ತಾಜಾ ಸುದ್ದಿ

ಉಡುಪಿ ಹಿಂದೂ ಸಮಾಜೋತ್ಸವ – ಶರಣ್ ಪಂಪ್ ವೆಲ್ ಗೆ ಉಡುಪಿ ಪ್ರವೇಶಿಸದಂತೆ ನಿರ್ಬಂಧ

ಉಡುಪಿ : ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಸಮಾರಂಭ ಹಾಗೂ ಹಿಂದೂ ಸಮಾಜೋತ್ಸವ ಕಾರ್ಯಕ್ರಮಕ್ಕೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಗೆ ಪೊಲೀಸ್ ಇಲಾಕೆ ನಿರ್ಬಂಧ ವಿಧಿಸಿದ್ದು, ಉಡುಪಿ ಪ್ರವೇಶಿಸದಂತೆ ತಡೆದಿದೆ. ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಆಯೋಜಿಸಿರುವ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಸಮಾರಂಭದ ಹಿನ್ನಲೆ ಉಡುಪಿ ಎಂಜಿಎಂ ಕ್ರೀಡಾಂಗಣದಲ್ಲಿ ಬೃಹತ್ ಹಿಂದು ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಮುಖಂಡ ಶರಣ್ ಪಂಪ್ ವೆಲ್ ಭಾಗವಹಿಸಲು …

Read More »

ಪುತ್ತೂರು: ಅನಿತಾ ಬೀಡಿ ವರ್ಕ್ ಕಂಪೆನಿ ಮಾಲೀಕ ಮಹಮ್ಮದ್ ಆಲಿ ಮನೆ ಮೇಲೆ ಐಟಿ ದಾಳಿ

ಪುತ್ತೂರು: ಅನಿತಾ ಬೀಡಿ ವರ್ಕ್ ಕಂಪೆನಿ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿರುವ ಅನಿತಾ ಬೀಡಿ ವರ್ಕ್ಸ್ ಮಾಲೀಕರ ಮಹಮ್ಮದ್ ಆಲಿ ಯಾನೆ ಮಮ್ಮು ಅವರ ಮನೆ ಮೇಲೆ ಐಟಿ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಪೆರ್ನೆ ಸಮೀಪ ಇರುವ ಅವರ ಮನೆ ಬಳಿಯೇ ಅನಿತಾ ಬೀಡಿ ಕಂಪೆನಿ ಕಾರ್ಯ ನರ್ವಹಿಸುತ್ತಿದೆ. ಆದಾಯ ತೆರಿಗೆ ಇಲಾಖೆಯ ಹಲವು ಅಧಿಕಾರಿಗಳಿಂದ ಮನೆ ಮತ್ತು ವರ್ಕ್ ಶಾಪ್ ಗೆ ಏಕ …

Read More »

ಮೂಡಬಿದಿರೆ: ಖಾಸಗಿ ಕಾಲೇಜಿನ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಮೂಡಬಿದಿರೆ: ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಉದ್ಯೋಗಿಯಾಗಿರುವ ಯುವಕನೋರ್ವ ಹಾಸ್ಟೇಲ್ ರೂಮಿನಲ್ಲಿ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾಗಲಕೋಟೆಯ ನಿವಾಸಿ ಹನುಮಂತಪ್ಪ (24) ಎಂದು ಗುರುತಿಸಲಾಗಿದೆ. ಯುವಕ ಜನವರಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಹನುಮಂತಪ್ಪನ ಹೆತ್ತವರು ಮೂಡುಬಿದಿರೆಗೆ ಬಂದ ನಂತರ ಮೃತದೇಹವನ್ನು ಅವರು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More »

ಗೃಹಲಕ್ಷ್ಮಿ ಯೋಜನೆ: ಎಷ್ಟು ಜನರಿಗೆ ಹಣ ಹೋಗಿಲ್ಲ?

ಬೆಂಗಳೂರು:   ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ. 3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ. 5,96,268 …

Read More »

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

ಪುತ್ತೂರು : ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಕುರಿಯ ಪಡ್ಪು ನಿವಾಸಿ, ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ. ವೀಕ್ಷಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಸಂಪ್ಯ ಪೊಲೀಸರಿಗೂ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ.

Read More »

ಬಿಗ್ ಬಾಸ್ ಸೀಸನ್ 10- ದೊಡ್ಮನೆಗೆ ಎಂಟ್ರಿ ಕೊಟ್ಟ ಶಾಸಕ ಪ್ರದೀಪ್ ಈಶ್ವರ್

‘ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿದೆ. ವಿವಿಧ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಒಂದು ದಿನ ತಡವಾಗಿ ಪ್ರದೀಪ್ ಈಶ್ವರ್ ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ. ಅವರ ಎಂಟ್ರಿ ಅನೇಕರಿಗೆ ಅಚ್ಚರಿ ತಂದಿದೆ. ಎಂಎಲ್​ಎ ಆಗಿ ದೊಡ್ಮನೆಗೆ ತೆರಳಿರೋ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಕೆಲವು ದಿನಗಳ ಅತಿಥಿಯೋ ಅಥವಾ ಉಳಿದ ಸ್ಪರ್ಧಿಗಳಂತೆಯೇ ಅವರು ಇರುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರದ ಶಾಸಕ. ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ …

Read More »

ಸುಳ್ಯ: ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಸುಳ್ಯ: ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಟನೆ ನಡೆದಿದೆ. ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ ದುರ್ದೈವಿ. ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ಖಾಸಗಿ ಬಸ್ ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಚಿಕಿತ್ಸೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ಬಳಿಕ ಮನೆಯಲ್ಲೇ ಮರುದಿನ ಮುಂಜಾನೆ ಸಮಸ್ಯೆ ಉಲ್ಬಣವಾದ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮತ್ತೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. …

Read More »

ಸುಳ್ಯ: ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಸುಳ್ಯ:  ಚಲಿಸುತ್ತಿದ್ದ ಬಸ್ ಹತ್ತಲು ಯತ್ನಿಸಿ ವ್ಯಕ್ತಿಯೊಬ್ಬರು ರಸ್ತೆಗೆ ಎಸೆಯಲ್ಪಟ್ಡು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಿಸದೆ ಸಾವನಪ್ಪಿರುವ ಬಗ್ಗೆ ವರದಿಯಾಗಿದೆ‌. ಆಲೆಟ್ಟಿ ಗ್ರಾಮದ ಕೂಳಿಯಡ್ಕ ಕರುಣಾಕರ ಮೃತಪಟ್ಟ ದುರ್ದೈವಿ. ಸುಳ್ಯ ಆಲೆಟ್ಟಿ ಕ್ರಾಸ್ ಬಳಿ ಆ.7ರ ಶನಿವಾರ ಸಂಜೆ ಖಾಸಗಿ ಬಸ್ ಹತ್ತಲು ಹೋದಾಗ ಬಸ್ಸಿನ ಬಾಗಿಲು ತಳ್ಳಲ್ಪಟ್ಟು ರಸ್ತೆಗೆ ಆಯತಪ್ಪಿ ಬಿದ್ದರೆನ್ನಲಾಗಿದೆ.   ಈ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಚಿಕಿತ್ಸೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆ ಬಳಿಕ ಮನೆಯಲ್ಲೇ ಮರುದಿನ ಮುಂಜಾನೆ ಸಮಸ್ಯೆ ಉಲ್ಬಣವಾದ …

Read More »

ಉಡುಪಿ: ಇಸ್ರೇಲ್ ನಲ್ಲಿ ಜಿಲ್ಲೆಯ ಜನರಿಗೆ ತೊಂದರೆ ಆದರೆ ಕಂಟ್ರೋಲ್ ರೂಮ್ ಸಂಪರ್ಕಿಸಿ – ಡಿ.ಸಿ

ಉಡುಪಿ: ಜಿಲ್ಲೆಯಿಂದ ಇಸ್ರೇಲ್ ಗೆ ಹೋಂ ನರ್ಸ್ ಕೆಲಸಕ್ಕೆ ನೂರಾರು ಮಂದಿ ತೆರಳಿದ್ದು ಇಲ್ಲಿ ಕುಟುಂಬವರ್ಗಕ್ಕೆ ಆತಂಕ ಎದುರಾಗಿದೆ.ಈ ಸಂಬಂಧ ಮಾತನಾಡಿದ ಉಡುಪಿ ಡಿ.ಸಿ ಡಾ. ವಿದ್ಯಾ ಕುಮಾರಿ,ಇಸ್ರೇಲ್ ನಲ್ಲಿ ನಮ್ಮವರಿಗೆ ಸಮಸ್ಯೆಯಾದ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ.ಉಡುಪಿ ಜಿಲ್ಲಾಡಳಿತಕ್ಕೆ ಈವರೆಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.ಪರಿಸ್ಥಿತಿ ಅವಲೋಕನ ಮಾಡಿ ಇನ್ನೆರಡು ದಿನದಲ್ಲಿ ಮಾಹಿತಿ ಬರಬಹುದು.ಸ್ಥಳೀಯವಾಗಿ ಕೂಡ ಯಾವುದೇ ಸಮಸ್ಯೆಗಳು ಆದ ಬಗ್ಗೆ ಯಾರೂ ಕೂಡ ಮಾಹಿತಿ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಸರ್ಕಾರದ ನಿರ್ದೇಶನದಂತೆ ಉಡುಪಿ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ ಎಂದ ಅವರು,ಇಸ್ರೇಲ್ ನಲ್ಲಿ …

Read More »

ಬೆಳ್ತಂಗಡಿ: ಬಡವರ ಮನೆಯ ಕೆಡವಲು ಸಜ್ಜಾದ ಸರ್ಕಾರದ ವಿರುದ್ಧ ದ.ಕ ಜಿಲ್ಲಾ ಶಾಸಕರ ಪ್ರತಿಭಟನೆ

ಬೆಳ್ತಂಗಡಿ ತಾಲೂಕಿನ ಕಳೆಂಜದ ದೇವಣ್ಣ ಗೌಡ ಅವರ ಮನೆ ಧ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯದ ಬಡವರ ವಿರೋಧಿ ಸರ್ಕಾರದ ವಿರುದ್ಧ ದ.ಕ ಜಿಲ್ಲೆಯ ಶಾಸಕರು, ಕಾರ್ಯಕರ್ತರು ಸಹಿತ ಹಲವಾರು ಮಂದಿ ಪ್ರತಿಭಟನೆ ನಡೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಿಂದಲೂ ಕೃಷಿ ಚಟುವಟಿಕೆಯೊಂದಿಗೆ ಸದರಿ ಭೂಮಿಯಲ್ಲಿ ವಾಸಿಸುತ್ತಿರುವ ಕುಟುಂಬವನ್ನು ಮುನ್ಸೂಚನೆಯೂ ನೀಡದೆ ದಬ್ಬಾಳಿಕೆಯೊಂದಿಗೆ ಒಕ್ಕಲೆಬ್ಬಿಸಲು ಸಂಚು ರೂಪಿಸಿರುವ ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಜನರು ಈಗಾಗಲೇ ರೊಚ್ಚಿಗೆದ್ದಿದ್ದಾರೆ. ಬಡವರೊಂದಿಗೆ ಸರ್ಕಾರ ಒರಟು ರೀತಿಯಲ್ಲಿ ನಡೆದುಕೊಂಡದ್ದೇ ಆದಲ್ಲಿ ಜನರ ಪ್ರತಿಕ್ರಿಯೆ ಯಾವ ರೂಪದಲ್ಲಿ ಇರಬಹುದು ಎಂಬುದು …

Read More »

You cannot copy content of this page.