ತಾಜಾ ಸುದ್ದಿ

ವಂಚನೆ ಪ್ರಕರಣ – ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನುಅಕ್ಟೊಬರ್ 6 ರವರೆಗೆ ಬೆಂಗಳೂರಿನ 3 ನೇ ಎಪಿಎಂಸಿ ನ್ಯಾಯಾಲಯ ವಿಸ್ತರಿಸಿದೆ. ಪ್ರಮುಖ ಆರೋಪಿ ಚೈತ್ರಾ ಅವರೊಂದಿಗೆ ಇತರ ಆರೋಪಿಗಳಾದ ಅಭಿನವ ಹಾಲಶ್ರೀ, ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್ ಮತ್ತು ಧನರಾಜ್ ಸಹಿತ 7 ಮಂದಿ ಆರೋಪಿಗಳನ್ನು ಸೆಪ್ಟೆಂಬರ್ 13 ರಂದು ನ್ಯಾಯಾಲಯ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಕಾರಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಯಿತು. ಇನ್ನು …

Read More »

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು..!

ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸೋಣಂದೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸೋಣಂದೂರು ಮುಂಡಾಡಿ ಮನೆ ನಿವಾಸಿ ಪ್ರಶಾಂತ್ ಮೃತ ಯುವಕ. ಅವರು ಸೆ 18ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

Read More »

ಉಡುಪಿ: ನಾಪತ್ತೆಯಾಗಿದ್ದ ಯುವಕ 8 ದಿನಗಳ ಬಳಿಕ ಕಾಡಿನ ಸಮೀಪ ಪತ್ತೆ

ಅಮಾಸೆಬೈಲು, ಸೆ.23: ಮಚ್ಚಟ್ಟು ಗ್ರಾಮದ ತೊಂಬಟ್ಟು ಇರ್ಕಿಗದ್ದೆ ಎಂಬಲ್ಲಿಂದ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಶೀನ ನಾಯ್ಕ ಎಂಬವರ ಪುತ್ರ ವಿವೇಕಾನಂದ(28) ಎಂಬವರು ಎಂಟು ದಿನಗಳ ಬಳಿ ಪತ್ತೆಯಾಗಿದ್ದಾರೆ. ಸೆ.16ರಂದು ಮನೆಯಿಂದ ಹೊರಗೆ ಹೋದ ಇವರು ಬಳಿಕ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇಂದು ಮಧ್ಯಾಹ್ನ ತೊಂಬಟ್ಟು ಸಮೀಪದ ಕಬ್ಬಿನಾಲೆ ಎಂಬಲ್ಲಿ ವಿವೇಕಾನಂದ ಪತ್ತೆಯಾಗಿದ್ದಾರೆ. ಕಳೆದ ಎಂಟು ದಿನಗಳಿಂದ ಕಾಡಿನೊಳಗೆಯೇ ಯಾವುದೇ ಆಹಾರ ಇಲ್ಲದೆ ಅಲೆದಾಡಿದ್ದ ವಿವೇಕಾನಂದ, ಕಬ್ಬಿನಾಲೆಯ ಮನೆಯೊಂದರ ಸಮೀಪ ಪತ್ತೆ ಯಾಗಿದ್ದಾರೆ. ಎಂಟು ದಿನಗಳಿಂದ ಅನ್ನ ಆಹಾರ ಇಲ್ಲದೆ ಅವರು ತೀವ್ರ …

Read More »

ಗಣೇಶ ಉತ್ಸವದ ವೇಳೆ ಕಲ್ಲು ತೂರಾಟ : ಎರಡು ಕೋಮುಗಳ ನಡುವೆ ಸಂಘರ್ಷ

ಶಿವಮೊಗ್ಗ : ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಸೀದಿಯ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಿ ಎರಡು ಕೋಮುಗಳ ನಡುವೆ ಸಂಘರ್ಷ ನಡೆದಿದೆ ಎನ್ನಲಾಗುತ್ತಿದೆ. ಮೆರವಣಿಗೆ ಸಾಗುವಾಗ ಮಸೀದಿ ಮುಂಭಾಗ ರಸ್ತೆಯಲ್ಲಿ ದೊಡ್ಡ ಗಾತ್ರದ ಪಟಾಕಿಗಳನ್ನು ಸಿಡಿಸಿದ ಪರಿಣಾಮ ಗಲಭೆ ಆರಂಭವಾಗಿದೆ. ಪೊಲೀಸರು ಮೆರವಣಿಗೆಯನ್ನು ಮುಂದಕ್ಕೆ ಕಳಿಸಿದ್ದಾರೆ. ಮಸೀದಿಯಲ್ಲಿ ನಮಾಜ್‌ಗೆ ತೆರಳಿದವರು ಹೆಳುವಂತೆ ಬೇರೆಡೆಯಿಂದ ಬಂದವರು ಮಸೀದಿಯ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ನಮ್ಮ ಬಳಿ ಕಲ್ಲು ತೂರಾಟದ ವಿಡೀಯೊಗಳಿವೆ ಎನ್ನುತ್ತಿದ್ದಾರೆ. ಕಲ್ಲು ತೂರಾಟ ಸುದ್ದಿ ಹರಡುತ್ತಿದ್ದಂತೆ ಮುಸ್ಲಿಂ ಸಮುದಾಯದವರು …

Read More »

ಮಂಗಳೂರು : ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಚಂದ್ರ ಕೆ.ಅಡೂರು ನಿಧನ

ಮಂಗಳೂರು: ಅಪರಾಧ ಪ್ರಕರಣಗಳ ಬೆನ್ನು ಬಿದ್ದು ಅಪರಾಧಿಗಳನ್ನು ಬಂಧಿಸುವಲ್ಲಿ ನಿಷ್ಣಾತನಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಚಂದ್ರ ಕೆ. ಅಡೂರು(49) ಶನಿವಾರ ನಿಧನ ಹೊಂದಿದ್ದಾರೆ. ಅಲ್ಪ ಕಾಲದ ಅಸೌಖ್ಯದ ಬಳಿಕ ಮಂಗಳೂರು ಖಾಸಾಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂದ್ರ ಅವರು ಕೆಲ ದಿನಗಳ ಹಿಂದೆ ಅನಾರೋಗ್ಯ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ಕರ್ತವ್ಯದಲ್ಲಿದ್ದ ಅವರು ಬಳಿಕ ಏಕಾಏಕಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು ಆದ್ರೆ ಶನಿವಾರ ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಚಂದ್ರ ಅಡೂರು ಪತ್ನಿ ಮತ್ತು ಇಬ್ಬರು …

Read More »

ಗಂಡು ಮಗುವಿಗಾಗಿ ಹೆತ್ತ ತಂದೆಯಿಂದಲೇ ನೀಚ ಕೃತ್ಯ – ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ಪಾಟ್ನಾ : ಗಂಡು ಮಗು ಆಗ್ಲಿ ಅಂತ ಮಾಂತ್ರಿಕರೊಬ್ಬರ ಸಲಹೆಯ ಮೇರೆಗೆ ವ್ಯಕ್ತಿಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಸತತ 10 ವರ್ಷ ತಂದೆ ಅತ್ಯಾಚಾರ ಮಾಡಿರುವ ಘೋರ ಘಟನೆ ಇದಾಗಿದೆ. ಇನ್ನು, ಈ ಪ್ರಕರಣ ಹಳೆಯದಾಗಿದ್ದು, ಬಕ್ಸಾರ್ ಜಿಲ್ಲೆಯ ಸ್ಥಳೀಯ POCSO ನ್ಯಾಯಾಲಯವು ಆರೋಪಿ ತಂದೆ ಬಿನೋದ್ ಕುಮಾರ್ ಸಿಂಗ್ ಮತ್ತು ತಂತ್ರಿ ಅಜಯ್ ಕುಮಾರ್‌ಗೆ …

Read More »

ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ವಂದೇ ಭಾರತ್ – ಕಟೀಲ್ ಗೆ ರೈಲ್ವೆ ಸಚಿವರ ಭರವಸೆ

ಮಂಗಳೂರು : ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರನ್ನು ದೆಹಲಿಯಲ್ಲಿ ಭೇಟಿ ಮಾಡಿ ಸಂಸದ ನಳಿನ್ ಕುಮಾರ್ ಕಟೀಲ್ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭ ಸಚಿವರು ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಬೆಂಗಳೂರು ಕಣ್ಣೂರು ರೈಲನ್ನು ಕೊಚ್ಚಿನ್ ವರೆಗೆ ವಿಸ್ತರಿಸುವಂತೆ ಕೇರಳಿಗರ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸದಂತೆ ಸಚಿವರನ್ನು ಒತ್ತಾಯಿಸಿದ್ದು, ಸ್ಪಂದಿಸಿರುವ ಸಚಿವರು ಅಂತಹ …

Read More »

ಅಪಾರ್ಟ್‌ಮೆಂಟ್‌ನಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಪಾರ್ಟ್ಮೆಂಟ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಬಾವಿ ನಿವಾಸಿ ವಿಜಯಲಕ್ಷ್ಮಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ದ್ವಿತೀಯ ಪಿಯುಸಿ ಕಾಮರ್ಸ್ ವ್ಯಾಸಂಗ ಮಾಡುತ್ತಿದ್ದಳು. ತಾಯಿ ಜೊತೆ ವಾಸವಾಗಿದ್ದ ವಿಜಯಲಕ್ಷ್ಮೀ ಕಳೆದ ಒಂದು ವಾರದಿಂದ ಯಾರೊಂದಿಗೂ ಅಷ್ಟಾಗಿ ಮಾತನಾಡದೇ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಳು. ಈ ನಡುವೆ ಧರ್ಮಸ್ಥಳಕ್ಕೆ ಹೋಗಿ ವಿಜಯಲಕ್ಷ್ಮೀ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗ ವೃದ್ಧರೊಬ್ಬರು ಗಮನಿಸಿ ಆಕೆಗೆ ಬುದ್ಧಿವಾದ ಹೇಳಿ ಕಳುಹಿಸಿದ್ದರು. ಮೊನ್ನೆ ರಾತ್ರಿ ಮೈಸೂರು ರಸ್ತೆಯ …

Read More »

ಸಾರ್ವಜನಿಕವಾಗಿ ‘ಹಿಜಾಬ್’ ಧರಿಸದಿದ್ದರೆ 10 ವರ್ಷ ಜೈಲು ಶಿಕ್ಷೆ..!

ದುಬೈ: ಇರಾನ್​ನಲ್ಲಿ ಇಸ್ಲಾಮಿಕ್​ ಸ್ಕಾರ್ಫ್ (ಹಿಜಾಬ್) ಧರಿಸುವ ವಿಚಾರವಾಗಿ 22 ವರ್ಷದ ಯುವತಿ ಮಹ್ಸಾ ಅಮಿನಿ ಮೃತಪಟ್ಟು ಒಂದು ವರ್ಷ ಕಳೆದಿದೆ. ಇಡೀ ದೇಶದ ತುಂಬಾ ಹಿಜಾಬ್​ ಕಿಚ್ಚು ಹಬ್ಬಿದೆ. ಇದರ ನಡುವೆ ಸಾರ್ವಜನಿಕವಾಗಿ ಹಿಜಾಬ್​ ಧರಿಸಲು ನಿರಾಕರಿಸುವ ಮಹಿಳೆಯರು ಮತ್ತು ಅವರನ್ನು ಬೆಂಬಲಿಸುವವರಿಗೆ ಭಾರಿ ಶಿಕ್ಷೆ ವಿಧಿಸುವ ಹೊಸ ಮಸೂದೆಯನ್ನು ಇರಾನ್ ಸಂಸತ್ತು ಅಂಗೀಕರಿಸಿದೆ. ಇದರ ಪ್ರಕಾರ, ಸಾರ್ವಜನಿಕವಾಗಿ ‘ಹಿಜಾಬ್’ ಧರಿಸದಿದ್ದರೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಹಿಜಾಬ್ ಧರಿಸದ ಮಹಿಳೆಯರಿಗೆ ಸೇವೆ ಸಲ್ಲಿಸುವ ವ್ಯಾಪಾರಿಗಳಿಗೂ ಈ ಕಾಯ್ದೆ ಅನ್ವಯಿಸುತ್ತದೆ. …

Read More »

ಉಡುಪಿ : ಅನ್ಯಮತೀಯ ಜೋಡಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ ಆರೋಪ: 10 ಮಂದಿ ವಿರುದ್ದ ದೂರು

ಉಡುಪಿ : ಅನ್ಯಧರ್ಮಕ್ಕೆ ಸೇರಿದ್ದ ಯುವಕ ಯುವತಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ 10 ಮಂದಿಯ ವಿರುದ್ದ ಕಾಪು ಪೊಲೀಸ್​ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಕಳೆದ ತಿಂಗಳು ನಡೆದಿರುವ ಘಟನೆ ಇದಾಗಿದ್ದು, ಹಿಂದೂ ಧರ್ಮಕ್ಕೆ ಸೇರಿದ ಯುವತಿಯೊಬ್ಬಳು ಪರಿಚಯದ ಮುಸ್ಲೀಂ ಯುವಕನ ಜೊತೆ ಆಗುಂಬೆ ಸಮೀಪದ ಸಿರಿ‌ಮನೆ ಫಾಲ್ಸ್ ಗೆ ಹೋಗಿದ್ದಾರೆ. ಈ ವೇಳೆ ವಾಪಸ್ ಬರುವಾಗ ಅನ್ಯಮತೀಯ ಜೋಡಿಯನ್ನು ಕೆಲವು ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ಯುವಕರ ಗುಂಪು …

Read More »

You cannot copy content of this page.