ತಾಜಾ ಸುದ್ದಿ

ಪತ್ನಿಯ ಹುಟ್ಟುಹಬ್ಬಕ್ಕೆ ಚಂದ್ರನ ಮೇಲಿನ ಜಾಗವನ್ನು ಉಡುಗೊರೆಯಾಗಿ ನೀಡಿದ ಪತಿ

ಕೋಲ್ಕತ್ತಾ: ಭಾರತ ಚಂದ್ರಯಾನ-3 ಯಶಸ್ಸಿನ ಬಳಿಕ ಬಾಹ್ಯಾಕಾಶ ಜಗತ್ತಿನಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಇಲ್ಲೊಬ್ಬರು ಚಂದ್ರನ ಮೇಲಿನ ತುಂಡು ಜಾಗವನ್ನು ತನ್ನ ಪತ್ನಿಗೆ ಉಡುಗೊರೆಯಾಗಿ ನೀಡಿ ಸುದ್ದಿಯಾಗಿದ್ದಾರೆ.! ಪಶ್ಚಿಮ ಬಂಗಾಳದ ಜಾರ್‌ಗ್ರಾಮ್ ಜಿಲ್ಲೆಯ ಸಂಜಯ್ ಮಹತೋ ಎಂಬ ವ್ಯಕ್ತಿ ತನ್ನ ಪತ್ನಿಯ ಹುಟ್ಟುಹಬ್ಬಕ್ಕೆ ಚಂದ್ರನ ಮೇಲಿನ ತುಂಡು ಜಾಗವನ್ನು ಉಡುಗೊರೆಯಾಗಿ ನೀಡಿದ್ದಾರೆ. “ಮದುವೆಯ ವೇಳೆ ನಾನು ಪತ್ನಿಗೆ ಚಂದ್ರನನ್ನು ತಂದುಕೊಡುತ್ತೇನೆ ಎಂದು ಪ್ರಾಮಿಸ್ ಮಾಡಿದ್ದೆ. ಈ ಮಾತು ಕೊಟ್ಟ ದಿನದಿಂದ ಅದನ್ನು ಪೂರ್ಣ ಮಾಡದೆ ಸುಮ್ಮನೆ ಇರಲು ನನಗೆ ಆಗುತ್ತಿರಲಿಲ್ಲ. ಈಗ ಮದುವೆಯ ಬಳಿಕ ಅವರ …

Read More »

ಮಂಗಳೂರು : ಅನೈತಿಕ ಪೊಲೀಸ್ ಗಿರಿ ಕೇಸ್ : ಖಡಕ್ ವಾನ್೯ ಕೊಟ್ಟ ಕಮಿಷನರ್

ಮಂಗಳೂರು : ಅನೈತಿಕ ಪೊಲೀಸ್‌ಗಿರಿ ಕೃತ್ಯಗಳಿಗೆ ಯಾರು ಮುಂದಾಗುತ್ತಾರೆ ಮತ್ತು ಅವರಿಗೆ ಬೆನ್ನ ಹಿಂದೆಯಿಂದ ಯಾರೂ ಬೆಂಬಲ ನೀಡುತ್ತಾರೆಯೋ ಅವರ ಬಗ್ಗೆ ತುರ್ತಾಗಿ ಕಾನೂನಿನಡಿ ಕೈಗೊಳ್ಳಬಹುದಾದ ಕ್ರಮಗಳನ್ನು ವಹಿಸಲಾಗುವುದು. ಸಾಮಾನ್ಯವಾಗಿ ಇಂತಹ ಕೃತ್ಯಗಳು ನಡೆದಾಗ ತಡವಾಗಿ ಕ್ರಮವಹಿಸಲು ಮುಂದಾದಾಗ ಅವರಿಗೆ ಪ್ರೋತ್ಸಾಹ ದೊರಕಿದಂತಾಗುತ್ತದೆ. ಅದಕ್ಕೆ ಅವಕಾಶ ನೀಡದೆ ಕ್ರಮ ವಹಿಸಲಾಗುವುದು ಎಂದು ನೂತನ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ. ರಾಜ್ಯದಲ್ಲಿಯೇ ಮಂಗಳೂರು ಅತ್ಯಂತ ಮಹತ್ವ ಹಾಗೂ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿದೆ. ಹಾಗಾಗಿ ಇಲ್ಲಿ ಕೆಲಸ ಮಾಡುವಾಗ ನಮ್ಮ ಹೆಚ್ಚುವರಿ ಪ್ರಯತ್ನವನ್ನು ಹಾಕಬೇಕಾಗುತ್ತದೆ. ನನಗೆ ಈಗ …

Read More »

ಬಸ್ಸಿಗಾಗಿ ಕಾಯುತ್ತಿದ್ದ ಮಕ್ಕಳ ಮೇಲೆ ಹರಿದ ಬಸ್- ಇಬ್ಬರು ಗಂಭೀರ

ಮೂಡಿಗೆರೆ: ಬೆಳಿಗ್ಗೆ ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಗುರುವಾರ ಸಂಭವಿಸಿದೆ. ಕಾವಲ್ ದುಗ್ಲಾಪುರ ಗೇಟ್ ನಲ್ಲಿ ಗುರುವಾರ ಬೆಳಿಗ್ಗೆ ಶಾಲೆಗೆ ತೆರಳಲು ಬಸ್ಸಿಗಾಗಿ ವಿದ್ಯಾರ್ಥಿಗಳು ಸೇರಿದಂತೆ ಕೆಲವು ಮಂದಿ ರಸ್ತೆ ಬದಿ ಕಾಯುತ್ತಿದ್ದರು ಈ ವೇಳೆ ಅತೀ ವೇಗವಾಗಿ ಬಂದ ಖಾಸಗಿ ಬಸ್ಸೊಂದು ರಸ್ತೆ ಬದಿ ನಿಂತಿತ್ತ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡು ಐವರು …

Read More »

ಮಂಗಳೂರು : ಹಿಂದುಗಳ ಹಬ್ಬದ ಆಚರಣೆಗೆ ನಿಯಮ ಹೇರಿಕೆ ಸರಿಯಲ್ಲ – ಶಾಸಕ ಕಾಮತ್

ಮಂಗಳೂರು : ಹಿಂದುಗಳ ಹಲವು ಸಾಂಪ್ರದಾಯಿಕ ಮತ್ತು ಮಹತ್ವದ ಹಬ್ಬಗಳನ್ನು ಆಚರಿಸುವ ಸಂದರ್ಭ ಕಟ್ಟುನಿಟ್ಟಿನ ನಿಯಮಗಳನ್ನು ಹೇರಿ ಹಬ್ಬದ ಆಚರಣೆಯನ್ನು ತಡೆಯುಟ್ಟುವ ಕ್ರಮ ಸರಿಯಲ್ಲ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಮಂಗಳೂರು ಪೊಲೀಸ್ ಕಮಿಷನರ್ ಅವರ ಆದೇಶದಂತೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಹಲವು ಕಠಿಣ ನಿಯಮಗಳನ್ನು ಹೇರಿ ಆದೇಶ ಹೊರಡಿಸಿದ್ದರು. ಇದು ಸಾಂಪ್ರದಾಯಿಕ ಹಬ್ಬದ ಆಚರಣೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಕಾನೂನುಗಳನ್ನು ನೆಪವಾಗಿಟ್ಟುಕೊಂಡು ಹಬ್ಬದ ಆಚರಣೆಯ ಮೇಲೆ ನಿಯಂತ್ರಣ …

Read More »

ಕಾಂಗ್ರೆಸ್ ಗೆ ಇಂಡಿಯಾದ ಮೇಲಿರುವ ಮೋಹ ‘ಭಾರತ’ದ ಮೇಲೆ ಯಾಕಿಲ್ಲಾ: ಕುಯಿಲಾಡಿ ಸುರೇಶ್

ಉಡುಪಿ: ಸನಾತನ ಸಂಸ್ಕೃತಿ ಹಾಗೂ ವೇದ ಪುರಾಣಗಳ ಕಾಲದಿಂದಲೇ ‘ಭರತ ಖಂಡ’ ‘ಭರತವರ್ಷ’ ಎಂದು ಕರೆಯಲ್ಪಟ್ಟಿರುವ ‘ಪುಣ್ಯ ಭೂಮಿ’, ‘ದೇವ ಭೂಮಿ’ ಭಾರತ. ದೇಶದ ಸಂವಿಧಾನದ ಪರಿಚ್ಛೇದ 1ರಲ್ಲಿ ಉಲ್ಲೇಖಗೊಂಡಿರುವ ನಮ್ಮ ದೇಶದ ಮೂಲ ಹೆಸರು ಭಾರತ. ಆದರೆ ಕಾಂಗ್ರೆಸ್ಸಿಗೆ ಮಾತ್ರ ‘ಭಾರತ’ದ ಮೇಲೆ ದ್ವೇಷ; ‘ಇಂಡಿಯಾ’ದ ಮೇಲೆ ಅತೀವ ಮೋಹ ಯಾಕೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗ ಸಮ್ಮೇಳನದ ನಿಯೋಗಕ್ಕೆ ರಾಷ್ಟ್ರಪತಿ ಭವನದಿಂದ ಕಳುಹಿಸಲಾದ ಔತಣ ಕೂಟದ ಆಹ್ವಾನ ಪತ್ರಿಕೆಯಲ್ಲಿ ‘ಪ್ರೆಸಿಡೆಂಟ್ …

Read More »

ತಲೆಮರೆಸಿಕೊಂಡಿದ್ದ ಐಸಿಸ್ ತ್ರಿಶೂರ್ ಮಾಡ್ಯೂಲ್‌ನ ನಾಯಕನ ಬಂಧಿಸಿದ NIA

ಚೆನ್ನೈ: ತಮಿಳುನಾಡಿನಿಂದ ತಲೆಮರೆಸಿಕೊಂಡಿದ್ದ ಐಸಿಸ್ ತ್ರಿಶೂರ್ ಘಟಕದ ಮುಖ್ಯಸ್ಥನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ಬಂಧಿಸಿ ದೇಶದಿಂದ ಪಲಾಯನ ಮಾಡುವ ಯೋಜನೆಯನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಿಷೇಧಿತ ಜಾಗತಿಕ ಭಯೋತ್ಪಾದಕ ಗುಂಪಿನ ತ್ರಿಶೂರ್ ಮೂಲದ ಮಾಡ್ಯೂಲ್‌ನ ಮುಖ್ಯಸ್ಥ ಸೈಯದ್ ನಬೀಲ್ ನನ್ನು ಬಂಧಿಸಲು ಕಳೆದ ಕೆಲವು ವಾರಗಳಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಚೆನ್ನೈನಲ್ಲಿ ಎನ್‌ಐಎ ಬಂಧಿಸಿದೆ ಎಂದು ಫೆಡರಲ್ ಏಜೆನ್ಸಿಯ ವಕ್ತಾರರು ತಿಳಿಸಿದ್ದಾರೆ.   ಬಂಧಿತ ನಕಲಿ ಮತ್ತು ಮೋಸದ ದಾಖಲೆಗಳನ್ನು ಬಳಸಿಕೊಂಡು ನೇಪಾಳದ ಮೂಲಕ ದೇಶದಿಂದ ಪರಾರಿಯಾಗಲು ಯೋಜಿಸಿದ್ದ ಎಂದು ಅಧಿಕಾರಿ ಹೇಳಿದ್ದಾರೆ. …

Read More »

ಸುರತ್ಕಲ್‌ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣ – ಮತ್ತೋರ್ವ ಆರೋಪಿ ಅರೆಸ್ಟ್

ಮಂಗಳೂರು: ಸುರತ್ಕಲ್‌ನ ಕಳವಾರು ಬಸ್ ನಿಲ್ದಾಣದ ಬಳಿ ನಡೆದಿದ್ದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿನ್ನಿಕಂಬಳ ಕೈಕಂಬ ನಿವಾಸಿ ಪುನೀತ್ (29) ಪೊಲೀಸರ ವಶದಲ್ಲಿರುವ ಆರೋಪಿ. ಪುನೀತ್ ಬಂಧನದಿಂದ ಈ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಈ ಪ್ರಕರಣದಲ್ಲಿ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

Read More »

ಮಂಗಳೂರು:ಮೊಸರು ಕುಡಿಕೆ ಉತ್ಸವ ಹಿನ್ನಲೆ-ಮದ್ಯ ಮಾರಾಟ ನಿಷೇಧ

ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ. ಈ ವೇಳೇ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಅಧಿಕವಿರಲಿದ್ದಾರೆ ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 …

Read More »

ಮಂಗಳೂರು : 14 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು : ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರದ ಬಂದರು ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನಗರದ ನ್ಯೂಚಿತ್ರ ಟಾಕೀಸಿನ ಬಳಿಯ ಸುಬ್ಬಯ್ಯಶೆಟ್ಟಿ ಕಂಪೌಂಡ್ ನ ರಾಜೇಶ್(52) ಬಂಧಿತ ಆರೋಪಿಯಾಗಿದ್ದಾನೆ. ಕೇರಳದ ಕಾಸರಗೋಡಿನಲ್ಲಿ ಬಂದರು ಠಾಣಾ ಎಎಸ್‌ಐ ಓಂ ದಾಸ್ ಮತ್ತು ಹೆಡ್ ಕಾನ್ಸ್‌ಟೇಬಲ್ ಮಚ್ಚೇಂದ್ರನಾಥ ಅವರು ಆರೋಪಿ ರಾಜೇಶ್‌ನನ್ನು ಬಂಧಿಸಿ ಮಂಗಳೂರಿಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Read More »

ಸೌಜನ್ಯ ಪ್ರಕರಣ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ ಮಾಡಿದ ಕರಾವಳಿ ಶಾಸಕರು

ಬೆಂಗಳೂರು: ದುಷ್ಟರಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿದ್ದ ಸೌಜನ್ಯಳಿಗೆ ನ್ಯಾಯ ಸಿಗಬೇಕೆಂದು ಹೋರಾಟ ಕರಾವಳಿಯಲ್ಲಿ ಮುಂದುವರೆದಿದ್ದು, ಈ ನಡುವೆ ಕರಾವಳಿಯ ಶಾಸಕರು ಪ್ರಕರಣದ ಮರುತನಿಖೆ ನಡೆಸಲು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಶಾಸಕರು ಸಂಸದ ನಳಿನ್ ಕುಮಾರ್ ಸಾರಥ್ಯದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಸಹೋದರಿ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಸಿಗಬೇಕು ಮತ್ತು ಪ್ರಕರಣದ ಮರು ತನಿಖೆ ಆಗಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ. ಈ ಮೊದಲು ಸಿಎಂ ಸಿದ್ದರಾಮ್ಯ ಅವರನ್ನು …

Read More »

You cannot copy content of this page.