೀರು ಪಾನೇಲ ನಿವಾಸಿ ಪುಣೆಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಸುರೇಶ್ ಕೈಯ್ಯ ಎಂಬವರಿಗೆ ನಾಲ್ಕು ತಿಂಗಳ ಹಿಂದೆಯಷ್ಟೇ ಸುಜಾತಾ ಅವರನ್ನು ವಿವಾಹ ಮಾಡಿಕೊಡಲಾಗಿತ್ತು. ಅ.8 ರಂದು ಸುಜಾತ ಮೃತದೇಹ ಭಾರತೀಯ ವಿದ್ಯಾಪೀಠದಲ್ಲಿರುವ ಮನೆಯೊಳಗೆ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಈ ಬಗ್ಗೆ ಅಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, …

Read More »

ಚೈತ್ರಾ ಕೋಟಿ ಕೋಟಿ ಡೀಲ್ ಪ್ರಕರಣ : ಗುರುಪುರ ವಜ್ರದೇಹಿ ಮಠಾಧೀಶರಿಗೆ ಸಿಸಿಬಿ ನೋಟಿಸ್ ಜಾರಿ..!

ಬೆಂಗಳೂರು : 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಗುರುಪುರ ವಜ್ರದೇಹಿ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ನೋಟಿಸ್  ಜಾರಿ ಮಾಡಿದ್ದಾರೆ. ಮಂಗಳೂರು ಹೊರವಲಯದ ಗುರುಪುರದಲ್ಲಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್  ತಲುಪಿಸಿದ್ದು  ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ . ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಯ ಸಮಯದಲ್ಲಿ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ, ವಜ್ರದೇಹಿ ಮಠದ ಸ್ವಾಮೀಜಿ ಹೆಸರನ್ನು ಪ್ರಸ್ತಾಪಿಸಿದ್ದರು. “ಈ …

Read More »

ಮಂಗಳೂರು: ಇಸ್ರೇಲ್ ನಲ್ಲಿರುವ ದ.ಕ ಜಿಲ್ಲೆಯ ಜನರಿಗೆ ರಕ್ಷಣೆ ಒದಗಿಸುತ್ತವೆ- ನಳಿನ್ ಕುಮಾರ್ ಕಟೀಲ್

ಮಂಗಳೂರು:ಇಸ್ರೇಲ್ ನಲ್ಲಿ ಕರಾವಳಿಯ ಐದು ಸಾವಿರಕ್ಕೂ ಅಧಿಕ ಮಂದಿ ಇದ್ದು,ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆಂದು‌ ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಸ್ರೇಲ್ ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರಿಗೂ ಮಾತನಾಡಿದ್ದೇನೆ.ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್ ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ. …

Read More »

You cannot copy content of this page.