ತಾಜಾ ಸುದ್ದಿ

51,000 ಸಾವಿರಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಅವರು 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದಡಿಯಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ. ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಅರೆಸೇನಾ ಪಡೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ನಮ್ಮ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್‌ಗರ್ ಮೇಳ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. …

Read More »

ಸ್ನಾನಕ್ಕೆಂದು ಕೊಳಕ್ಕೆ ಇಳಿದ ಯುವಕ ಮೃತ್ಯು..!

ಉಳ್ಳಾಲ: ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ.ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ ಪುತ್ರ ಹರಿಪ್ರಸಾದ್‌ ಆಚಾರ್ಯ(36) ಮೃತರು. ತಲಪಾಡಿಯಲ್ಲಿರುವ ಖಾಸಗಿ ಜಾಗದಲ್ಲಿರುವ ಕೊಳಕ್ಕೆ ಸ್ನಾನಕ್ಕೆಂದು ಬಂದಿದ್ದ ನಾಲ್ವರ ಪೈಕಿ ಹರಿಪ್ರಸಾದ್‌ ನೀರಿನಡಿಯ ಕೆಸರಿನಲ್ಲಿ ಸಿಲುಕಿ ಮುಳುಗಿದ್ದಾರೆ. ಇದರಿಂದಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಂಗಳೂರಿನಿಂದ ಅಗ್ನಿ ಶಾಮಕ ದಳದವರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಮೃತರು ವೆಲ್ಡಿಂಗ್‌ ವೃತ್ತಿ ನಡೆಸುತ್ತಿದ್ದರು. ಮೃತರು ಅವಿವಾಹಿತರಾಗಿದ್ದು, ತಾಯಿ, …

Read More »

ಸೌಜನ್ಯ ಪ್ರಕರಣ; ಮರುತನಿಖೆಗೆ ಹೆಗ್ಗಡೆ ಕುಟುಂಬ ಹೈಕೋರ್ಟ್ ಮೊರೆ

ಧರ್ಮಸ್ಥಳ: ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಲು ಮತ್ತೆ ಯಾವುದಾದರೂ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಡಾ.ಹೆಗ್ಗಡೆ ಕುಟುಂಬದವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.ನ್ಯಾಯಾಲಯದ ಆದೇಶಗಳನ್ನು ತಿರುಚಿ ಸತ್ಯ ಮರೆಮಾಚುತ್ತಿರುವ, ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿರುವ ಹಾಗೂ ನ್ಯಾಯಾಲಯ ಮತ್ತು ನ್ಯಾಯಾಧೀಶರನ್ನು …

Read More »

ಆಹಾರದಲ್ಲಿ ವಿಷ ಬೆರೆಸಿ ತಂದೆ-ತಾಯಿಯನ್ನು ಕೊಲೆಗೈದ ಪಾಪಿ ಪುತ್ರ..!!

ನಾಲ್ಕು ದಿನಗಳ ಹಿಂದೆ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ವೇಳೆ ದಂಪತಿ ಸಾವಿನ ರಹಸ್ಯ ಬಯಲಾಗಿದೆ. ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪುತ್ರನೇ ಪೋಷಕರಿಗೆ ವಿಷ ಹಾಕಿಕೊಲೆ ನಡೆಸಿದ ಕೃತ್ಯ ಬಯಲಾಗಿದೆ. ಮಂಜುನಾಥ್ (27) ತಿಂಡಿಗೆ ವಿಷ ಬೆರಸಿ ತಂದೆ ತಾಯಿಯನ್ನು ಕೊಲೆ ಮಾಡಿದ ಆರೋಪಿ. ಮಂಜುನಾಥ್ ವಿಧವೆ ಒಬ್ಬಳ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಆರೋಪಿಗೆ ತಂದೆ-ತಾಯಿ ಬುದ್ಧಿವಾದ ಹೇಳಿದ್ದರು. ಅಲ್ಲದೇ ಸಹಕಾರ ಸಂಘಗಳಲ್ಲಿ ಆತನ ತಾಯಿ ಉಮಾ (48)ಮಾಡಿದ್ದ …

Read More »

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಚರಂಡಿ ಕುಸಿತ, ವಾಹನ ಸವಾರರಲ್ಲಿ ಆತಂಕ..!

ಉಡುಪಿ: ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಗಾಂಧಿ ಆಸ್ಪತ್ರೆಯ ಎದುರು ಒಳ ಚರಂಡಿ ಕುಸಿದ ಪರಿಣಾಮ ರಸ್ತೆಯೇ ಬಾಯ್ಬಿಟ್ಟಿದ್ದು ಅಪಾಯವನ್ನು ಆಹ್ವಾನಿಸುತ್ತಿದೆ. ಉಡುಪಿಯ ಸಿಟಿ ಬಸ್ ನಿಲ್ದಾಣ ಸದಾ ವಾಹನಗಳ ಜನಜಂಗುಳಿಯಿಂದ ತುಂಬಿಕೊಂಡಿರುತ್ತದೆ. ಇಲ್ಲಿ ಘನ ವಾಹನಗಳ ಓಡಾಟ ಹೆಚ್ಚು ಇರುವ ಕಾರಣ ಒಳ ಚರಂಡಿ ಕುಸಿದಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ವಾರ ಸಣ್ಣ ಪ್ರಮಾಣದಲ್ಲಿ ರಸ್ತೆಯ ಇಂಟರ್ ಲಾಕ್ ಗಳು, ಒಳಚರಂಡಿ ಸೇರಿತ್ತು. ಆದ್ರೆ ಇದೀಗ ದೊಡ್ಡ ಪ್ರಮಾಣದಲ್ಲಿ ಇಂಟರ್ ಲಾಕ್ ಕುಸಿದಿದ್ದು ಒಳಚರಂಡಿ ಬಾಯ್ಬಿಟ್ಟಿದೆ. ದಿನದಿಂದ ದಿನಕ್ಕೆ ಬಾವಿಯಾಕಾರದಲ್ಲಿ …

Read More »

ಮಂಗಳೂರು : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯ ಬಂಧನ

ಮಂಗಳೂರು : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳದ ಕಲ್ಲಿಕೋಟೆಯ ನಿವಾಸಿ 52 ವಷರ್ದ ಮನೋಜ್ (52) ಎಂದು ಗುರುತಿಸಲಾಗಿದೆ. ಆರೋಪಿ ಅಶೋಕ ನಗರದ ವಿನ್ಸೆಂಟ್ ಪಿರೇರಾ ಎಂಬವರಿಗೆ ಸೇರಿದ ಕಾರನ್ನು ಅದರ ಚಾಲಕ ದಾಮೋದರ ಎಂಬವರು ಕೊಟ್ಟಾರದ ರಸ್ತೆ ಬದಿ 1996ರ ಡಿಸೆಂಬರ್ 24ರಂದು ಪಾರ್ಕ್ ಮಾಡಿದ್ದು, ಮರುದಿನ ನೋಡಿದಾಗ ಅದು ಕಾಣೆಯಾಗಿತ್ತು. ಈ ಬಗ್ಗೆ ಮರುದಿನ ವಿನ್ಸೆಂಟ್ ಪಿರೇರಾ ದೂರು ನೀಡಿದ್ದರು. ಈ ಕಾರನ್ನು ಕಳವುಗೈದಿದ್ದ ಆರೋಪಿ ಮನೋಜ್ ಎಂಬಾತ ಕಲ್ಲಿಕೋಟೆಯಲ್ಲಿರುವ …

Read More »

ಉಡುಪಿ : Online Loan- ಜಿಗುಪ್ಸೆ ತಾಳದೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ : ಆನ್ಲೈನ್ ನಲ್ಲಿ ಲೋನ್ ಪಡೆದಂತ ವ್ಯಕ್ತಿ ಒಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ತಮ್ಮ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೀನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಶಿವಳ್ಳಿ ಗ್ರಾಮದ ಹುಡ್ಕೋ ಕಾಲೊನಿ ನಿವಾಸಿ ರಾಘವೇಂದ್ರ ಎ. ಶಾನಭಾಗ (49) ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.ರಾಘವೇಂದ್ರ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಇತ್ತೀಚಿಗೆ ಆನ್ಲೈನ್ ಮುಖಾಂತರ ಲೋನ್ ಪಡೆದುಕೊಂಡಿದ್ದರು. ಇದರಿಂದ ಅವರಿಗೆ ಪದೇಪದೇ ಕರೆ ಬರುತ್ತಿದ್ದವು ಎನ್ನಲಾಗುತ್ತಿದೆ. ಇದೇ …

Read More »

ಬೈಂದೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು

ಬೈಂದೂರು: ತಾಲೂಕಿನ ಶಿರೂರು ಭಾಗದಲ್ಲಿ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾದ ಘಟನೆ ರವಿವಾರ ಸಂಜೆ ಅಳ್ವೆಗದ್ದೆಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಬ್(22) ಹಾಗೂ ನಝಾನ್(24) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದರು.ಸಮುದ್ರ ಪ್ರಕ್ಷುಬ್ಧ ಇರುವ ಕಾರಣ ಇಬ್ಬರು ಮೀನುಗಾರರು ಆಯತಪ್ಪಿ ಕಡಲ ಸಮುದ್ರ ಪಾಲಾಗಿದ್ದಾರೆ. ತಕ್ಷಣ ಇಲ್ಲಿನ ಸ್ಥಳೀಯ ಮೀನುಗಾರರು ಕಳೆಬರಹದ …

Read More »

ಉಡುಪಿ: ಸೌಜನ್ಯ ಅತ್ಯಾಚಾರ ಮಾಡಿದ ಆರೋಪಿ ” ಕೊರಗಜ್ಜ ಕೊರಗಜ್ಜ” ಎಂದು ಹುಚ್ಚನಂತೆ ಅಲೆಯಲಿ- ನಿತ್ಯಾನಂದ ಒಳಕಾಡು

ಉಡುಪಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿ ಕೊರಗಜ್ಜ ಕೊರಗಜ್ಜ ಎಂದು ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಅಂತ ಪ್ರಾರ್ಥಿಸಿ ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆಯ ಮೂಲಕ ಪೂಜೆ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಂದ ವಿಶೇಷ ಉರುಳು ಸೇವೆ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೈವಸ್ಥಾನದಲ್ಲಿ ಇಂದು ನಡೆಯಿತು. ಮೊದಲು ಪ್ರಾರ್ಥನೆ ಸಲ್ಲಿಸಿದ ನಿತ್ಯಾನಂದ ಒಳಕಾಡು, ಬಳಿಕ ಸೌಜನ್ಯಾಳ ಭಾವ ಚಿತ್ರ ಹಿಡಿದು ಉರುಳು ಸೇವೆ ನಡೆಸಿದರು. ಈ …

Read More »

ಬೆಳ್ತಂಗಡಿ: ನಮ್ಮನ್ನು ಮೋದಿ ಬಳಿ ಕರೆದುಕೊಂಡು ಹೋಗಿ ಎಂದ ಸೌಜನ್ಯ ತಾಯಿ..!

ಸೌಜನ್ಯ ಪರವಾಗಿ ಬೆಳ್ತಂಗಡಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾ ವೇದಿಯಲ್ಲಿ ಮಾತನಾಡಿದ ಸೌಜನ್ಯ ತಾಯಿ ಕುಸುಮಾವತಿ ಅವರು, ‘ಇಂದಿನ ಪ್ರತಿಭಟನೆಯಲ್ಲಿ ನನ್ನ ಮಗಳ ಭಾವಚಿತ್ರವಿರುವ ಪ್ಲೆ ಕಾರ್ಡ್ ಗಳು ಇದೆ . ಆದರೆ ಮೊನ್ನೆಯ ಪ್ರತಿಭಟನೆಯಲ್ಲಿ ಕೇವಲ ನ್ಯಾಯ ಸಿಗಲಿ ಎಂಬ ಫ್ಲೆಕ್ಸ್ ಇತ್ತು. ಹರೀಶ್ ಅಣ್ಣ ಮನೆಗೆ ಬಂದು ಇಂದಿನ ಪ್ರತಿಭಟನೆ ಅಹ್ವಾನ ನೀಡಿದರು. ನಾನು ಇಲ್ಲಿರುವ ನಾಯಕರಿಗೆ ಮನವಿ ಮಾಡುತ್ತೇನೆ. 11 ವರ್ಷಗಳಿಂದ ನಮ್ಮ ಸಂಸದರಲ್ಲಿ ನ್ಯಾಯಕ್ಕಾಗಿ ಕೇಳಿಕೊಂಡಿದ್ದೆ. ಆದರೆ ಈಗ ಸಂಸದರು ನನ್ನ ಮಗಳ ಪರವಾಗಿ ಧ್ವನಿ ಎತ್ತಿದ್ದಾರೆ. ನಮ್ಮನ್ನ …

Read More »

You cannot copy content of this page.