ತಾಜಾ ಸುದ್ದಿ

ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣಿಗೆ ಶರಣು..!

ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಒಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಗರ ನಿವಾಸಿ 24 ವರ್ಷ ಪ್ರಾಯದ ವಿರಾಜ್ ಮೆಂಡನ್ ಎಂದು ಗುರುತಿಸಲಾಗಿದೆ. ಈತ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ,ಒಳ್ಳೆಯ ಕ್ರೀಡಾಪಟು ಎಂಬ ಹೆಸರನ್ನು ಪಡೆದಿದ್ದ. ಇಂದು ಶಾಂತಿನಗರದಲ್ಲಿರುವ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Read More »

ಕರ್ನಾಟಕ SSLC-PUC​ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​: ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ

ಬೆಂಗಳೂರು: ವರ್ಷದಲ್ಲಿ ಇನ್ಮುಂದೆ ಕಲಿಕಾ ಚೇತರಿಕೆಯ ಕಾರಣದಿಂದಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದರು. ಇಂದು ವಿಧಾನಸೌಧದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಶಾಲಾ ಶಿಕ್ಷಕರಿಗೆ ಇಪ್ಪತ್ತು, ಪ್ರೌಢ ಶಾಲಾ ಶಿಕ್ಷಕರಿಗೆ 20 ಪ್ರಶಸ್ತಿ, ವಿಶೇಷ ಶಿಕ್ಷಕರಿಗೆ ಇಬ್ಬರು ಸೇರಿದಂತೆ 31 ಉತ್ತಮ ಶಿಕ್ಷಕರಿಗೆ ರಾಜ್ಯ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗಿದೆ ಎಂದರು. ಶಾಲೆಗೆ ಹೋಗೋದಕ್ಕೆ ಮಕ್ಕಳಿಗೆ ಶಕ್ತಿ ಬೇಕು. ಮುಂಚೆ ಮೊಟ್ಟೆ …

Read More »

ಉದಯನಿಧಿ ಸ್ಟಾಲಿನ್ ತಲೆ ಕಡಿದು ತಂದವರಿಗೆ ₹10 ಕೋಟಿ ಎಂದ ಅಯೋಧ್ಯೆ ಸ್ವಾಮೀಜಿ!

ಅಯೋಧ್ಯೆ: ತಮಿಳುನಾಡು ಕ್ರೀಡಾ ಸಚಿವ ಹಾಗೂ ನಟ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಗೆ ಹಲವು ಹಿಂದೂ ಸ್ವಾಮಿಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೆ ಅಯೋಧ್ಯೆಯ ಸ್ವಾಮೀಜಿ ಒಬ್ಬರು ಉದಯನಿಧಿಗೆ ಜೀವ ಬೆದರಿಕೆ ಹಾಕಿದ್ದಾರೆ. ಅಯೋಧ್ಯೆಯ ತಪಸ್ವಿ ಛವನಿ ದೇವಸ್ಥಾನದ ಮುಖ್ಯ ಅರ್ಚಕರಾಗಿರುವ ಪರಮಹಂಸ ಆಚಾರ್ಯ ಸ್ವಾಮೀಜಿ ಅವರೇ ಉದಯನಿಧಿಗೆ ಜೀವ ಬೆದರಿಕೆ ಹಾಕಿದ್ದಾರೆ. ‘ಉದಯನಿಧಿ ಸ್ಟಾಲಿನ್ ಹೇಳಿಕೆ ಹಿಂದೂ ಧರ್ಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಅವರ ತಲೆ ಕೆಡಿದು ತಂದು ಕೊಟ್ಟವರಿಗೆ ₹ 10 ಕೋಟಿ ಕೊಡುತ್ತೇನೆ. ಇಲ್ಲದಿದ್ದರೆ, ನಾನೇ …

Read More »

ಉಡುಪಿ ಎಸ್ಪಿ ಹಾಕೆ ಮಚ್ಚಿಂದ್ರ ವರ್ಗಾವಣೆ, ಡಾ.ಅರುಣ್ ಪೊಲೀಸ್ ವರಿಷ್ಠಾಧಿಕಾರಿ

ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಅರುಣ್ ಕೆ, ಐಪಿಎಸ್ ಅವರನ್ನು ನೇಮಕ ಮಾಡಲಾಗಿದೆ. ಹಾಕೆ ಅಕ್ಷಯ್ ಮಚಿಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.ಡಾ ಅರುಣ್ ಕೆ ಅವರು ಪೊಲೀಸ್ ಅಧೀಕ್ಷಕರಾಗಿ ಮತ್ತು ಕಲಬುರ್ಗಿಯ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದರು. ಇದರೊಂದಿಗೆ ಕರಾವಳಿ ಭದ್ರತಾ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಪೊಲೀಸ್ ಕೇಂದ್ರ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Read More »

ಮಂಗಳೂರು: 13 ರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಮಂಗಳೂರು: ಕಳೆದ ಹದಿಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಜಪ್ಪಿನಮೊಗರು ನಿವಾಸಿ ಪ್ರೀತಮ್ ಆಚಾರ್ಯ(38) ಬಂಧಿತ ಆರೋಪಿ. ಪ್ರೀತಮ್ ಆಚಾರ್ಯ ಪ್ರಕರಣವೊಂದರಲ್ಲಿ ಭಾಗಿಯಾಗಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದಿದ್ದರಿಂದ ಈತನ ಮೇಲೆ ಎಲ್.ಪಿ.ಸಿ ವಾರೆಂಟ್ ಜ್ಯಾರಿಯಾಗಿತ್ತು. ಅದರಂತೆ ಈತನು ಮುಂಬಯಿಯ ಬೌಚ ದಕ್ಕ ಹೊಟೇಲ್ ನಲ್ಲಿ ಮ್ಯಾನೇಜರ್ ಆಗಿ ಕೆಲಸದಲ್ಲಿದ್ದಾಗಿ ದೊರೆತ ಖಚಿತ ಮಾಹಿತಿಯಂತೆ ಉರ್ವ ಠಾಣೆಯ ಪೊಲೀಸರು ವಿಶೇಷ ಕರ್ತವ್ಯದಲ್ಲಿ ಮುಂಬೈಗೆ ತೆರಳಿ ಸೆಪ್ಟೆಂಬರ್ 3 ರಂದು ಮಧ್ಯಾಹ್ನ 11ಗಂಟೆಗೆ ಈತನು ಕೆಲಸ ಮಾಡುತ್ತಿದ್ದ ಹೊಟೇಲ್ ನಲ್ಲಿ ವಶಕ್ಕೆ ಪಡೆದಿದ್ದಾರೆ. ನವೆಂಬರ್ …

Read More »

ಉಡುಪಿ : ಮುಂದಿನ ಜನ್ಮದಲ್ಲಿ ಪಾಣರ ಸಮುದಾಯದಲ್ಲಿ ಹುಟ್ಟುವ ಆಸೆಯಿದೆ – ನಟ ರಿಷಭ್ ಶೆಟ್ಟಿ

ಉಡುಪಿ : ನಟ ರಿಷಭ್ ಶೆಟ್ಟಿ ಉಡುಪಿಯಲ್ಲಿ ದೈವ ನರ್ತಕರಾದ ಪಾಣರ ನಲಿಕೆ ಸಮುದಾಯದ ಸಮಾವೇಶದಲ್ಲಿ ಭಾಗಿಯಾದರು. ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟ ನಿರ್ದೇಶಕ ದೈವಾರಾಧನೆ ಮತ್ತು ದೈವನರ್ತಕರ ಕುರಿತ ಕಾಂತಾರ ಸಿನೆಮಾ ಸೂಪರ್ ಡೂಪರ್ ಯಶಸ್ಸಿನ ಹಿನ್ನೆಲೆಯಲ್ಲಿ ರಿಷಭ್ ಶೆಟ್ಟಿ ಆಡಿದ ಮಾತು ಗಮನ ಸೆಳೆಯಿತು. ಅಮೆರಿಕಾದ ಮ್ಯೂಸಿಯಂನಲ್ಲಿ ಪಂಜುರ್ಲಿಯ ಮೊಗ ಇಟ್ಟಿದ್ದಾರೆ. ಇದು ನಮ್ಮ ನೆಲದ ದೈವ ದೇವರ ಶಕ್ತಿ.‌ ಮುಂದಿನ ಜನ್ಮದಲ್ಲಿ ಪಾಣರ ಸಮುದಾಯದಲ್ಲಿ ಹುಟ್ಟುವ ಆಸೆಯಿದೆ. ಪಾಣಾರನಾಗಿ ದೈವದ ಚಾಕರಿ ಮಾಡುವಂತಾಗಲಿ. ಪಂಜುರ್ಲಿ, ಗುಳಿಗ – …

Read More »

ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಜಾರಿ ಬಿದ್ದು ವೈದ್ಯ ಸಾವು

ಉಳ್ಳಾಲ: ಸಹಪಾಠಿಗಳೊಂದಿಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ವೈದ್ಯನೋರ್ವ ರುದ್ರ ಪಾದೆಯಿಂದ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸೋಮೇಶ್ವರದಲ್ಲಿ ನಿನ್ನೆ ತಡರಾತ್ರಿ 11 ಗಂಟೆಗೆ ಸಂಭವಿಸಿದ್ದು ಇಂದು ಬೆಳಿಗ್ಗೆ ಮೃತದೇಹ ಪತ್ತೆಯಾಗಿದೆ. ಮೃತ ವೈದ್ಯನನ್ನು ನಗರದ ಎ.ಜೆ ಆಸ್ಪತ್ರೆಯ ಸರ್ಜನ್ ರಾಮನಗರ ನಿವಾಸಿ ಡಾ. ಆಶೀಕ್ ಗೌಡ (30) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯರಾತ್ರಿ ಮೃತ ಆಶಿಕ್ ಗೌಡ ಇನ್ನೋರ್ವ ಸಹಪಾಠಿ ಸರ್ಜನ್ ಕುಂದಾಪುರ ಮೂಲದ ಡಾ.ಪ್ರದೀಶ್ ಮೂವರು ಇಂಟನ್೯ಶಿಪ್ ನಡೆಸುತ್ತಿರುವ ವೈದ್ಯೆಯರ ಜೊತೆಗೆ ಸಮುದ್ರ ವಿಹಾರಕ್ಕೆಂದು ಸೋಮೇಶ್ವರಕ್ಕೆ ಬಂದಿದ್ದಾರೆ. ರುದ್ರಪಾದೆಯಲ್ಲಿ ವಿಹರಿಸುತ್ತಿದ್ದ ಸಂದರ್ಭ ಡಾ.ಪ್ರದೀಶ್ …

Read More »

ಮಂಗಳೂರು: ಚೂರಿ ಇರಿತ ಪ್ರಕರಣ -ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಸಿದಂತೆ ಮೂವರು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂದು ಗುರುತಿಸಲಾಗಿದ್ದು, ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರಿನಲ್ಲಿ ನಿನ್ನೆ ರಾತ್ರಿ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ಸಫ್ವಾನ್‌ (23) ಎಂಬಾತನಿಗೆ ಚೂರಿ ಇರಿತ ಆಗಿತ್ತು, ಕೂಡಲೇ ಸುರತ್ಕಲ್ ಠಾಣೆ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದಾರೆ. ‌ಹಲವರನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ತಿಳಿಸಿದ್ದಾರೆ. ಆಗಸ್ಟ್ 31ರಂದು ನಡೆದ …

Read More »

ಬೆಳ್ತಂಗಡಿ: ಸೌಜನ್ಯಾ ಪ್ರಕರಣವನ್ನು ಮರುತನಿಖೆ ನಡೆಸದಿದ್ದರೆ ಮುಂದೆ ವಿಧಾನಸೌಧಕ್ಕೂ ಮುತ್ತಿಗೆ- ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: ಸೌಜನ್ಯಾ ಕುಟುಂಬದ ಹೋರಾಟಕ್ಕೆ ಬೆಂಬಲವಾಗಿ ನಿಂತಿರುವ ಮಹೇಶ ಶೆಟ್ಟಿ ತಿಮರೋಡಿ, ‘ಸೌಜನ್ಯಾಗೆ ನ್ಯಾಯ ಕೊಡಿಸಲು ಶುರುವಾದ ಹೋರಾಟ ಸಂಗ್ರಾಮದ ರೂಪವನ್ನು ಪಡೆದಿದೆ. ಈ ಹೋರಾಟವನ್ನು ಹತ್ತಿಕ್ಕಲು ಮುಂದಾದರೆ ಸರ್ಕಾರಕ್ಕೆ ಶಾಪ ತಟ್ಟುತ್ತದೆ. ಜನರು ದಂಗೆ ಎದ್ದರೆ ಅದಕ್ಕೆ ಆಡಳಿತ ಮತ್ತು ರಾಜಕೀಯ ವ್ಯಕ್ತಿಗಳೇ ನೇರ ಹೊಣೆ. ಮರು ತನಿಖೆ ಆಗದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೂ ಮುತ್ತಿಗೆ ಹಾಕುತ್ತೇವೆ’ ಎಂದು ಎಚ್ಚರಿಸಿದರು.ಬೆಳ್ತಂಗಡಿಯಲ್ಲಿ ಸೆ.3ರಂದು ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಅವರು ಅಧ್ಯಕ್ಷ ಸ್ಥಾನ ವಹಿಸಿ ಮಾತನಾಡಿದರು. ‘ಬೆಳ್ತಂಗಡಿಯ ಪೊಲೀಸರ ತನಿಖಾ ವೈಫಲ್ಯದಿಂದ ಇಂದು ಸೌಜನ್ಯ …

Read More »

ಮಂಗಳೂರು: ಗೆಳೆಯರ ಜೊತೆ ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ಚೂರಿ ಇರಿತ

ಮಂಗಳೂರು: ಗೆಳೆಯರ ಜೊತೆ ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ  ಭಾನುವಾರ ಸಂಜೆ ನಡೆದಿದೆ. ಗಾಯಗೊಂಡ ಯುವಕನನ್ನು ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌ (23) ಎಂದು ಗುರುತಿಸಲಾಗಿದೆ. ಸಫ್ವಾನ್‌ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸಫ್ವಾನ್‌ ಗೆಳೆಯರೊಂದಿಗೆ ಆಟವಾಡಿ ಮನೆಗೆ ತೆರಳುತ್ತಿದ್ದ ವೇಳೆ ಸ್ಥಳೀಯನೇ …

Read More »

You cannot copy content of this page.