ತಾಜಾ ಸುದ್ದಿ

ಸ್ವಾಮೀಜಿ ಬಂಧನವಾದ್ರೆ ದೊಡ್ಡ ನಾಯಕರ ಹೆಸರುಗಳು ಬಹಿರಂಗ- ಚೈತ್ರಾ ಕುಂದಾಪುರ

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಕಾಲ ಸಿಸಿಬಿ ಕಸ್ಟಡಿಯಲ್ಲಿರುವ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸ್ಪೋಟಕ ಹೇಳಿಕೆವೊಂದನ್ನು ನೀಡಿದ್ದಾರೆ. ಸ್ವಾಮೀಜಿ ಬಂಧನವಾದರೆ, ದೊಡ್ಡ-ದೊಡ್ಡವರ ಹೆಸರುಗಳು ಬಹಿರಂಗವಾಗಲಿವೆ ಎಂದು ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ ಮಹಿಳಾ ಪುನರ್ವಸತಿ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆತಂದಾಗ ಚೈತ್ರಾ ಈ ಆರೋಪ ಮಾಡಿದ್ದಾರೆ. ಇಂದಿರಾ ಕ್ಯಾಂಟೀನ್‌ನ ಬಾಕಿ ಬಿಲ್‌ಗಳನ್ನು ಪಡೆಯಲು ದೂರುದಾರ ಗೋವಿಂದ ಬಾಬು ಪೂಜಾರಿ ಸಂಚು ನಡೆಸಿದ್ದಾರೆ ಎಂದು ಇದೇ ವೇಳೆ ಚೈತ್ರಾ ಕುಂದಾಪುರ ಹೇಳಿದ್ದಾರೆ. ಸ್ವಾಮೀಜಿಯನ್ನು ಬಂಧಿಸಿದ ನಂತರ ಹಲವಾರು ದೊಡ್ಡ ನಾಯಕರ ಹೆಸರುಗಳು ಹೊರಬರುತ್ತವೆ …

Read More »

ಚೈತ್ರಾ ಕುಂದಾಪುರಕ್ಕೂ ಬಿಜೆಪಿಗೂ ಸಂಬಂಧವಿಲ್ಲ – ಮಾಜಿ ಸಿಎಂ ಬೊಮ್ಮಾಯಿ

ಮಂಗಳೂರು : ಉದ್ಯಮಿಯೊಬ್ಬರಿಗೆ ವಿಧಾನಸಭೆ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈಗಾಗಲೇ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಹಲವರನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಮೊದಲ ಬಾರಿಗೆ ಚೈತ್ರಾ ಕುಂದಾಪುರ ಮಾಧ್ಯಮದವರೊಂದಿಗೆ ಮಾತನಾಡಿದ್ದು, ”ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗೆ ಬರುತ್ತದೆ..” ಎಂದು ಹೇಳಿದ್ದಾರೆ. ಮಹಿಳಾ ಸಾಂತ್ವಾನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ ತಂದ ವೇಳೆ ಸ್ವಾಮೀಜಿ ಬಂಧನದ ನಂತರ ದೊಡ್ಡವರ ಹೆಸರುಗಳು ಬಯಲಾಗಲಿದೆ ಎಂದಿದ್ದಾಳೆ. “‘ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಗೆ ಬರುತ್ತದೆ. ನಂತರ ದೊಡ್ಡವರ ಹೆಸರುಗಳು …

Read More »

ಬೆಳ್ತಂಗಡಿ: ಮನೆಯಲ್ಲಿಟ್ಟಿದ್ದ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ನಿವಾಸಿ ಪ್ರಮೋದ್ ವಿ. ಭಿಡೆ ಎಂಬವರ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು ಆದ ಬಗ್ಗೆ ಸೆ.12 ರಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮೋದ್ ವಿ ಭಿಡೆ ಜು.5. ರಂದು ಮನೆಯ ಸಾರಣೆ ಹಾಗೂ ಪೈಂಟಿಗ್ ಕೆಲಸವನ್ನು ಪ್ರಾರಂಭಿಸಿದ್ದು, ಕೆಲಸ ಪ್ರಾರಂಭ ಮಾಡುವ ಮುಂಚಿತವಾಗಿ ಜು.03ರಂದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಅವರ ಪತ್ನಿ ಮನೆಯ ನೆಲಮಾಳಿಗೆಯಲ್ಲಿ ಇಟ್ಟಿದ್ದರು. ನೆಲಮಾಳಿಗೆಯಲ್ಲಿಟ್ಟಿದ್ದ ಚಿನ್ನಾಭರಣಗಳ ಕೋಣೆಗೆ ಬೀಗ ಹಾಕದೆ ಇದ್ದು ಮನೆಯ ಕೆಲಸಕ್ಕೆ ಸುಮಾರು 10 ರಿಂದ 13 ಜನ ಕೆಲಸಕ್ಕೆಂದು …

Read More »

 ಗಣೇಶ ಚತುರ್ಥಿ: ದ.ಕ.ದಲ್ಲಿ ಸೆ.19ಕ್ಕೆ ರಜೆ ನೀಡಲು ಸಚಿವರ ಸೂಚನೆ

ಮಂಗಳೂರು: ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಮನವಿ ಮೇರೆಗೆ ಸಚಿವರು ಈ ಸೂಚನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ರಜೆ ಬದಲಾವಣೆ ಕುರಿತಂತೆ ನಿರ್ಧಾರ ಇನ್ನೂ ಆಗಿಲ್ಲ.

Read More »

ವಿಟ್ಲ : ಆತ್ಮಹತ್ಯೆಗೆ ಯತ್ನಿಸಿದ ಸಹೋದರರು – ಓರ್ವನ ಸ್ಥಿತಿ ಗಂಭೀರ

ವಿಟ್ಲ: ಇಲ್ಲಿನ ಕುದ್ದುಪದವು ಎಂಬಲ್ಲಿನ ನಿವಾಸುಗಳಾದ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೈರ ಮೂಲದ ಕುದ್ದುಪದವು ನಿವಾಸಿಗಳಾದ ಪವನ್ ಮತ್ತು ಪೃಥ್ವಿರಾಜ್ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಸಹೋದರರು. ವಿಷ ಸೇವನೆಯಿಂದ ತೀವ್ರ ಅಸ್ವಸ್ಥರಾದ ಇವರಿಬ್ಬರನ್ನು ವಿಟ್ಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಎರಡು ಪ್ರತ್ಯೇಕ ವಾಹನಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ . ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇವರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿದ್ದಾರೆ. …

Read More »

ಚೈತ್ರಾ ಕುಂದಾಪುರ ಸೆ.23ರವರೆಗೆ ಸಿಸಿಬಿ ಕಸ್ಟಡಿಗೆ- ನ್ಯಾಯಾಲಯ ಆದೇಶ

ಉಡುಪಿ: ಚೈತ್ರಾ ಕುಂದಾಪುರ ಅವರನ್ನು ಬುಧವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಅವರನ್ನು ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ. ವಂಚನೆ ಆರೋಪದಲ್ಲಿ ನಡುರಾತ್ರಿ ಹೊತ್ತಿಗೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರ ಮುಂದೆ ಚೈತ್ರಾ ಕಣ್ಣೀರು ಹಾಕಿದ್ದಾರೆ ಎಂದು ಹೇಳಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ, ಸೆಪ್ಟೆಂಭರ್ 23ರವರೆಗೆ ಸಿಸಿಬಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.

Read More »

ಕಾಂಗ್ರೇಸ್ ವಕ್ತಾರೆ ಅಂಜುಂ ಮನೆಯಲ್ಲಿ ಆಶ್ರಯ ಪಡೆದಿದ್ದ ಚೈತ್ರಾ ಕುಂದಾಪುರ- ಅಂಜುಂಗೆ ಸಿಸಿಬಿ ನೋಟಿಸ್ ಜಾರಿ

ಉಡುಪಿ:  ಸದಾ ಕಾಂಗ್ರೇಸ್ ವಿರುದ್ದ ಮುಸ್ಲಿಂ ರ ವಿರುದ್ದ ತನ್ನ ಭಾಷಣದಲ್ಲಿ ಕಿಡಿಕಾರುತ್ತಿದ್ದ ಹಿಂದೂ ನಾಯಕಿ ಚೈತ್ರಾ ಕುಂದಪುರ ವಂಚನೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಆಶ್ರಯ ಪಡೆದಿದ್ದು, ಕಾಂಗ್ರೇಸ್ ನ ವಕ್ತಾರೆ ಮನೆಯಲ್ಲಿ ಎನ್ನುವ ಮಾಹಿತಿ ಇದೀಗ ಬಂದಿದ್ದು, ಇದೀಗ ಆರೋಪಿಗೆ ಆಶ್ರಯ ನೀಡಿದ ಆರೋಪದ ಮೇಲೆ ಕಾಂಗ್ರೆಸ್​ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂಗೆ ಸಿಸಿಬಿ ನೋಟಿಸ್ ನೀಡಿದೆ. ಚೈತ್ರಾ ಕುಂದಾಪುರ ತನ್ನ ಸಂಗಡಿಗರೊಂದಿಗೆ ಸೇರಿಕೊಂಡು ಬೈಂದೂರಿನ ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚನೆ ಮಾಡಿದ್ದರು ಎಂಬ …

Read More »

ಮಂಗಳೂರು: ಕೆಸರು ನೀರಿನಲ್ಲಿ ಮುಳುಗಿಸಿ ಮಗುವನ್ನು ಹತ್ಯೆಗೈದ ತಾಯಿ..!

ಮಂಗಳೂರು: ಗಡಿಭಾಗದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಚಂಪಾರೆಯಲ್ಲಿ ತಾಯಿ ತನ್ನ ಒಂದೂವರೆ ತಿಂಗಳ ಹೆಣ್ಣು ಮಗುವನ್ನು ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆ ನಡೆದಿದೆ. ಮೃತ ಒಂದೂವರೆ ತಿಂಗಳ ಶಿಶು ಸುಮಂಗಲಿ-ಸತ್ಯನಾರಾಯಣ ದಂಪತಿಯ ಪುತ್ರಿ ಎಂದು ಗುರುತಿಸಲಾಗಿದ್ದು,ತಾಯಿ ಮತ್ತು ಮಗು ನಾಪತ್ತೆಯಾದುದರಿಂದ ಮನೆಯವರು ಹುಡುಕಾಡಿದಾಗ ತಾಯಿಯನ್ನು ಮನೆಯ ಅಲ್ಪದೂರದಿಂದ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು, ಈ ಬಗ್ಗೆ ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ತಿಳಿಸಿದ್ದಳು, ಕೂಡಲೇ ಮಗುವನ್ನು ಮೇಲಕ್ಕೆತ್ತಿ ಉಪ್ಪಳದ ಮಂಗಲ್ಪಾಡಿ ಆಸ್ಪತ್ರೆಗೆ ಕರೆದೊಯ್ದರೂ …

Read More »

ಬೈಕ್‌ ಮತ್ತು ಬಸ್‌ ನಡುವೆ ಅಪಘಾತ ಸವಾರ ಮೃತ್ಯು-ಪಡುಬಿದ್ರಿ

ಪಡುಬಿದ್ರಿ: ಬೈಕ್‌ ಮತ್ತು ಬಸ್‌ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ‌ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಇಂದು ಮುಂಜಾನೆ ನಡೆದಿದೆ. ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(24) ಮೃತ ಯುವಕ.ಅಶ್ವಿತ್ ಶೆಟ್ಟಿ ಅವರು ಯೂಟ್ಯೂಬ್ ವ್ಲಾಗರ್ ಹಾಗೂ ಅಜೆಕಾರಿನ ಟೆಂಪೋ ಚಾಲಕ ಮಾಲಕರೂ ಆಗಿದ್ದರು ಎನ್ನಲಾಗಿದೆ. ಇನ್ನು ಹವ್ಯಾಸಿ ಬೈಕ್ ಸವಾರರಾಗಿದ್ದ ಅಶ್ವಿತ್ ಅವರು ತಿಂಗಳ ಹಿಂದಷ್ಟೇ ಬೈಕಲ್ಲಿಯೇ ಜಮ್ಮು ಕಾಶ್ಮೀರದ ಲಡಾಖ್ ಗೂ ಹೋಗಿ ಬಂದಿದ್ದರು. ಇಂದು ಅಜೆಕಾರಿನಿಂದ ಬೈಕ್ ಸರ್ವೀಸ್ ಗೆ ಹೋಗುತ್ತಿದ್ದರು ಎನ್ನಲಾಗಿದೆ. ಅವಿವಾಹಿತರಾಗಿದ್ದ ಮೃತ …

Read More »

ವಿಟ್ಲ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ..!

ವಿಟ್ಲದ ಪೆರುವಾಯಿಯಲ್ಲಿ ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ನಡೆದಿದೆ. ಪೆರುವಾಯಿ ನಿವಾಸಿ ಆಶಾ (25) ಮೃತಪಟ್ಟ ಯುವತಿ.ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಯುವತಿ ಮೃತಪಟ್ಟಿದ್ದಾರೆ.

Read More »

You cannot copy content of this page.