ತಾಜಾ ಸುದ್ದಿ

ಕಾಲೇಜಿನಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾಘಾತ; ಬಾಲಕಿ ಮೃತ್ಯು

ಕರೀಂನಗರ:ಫ್ರೆಶರ್ಸ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಮಂಡಲದ ವೆಂಕಟಾಯಪಲ್ಲಿ ಗ್ರಾಮದ ಗುಂಡು ಅಂಜಯ್ಯ ಎಂಬುವರು ಪುತ್ರಿ ಪ್ರದೀಪ್ತಿ ಮೃತ ದುರ್ದೈವಿಯಾಗಿದ್ದು, ಬಾಲಕಿ ಗಂಗಾಧರದ ಮಾದರಿ ಶಾಲೆಯಲ್ಲಿ ಓದುತ್ತಿದ್ದಳು. ಫ್ರೆಶರ್ಸ್ ಡೇ ಹಿನ್ನೆಲೆಯಲ್ಲಿ ಡ್ಯಾನ್ಸ್​ನ್ನು ಆಯೋಜಿಸಲಾಗಿದ್ದು, ಪ್ರದೀಪ್ತಿ ವಿದ್ಯಾರ್ಥಿಗಳೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಗೆ ಶಿಕ್ಷಕರು ಸಿಪಿಆರ್‌ ನೀಡಿದ್ದು, ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ.ಆದರೆ ಆಕೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾಳೆ. ಈ ಕುರಿತು ಪೊಲೀಸರು ಪ್ರಕರಣ …

Read More »

ಎಸ್‌ಡಿಪಿಐ ಜೊತೆಗೆ ಒಳ ಒಪ್ಪಂದ : ಬಿಜೆಪಿ ಬೆಂಬಲಿತ ಸದಸ್ಯರಿಬ್ಬರ ಉಚ್ಛಾಟನೆ

ಉಳ್ಳಾಲ : ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್‌ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್‌ ಹೇಳಿದ್ದಾರೆ.ತಲಪಾಡಿ ಗ್ರಾ.ಪಂ.ನಲ್ಲಿ ಒಟ್ಟು ಸಂಖ್ಯಾಬಲ 24 ಇದ್ದು, 13 ಬಿಜೆಪಿ ಬೆಂಬಲಿತರು, 9 ಮಂದಿ ಎಸ್‌ಡಿಪಿಐ ಬೆಂಬಲಿತರು ಹಾಗೂ ಒಬ್ಬರು ಕಾಂಗ್ರೆಸ್‌ ಬೆಂಬಲಿತರಾಗಿದ್ದರು.ಬಿಜೆಪಿಯ ಎಲ್ಲಾ ಸದಸ್ಯರು ಒಗ್ಗಟ್ಟಾಗಿ ಪಕ್ಷದ …

Read More »

ಇನ್ನೂ IPC 420 ವಂಚನೆಯಲ್ಲ, 302 ಮರ್ಡರ್ ಅಲ್ಲ: ‘ಹೊಸ ಸೆಕ್ಷನ್’ಗಳು ಯಾವುವು..? ಇಲ್ಲಿದೆ ಮಾಹಿತಿ

ನವದೆಹಲಿ: ಲೋಕಸಭೆಯ ಮಾನ್ಸೂನ್ ಸಂಸತ್ತಿನ ಸದನದಲ್ಲಿ ಶುಕ್ರವಾರದ ನಿನ್ನೆಯ ಕೊನೆಯದಿನದಂದು ಮಹತ್ವದ ಮೂರು ಕಾನೂನು ತಿದ್ದುಪಡಿ ಮಸೂದೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು. ಈ ತಿದ್ದುಪಡಿ ಮಸೂದೆಯಂತೆ ಇನ್ಮುಂದೆ ಐಪಿಸಿ 420 ವಂಚನೆಯಲ್ಲ, 302 ಮರ್ಡರ್ ಅಲ್ಲ. ಹಾಗಾದ್ರೇ ಹೊಸ ಸೆಕ್ಷನ್ ಗಳು ಯಾವುವು ಅನ್ನೋ ಬಗ್ಗೆ ಮುಂದೆ ಓದಿ. ಶುಕ್ರವಾರದಂದು ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ಅಪರಾಧ ನ್ಯಾಯ ವ್ಯವಸ್ಥೆಗೆ ಹೊಸ ರೂಪ ನೀಡುವ ಉದ್ದೇಶದಿಂದ ಮೂರು ವಿಧೇಯಕಗಳನ್ನು ಮಂಡಿಸಿದರು. ಅವುಗಳಲ್ಲಿ ಐಪಿಸಿಯಲ್ಲಿರುವಂತ ಸಾಕಷ್ಟು …

Read More »

BIG NEWS; ಪುನೀತ್ ಕೆರೆಹಳ್ಳಿ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧನ

ಬೆಂಗಳೂರು:ಇದ್ರೀಷ್ ಪಾಷಾ ಕೊಲೆ ಪ್ರಕರಣದ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಆತನಿಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿರುವ ಈತ, ಮೂಲತಃ ಹಾಸನದವನು.ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ಕಟ್ಟಿಕೊಂಡು ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ,ಗೋ ರಕ್ಷಣೆ ಹೆಸರಿನಲ್ಲಿ …

Read More »

ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂ. ದಂಡ – ಏನಿದು ಪ್ರಕರಣ​?

ಹೈದರಾಬಾದ್: ನಟಿ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅವರಿಗೆ ನ್ಯಾಯಾಲಯವು 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂಪಾಯಿ ದಂಡ ವಿಧಿಸಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ. ಇನ್ನು ಇಎಸ್​ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು …

Read More »

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ರೇ ಗಲ್ಲು, ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ – ಅಮಿತ್ ಶಾ

ನವದೆಹಲಿ: ಕೇಂದ್ರ ಸರ್ಕಾರದಿಂದ ದೇಶದಲ್ಲಿನ ಗ್ಯಾಂಗ್ ರೇಪ್ ನಂತಹ ಪ್ರಕರಣ ತಡೆಗಟ್ಟೋದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಈ ನಿಟ್ಟಿನಲ್ಲಿ ಲೋಕಸಭೆಯಲ್ಲಿ ತಿದ್ದುಪಡಿ ಮಸೂಧೆಯನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದಾರೆ. ಈ ತಿದ್ದುಪಡಿ ಮಸೂದೆಯಂತೆ ಇನ್ಮುಂದೆ ಗ್ಯಾಂಗ್ ರೇಪ್ ಮಾಡಿದವರಿಗೆ 20 ವರ್ಷ ಶಿಕ್ಷೆ ವಿಧಿಸುವಂತ ಕಾನೂನು ಜಾರಿಯಾಗಲಿದೆ.   ಈ ಸಂಬಂಧ ಸಂಸತ್ ಮುಂಗಾರು ಅಧಿವೇಶನದ ಕೊನೆಯ ದಿನದಂದು ಲೋಕಸಭೆಯಲ್ಲಿ ಅಪರಾಧ ಕಾನೂನು ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ನಾನು …

Read More »

ಚಿಕ್ಕಮಗಳೂರಿನ IDSG ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಪ್ರತಿಷ್ಠಿತ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೆ ಮುನ್ನೆಲೆ ಬಂದಿದ್ದು ಕೂಡಲೇ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ವಿವಾದಕ್ಕೆ ತೆರೆ ಎಳೆದಿದೆ. ನಿನ್ನೆ ಪ್ರಥಮ ವರ್ಷದ ವಿದ್ಯಾರ್ಥಿನಿ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು, ತರಗತಿಗೂ ಹಾಜರಾಗಿದ್ದರು. ಕಾಲೇಜಿನಲ್ಲಿ ಬುರ್ಖಾ, ಹಿಜಾಬ್ ಧರಿಸಲು ಅವಕಾಶವಿಲ್ಲ ಎಂಬ ಕೋರ್ಟ್ ಸೂಚನೆ ಇದ್ದರೂ ಹಿಜಾಬ್ ಧರಿಸಿ ವಿದ್ಯಾರ್ಥಿನಿ ಕಾಲೇಜಿಗೆ ಬಂದ ಹಿನ್ನೆಲೆ ಆ ವಿಡಿಯೋ ವೈರಲ್ ಆಗಿತ್ತು. ಕಾಲೇಜಿನಲ್ಲಿ ಕೆಲಕಾಲ ಗೊಂದಲದ ವಾತಾವರಣ ಕೂಡ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರು ಕೂಡ ಭೇಟಿ ನೀಡಿದ್ದರು. ಇದರಿಂದ …

Read More »

ಗಮನಿಸಿ : ಆಗಸ್ಟ್‌ 27ಕ್ಕೆ ‘ಗೃಹಲಕ್ಷ್ಮಿ’ಗೆ ಚಾಲನೆ, ಅಂದೇ ನಿಮ್ಮ ‘ಖಾತೆಗೆ’ ಹಣ ಜಮೆ

ಬೆಂಗಳೂರು:”ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಆ. 20 ರ ಬದಲಿಗೆ ಆ. 27 ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ. ಈ ಯೋಜನೆಯಲ್ಲಿ ನೋಂದಣಿಯಾಗಿರುವ 1.05 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗೃಹಲಕ್ಷ್ಮಿ ಯೋಜನೆ ಕುರಿತ ಸಭೆ ಬಳಿಕ ವಿಕಾಸಸೌಧದಲ್ಲಿ ಗುರುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “ಬೆಳಗಾವಿಯಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ಗ್ರಾಮ ಪಂಚಾಯತಿಯಲ್ಲಿ ನೇರಪ್ರಸಾರವಾಗಲಿದೆ. …

Read More »

ಮೂಡುಬಿದಿರೆಯ ಅಮರಶ್ರೀ ಟಾಕೀಸ್ ಕಂದಾಯ ಇಲಾಖೆ ವಶಕ್ಕೆ..!

ಮೂಡುಬಿದಿರೆ:  ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರ ಟಾಕೀಸ್ ಅಮರಶ್ರೀಯನ್ನು  ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.   ದಾಖಲೆ ಪತ್ರಗಳು ನವೀಕರಣಗೊಳ್ಳದ  ಕಾರಣವನ್ನು ನೀಡಿ ಈ ಟಾಕೀಸ್ ನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾಧಿಕಾರಿ ಆದೇಶದಂತೆ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ. ದಾಖಲೆ ಪತ್ರಗಳನ್ನು ಸರಿಪಡಿಸಿದ ಬಳಿಕ ಮತ್ತೆ ಮರಳೀ ಟಾಕೀಸ್ ನ ಮಾಲಕರ ವಶಕ್ಕೆ  ನೀಡಲಾಗುತ್ತದೆ ಎಂದು ಅಧಿಕಾರಿಗಳು  ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಕಂದಾಯ ಅಧಿಕಾರಿ ಮಂಜುನಾಥ್ ಮೂಡುಬಿದಿರೆ ಪೊಲೀಸರು ಪಾಲ್ಗೊಂಡಿದ್ದರು.  

Read More »

ಪುಂಜಾಲಕಟ್ಟೆ: ಅಂಗನವಾಡಿ ಕೇಂದ್ರದ ಸಹಾಯಕಿ ಕುಸಿದು ಬಿದ್ದು ಸಾವು

ಪುಂಜಾಲಕಟ್ಟೆ: ಬಡಗ ಕಜೆಕಾರು ಗ್ರಾಮದ ಕೆದಿಮೇಲು ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಅಂಗನವಾಡಿ ಸಹಾಯಕಿ ಕುಸಿದು ಬಿದ್ದು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಅಂಗನವಾಡಿ ಸಹಾಯಕಿ ಕನೆಜಾಲು ನಿವಾಸಿ ವಸಂತಿ ಕೆದಿಮೇಲು (43) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯದಲ್ಲಿ ಇರುವಾಗಲೇ ಅಂಗನವಾಡಿ ಸಹಾಯಕಿ ವಸಂತಿ ನಾಯ್ಕ್ ಕುಸಿದು ಬಿದ್ದು ಅಸೌಖ್ಯಕ್ಕೀಡಾಗಿದ್ದರು. ಇವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಪತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪತಿ ಮಂಗಳೂರಿನಲ್ಲಿ ಹೊಟೇಲ್ …

Read More »

You cannot copy content of this page.