ತಾಜಾ ಸುದ್ದಿ

ಸೌಜನ್ಯ ಪ್ರಕರಣ ಆಧರಿಸಿ ಸ್ಯಾಂಡಲ್ ವುಡ್ ನಲ್ಲಿ ಸಿದ್ಧಗೊಳ್ಳುತ್ತಿರುವ ಸಿನೆಮಾ

ಬೆಂಗಳೂರು : ನೈಜ ಘಟನೆ ಆಧರಿಸಿ ಅನೇಕ ಸಿನೆಮಾಗಳು ಮೂಡಿ ಬಂದಿದ್ದು, ಈ ಹಿನ್ನಲೆಯಲ್ಲಿ ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್ ವುಡ್‌ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೇ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಘಟನೆ ನಡೆದಿದ್ದು 2012ರಲ್ಲಿ. ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ ದಿನ ರಾತ್ರಿ ಮಿಸ್ಸಿಂಗ್ ಕೇಸ್ ಕೂಡ …

Read More »

ಡಿ.ಕೆ.ಶಿವಕುಮಾರ್ ಆಪ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್, ಕಳ್ಳತನ ಎಂಬ ಸುಳ್ಳು ದೂರು- ಪಾಂಬಾರು ಪ್ರದೀಪ್ ರೈ ವಿರುದ್ದ ದೂರು

ಪುತ್ತೂರು : ಕಾರು ಓವರ್‌ ಟೆಕ್‌ ಮಾಡುವ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮನಸ್ತಾಪ ಉಂಟಾಗಿ ಒಬ್ಬ ಕಾರು ಚಾಲಕ ಇನ್ನೊಬ್ಬ ಕಾರು ಚಾಲಕನಿಗೆ ಕಪಾಳಮೋಕ್ಷ ಮಾಡಿರುವುದಾಗಿ ಪುತ್ತೂರು ನಗರ ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಪುತ್ತೂರು ಹೊರ ವಲಯದ ನೆಹರು ನಗರ ಸಮೀಪದ ಕಲ್ಲೇಗ ಬಳಿಯ ಅಭಿಷೇಕ್ ಎಂಬವರು ದೂರು ನೀಡಿದವರು. ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪ್ರದೀಪ್‌ ರೈ ಪಾಂಬಾರು ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.  ಪ್ರದೀಪ್‌ ಹಾಗೂ ಅಭೀಷೇಕ್‌ ಚಲಾಯಿಸುತ್ತಿದ್ದ ಎರಡು ಪ್ರತ್ಯೇಕ  ಕಾರುಗಳು ಪುತ್ತೂರು ಕಡೆಯಿಂದ ಮುರ ಕಡೆಗೆ …

Read More »

ಮಂಗಳೂರು: ಗ್ರಾಮ ಪಂಚಾಯತ್‍ಗಳ ಚುನಾವಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಮಂಗಳೂರು: ಇದೇ ಜು.23 ರಂದು ಪುತ್ತೂರು ತಾಲೂಕಿನ ನಿಡ್ಪಳ್ಳಿ, ಆರ್ಯಪ್ಪು, ಬಂಟ್ವಾಳ ತಾಲೂಕಿನ ಪುದು ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್‍ಗಳ ಚುನಾವಣೆ /ಉಪಚುನಾವಣೆಗೆ ಮತದಾನ ನಡೆಯಲಿದೆ ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಪ್ರಕ್ರಿಯೆ ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಜು.21ರ ಸಂಜೆ 5 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ 3 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯಮುಕ್ತ ದಿನ ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಈ ದಿನಗಳಂದು ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮತ್ತು ಮದ್ಯ …

Read More »

ಶಕ್ತಿ ಯೋಜನೆಯಿಂದ ನಷ್ಟ- ಜುಲೈ 27ರಂದು ರಾಜ್ಯಾದ್ಯಂತ ಆಟೋ, ಕ್ಯಾಬ್, ಖಾಸಗಿ ಬಸ್ ಬಂದ್ ಗೆ ಕರೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಸಂಸ್ಥೆಗಳು ಸಿಡಿದೆದ್ದಿವೆ. ಮಹಿಳೆಯರಿಗೆ ಉಚಿತ ಪ್ರಯಾಣದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ. ಇದರಿಂದಾಗಿ ಜು.26ರ ಮಧ್ಯರಾತ್ರಿ 12 ರಿಂದ 27ರ ಮಧ್ಯರಾತ್ರಿಯ ವರೆಗೂ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್‌ಗಳು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ರಾಜ್ಯದ 23 ಸಾರಿಗೆ ಸಂಘಟನೆಗಳು ಬಂದ್‌ ಗೆ ಬೆಂಬಲ ವ್ಯಕ್ತಪಡಿಸಿವೆ. ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ …

Read More »

ಮಂಗಳೂರು: ಸಾಂಬಾರು ಚೆಲ್ಲಿದ ಕಾರಣಕ್ಕೆ ಸಹಪಾಠಿ ಎದೆಗೆ ಚಾಕು ಎಸೆದು ಕ್ರೌರ್ಯ ಮೆರೆದ ವಿದ್ಯಾರ್ಥಿ..!

ಮಂಗಳೂರು: ಮಧ್ಯಾಹ್ನದ ಊಟದ ವೇಳೆ ಬಟ್ಟೆಗೆ ಸಾಂಬಾರು ಚೆಲ್ಲಿದ ಎಂಬ ಕ್ಷುಲ್ಲಕ ಕಾರಣಕ್ಕೆ ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರ ನಡುವೆ ಗಲಾಟೆ ಶುರುವಾಗಿ ವಿದ್ಯಾರ್ಥಿಯೋರ್ವನ ಎದೆಗೆ ಮತ್ತೋರ್ವ ವಿದ್ಯಾರ್ಥಿ ಚಾಕು ಎಸೆದು ಕ್ರೌರ್ಯ ಮೆರೆದ ಘಟನೆ ನರಿಂಗಾನ ಗ್ರಾಮದ ಮೊಂಟೆಪದವು ಶಾಲೆಯಲ್ಲಿ ನಡೆದಿದೆ ಬಿಸಿಯೂಟದ ಸಂದರ್ಭ ವಿದ್ಯಾರ್ಥಿಯ ತಟ್ಟೆಯಿಂದ ಮತ್ತೋರ್ವ ವಿದ್ಯಾರ್ಥಿಯ ಬಟ್ಟೆಗೆ ಸಾಂಬಾರು ಚೆಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದಲ್ಲದೆ ಆತನ ನೋಟ್ ಪುಸ್ತಕವನ್ನ ಸಾಂಬಾರಿಗೆ ಹಾಕಿ ಅಲ್ಲಿಂದ ಮುಂದೆ ಹೋಗಿದ್ದಾನೆ. ಏಟು ತಿಂದ ವಿದ್ಯಾರ್ಥಿ …

Read More »

ಪೊಲೀಸ್ ವಾರ್ತೆ ಪತ್ರಿಕೆಯ ಸಂಪಾದಕನ ವಿರುದ್ಧ ಬ್ಲಾಕ್ ಮೇಲ್ ದೂರು ದಾಖಲು

ಶಿವಮೊಗ್ಗ: ಪತ್ರಕರ್ತನೋರ್ವನ ವಿರುದ್ಧ ಬ್ಲಾಕ್ ಮೇಲ್ ಪ್ರಕರಣದಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇತ್ತೀಚೆಗೆ ನಡೆದ ಸ್ಪಾ ಮತ್ತು ಬ್ಯೂಟಿ ಪಾರ್ಲರ್ ನ ಮೇಲಿನ ಪೊಲೀಸ್  ದಾಳಿಯ ವಿಚಾರದಲ್ಲಿ ಪತ್ರಕರ್ತನೋರ್ವನ ಕೈವಾಡವಿದೆ ಎಂಬ ವಿಷಯ ಹರಿದಾಡಿತ್ತು. ಆ ವಿಷಯಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯೋರ್ವರು ಪತ್ರಕರ್ತನೋರ್ವ  ಒಂದು ಲಕ್ಷ ರೂ ಹಣದ ಬೇಡಿಕೆ ಮತ್ತು ತಿಂಗಳಿಗೆ 30 ಸಾವಿರ ರೂ. ಹಣ ನೀಡುವಂತೆ ಒತ್ತಾಯಿಸಿದ್ದು ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಷ್ಮ ಗೌಡ ಎಂಬುವರು ಕಳೆದ ಎರಡು ವರ್ಷದಿಂದ …

Read More »

ಅಪಘಾತ ನೋಡಲು ಹೋದವರ ಮೇಲೆ ಹರಿದ ಕಾರು – ಪೊಲೀಸರು ಸೇರಿ 9 ಮಂದಿ ಮೃತ್ಯು

ಗುಜರಾತ್:‌ ಅಹಮದಾಬಾದ್‌ನ ಇಸ್ಕಾನ್ ಸೇತುವೆ ಬಳಿ ಕಾರು ಹರಿದು ಪೊಲೀಸ್‌ ಸಿಬ್ಬಂದಿಗಳು ಸೇರಿದಂತೆ 9 ಮಂದಿ ಮೃತಪಟ್ಟಿರುವ ಘಟನೆ ಜು.20 ರಂದು ನಡೆದಿದೆ. ಸರ್ಖೇಜ್-ಗಾಂಧಿನಗರ (ಎಸ್‌ಜಿ) ಹೆದ್ದಾರಿಯಲ್ಲಿನ ಇಸ್ಕಾನ್ ಸೇತುವೆ ಬಳಿ ಥಾರ್ ಮತ್ತು ಡಂಪರ್ ಟ್ರಕ್‌ ನಡುವೆ ತಡರಾತ್ರಿ 1:30 ರ ಹೊತ್ತಿಗೆ ಅಪಘಾತವೊಂದು ಸಂಭವಿಸಿತ್ತು. ಈ ಅಪಘಾತವನ್ನು ನೋಡಲು ಪೊಲೀಸರು ಹತ್ತಾರು ಮಂದಿ ಸೇರಿದ್ದು, ಇದೇ ವೇಳೆ ಮತ್ತೊಂದು ಭೀಕರ ಘಟನೆ ನಡೆದಿದೆ. ಇನ್ನು ವೇಗವಾಗಿ ಬಂದ ಜಾಗ್ವಾರ್‌ ಕಾರು ಅಪಘಾತದ ಸ್ಥಳದಲ್ಲಿ ನೆರದಿದ್ದ ಜನರ ಮೇಲೆ ಏಕಾಏಕಿ ಹರಿದಿದ್ದು, ಘಟನೆಯಲ್ಲಿ …

Read More »

ಉಡುಪಿ: ನಿಷೇದಿತ ಪ್ಲಾಸ್ಟಿಕ್‌ ಮಾರಾಟ – ಸಾವಿರಾರು ರೂ.ದಂಡ ವಸೂಲಿ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯ ಸಂತೆಕಟ್ಟೆಯಲ್ಲಿ ನಿಷೇದಿತ ಪ್ಲಾಸ್ಟಿಕ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ ನಡೆಸಿ 52 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಂಡು, 18,000 ರೂ. ದಂಡ ವಿಧಿಸಲಾಯಿತು. ಹಾಗೂ ಉದ್ದಿಮೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ಉಪಯೋಗಿಸದ ಉದ್ದಿಮೆಯನ್ನು ಹಸಿರು ಸಂಸ್ಥೆ ಎಂದು ಘೋಷಿಸಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನಿಟರಿ ಸೂಪರ್ ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್ ಗಳನ್ನು ಉಪಯೋಗಿಸುತ್ತಿರುವುದು ಕಂಡುಬಂದಲ್ಲಿ ಉದ್ದಿಮೆ ಪರವಾನಿಗೆ ಯನ್ನು …

Read More »

‘ಗೃಹಲಕ್ಷ್ಮಿ’ ಯೋಜನೆ: ಇಂದಿನಿಂದ ನೋಂದಣಿ ಶುರು, ಆ.16ರಂದು ನಿಮ್ಮ ಖಾತೆಗೆ ‘2000 ಹಣ’ ಜಮಾ

ಬೆಂಗಳೂರು: ಇಂದಿನಿಂದ ಗೃಹ ಲಕ್ಷ್ಮಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳಲ್ಲಿ ಕುಟುಂಬದ ಯಜಮಾನಿ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೀಗೆ ಅರ್ಜಿ ಸಲ್ಲಿಸಿದಂತ ರಾಜ್ಯದ ಪ್ರತಿ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಆಗಸ್ಟ್ 16ರಂದು ಗೃಹ ಲಕ್ಷ್ಮಿ ಯೋಜನೆಯಡಿ 2000 ರೂ ನಿಮ್ಮ ಖಾತೆಗೆ ಜಮಾ ಆಗಲಿದೆ.   ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಧಾನಸೌಧದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದರು. ಈ …

Read More »

ವಿಧಾನಸಭೆಯಲ್ಲಿ ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದ 10 ಬಿಜೆಪಿ ಸದಸ್ಯರ ಅಮಾನತು

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಬಿಜೆಪಿಯ ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಮತ್ತು ಭರತ್ ಶೆಟ್ಟಿ ಅವರನ್ನು ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಮಾಡಿದ್ದಾರೆ. ಈ 10 ಸದಸ್ಯರನ್ನು ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ …

Read More »

You cannot copy content of this page.