ತಾಜಾ ಸುದ್ದಿ

ಮಕ್ಕಳು, ವಿಕಲಚೇತನರು, ಹಿರಿಯ ನಾಗರಿಕರಿಗೆ ಹೊಸ ಯೋಜನೆ ಜಾರಿ: ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

ಮೈಸೂರು: ಮಕ್ಕಳು, ಹಿರಿಯ ನಾಗರಿಕರು, ವಿಕಲಚೇತನರಿಗೆ ಹಲವು ಯೋಜನೆ ಜಾರಿಗೊಳಿಸುವುದಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲಿ ಜಗತ್ತಿನಲ್ಲಿಯೇ ವಿಶಿಷ್ಟವಾದ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಾರಿಗೊಳಿಸುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ. ಶೀಘ್ರವೇ ಹಿರಿಯ ನಾಗರಿಕರು, ಮಕ್ಕಳು, ವಿಕಲಚೇತನರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸುವುದಾಗಿ ಅವರು ಘೋಷಿಸಿದ್ದಾರೆ.

Read More »

ಸ್ವಂತ ತಂಗಿಯ ಮೇಲೆಯೇ ಅತ್ಯಾಚಾರ ಎಸಗಿದ ಅಣ್ಣನಿಗೆ ರಕ್ಷಾ ಬಂಧನ ದಿನದಂದೇ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ನವದೆಹಲಿ: ಒರಿಸ್ಸಾದ ವ್ಯಕ್ತಿ ತನ್ನ ಸಹೋದರಿ 14 ವರ್ಷದವಳಿದ್ದಾಗ ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಧರಿಸುವಂತೆ ಮಾಡಿದ್ದಕ್ಕಾಗಿ ಅಣ್ಣನಿಗೆ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿಯುವಾಗ, ಒರಿಸ್ಸಾ ಹೈಕೋರ್ಟ್ ಆತನಿಗೆ ₹ 40,000 ದಂಡವನ್ನು ವಿಧಿಸಿತು.   ರಕ್ಷಾ ಬಂಧನದ ದಿನದಂದು ಇಂತಹ ಪ್ರಕರಣದಲ್ಲಿ ತೀರ್ಪು ನೀಡಬೇಕಾಯಿತು ಎಂದು ನ್ಯಾಯಮೂರ್ತಿ ಎಸ್ ಕೆ ಸಾಹೂ ವಿಷಾದ ವ್ಯಕ್ತಪಡಿಸಿದರು. “ಒಬ್ಬ ಸಹೋದರನು ತನ್ನ ಸಹೋದರಿಯನ್ನು ರಕ್ಷಿಸಲು ಮಾತ್ರವಲ್ಲದೆ ತನ್ನ ಕೊನೆಯ ಉಸಿರಿನವರೆಗೂ ಅವಳನ್ನು ಪೋಷಿಸುವ ಗಂಭೀರ ಪ್ರತಿಜ್ಞೆಯನ್ನು ತೆಗೆದುಕೊಳ್ಳುವಾಗ …

Read More »

ಬಂಟ್ವಾಳ: ಊಟ ಮಾಡಿ ಮಲಗಿದ ಯುವತಿ ಸಾವು..!

ಬಂಟ್ವಾಳ: ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ. ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ. ಮಿತ್ರ ಶೆಟ್ಟಿ (23) ಮೃತಪಟ್ಟ ಯುವತಿ. ಊಟ ಮಾಡಿ ಮಲಗಿದ ಯುವತಿ ಬೆಳಿಗ್ಗೆ ನೋಡುವಾಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ತಂದೆ ಮತ್ತು ಅಣ್ಣ ಇಬ್ಬರು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಕಾರಣ ತಾಯಿ ಮತ್ತು ಮಗಳು ಪ್ರಸ್ತುತ ಕಾವಳಪಡೂರು ಗ್ರಾಮದ ಮದ್ವ ಕಂಬಲಡ್ಡ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದವಳು ಬೆಳಿಗ್ಗೆ ಎದ್ದು …

Read More »

BREAKING: ಮೈಸೂರಲ್ಲಿ ‘ಗೃಹಲಕ್ಷ್ಮಿ’ಗೆ ರಾಹುಲ್ ಗಾಂಧಿ, ಖರ್ಗೆ ಅಧಿಕೃತ ಚಾಲನೆ: ಇಂದಿನಿಂದಲೇ 2000 ರೂ ಜಮಾ ಆರಂಭ

ಮೈಸೂರು: ನಗರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆಗೂಡಿ, ಗೃಹ ಲಕ್ಷ್ಮಿ ಯೋಜನೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಚಾಲನೆ ನೀಡಲಾಗಿದೆ. ಹೀಗಾಗಿ ಇಂದಿನಿಂದಲೇ ರಾಜ್ಯದ ಯಜಮಾನಿ ಮಹಿಳೆಯರ ಖಾತೆಗೆ 2000 ರೂ ಹಣ ಜಮಾ ಆಗಲಿದೆ.   ಮೈಸೂರಿನ ಮಹರಾಜ ಗ್ರೌಂಡ್ ನಲ್ಲಿ ಇಂದು ಚಾರಿತ್ರಿಕವಾದ ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಸಮಾವೇಶದ ಐತಿಹಾಸಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ನಾರಿಯರು ಭಾಗವಹಿಸಿದ್ದರು. ಕೇವಲ ಕರ್ನಾಟಕದಿಂದ ಮಾತ್ರವಲ್ಲದೆ ದಕ್ಷಿಣ …

Read More »

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಅಂತ ತಿಳಿದು ಬಂದಿದೆ. ಬುಧವಾರ ಬೆಳಗಿನ ಜಾವ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

Read More »

ಮಂಗಳೂರು: ಕೊಣಾಜೆ ಕೊಲೆ ಯತ್ನ ಪ್ರಕರಣ- ಆರೋಪಿಯ ಬಂಧನ

ಮಂಗಳೂರು: ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ, ನರಿಂಗಾನ ನಿವಾಸಿ ನಮೀರ್ ಹಂಝ ಅಲಿಯಾಸ್ ಸಮೀರ್ ಹಂಝ (39) ಬಂಧಿತ ಆರೋಪಿ. ಆಗಸ್ಟ್ 12ರಂದು ಕೊಣಾಜೆಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರಲ್ಲಿ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಮೀರ್ ಹಂಸ ಎಂಬಾತನು ಗಲಾಟೆ ಮಾಡಿಕೊಂಡಿದ್ದ. ಈ ವೇಳೆ ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆತ್ನಿಸಿದ್ದಾನೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ …

Read More »

ಬಂಟ್ವಾಳ: ಯುವತಿಯ ವಿಡಿಯೋ ಚಿತ್ರೀಕರಣ ಪ್ರಕರಣ-ಆರೋಪಿ ಅರೆಸ್ಟ್

ಬಂಟ್ವಾಳ: ಯುವತಿಯೋರ್ವಳು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ‌ ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ಮೂಲಕ ಸ್ನಾನ ಮಾಡುತ್ತಿರುವುದನ್ನು ಸೆರೆ ಹಿಡಿಯುವುದು ಗಮನಕ್ಕೆ ಬಂದಿದೆ. ಯುವತಿ ಇದನ್ನು ಕಂಡು ಜೋರಾಗಿ ಬೊಬ್ಬೆ ಹಾಕಿದ್ದು, ಅಪರಿಚಿತ ಆರೋಪಿ ವ್ಯಕ್ತಿಯು ಅಲ್ಲಿಂದ ಓಡಿಹೋಗಿದ್ದ.ಯುವತಿಯ ಬೊಬ್ಬೆ …

Read More »

ದೇಶದ ಜನತೆಗೆ ನೆಮ್ಮದಿ ಸುದ್ದಿ : ‘LPG ಸಿಲಿಂಡರ್’ ಬೆಲೆಯಲ್ಲಿ 200 ರೂ. ಇಳಿಕೆ, ನಾಳೆ ಸರ್ಕಾರದಿಂದ ಘೋಷಣೆ ಸಾಧ್ಯತೆ

LPG’ ಸಿಲಿಂಡರ್’ ಬೆಲೆಯಲ್ಲಿ 200 ಇಳಿಕೆಯಾಗುವ ಸಾಧ್ಯತೆಯಿದ್ದು, ನಾಳೆ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹೌದು, ಎಲ್ ಪಿ ಜಿ ಸಿಲಿಂಡರ್ ಗಳ ಬೆಲೆಯನ್ನು 200 ರೂ.ಗಳಷ್ಟು ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ 24 ಗಂಟೆಗಳಲ್ಲಿ ಕೇಂದ್ರವು ಬೆಲೆ ಕಡಿತವನ್ನು ಘೋಷಿಸಬಹುದು ಎಂದು ಮೂಲಗಳು ತಿಳಿಸಿವೆ. ಕಳೆದ ಕೆಲವು ತಿಂಗಳುಗಳಿಂದ ಬಹುತೇಕ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಹೆಚ್ಚಾಗಿರುವುದರಿಂದ ಮಧ್ಯಮ ವರ್ಗದವರಿಗೆ ಇದು ಒಳ್ಳೆಯ ಸುದ್ದಿಯಾಗಿದೆ. ಎಲ್ಪಿಜಿ ಬೆಲೆ ಕಡಿತವು ಜನರಿಗೆ ದೊಡ್ಡ ಪರಿಹಾರವನ್ನು ನೀಡುತ್ತದೆ. …

Read More »

ಉಡುಪಿ: ನೇಣು ಬಿಗಿದುಕೊಂಡು ಸಪ್ಲಾಯರ್‌ ಆತ್ಮಹತ್ಯೆ

ಉಡುಪಿ: ಜೀವನದಲ್ಲಿ ಜುಗುಪ್ಸೆಗೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಿಷನ್‌ ಕಾಂಪೌಂಡ್‌ ಬಳಿಯ ನಿವಾಸಿ ಇಗ್ನೇಶೀಯಸ್‌ ಮಾರ್ಕ್‌ ಸಲ್ಡಾನ್ಹಾ (58) ಅವರು 2 ವರ್ಷಗಳಿಂದ ಉಡುಪಿ ರೆಸಿಡೆನ್ಸಿಯಲ್ಲಿ ಸಪ್ಲಾಯರ್‌ ಕೆಲಸ ಮಾಡಿಕೊಂಡಿದ್ದು, ತಮಗಿದ್ದ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕವಾಗಿ ನೊಂದು ಆ. 27ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ; ಹಿಂದೂ ಮಹಾ ಸಭಾದ ರಾಷ್ಟ್ರೀಯ ಅಧ್ಯಕ್ಷ

ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ ಮಹಾರಾಜ್ ಚಂದ್ರನನ್ನು ‘ಹಿಂದೂ ರಾಷ್ಟ್ರ ಎಂದು ಘೋಷಿಸಲು ಚಂದ್ರಯಾನ -3ರ ಲ್ಯಾಂಡಿಂಗ್ ಸ್ಪಾಟ್‌ನ್ನು ಅದರ ರಾಜಧಾನಿಯನ್ನಾಗಿ ಮಾಡುವಂತೆ ಕರೆ ನೀಡಿ ಎಂದು ಸರಕಾರಕ್ಕೆ ಆಗ್ರಹಿಸಿದ್ದಾರೆ. ಇತರ ಧರ್ಮಗಳಿಗಿಂತ ಮೊದಲು ಭಾರತ ಸರ್ಕಾರವು ಚಂದ್ರನ ಮೇಲೆ ತನ್ನ ಮಾಲೀಕತ್ವವನ್ನು ಪ್ರತಿಪಾದಿಸಬೇಕು ಮತ್ತು ಅದಕ್ಕಾಗಿ ಸಂಸತ್ತಿನಲ್ಲಿ ನಿರ್ಣಯವನ್ನು ಅಂಗೀಕರಿಸಬೇಕೆಂದು ಚಕ್ರಪಾಣಿ ಮಹಾರಾಜ್ ಹೇಳಿದ್ದಾರೆ. ಚಂದ್ರನನ್ನು ಹಿಂದೂ ಸನಾತನ ರಾಷ್ಟ್ರ ಎಂದು ಸಂಸತ್ತು ಘೋಷಿಸಬೇಕು.ಚಂದ್ರಯಾನ 3 ಇಳಿಯುವ ಸ್ಥಳವನ್ನು ಅದರ ರಾಜಧಾನಿ ‘ಶಿವಶಕ್ತಿ ಪಾಯಿಂಟ್’ ಆಗಿ ಅಭಿವೃದ್ಧಿಪಡಿಸಬೇಕು.ಆದ್ದರಿಂದ …

Read More »

You cannot copy content of this page.