ತಾಜಾ ಸುದ್ದಿ

ಒಳ ಉಡುಪಿನಲ್ಲಿತ್ತು 2 ಕೋಟಿ ರೂಪಾಯಿ ಮೌಲ್ಯದ 3.9 ಕೆ.ಜಿ. ಚಿನ್ನ!

ನವದೆಹಲಿ: ವಿಮಾನನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುವವರು ಸಿಕ್ಕಿಬೀಳುತ್ತಿರುವ ಪ್ರಕರಣಕ್ಕೆ ಇಂದು ಮತ್ತೊಂದು ಸೇರ್ಪಡೆ ಆಗಿದ್ದು, ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಜನ್ಮದಿನ ಆಚರಿಸಿಕೊಳ್ಳುವವರಿಗೆ ವಂಡರ್ಲಾದಲ್ಲಿ ಉಚಿತ ಟಿಕೆಟ್​; ಇಲ್ಲಿದೆ ವಿವರ.. ಎಐ ಏರ್​ಪೋರ್ಟ್ ಸರ್ವಿಸಸ್ ಲಿಮಿಟೆಡ್​ನ ಸಿಬ್ಬಂದಿಯೇ ಈ ಕಳ್ಳಸಾಗಣೆಯಲ್ಲಿ ಪಾಲ್ಗೊಂಡಿರುವುದು ಕಂಡುಬಂದಿದೆ. ಶ್ರೀಲಂಕಾ ಮೂಲದ ಈ ವ್ಯಕ್ತಿಯನ್ನು ಸಿಐಎಸ್​ಫ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ ಭಾರಿ ಪ್ರಮಾಣದ ಚಿನ್ನ ಪತ್ತೆಯಾಗಿದೆ. ಅನುಮಾನಾಸ್ಪದವಾಗಿ ಕಂಡುಬಂದ ಈ ವ್ಯಕ್ತಿಯನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದಾಗ ಒಳ ಉಡುಪಿನಲ್ಲಿ ಅಡಗಿಸಿ ಇರಿಸಿಕೊಂಡಿದ್ದ 3.9 ಕೆ.ಜಿ. ತೂಕದ …

Read More »

ಡಿವೈಡರಿಗೆ ಕಾರು ಢಿಕ್ಕಿ; ಮೂವರು ದುರ್ಮರಣ

ಬೆಂಗಳೂರು; ಭೀಕರ ರಸ್ತೆ ಅಪಘಾತದಲ್ಲಿ ಐವರು ಇಂಜಿನಿಯರ್ ಗಳ ಪೈಕಿ ಮೂವರು ಇಂಜಿನಿಯರ್​ಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಆಗಸ್ಟಿನ್ ನಿರೋಷ್, ದಾ ರೆಡ್ಡಿ, ವಿಘ್ನೇಶ್ ಸ್ಥಳದಲ್ಲೆ ಸಾವನ್ನಪ್ಪಿದ್ದು, ಮಿಥುನ್ ಯಾದವ್ ಹಾಗೂ ಶತೃಘ್ನ ಸ್ಥಿತಿ ಗಂಭೀರವಾಗಿದೆ. ಮೃತರೆಲ್ಲರು ಬೆಂಗಳೂರಿನ ಖಾಸಗಿ ಐಟಿ ಕಂಪನಿಯೊಂದರಲ್ಲಿ ಟೆಕ್ಕಿಗಳಾಗಿದ್ದರು. ರಜೆ ಇದ್ದಿದ್ದರಿಂದ ಒಂದು ದಿನದ ಪಿಕ್‌ನಿಕ್ ಗೆ ಎಂದು ಮೈಸೂರು ಟ್ರಿಪ್ ಹೋಗಿದ್ದರು. ಮೈಸೂರಿಗೆ ತೆರಳಿ ವಾಪಸ್ ಬರುತ್ತಿದ್ದಾಗ ಅಪಘಾತ ನಡೆದಿದೆ. ಕಾರು ಚಾಲಕ ಆಗಸ್ಟೀನ್ ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು …

Read More »

ಗೃಹಲಕ್ಷ್ಮಿ ಹಣ ಜಮೆಯಾಗಿಲ್ವೇ? ಹಾಗಾದ್ರೆ ಈ ಕೆಲ್ಸ ಮೊದಲು ಮಾಡಿ…

ಮಹಿಳೆಯರಿಗೆ 2000 ರೂ ನೀಡುವ ‘ಗೃಹಲಕ್ಷ್ಮಿ’ ಯೋಜನೆ ಆರಂಭವಾಗಿದ್ದು, ಸರ್ಕಾರ ಯಜಮಾನಿಯರ ಖಾತೆಗೆ ಹಣ ಜಮಾ ಮಾಡುತ್ತಿದೆ. ಕೆಲವರ ಖಾತೆಗೆ ಹಣ ಜಮಾ ಪ್ರಕ್ರಿಯೆ ನಡೆಯುತ್ತಿದೆ.ಆದರೆ ಕೆಲವು ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಕೆಲವರು ನಮಗೆ SMS ಬಂದಿಲ್ಲ ಹೀಗಾಗಿ ನಮ್ಮ ಅರ್ಜಿ ಸಲ್ಲಿಕೆ ಯಶಸ್ವಿಯಾಗಿದೆಯೋ ಅಥವಾ ತಡೆಹಿಡಿಯಲಾಗಿದೆಯೋ ಅಥವಾ ರದ್ದಾಗಿದೆಯೋ ಎನ್ನುವ ಗೊಂದಲದಲ್ಲಿ ಇದ್ದಾರೆ. ಕೆಲವು ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಹಣ ಬರದೇ ಇರಬಹುದು. ಹಾಗಾಗಿ ಕೆಳಗೆ ಸೂಚಿಸಲಾದ ಕೆಲಸಗಳನ್ನು ಮಾಡಿದಲ್ಲಿ ನಿಮ್ಮ ಖಾತೆಗೆ ಹಣ ಜಮೆಯಾಗುತ್ತದೆ. 1) ನೀವು …

Read More »

ಉಡುಪಿ: ಪತಿಗೆ ಮೆಣಸಿನ ಹುಡಿ ಮಿಶ್ರಿತ ಬಿಸಿ ನೀರು ಎರಚಿದ ಪತ್ನಿ- ಪ್ರಕರಣ ದಾಖಲು

ಕಾಪು: ಉಡುಪಿಯ ಕಟಪಾಡಿ ಸಮೀಪದ ಮಣಿಪುರದಲ್ಲಿ ಪತ್ನಿಯೊಬ್ಬಳು ತನ್ನ ಪತಿಯ ಮೈಮೇಲೆ ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎರಚಿದ್ದು ಪತಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ. ಪತಿ ಮೊಹಮ್ಮದ್ ಅಶ್ರಫ್‌‌ಗೆ ಪತ್ನಿ ಅಫ್ರೀನ್, ಅತ್ತೆ, ಮಾವ ಹಾಗೂ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಘಟನೆಯಲ್ಲಿ ಮುಖ, ದೇಹ, ಎಡಗೈ, ಎದೆ, ಬೆನ್ನು ಬಲಕೈ ಸುಟ್ಟು ಹೋಗಿ ಗಂಭೀರವಾಗಿ ಗಾಯಗೊಂಡಿರುವ ಆಸಿಫ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸಿಫ್ ಬೇರೆ ಹುಡುಗಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಅನುಮಾನ ಹೊಂದಿದ್ದ …

Read More »

BIGG NEWS: ಇಂದೇ ಸಂಸತ್ತಿನಲ್ಲಿ ಮಂಡನೆಯಾಗಲಿದೆ ಮಹಿಳಾ ಮೀಸಲಾತಿ ಮಸೂದೆ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಿದ್ದಾರೆ. ಮಸೂದೆಯನ್ನು ಸದನದಲ್ಲಿ ಅಂಗೀಕರಿಸುವ ಚರ್ಚೆಯನ್ನು ಸೆಪ್ಟೆಂಬರ್ 21 ರಂದು ಕೈಗೆತ್ತಿಕೊಳ್ಳಲಾಗುವುದು ಎನ್ನಲಾಗಿದೆ. ಸೋಮವಾರದಿಂದ ಪ್ರಾರಂಭವಾಗಿರುವ ಐದು ದಿನಗಳ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಆಡಳಿತಾರೂಢ ಎನ್ಡಿಎ ಮತ್ತು ಪ್ರತಿಪಕ್ಷ ಬಿಜೆಪಿ ಬಣ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಭಾನುವಾರ ಬಲವಾದ ಧ್ವನಿ ಎತ್ತಿದ್ದವು , “ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಸರ್ಕಾರ ಹೇಳಿತ್ತು ಅದರಂತೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ …

Read More »

ಮಂಗಳೂರು: ಕುಕ್ಕರ್ ಸ್ಫೋಟದ ರೂವಾರಿ ಬಂಧನ‌ ಪ್ರಕರಣ: ತನಿಖೆಯಲ್ಲಿ‌ ಮತ್ತೊಂದು ಮಾಹಿತಿ ಬಹಿರಂಗ

ಮಂಗಳೂರು: ಮಂಗಳೂರು ಕುಕ್ಕರ್ ಸ್ಫೋಟದ ರೂವಾರಿ ಐಸಿಸ್ ಉಗ್ರ ಅರಾಫತ್ ಅಲಿನನ್ನು ಎನ್​ಐಎ ಬಂಧಿಸಿ ತೀವ್ರ ವಿಚಾರಣೆಗೊಳಪಿಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ‌ ಮತ್ತೊಂದು ವಿಧ್ವಂಸಕ ಮಾಹಿತಿ ಬಹಿರಂಗವಾಗಿದೆ. ತೀರ್ಥಹಳ್ಳಿ ಬರ್ದರ್ಸ್ ಕಾನ್ಸೆಪ್ಟ್ ಹುಟ್ಟು ಹಾಕಿದ್ದೆ ಅಬ್ದುಲ್ ಮತೀನ್ ಅಂತೆ. ಎನ್​ಐಎ ಮೋಸ್ಟ್ ವಾಂಟೇಡ್ ನಲ್ಲಿರುವ ಅಬ್ದುಲ್ ಮತೀನ್, 2014 ರಲ್ಲೇ ಉಗ್ರವಾದದ ನಂಟು ಅಂಟಿಸಿಕೊಂಡಿದ್ದ. ಬಳಿಕ ವಿದೇಶಕ್ಕೆ ಎಸ್ಕೇಪ್ ಆಗಿದ್ದ. ಈ ವೇಳೆ 2020 ರಲ್ಲಿ ಮಾಜ್ ಮುನೀರ್, ಶಾರೀಕ್ ಹಾಗೂ ಅರಾಫತ್ ಅಲಿ ಗೋಡೆ ಬರಹ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದರು. ಇವರನ್ನು ಅಬ್ದುಲ್ …

Read More »

ತಿಲಕ ಧರಿಸಲು ನಿರಾಕರಿಸಿದ ಸಿದ್ದರಾಮಯ್ಯ : ಬಿಜೆಪಿ ಟೀಕೆ

ಹೈದರಾಬಾದ್ : ಇಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ (ಸಿಡಬ್ಲ್ಯುಸಿ) ಹಣೆಗೆ ತಿಲಕ ಇಡಲು ನಿರಾಕರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆ ತೀವ್ರ ಟೀಕೆಗೆ ಗುರಿಯಾಗಿದೆ. ಸಿದ್ದರಾಮಯ್ಯ ನಡೆಯನ್ನು ಬಿಜೆಪಿ ಪ್ರಶ್ನಿಸಿದೆ.ಶನಿವಾರ ಸಿಡಬ್ಲ್ಯುಸಿ ಸಭಾಂಗಣಕ್ಕೆ ಸಿದ್ದರಾಮಯ್ಯ ಆಗಮಿಸಿದಾಗ ಅವರಿಗೆ ಸ್ವಾಗತಕಾರಿಣಿ ಗಂಧದ ಬೊಟ್ಟು ಹಚ್ಚಿ ಆರತಿ ಮಾಡಲು ಮುಂದಾಗಿದ್ದಾಳೆ. ಆಗ ಸಿದ್ದರಾಮಯ್ಯ ಹಣೆಗೆ ತಿಲಕ ಇಡಲು ಬಿಡುವುದಿಲ್ಲ. ಸ್ವಾಗತಕಾರಿಣಿ ಆಗ ಆರತಿಯನ್ನಷ್ಟೇ ಮಾಡಿದ್ದಾರೆ. ಇದನ್ನು ಪಕ್ಕದಲ್ಲೇ ಇದ್ದ ಕಾಂಗ್ರೆಸ್‌ ಮುಖಂಡ ದಿಗ್ವಿಜಯ ಸಿಂಗ್‌ ಹಾಗೂ ಇತರರು ಮೂಕಪ್ರೇಕ್ಷಕರಂತೆ ನೋಡುತ್ತಾರೆ.ಸಿದ್ದರಾಮಯ್ಯ ನಡೆಯನ್ನು ಟೀಕಿಸಿರುವ ಬಿಜೆಪಿ ವಕ್ತಾರ …

Read More »

ಬಂಟ್ವಾಳ : ಔಷಧಕ್ಕೆ ಬಂದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತ್ಯು

ಬಂಟ್ವಾಳ: ಔಷಧಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಮೃತ ಪಟ್ಟ  ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ತೆಯಲ್ಲಿ ನಡೆದಿದೆ. ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.ಔಷಧಿಗೆಂದು ಅವರು ಇಂದು‌ ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ. ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಜ್ವರದಿಂದ ಬಳಲುತ್ತಿದ್ದ …

Read More »

ಉದ್ಯಮಿಗೆ 5 ಕೋಟಿ ವಂಚನೆಗೆ ಮತ್ತೊಂದು ಟ್ವಿಸ್ಟ್: ಮತ್ತೋರ್ವ ಶ್ರೀ ಹೆಸರು ಚೈತ್ರಾ ಕುಂದಾಪುರ ರಿವೀಲ್

ಬೆಂಗಳೂರು: ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ವಂಚನೆ ಪ್ರಕರಣದಲ್ಲಿ ಲಾಕ್ ಆಗಿರುವಂತ ಚೈತ್ರಾ ಕುಂದಾಪುರ ಅವರು, ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಐಟಿ, ಇಡಿಗೆ ದೂರು ನೀಡಿರೋದಾಗಿ ತಿಳಿದು ಬಂದಿದೆ. ಈ ದೂರಿನಲ್ಲಿ ಮತ್ತೋರ್ವ ಶ್ರೀಗಳ ಹೆಸರನ್ನು ರಿವೀಲ್ ಮಾಡಿದ್ದಾರೆ.   ಈಗಾಗಲೇ ಅಭಿನವ ಹಾಲಶ್ರೀಗಳು ಸಿಗಲಿ, ಎಂಎಲ್‌ಎ ಟಿಕೆಟ್ ಡೀಲ್ ಹಿಂದಿನ ಕಾರಣ ಏನು ಅಂತ ಮತ್ತಷ್ಟು ಮಾಹಿತಿ ಸಿಗಲಿದೆ ಅಂತ ಚೈತ್ರಾ ಕುಂದಾಪುರ ಸಿಸಿಬಿ ಬಂಧನದ ಬಳಿಕ ಸ್ಪೋಟಕ ಬಾಂಬ್ ಸಿಡಿಸಿದ್ದರು. ಈ ಬೆನ್ನಲ್ಲೇ ಈಗ ಮತ್ತೊಂದು ಹೆಸರು ರಿವೀಲ್ …

Read More »

ಗಣೇಶ ಹಬ್ಬದ ದಿನವೇ ಸರ್ಜಾ ಕುಟುಂಬದಲ್ಲಿ ಸಂಭ್ರಮ; ಗಂಡು ಮಗುವಿಗೆ ತಂದೆಯಾದ ಧ್ರುವ ಸರ್ಜಾ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ಗಣೇಶ ಹಬ್ಬದ ದಿನವಾದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಖ್ಯಾತ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದ್ದು, ಮಗು ಮತ್ತು ನಟ ಧ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯ ನಡೆದಿದ್ದು, ಇದೀಗ ನಟ ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗು …

Read More »

You cannot copy content of this page.