ತಾಜಾ ಸುದ್ದಿ

ಮಂಗಳೂರು: ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ- ಉಪನ್ಯಾಸಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..!

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅಸ್ವಾಭಾವಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಕುಳಾಯಿಯ ಪೃಥ್ವಿರಾಜ್ (33) ಶಿಕ್ಷೆಗೊಳಗಾದ ವ್ಯಕ್ತಿ. 2014ರ ಆ.1ರಿಂದ 2016ರ ಸೆ.2ರವರೆಗೆ ಪ್ರೌಢ ಶಾಲೆಯ ವಿದ್ಯಾರ್ಥಿಗೆ ಅಸ್ವಾಭಾವಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪೃಥ್ವಿರಾಜ್ ವಿರುದ್ಧ ಪ್ರಕರಣ …

Read More »

ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣ ಎಬಿವಿಪಿ ಪ್ರತಿಭಟನೆ, ಪೊಲೀಸರೊಂದಿಗೆ ವಾಗ್ವಾದ

ಉಡುಪಿ: ಖಾಸಗಿ ಖಾಸಗಿ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ಸಂಬಂಧಿಸಿದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಬರಲೇಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರರವರು ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದರು.

Read More »

‘ದೇಗುಲದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’-ಮುಸ್ಲಿಂ ಲೀಗ್‌ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷಣೆ

ಕಾಸರಗೋಡು ಜಿಲ್ಲೆಯ ಕಾಞಂಗಾಡ್‌ನಲ್ಲಿ ಮುಸ್ಲಿಂ ಲೀಗ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರನೊಬ್ಬ ‘ದೇವಸ್ಥಾನದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಘೋಷಣೆ ಕೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿಡಿಯೋ ವಿವಾದಾತ್ಮಕ ಸ್ವರೂಪ ಪಡೆದುಕೊಂಡಿದೆ. ಹೌದು ಮಣಿಪುರದಲ್ಲಿ ನಡೆದ ಹಿಂಸಾಚಾರದ ವಿರುದ್ಧದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಭಾಗವಾಗಿರುವ ಮುಸ್ಲಿಂ ಲೀಗ್ ಸದಸ್ಯರು ನಡೆಸಿರುವ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷಣೆಗಳು ಮೊಳಗಿದ ಆರೋಪ ಕೇಳಿ ಬಂದಿದೆ. ಸದ್ಯ ಘೋಷಣೆ ಎತ್ತಿದವನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ಹಿಂಸಾಚಾರ ಪೀಡಿತ …

Read More »

ಕಾಪು :ಮೂಳೂರು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿ : ಪಾದಚಾರಿ ಸಾವು

ಕಾಪು : ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಸಿಎಸ್ಐ ಚರ್ಚ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತ ಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಚಂದ್ರಶೇಖರ್ (52) ಎಂದು ಗುರುತಿಸಲಾಗಿದೆ. ಮೂಲತಃ ಮೂಳೂರು ನಿವಾಸಿಯಾಗಿದ್ದು ಪ್ರಸ್ತುತ ಸುರತ್ಕಲ್ ನಲ್ಲಿ ವಾಸವಿರುವ ಚಂದ್ರಶೇಖರ್ ಅವರು ಮಾರಿಪೂಜೆ ಪ್ರಯುಕ್ತ ಮೂಳೂರಿಗೆ ಆಗಮಿಸಿದ್ದರು. ಮೂಳೂರು ಪೇಟೆಗೆ ಬಂದು ವಾಪಾಸು ಮನೆಗೆ ಹೋಗಲೆಂದು ರಸ್ತೆ ಧಾಟುತ್ತಿದ್ದ ವೇಳೆ ಖಾಸಗಿ ಬಸ್ ಹೊಡೆದಿದೆ. ಬಸ್ ಢಿಕ್ಕಿ ಹೊಡೆದ ರಭಸಕ್ಕೆ ಗಂಭೀರ ಗಾಯಗೊಂಡ …

Read More »

ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ : ಉಡುಪಿಗೆ ಬಂದಿಳಿದ ರಾ. ಮಹಿಳಾ ಆಯೋಗದ ಸದಸ್ಯೆ, ನಟಿ ಖುಷ್ಬೂ

ಉಡುಪಿ : ಖಾಸಗಿ ಕಾಲೇಜಿನ ಶೌಚಾಲಯವೊಂದರಲ್ಲಿ ವಿಡಿಯೋ ಚಿತ್ರೀಕರಿಸಿದ್ದರು ಎನ್ನಲಾದ ಪ್ರಕರಣವೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಪ್ರಕರಣ ಕುರಿತಾದ ವಿಚಾರಣೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ನಟಿ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದ್ದಾರೆ. ಇನ್ನು, ಉಡುಪಿಗೆ ಬಂದ ಕೂಡಲೇ ಮಾಧ್ಯಮದವರ ಜತೆ ಮಾತಾಡಿದ ಖುಷ್ಬೂ ಸುಂದರ್, ಖಾಸಗಿ ಕಾಲೇಜು ವಿದ್ಯಾರ್ಥಿಗಳ ಸಮಸ್ಯೆ ಕುರಿತು ವಿಚಾರಿಸಲು ಬಂದಿದ್ದೇನೆ. ಪ್ರಕರಣದ ಕುರಿತು ಪೊಲೀಸರನ್ನು ಭೇಟಿಯಾಗಿ ಅಗತ್ಯ ಮಾಹಿತಿಯನ್ನು ಕಲೆ ಹಾಕುತ್ತೇನೆ. ಯುವತಿಯರ ವಿರುದ್ಧ ದಾಖಲಾದ ಪ್ರಾಥಮಿಕ ತನಿಖಾ ವರದಿ (ಎಫ್​​ಐಆರ್) ಪಡೆಯುತ್ತೇನೆ ಎಂದರು.ನಾಳೆ …

Read More »

ಬಾರೀ ಮಳೆ: ನಾಳೆ (ಜು.27) ದ.ಕ ಮತ್ತು ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 27ರಂದು ಜಿಲ್ಲಾಧಿಕಾರಿ  ರಜೆ ಘೋಷಿಸಿದ್ದಾರೆ.

Read More »

ಬೆಳ್ತಂಗಡಿ: ಕುತ್ಲೂರು ಕಾಡಬಾಗಿಲು ಸಂಪರ್ಕ ಸೇತುವೆ ಕುಸಿತ, ಸಂಕಷ್ಟಕ್ಕೆ ಸಿಲುಕಿದ ಅರಣ್ಯವಾಸಿಗಳು..!

ಬೆಳ್ತಂಗಡಿ: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಬುಧವಾರ ಕುಸಿದಿದೆ. ಮೂವತ್ತಕ್ಕೂ ಅಧಿಕ ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿದೆ. ಸುಮಾರು 50 ವರ್ಷದ ಹಿಂದೆ ಈ ಸೇತುವೆ ನಿರ್ಮಿಸಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕ ಸಂಚರಿಸುತ್ತಿದ್ದು, ಇದೀಗ ಸೇತುವೆ ಕುಸಿದಿರುವುದರಿಂದ ಈ ಭಾಗದ ಜನರು ಕಿಲೋಮೀಟರ್ ಗಟ್ಟಲೆ ಕಾಲ್ನಡಿಗೆಯಲ್ಲೇ ಸಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅರಣ್ಯವಾಸಿಗಳಿಗೆ ಸಂಚಾರಿ ವಾಹನದ ಮೂಲಕ ಅಳಂಬ …

Read More »

ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಇಂದಿಗೆ ಒಂದು ವರ್ಷ – ಪುತ್ಥಳಿಗೆ ಮಾಲಾರ್ಪಣೆ

ಪುತ್ತೂರು: ಬಿಜೆಪಿಯ ಯುವ ನಾಯಕನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಇಂದಿಗೆ (ಜುಲೈ.26) ಒಂದು ವರ್ಷವಾಗಿದ್ದು ಮನೆ ಸಮೀಪದಲ್ಲಿರುವ ಪುತ್ಥಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾಲಾರ್ಪಣೆ ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಅಬ್ತ ತಂದೆ ಶೇಖರ ಪೂಜಾರಿಯವರು ದೀಪ ಬೆಳಗಿಸಿ ಬಳಿಕ ಆಗಮಿಸಿದ ಗಣ್ಯರು ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಮಾತನಾಡಿ, ಪ್ರವೀಣ್ ನೆಟ್ಟಾರುರವರು ದುಷ್ಕರ್ಮಿಗಳ ಕೃತ್ಯಕ್ಕೆ ಬಲಿಯಾಗಿ ಇಂದಿಗೆ ಒಂದು ವರ್ಷವಾಗಿದ್ದು, ಪ್ರಮುಖ ನಾಲ್ಕು ಜನರ ಆರೋಪಿಗಳ ಬಂಧನ ಆಗಬೇಕಷ್ಟೆ. ತಲೆಮರೆಸಿಕೊಂಡಿರುವವರ ಮನೆಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಇವರ …

Read More »

ಮಂಗಳೂರು:ವೈದರ ನಿರ್ಲಕ್ಷ್ಯ ಗರ್ಭಿಣಿ ಸಾವು- AJ ಆಸ್ಪತ್ರೆ ಮುಂಭಾಗ ಶವವಿಟ್ಟು ಕುಟುಂಬಸ್ಥರ ಪ್ರತಿಭಟನೆ

ಮಂಗಳೂರು: ಖಾಸಗಿ ಆಸ್ಪತ್ರೆ ‌ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ‌‌ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಶಿಲ್ಪಾ ಆಚಾರ್ಯ (36) ಮೃತಪಟ್ಟ ಗರ್ಭಿಣಿ, ಜುಲೈ 2ರಂದು ಹೆರಿಗೆ ನೋವು ಹಿನ್ನೆಲೆ ಶಿಲ್ಪಾ ಆಸ್ಪತ್ರೆಗೆ ದಾಖಲಾಗಿದ್ದರು, ಆವತ್ತು ಸಿಜೆರಿನ್ ಮಾಡಿ ಡೆಲೆವರಿ ಮಾಡಬೇಕೆಂದು ಡ್ಯೂಟಿ ಡಾಕ್ಟರ್ ಹೇಳಿದ್ದರು. ಆದರೆ ವೈದ್ಯೆ ವೀಣಾಗೆ ಕರೆ ಮಾಡಿದಾಗ ಭಾನುವಾರವಾದ ಕಾರಣ ಬರಲ್ಲ ಎಂದಿದ್ದರು, ಹೀಗಾಗಿ ಅದೇ ದಿನ ವೀಣಾ ಅನುಪಸ್ಥಿತಿಯಲ್ಲಿ ಶಿಲ್ಪಾಗೆ  …

Read More »

ಉಡುಪಿ: ಶೌಚಾಲಯದಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ಪ್ರಕರಣ: ಮೂವರು ವಿದ್ಯಾರ್ಥಿನಿಯರ ವಿರುದ್ಧ FIR

ಉಡುಪಿ : ಇಡೀ ದೇಶದಲ್ಲೇ ಸುದ್ದಿಯಾದ ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ನಡೆದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಲ್ಪೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿಧ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ಹುಡುಗಿಯರ ವಿಡಿಯೋ ತೆಗೆದು ವಾಟ್ಸಪ್ ಗುಂಪುಗಳಿಗೆ ಶೇರ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು, ಈ ವಿಚಾರವನ್ನು ಕಾಲೇಜು ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ವಿಡಿಯೋ ಡಿಲೀಟ್‌ ಮಾಡಿದ್ದಾರೆ ಎಂದು ಹೇಳಲಾಗಿದ್ದು ಇದೀಗ ಜನಾಕ್ರೋಶ ಹೆಚ್ಚಾದ ಹಿನ್ನೆಲೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್‌ …

Read More »

You cannot copy content of this page.