ತಾಜಾ ಸುದ್ದಿ

ಉಡುಪಿ: ಫೇಸ್ ಬುಕ್ ಗೆಳತಿಯನ್ನು ನಂಬಿ 11 ಲಕ್ಷ ರೂ. ಕಳೆದುಕೊಂಡ ಮಹಿಳೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು ಫೇಸ್‌ ಬುಕ್‌ ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿ 11 ಲಕ್ಷಕ್ಕೂ ಹೆಚ್ಚು ಹಣ ಪಂಗನಾಮ ಹಾಕಿಸಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್‌ ಬುಕ್‌ ಮೂಲಕ ಮಾರ್ಕ್‌ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ ಕಸ್ಟಮ್ ಚಾರ್ಜ್ ಹಾಗೂ ಐ.ಟಿ ರೈಡ್ ಮಾಡುವುದಾಗಿ …

Read More »

ಉಡುಪಿ: ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳ ಬಳಕೆ ನಿಷೇಧ

ಉಡುಪಿ: ರಾಜ್ಯ ಸರಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಭಾರತ ಸರಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯಲ್ಲಿ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಕೇಂದ್ರ ಸರಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ 1971 ಮತ್ತು ಭಾರತದ ಧ್ವಜ ಸಂಹಿತೆ 2002ರಡಿ ಎಲ್ಲಾ ಸರಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, …

Read More »

ಮೂಡುಬಿದಿರೆ : ಕಾಲೇಜು ತರಗತಿಗೆ ಅಕ್ರಮ ಪ್ರವೇಶಿಸಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಚುಚ್ಚಿ ಹಲ್ಲೆ – ಆರೋಪಿ ಅರೆಸ್ಟ್

ಮೂಡುಬಿದಿರೆ: ದ‌.ಕ.ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ತರಗತಿಗೆ ಅಕ್ರಮವಾಗಿ ಪ್ರವೇಶಿಸಿರುವ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಮಂಜುನಾಥ ಬಂಧಿತ ಆರೋಪಿ. ಆರೋಪಿ ಮತ್ತು ಕತ್ತರಿಯಿಂದ ಇರಿತಕ್ಕೊಳಗಾದ ವಿದ್ಯಾರ್ಥಿನಿ ತುಮಕೂರಿನವರಾಗಿದ್ದರು. ಇಬ್ಬರೂ ಆತ್ಮೀಯರಾಗಿದ್ದರು. ಆದರೆ ಇತ್ತೀಚೆಗೆ ವಿದ್ಯಾರ್ಥಿನಿಯು ಆರೋಪಿ ಮಂಜುನಾಥನ ಮೊಬೈಲ್ ಕರೆಗಳನ್ನು ನಿರ್ಲಕ್ಷಿಸುತ್ತಾ ಬಂದಿದ್ದಳು ಎಂದು ಹೇಳಲಾಗುತ್ತಿದೆ. ಇದರಿಂದ ಹತಾಶೆಗೊಂಡ ಆರೋಪಿ ಮಂಜುನಾಥ ವಿದ್ಯಾರ್ಥಿನಿಯನ್ನು ಹುಡುಕಿಕೊಂಡು ಬಂದಿದ್ದನು. ಅದರಂತೆ ಸೋಮವಾರ ಕಾಲೇಜಿಗೆ ಬಂದಿದ್ದ ಆತ ತರಗತಿಯೊಳಗೆ ಅಕ್ರಮವಾಗಿ ಪ್ರವೇಶಿಸಿ …

Read More »

ಉಡುಪಿ: ನಗರಸಭೆ ಪೌರಕಾರ್ಮಿಕ ಆತ್ಮಹತ್ಯೆಗೆ ಶರಣು

ಉಡುಪಿ: ಗುತ್ತಿಗೆ ಆಧಾರದಲ್ಲಿ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕ ತನ್ನಿ (39) ಎಂಬುವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಪುತ್ತೂರು ಕದ್ಮಲ್ ರಂಗರಾವ್ ರಸ್ತೆಯಲ್ಲಿ ಸಂಭವಿಸಿದೆ. ನಗರ ಪೋಲಿಸ್ ಠಾಣೆಯ ಸುರೇಶ್ ಕೆ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತ ದೇಹವನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲು ಎಂದಿನಂತೆ ನೆರವಾದರು. ನಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More »

ಕಸಾಪ ಉಡುಪಿ ತಾಲೂಕು ಘಟಕದಿಂದ ಗ್ರಂಥಪಾಲಕರ ದಿನಾಚರಣೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಗ್ರಂಥ ಪಾಲಕರ ದಿನಾಚರಣೆಯ ಪ್ರಯುಕ್ತ ಸೋಮವಾರ ಉಡುಪಿಯ ಅಜ್ಜರಕಾಡಿನ ಕೇಂದ್ರ ಗ್ರಂಥಾಲಯದ ಕಚೇರಿಯಲ್ಲಿ ನಗರ ಮುಖ್ಯ ಗ್ರಂಥಾಲಯ ಅಧಿಕಾರಿ ನಳಿನಿ ಜಿ.ಐ. ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮಾ ಎಂ. ಇವರನ್ನು ಕ ಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಅವರು ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಪು ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಜಿಲ್ಲಾ ಕ ಸಾಪ ಸಹಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ, …

Read More »

ಕಾರ್ಕಳ: ಫೇಸ್‌ ಬುಕ್‌ ಗೆಳತಿಯನ್ನು ನಂಬಿ 11 ಲಕ್ಷ ಕಳೆದುಕೊಂಡ ಮಹಿಳೆ

ಉಡುಪಿ: ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಮೊತ್ತ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್‌ ಬುಕ್‌ ಮೂಲಕ ಮಾರ್ಕ್‌ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ ಕಸ್ಟಮ್ …

Read More »

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ – ಮೂವರು ವಶಕ್ಕೆ

ಮಣಿಪಾಲ: ಉಡುಪಿ, ಮಣಿಪಾಲ ಪರಿಸರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ್ದ ಮೊಹಮ್ಮದ್ ಫಯಾಜ್ (30), ಪ್ರಜ್ವಲ್ (34), ನಿಸಾರ್ ಅನ್ಸಾರ್ (25) ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳು ಗಾಂಜಾ ಸೇವಿಸಿರುವುದನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗ ದೃಢಪಡಿಸಿದೆ. ಈ ಕುರಿತು ಸೆನ್ ಠಾಣೆಯಲ್ಲಿ 2, ಮಣಿಪಾಲ ಠಾಣೆಯಲ್ಲಿ 1 ಪ್ರತ್ಯೇಕ ಪ್ರಕರಣ ದಾಖಲಾಗಿದೆ.

Read More »

ಉಡುಪಿ: ಹಾಲು ಮಾರಾಟದ ಅಂಗಡಿಗೆ ನುಗ್ಗಿ ಕಳ್ಳತನ : ಸಿಸಿಟಿವಿಯಲ್ಲಿ ದೃಶ್ಯ ಸೆರೆ…!!

ಉಡುಪಿ: ನಗರದ ಅಂಬಲಪಾಡಿ ಬೈಪಾಸ್ ನಲ್ಲಿರುವ ಹಾಲು ಮಾರಾಟದ ಅಂಗಡಿಗೆ ನುಗ್ಗಿದ ಕಳ್ಳನೋರ್ವ ನಗದು ದೋಚಿರುವ ಘಟನೆ ನಡೆದಿದೆ. ಉಡುಪಿಯ ಬೈಪಾಸ್ ರಸ್ತೆಯ ಪೃಥ್ವಿ ಸೌಧದಲ್ಲಿರುವ ಅರುಣ್ ಶೆಟ್ಟಿ ಮಾಲಕತ್ವದ ಹಾಲು ಡಿಸ್ಟ್ರಿಬ್ಯೂಟರ್ ಸೆಂಟರ್ ನ ಬೀಗ ಮುರಿದು ರಾತ್ರಿ 11.30 ಕ್ಕೆ ನುಗ್ಗಿರುವ ಕಳ್ಳನೋರ್ವ ರೂ.35 ಸಾವಿರ ಹಣವನ್ನು ಲಪಟಾಯಿಸಿದ್ದಾನೆ. ಒಂದು ಕಡೆಯ ಬೀಗ ಮುರಿದು ಕಳ್ಳತನ ನಡೆಸಿದ್ದು , ಸಿಸಿಟಿವಿಯಲ್ಲಿ ಕಳ್ಳತನದ ವಿಡಿಯೋ ರೆಕಾರ್ಡ್ ಆಗಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಳ್ಳನ ಪತ್ತೆಗೆ ಬಲೆ ಬೀಸಿದ್ದಾರೆ.

Read More »

ಉಡುಪಿ: ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಭದ್ರತಾ ಸಿಬ್ಬಂದಿಯಿಂದ ಚೂರಿ ಇರಿತ – ಪ್ರಕರಣ ದಾಖಲು

ಉಡುಪಿ: ಎಲೆಕ್ಟ್ರಾನಿಕ್ ಶೋರೂಮ್’ವೊಂದರ ಕ್ಲಸ್ಟರ್ ಮ್ಯಾನೆಜರ್’ಗೆ ಚೂರಿ ಇರಿದು ಆರೋಪಿ ಪರಾರಿಯಾದ ಕುರಿತು ಪ್ರಕರಣ ದಾಖಲಾಗಿದೆ. ಚೂರಿ ಇರಿತಕ್ಕೊಳಗಾದ ಸಂತ್ರಸ್ಥ ಸಂತೆಕಟ್ಟೆ ಮೂಲದ ರೋನ್ಸನ್‌ ಎವರೆಸ್ಟ್‌ ಡಿʼಸೋಜಾ(36) ವಾಗಿದ್ದು ಇವರು ಉಡುಪಿ ಸಿಟಿ ಬಸ್‌ ನಿಲ್ದಾಣದ ಬಳಿ ಇರುವ ಹರ್ಷ ಶೋರೂಂ ನಲ್ಲಿ ಕ್ಲಸ್ಟರ್‌ ಮ್ಯಾನೇಜರ್‌ ಆಗಿ ಕೆಲಸವನ್ನು ಮಾಡಿಕೊಂಡಿದ್ದಾರೆ. ಕೆಲಸದ ವಿಚಾರವಾಗಿ ವಾಗ್ವಾದ ನಡೆದು ನಂತರ ಆರೋಪಿ ಸೆಕ್ಯುರಿಟಿ ಗಾರ್ಡ್ ಪ್ರಸಾದ್ ಎಂಬುವವನುಅಡ್ಡಗಟ್ಟಿ ತನ್ನ ಕಿಸೆಯಲ್ಲಿದ್ದ ಚೂರಿಯಿಂದ ಕೊಲ್ಲುವ ಉದ್ದೇಶದಿಂದ ಕುತ್ತಿಗೆಗೆ ಚುಚ್ಚಿದ್ದು ನಂತರ ಕಾಲಿನಿಂದ ಕೆಳಗೆ ಬೀಳಿಸಿ ಎದೆಯ ಭಾಗಕ್ಕೆ ಚೂರಿಯಿಂದ …

Read More »

ಮಂಗಳೂರು: ಪ್ರಧಾನಿ ಮೋದಿಯಿಂದ ಬಿಡುಗಡೆಯಾಗಲಿದೆ ಪುತ್ತೂರಿನ ಎರಡು ಗೇರು ತಳಿಗಳು

ಮಂಗಳೂರು: ಕೇಂದ್ರ ಸರಕಾರ ನೂರು ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ತಳಿಗಳು ಲೋಕಾರ್ಪಣೆಗೊಳ್ಳಲಿದೆ. ಪ್ರಧಾನಿ ಮೋದಿಯವರಿಂದ ಆಗಸ್ಟ್ ಎರಡನೇ ವಾರದಲ್ಲಿ, ನೂರನೇ ದಿನಗಳ ಕಾರ್ಯಕ್ರಮ ನಡೆಯಲಿದೆ. ವಿವಿಧ ವಾರ್ಷಿಕ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ, ಪೋಷಕಾಂಶ ಸಮೃದ್ಧ ತಳಿಗಳು ಲೋಕಾರ್ಪಣೆಗೊಳ್ಳಲಿದೆ. ಇದು ಕೇಂದ್ರ ಸರ್ಕಾರ 100 ದಿನಗಳನ್ನು ಪೂರೈಸುತ್ತಿರುವ ಸಂದರ್ಭ ಬಿಡುಗಡೆಯಾಗಲಿದೆ. ನೇತ್ರಾ ಜಂಬೋ-1 …

Read More »

You cannot copy content of this page.