ತಾಜಾ ಸುದ್ದಿ

ಸಾರ್ವಜನಿಕವಾಗಿ ‘ಹಿಜಾಬ್’ ಧರಿಸದಿದ್ದರೆ 10 ವರ್ಷ ಜೈಲು ಶಿಕ್ಷೆ..!

ದುಬೈ: ಇರಾನ್​ನಲ್ಲಿ ಇಸ್ಲಾಮಿಕ್​ ಸ್ಕಾರ್ಫ್ (ಹಿಜಾಬ್) ಧರಿಸುವ ವಿಚಾರವಾಗಿ 22 ವರ್ಷದ ಯುವತಿ ಮಹ್ಸಾ ಅಮಿನಿ ಮೃತಪಟ್ಟು ಒಂದು ವರ್ಷ ಕಳೆದಿದೆ. ಇಡೀ ದೇಶದ ತುಂಬಾ ಹಿಜಾಬ್​ ಕಿಚ್ಚು ಹಬ್ಬಿದೆ. ಇದರ ನಡುವೆ ಸಾರ್ವಜನಿಕವಾಗಿ ಹಿಜಾಬ್​ ಧರಿಸಲು ನಿರಾಕರಿಸುವ ಮಹಿಳೆಯರು ಮತ್ತು ಅವರನ್ನು ಬೆಂಬಲಿಸುವವರಿಗೆ ಭಾರಿ ಶಿಕ್ಷೆ ವಿಧಿಸುವ ಹೊಸ ಮಸೂದೆಯನ್ನು ಇರಾನ್ ಸಂಸತ್ತು ಅಂಗೀಕರಿಸಿದೆ. ಇದರ ಪ್ರಕಾರ, ಸಾರ್ವಜನಿಕವಾಗಿ ‘ಹಿಜಾಬ್’ ಧರಿಸದಿದ್ದರೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು. ಹಿಜಾಬ್ ಧರಿಸದ ಮಹಿಳೆಯರಿಗೆ ಸೇವೆ ಸಲ್ಲಿಸುವ ವ್ಯಾಪಾರಿಗಳಿಗೂ ಈ ಕಾಯ್ದೆ ಅನ್ವಯಿಸುತ್ತದೆ. …

Read More »

ಉಡುಪಿ : ಅನ್ಯಮತೀಯ ಜೋಡಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ ಆರೋಪ: 10 ಮಂದಿ ವಿರುದ್ದ ದೂರು

ಉಡುಪಿ : ಅನ್ಯಧರ್ಮಕ್ಕೆ ಸೇರಿದ್ದ ಯುವಕ ಯುವತಿಯನ್ನು ರಸ್ತೆ ಮಧ್ಯೆ ತಡೆದು ನಿಲ್ಲಿಸಿ ವಿಚಾರಣೆ ನಡೆಸಿ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದ ಮೇಲೆ 10 ಮಂದಿಯ ವಿರುದ್ದ ಕಾಪು ಪೊಲೀಸ್​ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಕಳೆದ ತಿಂಗಳು ನಡೆದಿರುವ ಘಟನೆ ಇದಾಗಿದ್ದು, ಹಿಂದೂ ಧರ್ಮಕ್ಕೆ ಸೇರಿದ ಯುವತಿಯೊಬ್ಬಳು ಪರಿಚಯದ ಮುಸ್ಲೀಂ ಯುವಕನ ಜೊತೆ ಆಗುಂಬೆ ಸಮೀಪದ ಸಿರಿ‌ಮನೆ ಫಾಲ್ಸ್ ಗೆ ಹೋಗಿದ್ದಾರೆ. ಈ ವೇಳೆ ವಾಪಸ್ ಬರುವಾಗ ಅನ್ಯಮತೀಯ ಜೋಡಿಯನ್ನು ಕೆಲವು ಹಿಂದೂ ಸಂಘಟನೆಯ ಕಾರ್ಯಕರ್ತರು ಎನ್ನಲಾದ ಯುವಕರ ಗುಂಪು …

Read More »

ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಪೊಲೀಸ್ ಅಧಿಕಾರಿ ಅರೆಸ್ಟ್

ನವದೆಹಲಿ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಉಪ ಪೊಲೀಸ್ ಆಯುಕ್ತರೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು ಶೇಖ್ ಆದಿಲ್ ಮುಸ್ತಾಕ್ ಎಂದು ಗುರುತಿಸಲಾಗಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಉಗ್ರನಿಗೆ ಸಹಾಯ ಮಾಡಿದ ಮತ್ತು ಉಗ್ರನ ವಿರುದ್ಧ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯನ್ನೇ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಿದ ಆರೋಪ ಶೇಖ್ ಆದಿಲ್ ಮುಸ್ತಾಕ್ ವಿರುದ್ಧ ಕೇಳಿಬಂದಿದೆ. ಇದಿಷ್ಟೇ ಅಲ್ಲದೆ, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಈ ಅಧಿಕಾರಿ ಭಾಗಿಯಾಗಿದ್ದಾರೆ. ಅಧಿಕಾರಿಯನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ …

Read More »

ʻಮತದಾರರ ಪಟ್ಟಿʼಯೊಂದಿಗೆ ʻಆಧಾರ್ ಸಂಖ್ಯೆʼ ಕಡ್ಡಾಯವಲ್ಲ: ಸುಪ್ರೀಂಗೆ ಚುನಾವಣಾ ಆಯೋಗ ಮಾಹಿತಿ

ನವದೆಹಲಿ: ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ಈಗಾಗಲೇ ಸುಮಾರು 66.23 ಕೋಟಿ ಆಧಾರ್ ಕಾರ್ಡ್‌ಗಳನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಆದ್ರೆ, ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು 2022 ರ ಅಡಿಯಲ್ಲಿ ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಚಂದ್ರಚೂಡ್ ಹೇಳಿದರು.ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಚುನಾವಣಾ ಸಮಿತಿಯ ಸಲ್ಲಿಕೆಗಳನ್ನು ಗಮನಿಸಿತು ಮತ್ತು ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು, …

Read More »

ಭಜರಂಗದಳಕ್ಕೂ ಚೈತ್ರಾ ಕುಂದಾಪುರಗು ಯಾವುದೇ ರೀತಿಯಾದ ಸಂಬಂಧ ಇಲ್ಲ : ಶರಣ್ ಪಂಪ್ ವೆಲ್

ಮಂಗಳೂರು : ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಚೈತ್ರ ಮತ್ತು ಗ್ಯಾಂಗ್ ಎಲ್ ಏ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ ಪಂಪವೆಲ್ ಹೇಳಿಕೆ ಒಂದನ್ನು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚೈತ್ರ ಕುಂದಾಪುರವು ಹಾಗೂ ನಮ್ಮ ಬಜರಂಗದಳಕ್ಕೂ ಯಾವುದೇ ರೀತಿಯಾದಂತಹ ಸಂಬಂಧವಿಲ್ಲ ಆಕೆ ಬಜರಂಗದಳದ ಸದಸ್ಯಯು ಅಲ್ಲ ಎಂದು ಶರಣ್ ಪಂಪವೆಲ್ ಸ್ಪಷ್ಟಪಡಿಸಿದ್ದಾರೆ.   ಚೈತ್ರ ಕುಂದಾಪುರ ಉತ್ತಮ ಭಾಷಣಕಾರ್ತಿ ಈ …

Read More »

ಕೆನಡಾ ನಂಟು ಹೊಂದಿರುವ 43 ಕುಖ್ಯಾತ ಭಯೋತ್ಪಾದಕರ ಪಟ್ಟಿ ಬಿಡುಗಡೆ ಮಾಡಿದ NIA

ನವದೆಹಲಿ:ಭಯೋತ್ಪಾದನಾ ವಿರೋಧಿ ತನಿಖಾ ಸಂಸ್ಥೆಯು(NIA) 43 ಕುಖ್ಯಾತ ಶಂಕಿತ ಭಯೋತ್ಪಾದಕರ ಚಿತ್ರಗಳನ್ನು ಸಾರ್ವಜನಿಕಗೊಳಿಸಿದೆ, ಅವರಲ್ಲಿ ಕೆಲವರು ಕೆನಡಾದಲ್ಲಿ ನೆಲೆಸಿದ್ದಾರೆ. ವಿವಿಧ ಕ್ರಿಮಿನಲ್ ಅಪರಾಧಗಳಲ್ಲಿ ತೊಡಗಿರುವ ಆರೋಪ ಹೊತ್ತಿರುವ ಈ ವ್ಯಕ್ತಿಗಳು ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಭಾವಿಸಲಾಗಿದೆ. ಕೆಲವು ಶಂಕಿತರ ಚಿತ್ರಗಳನ್ನು ಎನ್‌ಐಎ ಸಾರ್ವಜನಿಕಗೊಳಿಸಿದೆ. ದೇಶದಿಂದ ಪಲಾಯನಗೈದಿರುವ ಮತ್ತು ಖಲಿಸ್ತಾನಿ ಭಯೋತ್ಪಾದಕರೊಂದಿಗೆ ಸಂಪರ್ಕ ಹೊಂದಿದ್ದಾರೆಂದು ಶಂಕಿಸಲಾದ ಕೆಲವು ಮೋಸ್ಟ್ ವಾಂಟೆಡ್ ಕ್ರಿಮಿನಲ್‌ಗಳನ್ನು ಎನ್‌ಐಎ ಸಾರ್ವಜನಿಕಗೊಳಿಸಿದ ಪಟ್ಟಿಯಲ್ಲಿ ಸೇರಿಸಲಾಗಿದೆ. ಇವರಲ್ಲಿ ಅರ್ಶ್ ದಲ್ಲಾ, ಗೋಲ್ಡಿ ಬ್ರಾರ್, ಲಖ್ಬೀರ್ ಸಿಂಗ್ ಲಿಂಡಾ ಮುಂತಾದವರು ಸೇರಿದ್ದಾರೆ. ಪ್ರಸ್ತುತ ಕೆನಡಾದಲ್ಲಿ …

Read More »

ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ ನಿಧನ

ಸಿದ್ದಾಪುರ: ಖ್ಯಾತ ಯಕ್ಷಗಾನ ಭಾಗವತ ರಾಮಚಂದ್ರ ನಾಯ್ಕ ಹೆಮ್ಮನ ಬೈಲ್ (57) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.ಯಕ್ಷಗಾನ ಭಾಗವರಲ್ಲದೆ ಕೃತಿ ರಚನಾಕಾರರೂ ಆಗಿದ್ದ ಅವರು ಹಲವು ಮೇಳಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಸಾಲಿಗ್ರಾಮ ಮೇಳ,ಸಿಗಂದೂರು ಮೇಳ ಹಾಗೂ ವಿವಿಧ ಬಯಲಾಟ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

Read More »

ಬಂಟ್ವಾಳ : ಮನೆಗೆ ಸಿಡಿಲು ಬಡಿದು ಅಪಾರ ನಷ್ಟ..!

ಬಂಟ್ವಾಳ : ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆಯ ಮನೆ ಮೇಲೆ ಸಿಡಿಲು ಬಡಿದ ಘಟನೆ ನಿನ್ನೆ ನಡೆದಿದೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಇವರ ಮನಗೆ ಸೋಮವಾರದಂದು ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಪಿಡಿಓ. ಮಾಜಿ ಅಧ್ಯಕ್ಷೆ ಉಪಾಧ್ಯಕ್ಷರು ಪ್ರಮುಖರು ಮನೆಗೆ ಬೇಟಿ ನೀಡಿದ್ದಾರೆ

Read More »

ಸೆಪ್ಟಂಬರ್ 22 ರಂದು “ಯಾನ್ ಸೂಪರ್ ಸ್ಟಾರ್” ತುಳು ಸಿನಿಮಾ ಬಿಡುಗಡೆ

ಮಂಗಳೂರು: “ಆನಂದ ಫಿಲಂಸ್ ಮತ್ತು ದಿ ಮಂಗಳೂರಿಯನ್ಸ್ ಲಾಂಛನದಲ್ಲಿ ರಾಮ್ ಶೆಟ್ಟಿ ಅರ್ಪಿಸುವ, ದಯಾನಂದ ಶೆಟ್ಟಿ ನಿರ್ಮಾಣ, ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ “ಯಾನ್ ಸೂಪರ್ ಸ್ಟಾರ್” ತುಳು ಚಿತ್ರವು ಸೆಪ್ಟಂಬರ್ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ” ಎಂದು ರಾಮ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬಳಿಕ ಮಾತಾಡಿದ ಸಿಐಡಿ ದಯಾ ಖ್ಯಾತಿಯ ದಯಾನಂದ ಶೆಟ್ಟಿ ಅವರು, “ಹಿಂದಿ ಸಿನಿಮಾ ಮತ್ತು ಧಾರವಾಹಿ ಕ್ಷೇತ್ರದಲ್ಲಿ ನಾನು ಕಳೆದ 25 ವರ್ಷಗಳಿಂದ ದುಡಿಯುತ್ತಿದ್ದೇನೆ. ನಾನೆಲ್ಲಿ ಹೋದರೂ ತುಳು ಸಿನಿಮಾ ಯಾವಾಗ ಮಾಡುತ್ತೀರಿ ಎಂದು …

Read More »

ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿ ಅರೆಸ್ಟ್

ಮಂಗಳೂರು: ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ ಬೆದರಿಕೆ, ಹಪ್ತಾ ವಸೂಲಿ ಹೀಗೆ ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪಡೀಲ್ ಫೈಸಲ್ ನಗರ ನಿವಾಸಿಯಾಗಿದ್ದರೂ ಗೋವಾ, ಮುಂಬೈನಲ್ಲಿದ್ದುಕೊಂಡೇ ರೌಡಿಸಂ ಲೋಕವನ್ನು ನಿಯಂತ್ರಿಸುತ್ತಿದ್ದ ತಲ್ಲತ್ ಗ್ಯಾಂಗಿನ ಲೀಡರ್‌ ತಲತ್‌’ (39) ಬಂಧಿತ ವ್ಯಕ್ತಿ ಕಳೆದ 20 ವರ್ಷಗಳಿಂದ ತಲ್ಲತ್‌ ಮಂಗಳೂರಿನಲ್ಲಿ ಅಪರಾಧ ಪ್ರಕರಣ ಎದುರಿಸುತ್ತಿದ್ದಾನೆ. ಇತ್ತೀಚೆಗೆ ತಲ್ಲನ್ ಮುಂಬೈನಿಂದ ಊರಿಗೆ ಬಂದಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕೊಟ್ಟಾರದಲ್ಲಿದ್ದಾಗ ಬಂಧಿಸಿದ್ದಾರೆ. ಬಳಿಕ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ …

Read More »

You cannot copy content of this page.