ತಾಜಾ ಸುದ್ದಿ

ಫೇಸ್‌ಬುಕ್‌ ಪ್ರೇಮಿ ಜತೆ ಎರಡು ಮಕ್ಕಳ ತಾಯಿ ಮದುವೆ: ‘ನಮ್ಮ ಪಾಲಿಗೆ ಅಂಜು ಸತ್ತಂತೆ’ ಎಂದ ತಂದೆ

ಗ್ವಾಲಿಯರ್‌: ಪಾಕಿಸ್ತಾನದ ಖೈಬರ್‌ ಪಖ್ತುನ್‌ಖ್ವಾ ಪ್ರಾಂತ್ಯಕ್ಕೆ ತೆರಳಿ ಮಂಗಳವಾರ ಅಲ್ಲಿ ತನ್ನ ಫೇಸ್‌ಬುಕ್‌ ಸ್ನೇಹಿತನನ್ನು ಎರಡು ಮಕ್ಕಳ ತಾಯಿ, ಭಾರತೀಯ ಮಹಿಳೆ ಅಂಜು ವಿವಾಹವಾಗಿದ್ದಾಳೆ. ಈಗ ʻಅಂಜು ನಮ್ಮ ಪಾಲಿಗೆ ಸತ್ತಂತೆʼ ಎಂದು ಆಕೆಯ ತಂದೆ ಅಳಲು ತೋಡಿಕೊಂಡಿದ್ದಾರೆ. ಭಾರತದ ನಿವಾಸಿ ಅಂಜು ವಾಘಾ ಗಡಿ ದಾಟಿ ಪಾಕಿಸ್ತಾನಕ್ಕೆ ಹೋಗಿದ್ದರು. ಅಂಜು ನೆರೆಯ ದೇಶದ ಖೈಬರ್ ಪಖ್ತುಂಖ್ವಾದಲ್ಲಿ ನೆಲೆಸಿರುವ ತನ್ನ ಪ್ರಿಯಕರ ನಸ್ರುಲ್ಲಾನನ್ನು ಮದುವೆಯಾಗಿದ್ದಾಳೆ ಎಂಬ ಸುದ್ದಿ ಬಂದಿತ್ತು. ಇಷ್ಟು ಮಾತ್ರವಲ್ಲದೆ ಧರ್ಮವನ್ನು ಬದಲಿಸಿ ಇಸ್ಲಾಂ ಧರ್ಮವನ್ನು ಸ್ವೀಕರಿಸಿ ಅಂಜು ತನ್ನ ಹೆಸರನ್ನು ಧರ್ಮದ …

Read More »

ಮಂಗಳೂರು: ಇಂದು ನಡೆಯುವ ವಿವಿ ಪದವಿ ಪರೀಕ್ಷೆಗಳಲ್ಲಿ ಬದಲಾವಣೆ ಇಲ್ಲ

ಮಂಗಳೂರು: ಜು.26ರ ಇಂದು ನಿಗದಿಯಾಗಿದ್ದ ಮಂಗಳೂರು ವಿಶ್ವ ವಿದ್ಯಾಲಯದ ಪದವಿ ಪರೀಕ್ಷೆಗಳು ವೇಳಾಪಟ್ಟಿಯಂತೆ ನಡೆಯಲಿದೆ ಎಂದು ವಿಶ್ವವಿದ್ಯಾಲಯದಿಂದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ‘ಬುಧವಾರದ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಮಳೆಯ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನಾನುಕೂಲತೆ ಇದ್ದಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು’ ಎಂದು ವಿವಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ನಡುವೆ ಮಂಗಳವಾರದಂದು ಜಿಲ್ಲೆಯಾದ್ಯಂತ ಜಿಲ್ಲಾಡಳಿತ ಡಿಗ್ರಿ ಕಾಲೇಜು ತನಕ ರಜೆ ಘೋಷಣೆ ಮಾಡಿದ ಪರಿಣಾಮ ಜು. 25ರ ಪರೀಕ್ಷೆಗಳನ್ನು ಮುಂದೂಡಿತ್ತು. ಮುಂದೂಡಲಾದ ಪರೀಕ್ಷೆಗಳ ಪರಿಸ್ಕೃತ ದಿನಾಂಕ ಮುಂದೆ ಪ್ರಕಟಿಸುವ ಸೂಚನೆ ವಿವಿ ಕೊಟ್ಟಿದೆ. …

Read More »

ಮಗನ ಅಂತಿಮ ದರ್ಶನಕ್ಕೆ ಬಿಡದ ಅಧಿಕಾರಿಗಳು- ತಂದೆ ಸಾವು

ಚಂಡೀಗಢ: ವಿದ್ಯುತ್ ಅವಘಡದಿಂದ ಮೃತಪಟ್ಟ ಮಗನ ಅಂತಿಮ ದರ್ಶನಕ್ಕೆ ಅವಕಾಶ ನೀಡ ಜಿಎಸ್‌ಟಿ ಅಧಿಕಾರಿಗಳು ತಂದೆಯ ಸಾವಿಗೆ ಕಾರಣರಾಗಿದ್ದಾರೆ! ಬಲ್‌ಬೀರ್ ಸಿಂಗ್ ಎಂಬಾತರೇ ಮೃತಪಟ್ಟ ದುರ್ದೈವಿ. ಟ್ರಕ್ ಚಾಲಕರಾದ ಇವರು ಸರಕುಗಳನ್ನು ತಲುಪಿಸಲು ಕಾನ್‌ಪುರ ನಗರಕ್ಕೆ ತೆರಳಿದ್ದಾರೆ. ವಾಪಸ್ ಬರುವಾಗ ಅವರ ಮಗ ಮಹೇಶ್ ಎಂಬಾತ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಸುದ್ದಿ ಬಂದಿದೆ. ಸುದ್ದಿ ತಿಳಿದು ಕೂಡಲೇ ಅವರು ತಮ್ಮ ಊರು ಪಂಜಾಬ್‌ನ ಲೂಧಿಯಾನ ಸಮೀಪದ ಅಸ್ಲಾಮ್‌ಗಂಜ್‌ಗೆ ತೆರಳಲು ಮುಂದಾಗಿದ್ದಾರೆ. ಆದರೆ ಇದೇ ವೇಳೆ ಅವರನ್ನು ಟ್ರಕ್ ಸಮೇತ ತಡೆದ ರಾಜ್ಯ ಜಿಎಸ್‌ಟಿ ಅಧಿಕಾರಿಗಳು …

Read More »

ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:26.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ …

Read More »

ನಾಳೆ (ಜು.26) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

Read More »

ಉಡುಪಿ:ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ-ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ..!

ಉಡುಪಿ: ಕಾಲೇಜು ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಉಡುಪಿಯ ನೇತ್ರಕಾಲೇಜು ಆಡಳಿತ ಮಂಡಳಿ ಪತ್ರಿಕಾಗೋಷ್ಠಿ ನಡೆಸಿದ್ದು, ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ ಮತ್ತು ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಎಂದು ಮನವಿ ಮಾಡಿದೆ. ಆಡಳಿತ ಮಂಡಳಿಯ ರಶ್ಮೀ ಕೃಷ್ಣಪ್ರಸಾದ್ ಮಾಹಿತಿ ನೀಡಿದ್ದು ಮೂವರು ಒಂದೇ ಕ್ಲಾಸ್, ಇನ್ನೊಬ್ಬಳು ಹುಡುಗಿ ಬೇರೆ ಕ್ಲಾಸ್ ನವಳಾಗಿದ್ದು ಇಂತಹ ಘಟನೆ ನಡೆಯಬಾರದು ಎಂಬ ಕಾರಣಕ್ಕೆ ಮೊಬೈಲ್ ಬ್ಯಾನ್ ಮಾಡಿದ್ದೇವೆ ಮತ್ತು ನಮ್ಮ ಜವಾಬ್ದಾರಿ ಸುರಕ್ಷತೆ ಹಾಗಾಗಿ ನಿಯಮ ಮಾಡಿದ್ದೇವೆ. ಈ ಪ್ರಕರಣ …

Read More »

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ಬಣ ರಾಜಕೀಯಕ್ಕೆ ಕೆಪಿಸಿಸಿ ಬ್ರೇಕ್:ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸಿನ ಇಬ್ಬರು ನಾಯಕರಿಗೆ ಕೆಪಿಸಿಸಿ ಗೇಟ್ ಪಾಸ್

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ಬಣ ರಾಜಕೀಯದಲ್ಲಿ ಪಕ್ಷದ ಮರಿಯದೆಯನ್ನು ಪದೆ ಪದೆ ಬೀದಿ ಪಾಲು ಮಾಡುತ್ತಿರುವ ವಿಚಾರಗಳು ಕೆಪಿಸಿಸಿ ಕಚೇರಿಗೆ ತಲುಪುತ್ತಿದ್ದು. ಕಳೆದ ವಾರ ನಡೆದ ಕಾಂಗ್ರೆಸ್ ಪಕ್ಷದ ಗಲಾಟೆ ,ಗದ್ದಲ ವಿಚಾರ ಕೆಪಿಸಿಸಿಗೆ ನೇರವಾಗಿ ನೈಜ ವಿಚಾರಗಳು ತಲುಪಿತ್ತು. ಇದೀಗ ಗಂಭೀರವಾಗಿ ಚರ್ಚೆ ನಡೆಸಿ ಕೊನೆಗೂ ಕೆಪಿಸಿಸಿ ಅಸ್ತ್ರ ಪ್ರಯೋಗ ಮಾಡಿ ಇಬ್ಬರಿಗೆ ಗೇಟ್ ಪಾಸ್ ಮಾಡುವ ಮೂಲಕ ಬೆಳ್ತಂಗಡಿಯ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿ ಶಾಕ್ ನೀಡಿದೆ.ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ …

Read More »

‘CCB ಪೊಲೀಸ’ರಿಂದ ‘ಬೆಂಗಳೂರಿನ ಶಂಕಿತ ಉಗ್ರ’ರಿಗೆ ಗನ್ ಸಪ್ಲೈ ಮಾಡುತ್ತಿದ್ದ ಜಾಡು ಪತ್ತೆ

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ( CCB Police ) ಬಂಧಿಸಿದ್ದರು. ಈ ಬೆನ್ನಲ್ಲೇ ಶಂಕಿತ ಉಗ್ರರಿಗೆ ಗನ್ ಸಪ್ಲೈ ಮಾಡುತ್ತಿದ್ದ ಜಾಡನ್ನು ಕೂಡ ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನಲ್ಲಿ ಬಂಧಿಸಿದಂತ ಶಂಕಿತ ಐವರು ಉಗ್ರರನ್ನು ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆ ಮಾಡಿದಾಗ, ಜೂನ್ ಲ್ಲಿ ತುಮಕೂರು ರಸ್ತೆಯ ಟಿ.ಬೇಗೂರಿನಲ್ಲಿ ಗನ್ ಇದ್ದ ಬ್ಯಾಗ್ ಅನ್ನು ಶಂಕಿತ ಉಗ್ರ ರಬ್ಬಾನಿ ಪಡೆದಿದ್ದನು. ಆ ಬಗ್ಗೆ ಜೈಲಿನಲ್ಲಿ ಪರಿಚಯವಾಗಿದ್ದ ಪೋಕ್ಸೋ ಕೇಸ್ ಆರೋಪಿ ಬ್ಯಾಗ್ ತರ್ತಾನೆ ಎಂದು ಜುನೈದ್ …

Read More »

ಗಮನಿಸಿ: ಗೃಹಜ್ಯೋತಿ ನೋಂದಣಿಗೆ ಇಂದು ಕೊನೇ ದಿನ

ಬೆಂಗಳೂರು: ಸರಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಗ್ಯಾರಂಟಿಯಡಿ ಮೊದಲ ತಿಂಗಳು ಸುಮಾರು ಶೇ. 60ರಷ್ಟು ಗ್ರಾಹಕರು ಫ‌ಲಾನುಭವಿಗಳಾಗುವ ನಿರೀಕ್ಷೆ ಇದೆ. ಉಳಿದವರು ಈಗಲೂ ಕಾದುನೋಡುವ ತಂತ್ರ ಅನುಸರಿಸುತ್ತಿದ್ದಾರೆ. ವಿದ್ಯುತ್‌ ಸರಬರಾಜು ಕಂಪೆನಿ (ಎಸ್ಕಾಂ)ಗಳು ನೀಡಿದ ಮಾಹಿತಿ ಪ್ರಕಾರ, 1.92 ಕೋಟಿ ಗೃಹ ಬಳಕೆದಾರರಿದ್ದು, ಇದರಲ್ಲಿ ಶೇ. 90ಕ್ಕೂ ಅಧಿಕ ಜನ ಮಾಸಿಕ ಸರಾಸರಿ 200 ಯೂನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಕೆ ಮಾಡುವವರಾಗಿದ್ದಾರೆ. ಈ ಪೈಕಿ ಇದುವರೆಗೆ ಅಂದಾಜು 1.18ರಿಂದ 1.20 ಕೋಟಿ ಮಂದಿ ಸೇವಾಸಿಂಧು ಪೋರ್ಟಲ್‌ ಮೂಲಕ ನೋಂದಣಿ ಮಾಡಿಸಿಕೊಂಡಿದ್ದಾರೆ. ಉಳಿದವರು ಇನ್ನೂ ನೋಂದಣಿ ಮಾಡಿ ಕೊಂಡಿಲ್ಲ. …

Read More »

ನಾಳೆ (ಜು.25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

Read More »

You cannot copy content of this page.