ತಾಜಾ ಸುದ್ದಿ

ಪುತ್ತೂರು: ಇಬ್ಬರು ಅಡಿಕೆ ಕಳ್ಳರ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಮಾಡ್ನೂರು ಗ್ರಾಮದ ವಿಷ್ಣು ಕಲ್ಲುರಾಯರ ಎಂಬವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದೆ. ಆರೋಪಿಗಲು ಜುಲೈ ತಿಂಗಳಲ್ಲಿ ವಿಷ್ಣುಕಲ್ಲುರಾಯ ಅವರ ಮನೆಯಿಂದ 2 ಕ್ವಿಂಟಾರ ಒಣ ಅಡಿಕೆ ಹಾಗೂ ಹುಲ್ಲು ತೆಗೆಯುವ ಮೇಷಿನ್ ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು, ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1 ಕ್ವಿಂಟಾಲ್ ಅಡಿಕೆ ಮತ್ತುಹುಲ್ಲು ತೆಗೆಯುವ ಮೇಷಿನ್ …

Read More »

ಉಡುಪಿ ದೋಣಿ ಮುಳುಗಡೆ; ಸ್ಥಳೀಯರಿಂದ ಮೀನುಗಾರರ ರಕ್ಷಣೆ

ಉಡುಪಿ ಜಿಲ್ಲೆಯಲ್ಲಿ ಸಮುದ್ರದ ಅಲೆಗಳಿಗೆ ಸಿಕ್ಕಿ ಮುಳುಗಡೆಯಾದ ದೋಣಿಯಲ್ಲಿ 9 ಜನ ಮೀನುಗಾರರ ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉಪ್ಪು0ದ ತಾರಾಪತಿಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಈ ವೇಳೆ ಸ್ಥಳೀಯ ಮೀನುಗಾರರು ನೆರವಿಗೆ ಧಾವಿಸಿ 9 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಪಲ್ಟಿಯಾಗಿದ್ದು, ಇದರಲ್ಲಿ 9 ಮಂದಿ ಮೀನುಗಾರರು ಇದ್ದರು. ಆದರೆ, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಉಡುಪಿ ಜಿಲ್ಲೆಯ ಉಪ್ಪುಂದ ತಾರಾಪತಿಯಿಂದ ಬೆಳಿಗ್ಗೆ 7:30ರ ಸುಮಾರಿಗೆ ದೋಣಿ …

Read More »

ಉಡುಪಿ: ನಾನು ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿ – ಪ್ರಮೋದ್ ಮಧ್ವರಾಜ್

ಉಡುಪಿ:ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಚುನಾವಣೆಯ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿ ಎಂದು ಮಾಜಿ ಶಾಸಕ ಹಾಗೂ ಹಾಲಿ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಧ್ವರಾಜ್, ನಾನು ಬಿಜೆಪಿ ತೊರೆಯುತ್ತೇನೆ ಎಂದು ಹಲವರು ವದಂತಿ ಹಬ್ಬಿಸುತ್ತಿದ್ದಾರೆ. ಆದರೆ ನಾನು ಸ್ಪಷ್ಟಪಡಿಸಲು ಬಯಸುತ್ತೇನೆ, ನನ್ನ ರಾಜಕೀಯ ನಿವೃತ್ತಿ ಬಿಜೆಪಿಯಿಂದಲೇ ಆಗುತ್ತದೆ. ಕೊನೆಯ ಉಸಿರು ಇರುವವರೆಗೂ ಬಿಜೆಪಿಗಾಗಿ ದುಡಿಯುತ್ತೇನೆ. ಇದು ನನ್ನ ಪ್ರಯತ್ನ ಎಂದು ಎಲ್ಲಾ ವದಂತಿಗಳನ್ನು ಮಧ್ವರಾಜ್‌ ತಳ್ಳಿಹಾಕಿದ್ದಾರೆ.ಬಿಜೆಪಿಯಿಂದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆ ಟಿಕೆಟ್‌ಗೆ ನಾನು ಪ್ರಬಲ ಆಕಾಂಕ್ಷಿ, ಪಕ್ಷದಿಂದ ಯಾರೂ ನನಗೆ …

Read More »

ಪಾಕ್​ ಮಾಜಿ ಪ್ರಧಾನಿ ಇಮ್ರಾನ್​​​​ ಖಾನ್​​ಗೆ 3 ವರ್ಷ ಜೈಲುಶಿಕ್ಷೆ, 5 ವರ್ಷ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ:​ ಕೋರ್ಟ್ ಆದೇಶ

ಕರಾಚಿ : ಪಾಕಿಸ್ತಾನದ ತೋಷಖಾನ ಕೇಸ್ ನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ದೋಷಿ ಎಂದು ಪರಿಗಣಿಸಿ ಪಾಕಿಸ್ತಾನದ ನ್ಯಾಯಾಲಯವು 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಇದರೊಂದಿಗೆ 1 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಆತನ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದ್ದಾರೆ. ಇನ್ನು ಪಾಕ್ ಕಾನೂನಿನ ಪ್ರಕಾರ ಇಮ್ರಾನ್ ಅವರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದರೆ 5 ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ತೋಷಾಖಾನಾ ಪ್ರಕರಣದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಮತ್ತು ಪಾಕಿಸ್ತಾನದ …

Read More »

ಸುರತ್ಕಲ್‌: ಎಟಿಎಂಗೆ ಜೆಸಿಬಿ ಡಿಕ್ಕಿ ಹೊಡೆಸಿ ಹಣ ಕಳವಿಗೆ ಯತ್ನ..!

ಸುರತ್ಕಲ್‌: ಜೆಸಿಬಿ ಯಂತ್ರ ಬಳಸಿ ಎಟಿಎಂ ಹಣ ಕದಿಯಲು ಕಳ್ಳರು ವಿಫಲ ಯತ್ನ ನಡೆಸಿದ ಘಟನೆ ಸುರತ್ಕಲ್‌ ನಲ್ಲಿ ನಡೆದಿದ್ದು, ಕಳ್ಳರು ಪರಾರಿಯಾಗಿದ್ದಾರೆ. ಕಳವಿಗೆ ಯತ್ನಕ್ಕೆ ಬಳಸಿದ ಜೆಸಿಬಿ ಯಂತ್ರ ಜೋಕಟ್ಟೆ ಬಳಿ ಪತ್ತೆಯಾಗಿದೆ. ಸುರತ್ಕಲ್‌ನ ವಿದ್ಯಾದಾಯಿನೀ ಶಾಲಾ ಮುಂಭಾಗದಲ್ಲಿರುವ ಸೌತ್‌ ಇಂಡಿಯನ್‌ ಬ್ಯಾಂಕ್‌ನ ಶಾಖಾ ಕಚೇರಿಯ ಎಟಿಎಂ ಕೇಂದ್ರದಲ್ಲಿ ಜೆಸಿಬಿ ಬಳಸಿ ಹಣ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಈ ಘಟನೆ ಶುಕ್ರವಾರ ಮುಂಜಾನೆ 2 ಗಂಟೆಗೆ ನಡೆದಿತ್ತು. ಕಳ್ಳತನ ಯತ್ನದ ವೇಳೆ ಸಕಾಲದಲ್ಲಿ ಬ್ಯಾಂಕ್‌ ಸೈರನ್‌ ಮೊಳಗಿದ್ದರಿಂದ ಜೆಸಿಬಿ ಸಹಿತ ಕಳ್ಳರು …

Read More »

ಒಂದೇ ಕುಟುಂಬದ ‘ನಾಲ್ವರ’ ಸಾವಿನ ಕೇಸಿಗೆ ‘ಬಿಗ್‌ ಟ್ವಿಸ್ಟ್‌’: ಪತ್ನಿ ಶವದ ಮುಂದೆ ಒಂದು ದಿನ ಕಳೆದಿದ್ದ ವಿಜಯ್‌

ಬೆಂಗಳೂರು: ನಾಲ್ಕು ದಿನದ ಹಿಂದೆಯೇ ಹೆಂಡ್ತಿ ಕೊಲೆ ಮಾಡಿದ್ದ ಟೆಕ್ಕಿ ವಿಜಯ್ ತನ್ನ ಪುಟ್ಟ ಮಕ್ಕಳೊಂದಿಗೆ ಹೆಂಡ್ತಿ ಶವದ ಜೊತೆ ಒಂದು ದಿನ ಕಾಲ ಕಳೆದಿದ್ದ ಎನ್ನಲಾಗಿದೆ. ಸದ್ಯ ಲಭ್ಯವಾಗಿರುವ ಪ್ರಕಾರ ಮೊದಲು ಟೆಕ್ಕಿ ತನ್ನ ಪತ್ನಿಯನ್ನು ಕೊಲೆ ಮಾಡಿದ್ದ ಎನ್ನಲಾಗಿದೆ. ಅಮ್ಮನ್ನ ಸಾವನ್ನು ನೋಡಿ ಅಳುತ್ತಿದ್ದರು ಎನ್ನಲಾಗಿದೆ. ಇದೇ ವೇಳೆ ಮಕ್ಕಳು ಅಳಲಾರಂಭಿಸದ್ರಿಂದ ಮಕ್ಕಳನ್ನೂ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬೇರೆ ದಾರಿಯಿಲ್ಲದೆ ಮಕ್ಕಳನ್ನು ಸಾಯಿಸಿ ಕೊನೆಗೆ ತಾನೂ ಕೂಡ ಸಾವನ್ನಪ್ಪಿದ್ದಾನೆ, ಎಫ್ ಎಸ್ ಎಲ್ ಅಧಿಕಾರಿಗಳ ಪ್ರಾಥಮಿಕ ಪರಿಶೀಲನೆ ವೇಳೆ ಈ ಮಾಹಿತಿ …

Read More »

ಬೆಳ್ತಂಗಡಿ: ಹಲ್ಲೆಗೆ ಯತ್ನ, ಸೌಜನ್ಯ ತಾಯಿಯಿಂದ ಪೊಲೀಸ್ ದೂರು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಗಳಿಂದ ಮಾನಹಾನಿಗೆ ಯತ್ನ ಮತ್ತು ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳದ ಸೌಜನ್ಯ ತಾಯಿ ಕುಸುಮಾವತಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಮಗಳು ಸೌಜನ್ಯಾಗೆ 11 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಹತ್ಯೆ ಮಾಡಲಾಗಿದೆ.ಈ ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ನಾನು 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಆ.4ರಂದು ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೇನೆ ಎಂದು ಹೇಳಿದ್ದಾರೆ. ಈ ಸಂದರ್ಭ ಅಪರಿಚಿತ ವ್ಯಕ್ತಿಗಳು ತನ್ನನ್ನು ತಡೆದು ಮಾನಹಾನಿಗೆ …

Read More »

ಸ್ವಂತ ಕಾರು ಇರುವವರಿಗೆ ‘BPL’ ಕಾರ್ಡ್ ಇಲ್ಲ: ಸಚಿವ ಕೆ.ಎಚ್‌ ಮುನಿಯಪ್ಪ

ಬೆಂಗಳೂರು: ಸ್ವಂತ ಕಾರು ಇರುವವರಿಗೆ ‘BPL’ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ಧಾರೆ. ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ, ಯೆಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ ಎಂದರು. ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರದ ಜೊತೆ ಪಿಯೂಶ್ ಗೋಯಲ್ ಅವರೊಂದಿಗೆ ಮಾತನಾಡಿದ್ದು ಅಕ್ಕಿ …

Read More »

ಬಾಲಕಿಯ ಮೇಲೆ ಪ್ರಾಂಶುಪಾಲನಿಂದ ಅತ್ಯಾಚಾರ

ಬೆಂಗಳೂರು: ನಗರದ ಖಾಸಗಿ ಶಾಲೆಯ ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ವರ್ತೂರು ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ ಮನೆಗೆ ವಾಪಸ್ ಆಗಿದ್ದಳು. ಮನೆಗೆ ಮರಳಿದ ವೇಳೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ವಿಪರೀತ ನೋವಿನಿಂದ ಬಳಲಿದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಡಿಸಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನೇ ಆಕೆಯನ್ನು ಖಾಲಿ ರೂಮಿಗೆ …

Read More »

ಸೌಜನ್ಯ ಕೊಲೆ ಪ್ರಕರಣ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ ಖಂಡಿಸಿ ಪ್ರತಿಭಟನೆ ವೇಳೆ ಸೌಜನ್ಯ ಕುಟುಂಬಸ್ಥರ ಮೇಲೆ ಹಲ್ಲೆ ಯತ್ನ

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅನೇಕ ರೀತಿಯ ಸುಳ್ಳು ಆರೋಪಗಳನ್ನು ಮಾಡಿ, ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ‘ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದ’ ಸಂಘಟನೆಯ ಮೂಲಕ ಮಂಜುನಾಥ ಸ್ವಾಮಿಯ ಭಕ್ತಾಭಿಮಾನಿಗಳಿಂದ ಉಜಿರೆಯಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾವೇಶ ಮತ್ತು ಹಕ್ಕೊತ್ತಾಯ ಸಭೆ ನಡೆಯಿತು.ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದಿಂದ ಪೇಟೆ ಮೂಲಕ ಸಾಗಿಬಂದ ಬೃಹತ್ ಮೆರವಣಿಗೆ ಎಸ್.ಡಿ.ಎಂ ಕಾಲೇಜು ಎದುರಿಗೆ ಸಾಗಿ ಬಂತು. ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೇ ಸಾವಿರಾರು ಜನರು ಶಿಸ್ತುಬದ್ಧವಾಗಿ ಮೆರವಣಿಗೆ ಮೂಲಕ ಸಾಗಿಬಂದರು. ಎಲ್ಲರ ಕೈಯಲ್ಲೂ ಕ್ಷೇತ್ರದ ಪರವಾಗಿ ಮತ್ತು ಡಾ. …

Read More »

You cannot copy content of this page.