ತಾಜಾ ಸುದ್ದಿ

ನ. 25 , 26 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ

ಬೆಂಗಳೂರು: ನವೆಂಬರ್ 25 ಮತ್ತು 26 ರಂದು ಅರಮನೆ ಮೈದಾನದಲ್ಲಿ ಬೆಂಗಳೂರು ಕಂಬಳ (ನಮ್ಮ ಕಂಬಳ) ಆಯೋಜಿಸಲಿದೆ ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೆ.ಎಸ್. ತಿಳಿಸಿದ್ದಾರೆ. ಸೆ. 30, ಶನಿವಾರ ಕಂಬಳ ಎಮ್ಮೆಗಳ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಂಬಳದಲ್ಲಿ 125 ಜೋಡಿ ಎಮ್ಮೆಗಳು ಮತ್ತು ಮಾಲೀಕರು ಭಾಗವಹಿಸಲಿದ್ದಾರೆ. ಮಂಗಳೂರಿನಲ್ಲಿ ಬೃಹತ್ ಮೆರವಣಿಗೆ ನಡೆಸಿದ ಬಳಿಕ ಮಾಲೀಕರು ಮತ್ತು ಎಮ್ಮೆಗಳು ಬೆಂಗಳೂರಿಗೆ ತೆರಳಲಿವೆ. ಎಮ್ಮೆಗಳನ್ನು ಲಾರಿಗಳಲ್ಲಿ ಸಾಗಿಸಲಾಗುವುದು. ಹಾಸನದಲ್ಲಿ ಎಮ್ಮೆಗಳಿಗೆ ಎರಡೂವರೆ ಗಂಟೆಗಳ ವಿರಾಮ ನೀಡಲಾಗುವುದು. …

Read More »

BREAKING NEWS- 2000 ನೋಟು ಬದಲಾಯಿಸಿಕೊಳ್ಳಲು ಗಡುವು ವಿಸ್ತರಣೆ..!

ದೆಹಲಿ: 2000 ರೂಪಾಯಿ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು ಅಕ್ಟೋಬರ್ 7 ರವರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಇಂದು ಪ್ರಕಟಣೆಯಲ್ಲಿ ತಿಳಿಸಿದೆ. 2,000 ರೂಪಾಯಿ ನೋಟು ವಿನಿಮಯದ ಗಡುವು ಮುಗಿದ ನಂತರವೂ ಮಾನ್ಯವಾಗಿರುತ್ತದೆ ಎಂದು ಆರ್‌ಬಿಐ ಹೇಳಿತ್ತು. ಹಿಂದಿನ ಗಡುವು ಇಂದು ಆಗಿತ್ತು. ಆಕ್ಟೋಬರ್ 8 ರಿಂದ ಬ್ಯಾಂಕ್‌ಗಳು 2,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವುದನ್ನು ನಿಲ್ಲಿಸಲಿವೆ. ಆದಾಗ್ಯೂ, RBI ಯ 19 ಕಚೇರಿಗಳಲ್ಲಿ ಜನರು 2,000 ರೂಪಾಯಿ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು. ನೋಟುಗಳನ್ನು ಭಾರತೀಯ ಅಂಚೆ ಮೂಲಕ ಆರ್‌ಬಿಐನ …

Read More »

ಮುಲ್ಕಿ : ರಸ್ತೆ ರಿಪೇರಿಗಾಗಿ ಮೊಬೈಲ್ ಟವರ್ ಏರಿ ಕುಳಿತ ವಕ್ತಿ..!

ಮುಲ್ಕಿ : ಬಿಜಾಪುರದಲ್ಲಿ ರಸ್ತೆ ರಿಪೇರಿಗಾಗಿ ವಕ್ತಿಯೊಬ್ಬ ಮುಲ್ಕಿಯಲ್ಲಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ನಡೆದಿದೆ. ಬಿಜಾಪುರ ಮೂಲದ ಸತೀಶ್ ಟವರ್ ಏರಿದ ವ್ಯಕ್ತಿ. ಈತ ತನ್ನ ಊರಿನ ರಸ್ತೆ ದುರಸ್ಥಿಗಾಗಿ ಮುಲ್ಕಿಯ ಕೊಳ್ನಾಡಿನ ಕೈಗಾರಿಕಾ ಪ್ರದೇಶದಲ್ಲಿರುವ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ. ಬೆಳಿಗ್ಗೆ 10 ಗಂಟೆಗೆ ಸತಿಶ್ ಮೊಬೈಲ್ ಟವರ್ ಏರಿದ್ದು, ಸುಮಾರು ನಾಲ್ಕು ಘಂಟೆಗಳ ಕಾಲ ಟವರ್ ನಲ್ಲಿ ಕುಳಿತಿದ್ದಾನೆ, ಆದರೆ ಸಾರ್ವಜನಿಕರ ಗಮನಕ್ಕೆ ಬಂದಿರಲಿಲ್ಲ,. ಈ ನಡುವೆ ಸತೀಶ್ ನನ್ನು ಮೊಬೈಲ್ ಟವರ್ ನಲ್ಲಿ ನೋಡಿದ ಸ್ಥಳೀಯರು ಪೊಲೀಸರಿಗೆ …

Read More »

ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ..!

ಚಿಕ್ಕಮಗಳೂರು : ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ಎಂದು ಗುರುತಿಸಲಾಗಿದೆ. ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೃಂಗೇರಿಯ ಸರ್ಕಾರಿ ಪ್ರಥಮ …

Read More »

ಸುರತ್ಕಲ್: ಫಾರ್ಚುನರ್ ಕಾರು ಅಪಘಾತ – ಓರ್ವ ಸ್ಥಳದಲ್ಲೇ ಮೃತ್ಯು

ಸುರತ್ಕಲ್: ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಬೆಟ್ಟುವಿನ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ. ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದ ಶವವನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ. ಇನ್ನು ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More »

ಬೈಂದೂರು: ವಿದ್ಯುತ್ ತಂತಿ ತಗುಲಿ ದಂಪತಿ ಸಾವು…!!

ಕುಂದಾಪುರ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸಾವನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ನಡೆದಿದೆ. ಮೃತರನ್ನು ಮಹಾಬಲ ದೇವಾಡಿಗ (58), ಲಕ್ಷ್ಮಿ ಮಹಾಬಲ ದೇವಾಡಿಗ (48) ಎಂದು ಗುರುತಿಸಲಾಗಿದೆ.ಕುಂದಾಪುರ ಸೆಪ್ಟೆಂಬರ್ 29: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸಾವನಪ್ಪಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಸುಳ್ಸೆ ಭಟ್ರು ಮನೆ ತೋಟದ ಜಮೀನಿನಲ್ಲಿ ನಡೆದಿದೆ. ಮೃತರನ್ನು ಮಹಾಬಲ ದೇವಾಡಿಗ (58), ಲಕ್ಷ್ಮಿ ಮಹಾಬಲ ದೇವಾಡಿಗ (48) ಎಂದು ಗುರುತಿಸಲಾಗಿದೆ. …

Read More »

ಗ್ರಾಹಕರೇ ಗಮನಿಸಿ : ‘2000’ ಮುಖಬೆಲೆ ನೋಟು ವಾಪಸ್ ಗೆ ಇಂದು ಕಡೆ ದಿನ

ನವದೆಹಲಿ : 2000 ವಾಪಸ್ ಗೆ ಇಂದು ಕಡೆಯ ದಿನವಾಗಿದ್ದು, ಇಂದು ಗ್ರಾಹಕರು ಬ್ಯಾಂಕುಗಳಿಗೆ ತೆರಳಿ 2,000 ನೋಟುವನ್ನು ಬದಲಿಸಿಕೊಳ್ಳಬಹುದು ಅಥವಾ ತಮ್ಮ ಬ್ಯಾಂಕ್ ಖಾತೆಯಲ್ಲಿ ಠೇವಣಿ ಮಾಡಬಹುದಾಗಿದೆ. ಕಳೆದ ಮೇನಲ್ಲಿ ಆರ್‌ಬಿಐ 2000 ನೋಟು ಚಲಾವಣೆಯನ್ನು ಹಿಂಪಡೆದಿತ್ತು. ಬ್ಯಾಂಕಿಗೆ ಹಿಂತಿರುಗಿಸಲು ನೀಡಿದ್ದ ಮೂರು ತಿಂಗಳ ಗಡವು ಇಂದು ಅಂತ್ಯವಾಗಲಿದೆ. ಆದ್ದರಿಂದ 2000 ಮುಖಬೆಲೆ ನೋಟು ಪಡೆಯಲು ಇವತ್ತೇ ಕೊನೆಯ ದಿನವಾಗಿದ್ದರಿಂದ ಬ್ಯಾಂಕಿಗೆ ತೆರಳಿ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಬಹುದು. ನವೆಂಬರ್ 2016 ರಲ್ಲಿ ಆರ್‌ಬಿಐ ಕಾಯಿದೆ, 1934 ರ ಸೆಕ್ಷನ್ 24 (1) ರ …

Read More »

ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಬೃಹತ್ ಗಾತ್ರದ ಮುರು ಮೀನು

ಮಂಗಳೂರು: ಮಂಗಳೂರಿನಲ್ಲಿ ಮೀನುಗಾರರ ಬಲೆಗೆ ಮುನ್ನೂರ ಐವತ್ತು ಕೆ.ಜಿ ತೂಕದ ಮುರು ಮೀನು ಬಲೆಗೆ ಬಿದ್ದಿದೆ. ಮಂಗಳೂರಿನಿಂದ ಆಳ ಸಮುದ್ರಕ್ಕೆ ತೆರಳಿದ ಮೀನುಗಾರರ ಭಾರೀ ಬೇಟೆ ಇದಾಗಿದ್ದು, ಮುರು ಮೀನು ಕೆ.ಜಿಯೊಂದಕ್ಕೆ ಇನ್ನೂರು ರೂಪಾಯಿ ಬೆಳೆಬಾಳುತ್ತದೆ. ಈ ಒಂದೇ ಮೀನಿನಲ್ಲಿ ಮೀನುಗಾರರು ಭರ್ಜರಿ ಆದಾಯ ಗಳಿಸಿದ್ದಾರೆ. ಸಾಮಾನ್ಯವಾಗಿ ಬೇಟೆಯ ವೇಳೆ ಸಣ್ಣ ಗಾತ್ರದ ಮುರು ಮೀನು ಸಿಗುತ್ತಿತ್ತು. ಆದರೆ, ಕಳೆದ ಮೂರು ದಿನಗಳ ಹಿಂದೆ ಈ ಬಾರಿ ದೊಡ್ಡ ಗಾತ್ರದ ಮುರು ಮೀನುಗಾರರ ಬಲೆಗೆ ಬಿದ್ದಿದೆ.

Read More »

ಪುತ್ತೂರು : ರಾಜಶೇಖರ್ ಕೋಟ್ಯಾನ್ ವಿರುದ್ಧ ವಂಚನೆ ಆರೋಪ- ಪುತ್ತಿಲ ಪರಿವಾರ ಸ್ಪಷ್ಟನೆ

ಪುತ್ತೂರು : ರಾಜಶೇಖರ್ ಕೋಟ್ಯಾನ್ ಎಂಬವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ ಆರೋಪಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪುತ್ತಿಲ ಪರಿವಾರ ಸ್ಪಷ್ಟೀಕರಣ ನೀಡಿದೆ. 2023ರ ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ಒತ್ತಾಯದಂತೆ ಪಕ್ಷೇತರರಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರು ಸ್ಪರ್ಧಿಸಿದರು. ಚುನಾವಣೆಯ ಸಂದರ್ಭ ಕೇವಲ 20 ದಿನದಲ್ಲಿ ನಡೆದ ಪ್ರಚಾರ ಕಾರ್ಯದಲ್ಲಿ ತಾಲೂಕು, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ದುಡಿದಿರುವವರಲ್ಲಿ ನೇರಳಕಟ್ಟೆಯ ರಾಜಶೇಖರ್ ಕೋಟ್ಯಾನ್ ಕೂಡ ಓರ್ವರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ರಾಜಶೇಖರ್ ಕೋಟ್ಯಾನ್ ವಿರುದ್ಧ ಕೆಲವು ಆರೋಪಗಳು …

Read More »

ಮಂಗಳೂರು : ಬೆಂಗಳೂರಿನ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನ..!

ಮಂಗಳೂರು: ಬೆಂಗಳೂರಿನ ಮಲ್ಲೇಶ್ವರಂನ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೂಳೂರು ಬಳಿ ನಡೆದಿದೆ. ಮಹಿಳೆಯ ಪತಿ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದು, ಅವರು ಸಾಲ ಮಾಡಿದ್ದರಿಂದ ಸಾಲ ಕೊಟ್ಟವರು ವಾಪಸ್ ಕೊಡುವಂತೆ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ. ಇದರಿಂದ ಬೇಸತ್ತ ಮಹಿಳೆಯು ತನ್ನ ಪುತ್ರ ಹಾಗೂ ಪುತ್ರಿಯ ಜತೆ ಬೆಂಗಳೂರಿನಿಂದ ಮನೆ ಬಿಟ್ಟು ಮಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಮಹಿಳೆಯು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮಕ್ಕಳನ್ನು ಕರೆದುಕೊಂಡು ಪಣಂಬೂರು ಕಡಲ ಕಿನಾರೆಗೆ ತೆರಳಿದ್ದರು. ಆದರೆ ಅಲ್ಲಿ ರಕ್ಷಣಾ ಸಿಬ್ಬಂದಿಯಿದ್ದುದರಿಂದ ಹಿಂದಿರುಗಿ ಬಂದು …

Read More »

You cannot copy content of this page.