ತಾಜಾ ಸುದ್ದಿ

ಜಿ-20 ಶೃಂಗಸಭೆಯಲ್ಲೂ ‘INDIA’ ಬದಲಿಗೆ ‘BHARAT’ ನಾಮಫಲಕ ಪ್ರದರ್ಶನ

ದೇಶದ ಹೆಸರು ಬದಲಾವಣೆ ವಿಚಾರ ಭಾರಿ ಚರ್ಚೆಯಲ್ಲಿದ್ದು, ಇದೀಗ ನವದೆಹಲಿಯಲ್ಲಿ ನಡೆಯುತ್ತಿರುವ ಶೃಂಗಸಭೆಯಲ್ಲಿ ಕೂಡ ‘ಭಾರತ್’ ಹೆಸರಿನ ಪ್ರಸ್ತಾಪ ಬಂದಿದೆ. ಹೌದು, ಶನಿವಾರ ಇಂದು ನಡೆಯುತ್ತಿರುವ ಜಿ 20 ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದಾಗ ದೇಶದ ಹೆಸರನ್ನು ‘ಭಾರತ್’ ಎಂದು ಪ್ರದರ್ಶಿಸಲಾಯಿತು. ಮೈಕ್ ನ ನೇಮ್ ಬೋರ್ಡ್ ನಲ್ಲಿ ‘BHARAT’ ಎಂದು ಪ್ರದರ್ಶಿಸಲಾಯಿತು. ತಮ್ಮ ಉದ್ಘಾಟನಾ ಭಾಷಣಕ್ಕೆ ಮುಂಚಿತವಾಗಿ, ಪ್ರಧಾನಿ ಮೋದಿ ಜಿ 20 ಶೃಂಗಸಭೆಯ ಸ್ಥಳವಾದ ಭಾರತ್ ಮಂಟಪದಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಯುಕೆ ಪ್ರಧಾನಿ ರಿಷಿ …

Read More »

ಬೈಕ್‌ನಲ್ಲಿ ಪ್ರಯಾಣ- ವಿಶ್ವದ ಅತಿ ಎತ್ತರದ ಉಮ್ಲಿಂಗ್‌ ಲಾ ಗೆ ತಲುಪಿದ ಸುಳ್ಯದ ದಂಪತಿ

ಸುಳ್ಯ,: ಉದ್ಯಮಿ ಯೊಬ್ಬರು ಬುಲೆಟ್‌ ಬೈಕ್‌ನಲ್ಲಿ ಪತ್ನಿ,ಮೂರೂವರೆ ವರ್ಷದ ಮಗುವಿನೊಂದಿಗೆ ವಿಶ್ವದ ಅತಿ ಎತ್ತರದ ಉಮ್ಲಿಂಗ್‌ ಪ್ರದೇಶ ತಲುಪುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಇವರು ಸುಳ್ಯದ ಹಳೆಗೇಟಿನ ತೌಹೀದ್‌ ರೆಹ್ಮಾನ್‌ ಅವರು ಪತ್ನಿ ಜಶ್ಮಿಯಾ ಮತ್ತು ಮಗ ಜಝೀಲ್‌ ರೆಹ್ಮಾನ್‌ ಅವರು ಬುಲೆಟ್‌ನಲ್ಲಿ ಉಮ್ಮಿಂಗ್‌ ಲಾ ತೆರಳಿದ್ದರೂ. ಸುಮಾರು 19,024 ಅಡಿ ಎತ್ತರದ ಮತ್ತು ಆಮ್ಲಜನಕದ ಮಟ್ಟವು 50 ಶೇ. ಕ್ಕಿಂತ ಕಡಿಮೆ ಇರುವ ಈ ಸ್ಥಳಕ್ಕೆ ರೆಹ್ಮಾನ್‌ ಬೈಕ್‌ನಲ್ಲಿ ತಲುಪಿದ ಅತ್ಯಂತ ಕಿರಿಯವರು ಎನಿಸಿಕೊಂಡಿದ್ದಾರೆ. ಇಂಡಿಯಾ ರೆಕಾರ್ಡ್‌ ಬುಕ್‌ನಲ್ಲಿ ಈ ದಾಖಲೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ.ಲಡಾಕ್‌ನ ಚೀನದ …

Read More »

ಮಂಗಳೂರು: ಕೃಷ್ಣ ಜನ್ಮಾಷ್ಟಮಿಯಂದು 88 ಭಕ್ಷ್ಯಗಳನ್ನು ತಯಾರಿಸಿದ ಮಹಿಳೆ

ಮಂಗಳೂರು: ಸೆಪ್ಟೆಂಬರ್ 7 ರಂದು, ಶ್ರೀಕೃಷ್ಣನ ಜನ್ಮದಿನವನ್ನು ಗುರುತಿಸುವ ಮಹತ್ವದ ಹಿಂದೂ ಹಬ್ಬವಾದ ಜನ್ಮಾಷ್ಟಮಿಯನ್ನು ರಾಷ್ಟ್ರಾದ್ಯಂತ ಸಡಗರದಿಂದ ಆಚರಿಸಲಾಯಿತು. ಭಕ್ತರು ಈ ದಿನವನ್ನು ಸಂಭ್ರಮದಿಂದ ಆಚರಿಸಿ ಕೃಷ್ಣನನ್ನು ಸ್ಮರಿಸಿದರು ಮತ್ತು ವಿವಿಧ ಧಾರ್ಮಿಕ ವಿಧಿಗಳಲ್ಲಿ ತೊಡಗಿದರು. ಈ ಆಚರಣೆಗಳಲ್ಲಿ ಅವರ ಕೃಷ್ಣನ ವಿಗ್ರಹಗಳನ್ನು ಶುದ್ಧೀಕರಿಸುವುದು ಮತ್ತು ಹೊಸ ಮತ್ತು ಭವ್ಯವಾದ ಉಡುಪಿನಲ್ಲಿ ಅಲಂಕರಿಸುವುದು, ಜೊತೆಗೆ ಭಗವಾನ್ ಕೃಷ್ಣನಿಗೆ ಪ್ರಿಯವಾದ ರುಚಿಕರವಾದ ಭಕ್ಷ್ಯಗಳನ್ನು ನೀಡುವುದು ಸೇರಿದೆ. ಅನೇಕ ವ್ಯಕ್ತಿಗಳು ಕೃಷ್ಣ ಜನ್ಮಾಷ್ಟಮಿಯಂದು ವ್ರತವನ್ನು (ಉಪವಾಸ) ಆಚರಿಸಿದರು, ಉಪವಾಸವನ್ನು ಮಧ್ಯರಾತ್ರಿಯಲ್ಲಿ ಮುರಿಯುತ್ತಾರೆ. ತನ್ನ ಆಳವಾದ ಭಕ್ತಿಗೆ ಹೃದಯಸ್ಪರ್ಶಿ …

Read More »

ಬೆಳ್ಳಂಬೆಳಗ್ಗೆ ಆಂಧ್ರ‌ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್|

ಸಿಐಡಿ ಪೊಲೀಸರು ಬೆಳ್ಳಂ ಬೆಳಗ್ಗೆ ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಬಂಧಿಸಿದ್ದು, ಬಂಧನದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಚಂದ್ರಬಾಬು ಬಂಧಿಸಲು ಪೊಲೀಸರು ಹೋಗಿದ್ದು, ಭಾರಿ ಹೈಡ್ರಾಮಾ ನಡೆದ ನಂತರ ಬೆಳಗ್ಗೆ 6 ಗಂಟೆಗೆ ಬಂಧಿಸಿದ್ದಾರೆ.ಬಂಧನದ ವೇಳೆ ವಾಗ್ಧಾಳಿ ನಡೆಸಿ ಚಂದ್ರಬಾಬು ನಾಯ್ಡು ‘ ಸಿಐಡಿ ಪೊಲೀಸರು ನನ್ನ ಹಕ್ಕನ್ನು ಕಸಿಯುವ ಕೆಲಸ ಮಾಡಿದ್ದಾರೆ.ಎಫ್ ಐ ಆರ್ ಮಾಡಿಲ್ಲ, ಯಾವುದೇ ನೋಟಿಸ್ ನೀಡಿಲ್ಲ. ಯಾಕೆ ನನ್ನನ್ನು ಬಂಧಿಸುತ್ತೀರಾ..? ಎಂದು ವಾಗ್ಧಾಳಿ ನಡೆಸಿದರು. ಆಂಧ್ರದ ನಂದ್ಯಾಲದ ಫಂಕ್ಷನ್ ಹಾಲ್ ನಲ್ಲಿ …

Read More »

ಹಿಟ್ & ರನ್ ಕೇಸ್ ಗೆ ಟ್ವಿಸ್ಟ್ : ತಪ್ಪು ಒಪ್ಪಿಕೊಂಡ ಹಾಸ್ಯನಟ ‘ಚಂದ್ರಪ್ರಭಾ’

ಬೆಂಗಳೂರು : ಚಿಕ್ಕಮಗಳೂರಿನಲ್ಲಿ ನಡೆದ ಹಿಟ್ ರನ್ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಹಾಸ್ಯನಟ ಚಂದ್ರಪ್ರಭಾ ತಪ್ಪು ಒಪ್ಪಿಕೊಂಡಿದ್ದಾರೆ. ಈ ಮೊದಲು ಬೈಕ್ ಸವಾರನೇ ಮದ್ಯಪಾನ ಮಾಡಿದ್ದನು, ನನ್ನದು ಯಾವುದೇ ತಪ್ಪು ಇಲ್ಲ ಎಂದು ಹೇಳಿಕೆ ನೀಡಿದ್ದರು. ಆದರೀಗ ಚಿಕ್ಕಮಗಳೂರು ಸಂಚಾರಿ ಠಾಣೆಗೆ ಹಾಜರಾದ ನಟ ಚಂದ್ರಪ್ರಭಾ ತಪ್ಪು ಒಪ್ಪಿಕೊಂಡಿದ್ದಾರೆ. ಬೈಕ್ ಸವಾರ ಮದ್ಯಪಾನ ಮಾಡಿರಲಿಲ್ಲ. ನಾನು ತಪ್ಪು ಮಾಡಿದ್ದೇನೆ, ನನಗೆ ಭಯವಾಯಿತು ಅದಕ್ಕೆ ಹಾಗೆ ಹೇಳಿದೆ. ನಾನು ಮತ್ತು ನನ್ನ ಸ್ನೇಹಿತ ಆಸ್ಪತ್ರೆಯವರೆಗೆ ಹೋಗಿದ್ದೆವು. ಆದರೆ ಆಸ್ಪತ್ರೆಗೆ ಸೇರಿಸಲಿಲ್ಲ, ನಾನು ಬಡವ.ನನ್ನದು ತಪ್ಪಾಯ್ತು..ಗಾಯಾಳು …

Read More »

ಸೌಜನ್ಯ ಪ್ರಕರಣ : ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ

ಬೆಳ್ತಂಗಡಿ  : ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ನಡೆಯುತ್ತಿರುವ ಹೋರಾಟದ ನಡುವೆ ಇಂದು ‌ಸೌಜನ್ಯರವರ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಲಿದೆ. ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಗಿರೀಶ ಭಾರಧ್ವಾಜ್, ನವೀನ್ ಕುಮಾರ್ ನೆರಿಯ ಬೆಳ್ತಂಗಡಿ ಮತ್ತು ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪುತ್ತೂರು ಇವರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೆಪ್ಟೆಂಬರ್ 8ರಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಅರ್ಜಿದಾರರ ಪರ ಹಿರಿಯ …

Read More »

ಜೈಲರ್ ಸಿನೆಮಾದ ನಟ ಮಾರಿಮುತ್ತು ಹೃದಯಾಘಾತದಿಂದ ನಿಧನ

ತಮಿಳಿನ ಖ್ಯಾತ ನಟ ನಿರ್ದೇಶಕ ಮಾರಿಮುತ್ತು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.’ಜೈಲರ್’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ಖ್ಯಾತ ನಿರ್ದೇಶಕ ಹಾಗೂ ನಟ ಮರಿಮುತ್ತು ಅವರು ಡಬ್ಬಿಂಗ್ ವೇಳೆ ಇಂದು ಬೆಳಗ್ಗೆ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಟ ಹಾಗೂ ನಿರ್ದೇಶಕ ಮರಿಮುತ್ತು ಅವರ ಹಠಾತ್ ನಿಧನ ಚಿತ್ರರಂಗ ಹಾಗೂ ಅಭಿಮಾನಿಗಳನ್ನು ಕಂಬನಿ ಮಿಡಿದಿದೆ. ರಜನಿಕಾಂತ್ ಅವರ ಇತ್ತೀಚೆಗೆ ಬಿಡುಗಡೆಯಾದ ಜೈಲರ್ ಚಿತ್ರ, ಅವರು ಖಳನಾಯಕ ವಿನಾಯಕ್ ಅವರ ಬಲಗೈ ಬಂಟನಾಗಿ ನಟಿಸಿದ್ದಾರೆ. ಕಿರುತೆರೆಯ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸುತ್ತಿದ್ದ ಮಾರಿಮುತ್ತು ಅವರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇಡೀ …

Read More »

ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗ ಗ್ರಾಮಪಂಚಾಯತ್ ಮಾಜಿ ಸದಸ್ಯನ ಮನೆಗೆ ನುಗ್ಗಿದ ಕಳ್ಳರು…!

ಪುತ್ತೂರು : ಪುತ್ತೂರು ಶಾಸಕ ಅಶೋಕ್ ರೈ ಬೆಂಬಲಿಗ ಗ್ರಾಮಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಮನೆಗೆ ದರೋಡೆಕೋರರು ನುಗ್ಗಿ ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ನಡೆದಿದೆ. ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯ ಗುರುಪ್ರಸಾದ್ ರೈ ಎಂಬವರ ಮನೆಯಲ್ಲಿ ಈ ದರೋಡೆ ನಡೆದಿದ್ದು ಸೆಪ್ಟೆಂಬರ್ 7 ರ ಮುಂಜಾನೆ ಸುಮಾರು 2 ಗಂಟೆಗೆ ಮನೆಯ ಬಾಗಿಲು ಒಡೆದು ನುಗ್ಗಿದ ಸುಮಾರು 8 ಮಂದಿ ದರೋಡೆಕೋರರ …

Read More »

ಪತ್ನಿಯ ಹುಟ್ಟುಹಬ್ಬಕ್ಕೆ ಚಂದ್ರನ ಮೇಲಿನ ಜಾಗವನ್ನು ಉಡುಗೊರೆಯಾಗಿ ನೀಡಿದ ಪತಿ

ಕೋಲ್ಕತ್ತಾ: ಭಾರತ ಚಂದ್ರಯಾನ-3 ಯಶಸ್ಸಿನ ಬಳಿಕ ಬಾಹ್ಯಾಕಾಶ ಜಗತ್ತಿನಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಇಲ್ಲೊಬ್ಬರು ಚಂದ್ರನ ಮೇಲಿನ ತುಂಡು ಜಾಗವನ್ನು ತನ್ನ ಪತ್ನಿಗೆ ಉಡುಗೊರೆಯಾಗಿ ನೀಡಿ ಸುದ್ದಿಯಾಗಿದ್ದಾರೆ.! ಪಶ್ಚಿಮ ಬಂಗಾಳದ ಜಾರ್‌ಗ್ರಾಮ್ ಜಿಲ್ಲೆಯ ಸಂಜಯ್ ಮಹತೋ ಎಂಬ ವ್ಯಕ್ತಿ ತನ್ನ ಪತ್ನಿಯ ಹುಟ್ಟುಹಬ್ಬಕ್ಕೆ ಚಂದ್ರನ ಮೇಲಿನ ತುಂಡು ಜಾಗವನ್ನು ಉಡುಗೊರೆಯಾಗಿ ನೀಡಿದ್ದಾರೆ. “ಮದುವೆಯ ವೇಳೆ ನಾನು ಪತ್ನಿಗೆ ಚಂದ್ರನನ್ನು ತಂದುಕೊಡುತ್ತೇನೆ ಎಂದು ಪ್ರಾಮಿಸ್ ಮಾಡಿದ್ದೆ. ಈ ಮಾತು ಕೊಟ್ಟ ದಿನದಿಂದ ಅದನ್ನು ಪೂರ್ಣ ಮಾಡದೆ ಸುಮ್ಮನೆ ಇರಲು ನನಗೆ ಆಗುತ್ತಿರಲಿಲ್ಲ. ಈಗ ಮದುವೆಯ ಬಳಿಕ ಅವರ …

Read More »

ಮಂಗಳೂರು : ಅನೈತಿಕ ಪೊಲೀಸ್ ಗಿರಿ ಕೇಸ್ : ಖಡಕ್ ವಾನ್೯ ಕೊಟ್ಟ ಕಮಿಷನರ್

ಮಂಗಳೂರು : ಅನೈತಿಕ ಪೊಲೀಸ್‌ಗಿರಿ ಕೃತ್ಯಗಳಿಗೆ ಯಾರು ಮುಂದಾಗುತ್ತಾರೆ ಮತ್ತು ಅವರಿಗೆ ಬೆನ್ನ ಹಿಂದೆಯಿಂದ ಯಾರೂ ಬೆಂಬಲ ನೀಡುತ್ತಾರೆಯೋ ಅವರ ಬಗ್ಗೆ ತುರ್ತಾಗಿ ಕಾನೂನಿನಡಿ ಕೈಗೊಳ್ಳಬಹುದಾದ ಕ್ರಮಗಳನ್ನು ವಹಿಸಲಾಗುವುದು. ಸಾಮಾನ್ಯವಾಗಿ ಇಂತಹ ಕೃತ್ಯಗಳು ನಡೆದಾಗ ತಡವಾಗಿ ಕ್ರಮವಹಿಸಲು ಮುಂದಾದಾಗ ಅವರಿಗೆ ಪ್ರೋತ್ಸಾಹ ದೊರಕಿದಂತಾಗುತ್ತದೆ. ಅದಕ್ಕೆ ಅವಕಾಶ ನೀಡದೆ ಕ್ರಮ ವಹಿಸಲಾಗುವುದು ಎಂದು ನೂತನ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ. ರಾಜ್ಯದಲ್ಲಿಯೇ ಮಂಗಳೂರು ಅತ್ಯಂತ ಮಹತ್ವ ಹಾಗೂ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿದೆ. ಹಾಗಾಗಿ ಇಲ್ಲಿ ಕೆಲಸ ಮಾಡುವಾಗ ನಮ್ಮ ಹೆಚ್ಚುವರಿ ಪ್ರಯತ್ನವನ್ನು ಹಾಕಬೇಕಾಗುತ್ತದೆ. ನನಗೆ ಈಗ …

Read More »

You cannot copy content of this page.