ತಾಜಾ ಸುದ್ದಿ

ಉಡುಪಿ: ಚೈತ್ರ ಕುಂದಾಪುರ ಅರೆಸ್ಟ್..!

ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿರುವ ಚೈತ್ರ ಕುಂದಾಪುರ ತಡರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಬಲೆಗೆ ಬಿದ್ದಿದ್ದಾಳೆ. ಕಳೆದ ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈಕೆಯ ಜೊತೆಗೆ ಮತ್ತಿಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಕರಣದಲ್ಲಿ …

Read More »

ಬೆಳ್ತಂಗಡಿಯ ಅಮೈ ದೇವರಾವ್‌ಗೆ ರಾಷ್ಟ್ರಪತಿಗಳಿಂದ ಪುರಸ್ಕಾರ

ಬೆಳ್ತಂಗಡಿ: ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಆಯೋಜಿಸಿದ ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣದಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯ ಕಿಲ್ಲೂರಿನ ಅಮೈ ದೇವರಾವ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದ್ದಾರೆ. ವಿಚಾರ ಸಂಕಿರಣ ದೆಹಲಿಯಲ್ಲಿ ಇಂದು ಆರಂಭಗೊಂಡಿದ್ದು ಸೆ.15ರವರೆಗೆ ನಡೆಯಲಿದೆ. ಈ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ರಾಷ್ಟ್ರಪತಿಗಳು ಕೃಷಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು. ಅಮೈ ದೇವರಾವ್‌ ಐದು ಎಕರೆ ಗದ್ದೆಯಲ್ಲಿ 175ಕ್ಕೂ ಅಧಿಕ ಭತ್ತದ ತಳಿಗಳನ್ನು ಬೆಳೆದಿರುವ ಸಾಧಕ. ವರ್ಷಕ್ಕೆ ಎರಡು ಬೆಳೆ …

Read More »

ಚಿಕ್ಕಮಗಳೂರು: ಕಾರು ಮತ್ತು ಕೆಎಸ್‌ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿ – 9 ಮಂದಿ ಗಂಭೀರ ಗಾಯ

ಚಿಕ್ಕಮಗಳೂರು:  ಕೆಎಸ್‌ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದ 9 ಜನರು ಭದ್ರಾವತಿ ಮೂಲದವರು ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ ಬಸ್ ಶಿವಮೊಗ್ಗದಿಂದ ತರೀಕೆರೆಗೆ ತೆರಳುತ್ತಿದ್ದು, ಕಾರು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಉಂಟಾಗಿದೆ. ಸರ್ಕಾರಿ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು …

Read More »

ತುಳುನಾಡ ರಕ್ಷಣಾ ವೇದಿಕೆ ನಿಯೋಗ ನೂತನ ಪೊಲೀಸ್ ಕಮೀಷನರ್ ಭೇಟಿ- ಹೂಗೂಚ್ಚ ನೀಡಿ ಸ್ವಾಗತ

ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿರುವ ಶ್ರೀ ಅನುಪಮ್ ಅಗರ್ವಾಲ್ ರವರನ್ನು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೀಶೆಟ್ಟಿ ಜಪ್ಪು ನೇತ್ರತ್ವದಲ್ಲಿ ಇಂದು ಧಿನಾಂಕ 12/09/2023 ಮಂಗಳವಾರ ಬೆಳಗ್ಗೆ 11.30 ಕ್ಕೆ ತುಳುನಾಡ ರಕ್ಷಣಾ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇಂದು ಬೆಳಗ್ಗೆ 11.30 ಕ್ಕೆ ಭೇಟಿ ಮಾಡಿ ಹೂಗುಚ್ಚ ನೀಡಿ ಸ್ವಾಗತಿಸಿದರು ಬಳಿಕ ಮಂಗಳೂರು ನಗರದ ಹಲವಾರು ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸಿ ತುಳುನಾಡ ರಕ್ಷಣಾ ವೇದಿಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ಇಬ್ರಾಹಿಂ …

Read More »

ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಹೈಕೋರ್ಟ್ ಆದೇಶ

ಬೆಂಗಳೂರು : ಸೌಜನ್ಯ ಪ್ರಕರಣದ ವಿವಾದ ತಾರಕಕ್ಕೇರಿದ್ದು, ಸುಳ್ಳು ಆರೋಪ ಪ್ರತ್ಯಾರೋಪ ಮುಗಿಲುಮುಟ್ಟಿದೆ. ಈ ನಡುವೆ ಖಾಸಗಿ ಯುಟ್ಯೂಬ್ ವಾಹಿನಿಯೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಮುಂಬೈಯಲ್ಲಿನ ಅಕ್ರಮಗಳ ಬಗ್ಗೆ ಮಾತನಾಡಿದ ಭಾಸ್ಕರ್ ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಯನ್ನು ತಿಮರೋಡಿ ಮತ್ತು ತಂಡದವರು ನಡೆಸಿದ್ದಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿತ್ತು. ಈ ಬಗ್ಗೆ ಒಂದು ವಾರಕಳೆದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಆರೋಪಿಗಳು ರಾಜರೋಷವಾಗಿ ತಿರುಗುತ್ತಿದ್ದು, ಸಭೆ ಸಮಾರಂಭಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದರಿಂದ ಸಂತ್ರಸ್ಥರಿಗೆ ಭಯದ ವಾತಾವರಣ ನಿರ್ಮಾಣವಾಗಿದ್ದು, ಸಂತ್ರಸ್ತ ಭಾಸ್ಕರ್ …

Read More »

ಉಡುಪಿ: ಕ್ಯೂ ಆರ್ ಕೋಡ್ ಬಳಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಉಡುಪಿ: ಕ್ಯೂ ಆರ್ ಕೋಡ್ ಬಳಸಿ ಗೂಗಲ್ ಪೇ ಮೂಲಕ ಖಾತೆಯಿಂದ ಹಣ ವರ್ಗಾಯಿಸಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಉಷಾ ಕಿರಣ್ ಎಂಬವರು ಆಗಸ್ಟ್ 27ರಂದು ಸೊತ್ತು ಮಾರಾಟದ ಬಗ್ಗೆ ಓಎಲ್‌ಎಕ್ಸ್‌ನಲ್ಲಿ ಮಾಹಿತಿ ಹಾಕಿದ್ದು ಮಹಿಳೆಯೊಬ್ಬರು ಕರೆ ಮಾಡಿ ತಾನು ಸೊತ್ತುಗಳನ್ನು ಖರೀದಿಸುವುದಾಗಿ ತಿಳಿಸಿ, ಉಷಾ ಕಿರಣ್ ಅವರ ಗೂಗಲ್ ಪೇ ನಂಬರನ್ನು ಪಡೆದುಕೊಂಡಿದ್ದರು. ಬಳಿಕ ಉಷಾ ಕಿರಣ್ ಅವರ ಮೊಬೈಲ್‌ಗೆ ತುಂಬಾ ಕ್ಯೂ‌ ಕೋಡ್‌ಗಳು ಬಂದಿದ್ದು ಇದನ್ನು ತೆರೆದು ನೋಡಿದಾಗ ಉಷಾ ಕಿರಣ್ ಅವರ …

Read More »

ಬೀದಿಬದಿ ವಾಸಿಸುವ ನಿರ್ಗತಿಕರಿಗೆ ಬ್ಲೂ ಸ್ಟಾರ್ ಕ್ರಿಕೆಟರ್ಸ್ ನ ವತಿಯಿಂದ ಹಸಿವು ತಣಿಸುವ ನೆರವು

ಮಂಗಳೂರು : ಶಕ್ತಿನಗರದಲ್ಲಿ ಸುಮಾರು 12 ವರ್ಷಗಳ ಹಿಂದೆ ಪ್ರಾರಂಭವಾದಂತಹ ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಇಂದಿಗೂ ‘ಒನ್ ಟೀಮ್ ಒನ್ ಡ್ರೀಮ್’ ಧ್ಯೇಯದೊಂದಿಗೆ ಮುನ್ನಡೆಯುತ್ತಿದೆ. ಬ್ಲೂ ಸ್ಟಾರ್ ಕ್ರಿಕೆಟರ್ಸ್ ತಂಡವು ಶಕ್ತಿನಗರದಲ್ಲಿ ಪ್ರತಿವರ್ಷ ಅದ್ದೂರಿಯಾಗಿ ನಡೆಯುವಂತಹ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಹಾಗೂ ಮೊಸರು ಕುಡಿಕೆ ಉತ್ಸವಕ್ಕೆ ತಮ್ಮ ತಂಡದ ಕೈಯನ್ನೂ ಜೋಡಿಸಿ, ಇನ್ನೂ ಸಂಭ್ರಮದಿಂದ ಆಚರಿಸುವಂತೆ ತೊಡಗಿಸಿಕೊಳ್ಳುತ್ತಿದ್ದಾರೆ. ಈ ಬಾರಿ ಸಂಭ್ರಮವನ್ನು ಇನ್ನೂ ವಿನೂತನ ರೀತಿಯಲ್ಲಿ ನೆನಪಿಟ್ಟುಕೊಳ್ಳುವಂತೆ ಮಾಡಲು ಒಂದು ಸಮಾಜಮುಖಿ ಕಾರ್ಯವನ್ನು ನಡೆಸುವ ಬಗ್ಗೆ ಚರ್ಚೆ ನಡೆಸಿ, ಶ್ರೀ ಕೃಷ್ಣ …

Read More »

ಉಡುಪಿ: ಸೆಪ್ಟೆಂಬರ್ 15ರಂದು ಸಂವಿಧಾನ ಪೀಠಿಕೆ ಸಾಮೂಹಿಕ ಓದು- ಜಿಲ್ಲೆಯಲ್ಲಿ ಲಕ್ಷಕ್ಕೂ ಅಧಿಕ ಮಂದಿ ನೋಂದಣಿ

ಉಡುಪಿ : ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಸೆಪ್ಟೆಂಬರ್ 15ರಂದು ಬೆಳಗ್ಗೆ 10ಗಂಟೆಗೆ ಏಕಕಾಲದಲ್ಲಿ ರಾಜ್ಯಾದ್ಯಂತ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನುಆಚರಿಸಿ ವಿಶ್ವದಾಖಲೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಈ ಸಂಬಂಧ ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ಉಡುಪಿ ಡಿಸಿ ಡಾ.ವಿದ್ಯಾ ಕುಮಾರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಅಜ್ಜರಕಾಡು ಕ್ರೀಡಾಂಗಣದಲ್ಲಿ ಬೆಳಗ್ಗೆ ಹತ್ತು ಗಂಟೆಗೆ ಆಯೋಜಿಸಲಾಗಿದ್ದು, ಇದರಲ್ಲಿ ಜಿಲ್ಲಾ, ತಾಲೂಕು ಮಟ್ಟದ …

Read More »

ಮಂಗಳೂರು: 90 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ವಶ – ಮೂವರು ಅರೆಸ್ಟ್

ಮಂಗಳೂರು: ಮಂಗಳೂರು ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಆದಿತ್ಯ, ಹಾವೇರಿ ಜಿಲ್ಲೆಯ ನಿವಾಸಿ ಲೋಹಿತ್ ಕುಮಾರ್ ಗುರಪ್ಪನವರ್ ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ …

Read More »

ಮಂಗಳೂರು ವಿವಿ ಗಣೇಶೋತ್ಸವ ವಿವಾದ; ಹೊರಗಿನವರ ಹಸ್ತಕ್ಷೇಪ ಸರಿಯಲ್ಲ: ದಿನೇಶ್ ಗುಂಡೂರಾವ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಈಗಾಗಲೇ ಬಿ. ಗ್ರೇಡ್‌ಗೆ ಹೋಗಿದೆ. ಅದನ್ನು ಎ ಗ್ರೇಡ್‌ಗೆ ತರಲು ಅಗತ್ಯ ಕ್ರಮಗಳನ್ನ ನಾವು ಮೊದಲು ಮಾಡಬೇಕಾಗಿದೆ. ವಿವಿ ಸ್ವಾಯತ್ತ ಸಂಸ್ಥೆ. ಅವರ ಆಡಳಿತ ಮಂಡಳಿ ಹಂತದಲ್ಲೇ ಅದನ್ನು ಬಗೆಹರಿಸಬೇಕೇ ಹೊರತು ಅದಕ್ಕೆ ಹೊರಗಿನವರ ಹಸ್ತಕ್ಷೇಪ ಸರಿಯಲ್ಲ ಎಂದು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.   ಮಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು,ಮಂಗಳೂರು ವಿಶ್ವವಿದ್ಯಾನಿಲಯದ ವಿಸಿ ಹಾಗೂ ರಾಜ್ಯಪಾಲರು ಅದರ ಬಗ್ಗೆ ತೀರ್ಮಾನ ಮಾಡುತ್ತಾರೆ. ಕಲ್ಲಡ್ಕ …

Read More »

You cannot copy content of this page.