ತಾಜಾ ಸುದ್ದಿ

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನ- ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

ತೆಕ್ಕಾರು: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಒಂಟಿ ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕ ವಾಸವಿರುವ ಮನೆಗೆ ಏಕಾ ಏಕಿ ನುಗ್ಗಿದ ಐದು ಮಂದಿ ದುಷ್ಕರ್ಮಿಗಳ ತಂಡ ಯುವಕನಿಗೆ ಥಳಿಸಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದಘಟನೆ ಸಂಭವಿಸಿದೆ. ಹಲ್ಲೆಗೊಳಗಾದ ಯುವಕನನ್ನು ಮುಝಮ್ಮಿಲ್ (19) ಎಂಡೋಸಲ್ಫಾನ್ ಪೀಡಿತ ಸಂತ್ರಸ್ತನಾಗಿದ್ದು ಮಾನಸಿಕ ಖಾಯಿಲೆಯಿಂದ ಬಳಲುತ್ತಿರುವವನಾಗಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆಯನ್ನು ಆತನ ತಾಯಿ ಮೈಮುನ (38) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಐದು ಮಂದಿ ದುಷ್ಕರ್ಮಿಗಳ ಗುಂಪು ಒಂಟಿ ಮಹಿಳೆ …

Read More »

ಮೂಲ್ಕಿ: ಪೊಲೀಸರು ಬಂಧಿಸಲು ಬಂದಾಗ ಕೀಟನಾಶಕ ಸೇವಿಸಿದ ಆರೋಪಿ..!

ಮೂಲ್ಕಿ: ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಾರಂಟ್ ಆದೇಶದಂತೆ ಬಂಧಿಸಲು ಬಂದ ಸಂದರ್ಭದಲ್ಲಿ ಆರೋಪಿಯೋರ್ವ ಕೀಟನಾಶಕ ಸೇವಿಸಿ, ಬಂಧಿಸಿ ಠಾಣೆಗೆ ಕರೆದೊಯ್ಯುವ ಸಂದರ್ಭದಲ್ಲಿ ಅಸ್ವಸ್ಥನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ2017 ರಲ್ಲಿ ನಡೆದ ಅಪರಾಧ ಪ್ರಕರಣ ಒಂದರ ಆರೋಪಿಯಾಗಿದ್ದ ಮಂಗಳೂರಿನ ಮುಚ್ಚೂರು ಗ್ರಾಮದ ಕರುಣಾಕರ ಶೆಟ್ಟಿ (44) ಎಂಬವರ ವಿರುದ್ದ ವಾರಂಟ್ ಕಾರ್ಯಗತಗೊಳಿಸುವಂತೆ ನ್ಯಾಯಲಯದ ಆದೇಶ ನೀಡಿತ್ತು. ಕರುಣಾಕರ ಶೆಟ್ಟಿ ಉಡುಪಿಯ ಶಿವಳ್ಳಿ ಯಲ್ಲಿರುವ ರಸಿಕ ಬಾರ್ ನಲ್ಲಿ ಕೆಲಸ ಮಾಡಿಕೊಂಡಿರುವ ಬಗೆಗಿನ ಖಚಿತ …

Read More »

ಮದುವೆಯಾಗಲು ಹುಡುಗಿ ಹುಡುಕಲು ವಿಫಲವಾದ ತಾಯಿಯನ್ನೇ ಕೊಲೆಗೈದ ಮಗ

ಹೈದರಾಬಾದ್: ತನ್ನ ಮದುವೆಗೆ ಸೂಕ್ತ ಜೋಡಿ ಸಿಗಲಿಲ್ಲ ಎಂಬ ಕಾರಣಕ್ಕೆ 45 ವರ್ಷದ ಮಹಿಳೆಯನ್ನು ಆಕೆಯ ಮಗ ಕೊಲೆ ಮಾಡಿರುವ ಘಟನೆ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ. ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ. ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ. ಮಹಿಳೆಯ ಮಗಳು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆಯ ಸಂದರ್ಭದಲ್ಲಿ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು …

Read More »

ಮೂಡುಬಿದಿರೆ : ನೈತಿಕ ಪೊಲೀಸ್ ಗಿರಿ ಪ್ರಕರಣ- ಮೂವರು ಅರೆಸ್ಟ್

ಮಂಗಳೂರಿನ ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದ.ಕ ಜಿಲ್ಲೆಯ ಮೂಡಬಿದ್ರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ಆ.22 ಘಟನೆ ನಡೆದಿತ್ತು. ವಿದ್ಯಾರ್ಥಿನಿ ಜೊತೆ ಮಾತನಾಡಿದ ಅನ್ಯಮತೀಯ ವಿದ್ಯಾರ್ಥಿಯ ಮೇಲೆ ಯುವಕರ ತಂಡವೊಂದು ನೈತಿಕ ಪೊಲೀಸ್ ಗಿರಿ ನಡೆಸಿದೆ. ಇದೀಗ ಹಿಂದೂ ಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ, ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮೂಡುಬಿದಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಳು. ಅದೇ …

Read More »

ಪುತ್ತೂರು :ಇರಿತಕ್ಕೊಳಗಾದ ಯುವತಿ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತ್ಯು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿ ಸರಪಾಡಿಯ ಯುವಕ ಪದ್ಮರಾಜ್‌ ಎಂಬಾತನಿಂದ ಚೂರಿ ಇರಿತಕ್ಕೊಳಗಾಗಿ ತೀವ್ರ ಗಾಯಗೊಂಡಿದ್ದ ಯುವತಿ ವಿಟ್ಲ ಬಳಿಯ ಅಳಿಕೆ ನಿವಾಸಿ ಗೌರಿ(18.ವ) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ವಂತ್‌ ಮಾಹಿತಿ ನೀಡಿದ್ದಾರೆ.ಆರೋಪಿ ಸರಪಾಡಿಯ ಪದ್ಮರಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಲಾದ ಚೂರಿ ಮತ್ತು ಬೈಕ್‌ ಅನ್ನು ವಶಪಡಿಸಿಕೊಳ್ಳಲಾಗಿದೆ.ಯುವಕನನ್ನು ಬಂಟ್ವಾಳದ ಮಾವಿನಕಟ್ಟೆಯ ಬಳಿ ವಶಪಡಿಸಿಕೊಳ್ಳಲಾಗಿದೆ.ಆರೋಪಿಯು ಮಣಿನಾಲ್ಕೂರು ಗ್ರಾಮದ ನೈಬೇಲು ನಿವಾಸಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Read More »

ಪುತ್ತೂರಿನಲ್ಲಿ ಯುವತಿಗೆ ಚಾಕು ಇರಿತ – ಯುವತಿ ಗಂಭೀರ

ಪುತ್ತೂರು: ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದಿದೆ. ಚೂರಿ ಇರಿತಕ್ಕೋಳಗಾದ ಯುವತಿಯನ್ನು ವಿಟ್ಲದ ಕುದ್ದುಪದವು ಮೂಲದವಳು ಎನ್ನಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

Read More »

ಉಡುಪಿ: ಮನೆಕಳ್ಳತನದ ಆರೋಪಿ ಸೆರೆ – ಚಿನ್ನಾಭರಣ , ನಗದು ವಶ

ಉಡುಪಿ: ಉದ್ಯಾವರ ಬೊಳ್ಜೆ ನಿವಾಸಿ ಅನಿತಾ ಡಿ. ಸಿಲ್ವಾ ಅವರ ಮನೆಯಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಕಳ್ಳನನ್ನು ಕಾಪು ಪೊಲೀಸರು ಬಂಧಿಸಿದ್ದು ಚಿನ್ನಾಭರಣ, ನಗದು, ಸ್ಕೂಟಿ ಸಹಿತ 8,02,083 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಟಪಾಡಿ ಏಣಗುಡ್ಡೆ ಗ್ರಾಮದ ಅಚ್ಚಡ ನಿವಾಸಿ ಜೋನ್ ಪ್ರಜ್ವಲ್ ಫೆರ್ನಾಂಡಿಸ್ (32)ಬಂಧಿತ ಆರೋಪಿ. ಬಂಧಿತನಿಂದ 6,90,713 ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು, ಮೋಟಾರು ಸೈಕಲ್ ಸಹಿತ ಬೆಲೆಬಾಳುವ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ವಿವರ : ಆ. 17ರಂದು ಉದ್ಯಾವರ ಬೊಳ್ಜೆಯ ಅನಿತಾ ಡಿ. ಸಿಲ್ವಾ …

Read More »

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭದ್ರತೆ ಹೆಚ್ಚಳಕ್ಕೆ ಮಹತ್ವದ ಹೆಜ್ಜೆ – ಎಎಸ್‌ಟಿಗೆ‌ ಬಾಂಬ್ ಸೂಟ್ ಹಸ್ತಾಂತರ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಬಾಂಬ್ ಸೂಟ್ ಖರೀದಿಸಿ ಸಿಐಎಸ್‌ಎಫ್ ಏರ್ಪೋಟ್ ಸೆಕ್ಯುರಿಟಿ ಗ್ರೂಪ್ (ಎಎಸ್‌ಟಿ) ಗೆ ಹಸ್ತಾಂತರಿಸಿದೆ. ಈ ಮೂಲಕ ಭದ್ರತೆ ಹೆಚ್ಚಿಸುವಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಿರಿಸಿದೆ. ಈ ಪ್ರಮುಖ ರಾಷ್ಟ್ರೀಯ ಸ್ಥಾವರಕ್ಕೆ ಭದ್ರತೆ ಒದಗಿಸುವ ಕಾರ್ಯವನ್ನು ನಿರ್ವಹಿಸುವ ಈ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗೆ ವಿಮಾನ ನಿಲ್ದಾಣ ನಿರ್ವಾಹಕರು ನೀಡಿದ ಬದ್ಧತೆಗೆ ಅನುಗುಣವಾಗಿದೆ. ಅವರಿಗೆ ಅತ್ಯಾಧುನಿಕ ಭದ್ರತಾ ಉಪಕರಣಗಳನ್ನು ಒದಗಿಸುತ್ತದೆ. ಇದು ನಾಗರಿಕ ವಿಮಾನಯಾನ ಭದ್ರತಾ ನಿಯಂತ್ರಕ ಸೂಚಿಸಿದ ಅಗತ್ಯವನ್ನು ಸಹ ಪೂರೈಸುತ್ತದೆ. ವಿಮಾನ ನಿಲ್ದಾಣದ ಆವರಣದಲ್ಲಿ ಸ್ಫೋಟಕಗಳನ್ನು ಒಳಗೊಂಡ …

Read More »

BREAKING: ಚಂದ್ರನನ್ನು ಸ್ಪರ್ಶಿಸಿದ ವಿಕ್ರಮ: ಚಂದ್ರಯಾನ-3 ಸಕ್ಸಸ್

ಬೆಂಗಳೂರು : ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು ಭಾರತದ ವೈಜ್ಞಾನಿಕ ಶಕ್ತಿಯ ಅನಾವರಣವಾಗಿ ಜಗತ್ತಿಗೆ ಮತ್ತೊಮ್ಮೆ ಬೆಳಕು ಚಲ್ಲಿದೆ. ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನ ಯಶಸ್ಸು ಪಡೆದುಕೊಂಡ ನಾಲ್ಕನೇ ದೇಶ ಭಾರತವಾಗಿದೆ. ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟ …

Read More »

ಮೂಡುಬಿದಿರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಮೂಡುಬಿದಿರೆ:ಸಹಪಾಠಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿದ್ಯಾರ್ಥಿಗೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಮೂಡುಬಿದಿರೆಯ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಬಳಿ ನಡೆದಿದೆ. ಸೋಮವಾರ ರಾತ್ರಿ ಮೂಡಬಿದಿರೆಯ ರಾಜೀವ್ ಗಾಂಧಿ ಕಾಂಪ್ಲೆಕ್ಸ್ ಬಳಿ ಬೆಂಗಳೂರಿಗೆ ಹೋಗಲು ಬಸ್ ಗಾಗಿ ವಿದ್ಯಾರ್ಥಿನಿ ಕಾಯುತ್ತಿದ್ದಳು.ಈ ವೇಳೆ ಆಕೆಯ ಸಹಪಾಠಿ ವಿದ್ಯಾರ್ಥಿ ಆಕೆಯ ಜೊತೆ ಮಾತನಾಡಿಸಿದ್ದ.ಇಬ್ಬರೂ ಸ್ವಲ್ಪ ಸಮಯ ಮಾತನಾಡಿದ್ದರು.ಬಳಿಕ ಬಸ್ ಬಂದ ಕಾರಣ ವಿದ್ಯಾರ್ಥಿನಿ ತೆರಳಿದ್ದಳು.ಬಳಿಕ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಮೂಡುಬಿದಿರೆ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ …

Read More »

You cannot copy content of this page.