ತಾಜಾ ಸುದ್ದಿ

ಪ್ರವೀಣ್ ನೆಟ್ಟಾರ್ ಹಂತಕರಿಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದ NIA

ಸುಳ್ಯ: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರುಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎನ್ನುವ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಮತ್ತೊಮ್ಮೆ ಎನ್‌ಐಎ ಹೊರಡಿಸಿದೆ. ಇದು ತಲೆಮರೆಸಿಕೊಂಡಿರುವ ಹಂತಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದೆ. ಈ ಎಚ್ಚರಿಕೆಗೂ ಬಗ್ಗದಿದ್ದರೆ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಆ ಎಚ್ಚರಿಕೆಯ ಸಂದೇಶದಲ್ಲೂ ಶರಣಾಗದೆ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಅನ್ನುವ ಮಾಹಿತಿ ಸಿಕ್ಕಿದೆ. ಆಗಸ್ಟ್‌ 18ರೊಳಗೆ ಶರಣಾಗಲೇಬೇಕು ಎಂದು ಸೂಚಿಸಿದೆ. ಈ ಹಿಂದೆ ಜೂ.30ರೊಳಗೆ ಶರಣಾಗಬೇಕು. ಇಲ್ಲದೇ ಹೋದಲ್ಲಿ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್‌ಐಎ ಅಧಿಕಾರಿಗಳು …

Read More »

ಕೊನೆಗೂ ‘ವಿಪಕ್ಷ ನಾಯಕ’ನ ಹೆಸರು ಘೋಷಣೆಗೆ ಮುಹೂರ್ತ ಫಿಕ್ಸ್

ಹುಬ್ಬಳ್ಳಿ : ರಾಜ್ಯ ಬಿಜೆಪಿಯಲ್ಲಿ ( BJP Karnataka ) ಪ್ರತಿಪಕ್ಷದ ನಾಯಕರಿಲ್ಲದೇ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲಾಗುತ್ತಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಆಡಳಿತ ಪಕ್ಷ ಕಾಂಗ್ರೆಸ್ ನಾಯಕರು ( Congress Leaders ) ವಾಗ್ಧಾಳಿ ಕೂಡ ನಡೆಸುತ್ತಿದ್ದಾರೆ. ಈ ನಡುವೆ ಕೊನೆಗೂ ವಿಪಕ್ಷ ನಾಯಕನ ಹೆಸರು ಪ್ರಕಟಿಸೋದಕ್ಕೆ ಬಿಜೆಪಿಯಿಂದ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ( Farmer CM Basavaraj Bommai ) ಅವರು, ಪ್ರಧಾನಿ ನರೇಂದ್ರ ಮೋದಿ ( PM Narendra Modi …

Read More »

ಬ್ರಹ್ಮಾವರ: ಬೈಕ್ ನಿಂದ ಬಿದ್ದು ಮಹಿಳೆ ಸಾವು

ಬ್ರಹ್ಮಾವರ: ಬೈಕ್ ನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಸಾವನಪ್ಪಿರುವ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ನಿನ್ನೆ ನಡೆದಿದೆ. ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ ಪಿ.(59) ಎಂದು ಗುರುತಿಸಲಾಗಿದೆ. ಕಾಲೇಜು ಬಿಟ್ಟ ನಂತರ ಇವರು ಕಾಲೇಜಿನ ಲ್ಯಾಬ್ ಟೆಕ್ನಿಷಿಯನ್ ಸುಧೀಂದ್ರ ಎಂಬವರ ಬೈಕಿ ನಲ್ಲಿ ಬ್ರಹ್ಮಾವರದವರೆಗೆ ಹೊರಟಿದ್ದರು. ದಾರಿ ಮಧ್ಯೆ ಇವರು ಬೈಕಿನಿಂದ ಆಯತಪ್ಪಿ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ …

Read More »

ಸ್ನೇಹಿತ ಜೊತೆಗೆ ಮಲಗು ಅಂದ ಗಂಡ-ಪತ್ನಿಯಿಂದ ದೂರು

ನವದೆಹಲಿ: ಪಾರ್ಟಿ ಸಮಯದಲ್ಲಿ ನನ್ನ ಗಂಡ ತನ್ನ ಸ್ನೇಹಿತನೊಂದಿಗೆ ದೈಹಿಕ ಸಂಬಂಧವನ್ನು ಸ್ಥಾಪಿಸುವಂತೆ ಕೇಳಿಕೊಂಡಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿ, ಆತನ ಸ್ನೇಹಿತ ಮತ್ತು ಸೇರಿದಂತೆ ಒಂಬತ್ತು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.   ಮಧ್ಯಪ್ರದೇಶದ ಗ್ವಾಲಿಯರ್ ಮೂಲದ ಮಹಿಳೆ ಮುರಾದಾಬಾದ್ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದಳು. ನೋಯ್ಡಾದ ಸೆಕ್ಟರ್ 137ರಲ್ಲಿ ಅತ್ತೆ-ಮಾವಂದಿರೊಂದಿಗೆ ವಾಸಿಸುತ್ತಿದ್ದರು. ಜೂನ್ 23ರಂದು ದೂರು ದಾಖಲಿಸಲು ಅವಳು ಪೊಲೀಸರನ್ನು ಸಂಪರ್ಕಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಮದುವೆಯಾದಾಗಿನಿಂದಲೂ, ತನ್ನ ಅತ್ತೆ ಮಾವಂದಿರು ಹೆಚ್ಚು ಆಧುನಿಕ ಜೀವನಶೈಲಿಗೆ …

Read More »

ಕಾರ್ಕಳ: ಆತ್ಮಹತ್ಯೆಗೆ ಶರಣಾದ ನಗರ ಠಾಣೆ ಪೊಲೀಸ್ ಸಿಬ್ಬಂದಿ

ಕಾರ್ಕಳ: ನಗರ ಠಾಣೆಯ ಪೊಲೀಸ್ ಸಿಬಂದಿಯೊಬ್ಬರು ಇಲ್ಲಿನ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುರಿತು ವರದಿಯಾಗಿದೆ. ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬಂದಿ ಎಚ್ ಸಿ ಪ್ರಶಾಂತ್ ಕಾರ್ಕಳದ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಪ್ರಶಾಂತ್ ಅವರು ರಜೆಯಲ್ಲಿದ್ದರು. ಮನೆಯ ಹಿಂಬಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Read More »

ಬೆಕ್ಕಿನ ಮರಿ ಅಂದುಕೊಂಡು ಚಿರತೆ ಮರಿಗಳನ್ನು ಮನೆಗೆ ಕರೆತಂದ ಮಕ್ಕಳು, ಬಳಿಕ ಏನಾಯ್ತು ಗೊತ್ತಾ..?

ನವದೆಹಲಿ : ಮಕ್ಕಳು ತಮ್ಮ ಪೋಷಕರೊಂದಿಗೆ ದನ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಗದ್ದೆಯಲ್ಲಿದ್ದ ಎರಡು ಚಿರತೆ ಮರಿಗಳನ್ನು ಬೆಕ್ಕಿನ ಮರಿ ಎಂದು ಮನೆಗೆ ತೆಗೆದುಕೊಂಡು ಬಂದ ಙಟನೆ ದೆಹಲಿಯ ಗುರಗ್ರಾಮದಲ್ಲಿ ನಡೆದಿದೆ. ಗುರುಗ್ರಾಮ್‌ನಿಂದ 56 ಕಿಲೋಮೀಟರ್ ದೂರದಲ್ಲಿರುವ ನುಹ್‌ನ ಕೋಟ್ಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ತಮ್ಮ ಪಾಲಕರೊಂದಿಗೆ ದನ ಮೇಯಿಸಲು ಹೋಗಿದ್ದು, ಸಣ್ಣ ಮರಿಗಳನ್ನು ಆಟವಾಡುತ್ತಿರುವುದನ್ನು ಕಂಡು ಬೆಕ್ಕಿನ ಮರಿಗಳು ಎಂದು ಮನೆಗೆ ಕರೆತಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಗುರುವಾರ ರಾತ್ರಿ ಮಕ್ಕಳು ಚಿರತೆ ಮರಿಗಳೊಂದಿಗೆ ಮನೆಯಲ್ಲಿ ಆಟವಾಡುತ್ತಿರುವುದು ಕಂಡುಬಂದಿದೆ, ಅವರು …

Read More »

ಲಂಚ ಪಡೆಯುವಾಗ ಸಿಕ್ಕಿಬಿದ್ದ ಫುಡ್ ಇನ್ಸ್ಪೆಕ್ಟರ್: 15 ಕಿ.ಮೀ ಚೇಸ್​ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು

ಬೆಂಗಳೂರು: ನಗರದ ತಹಶೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಹಾರ ನಿರೀಕ್ಷಕ ಮಹಾಂತೇಗೌಡ ಬಿ ಕಡಬಾಳು ಎನ್ನುವವರು, ರಂಗದಾಮಯ್ಯ ಎಂಬುವರ ಬಳಿ ಟ್ರೇಡ್ ಲೈಸೆನ್ಸ್ ಚೆಕ್ ಮಾಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಮುಂಗಡ ಹಣ 43ಸಾವಿರ ನಗದನ್ನ ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ತನ್ನ ಮೇಲೆ ಲೋಕಾಯುಕ್ತರು ದಾಳಿ ಮಾಡಿದ್ದಾರೆಂದ ಕೂಡಲೇ ತಮ್ಮ ಕಾರಿನಲ್ಲಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ. 15 ಕಿ.ಮೀ ಚೇಸ್​ ಮಾಡಿ ಹಿಡಿದ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಆರೋಪಿ ಫುಡ್ ಇನ್ಸ್ಪೆಕ್ಟರ್​ ಕಾರು ಹತ್ತಿ …

Read More »

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ : ಖಾತೆಗೆ 2 ಸಾವಿರ ಹಣ ಜಮಾ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕುತ್ತೇವೆ . ಅರ್ಜಿ ಸ್ವೀಕಾರ ಜುಲೈ 19 ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ …

Read More »

ಬೆಳ್ತಂಗಡಿ: ಅಂತ್ಯ ಸಂಸ್ಕಾರಕ್ಕೆ ಜಾಗದ ಕೊರತೆ-ಪಂಚಾಯತ್ ಎದುರು ಶವವಿಟ್ಟು ಪ್ರತಿಭಟನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವಾರು ಗ್ರಾಮ ಸಭೆಗಳಲ್ಲಿ ಬೇಡಿಕೆ ಇಟ್ಟರೂ ಯಾರು ಕೂಡ ಗ್ರಾಮಸ್ಥರ ಮನವಿಗೆ ಸ್ಪಂದನೆ ಸಿಗುತ್ತಿಲ್ಲ ಎಂದು ನೆರಿಯದಲ್ಲಿ ಪ್ರತಿಭಟನೆ ನಡೆಸಿದರು. ಜು.14 ರಂದು ಜನತಾ ಕಾಲನಿ ನಿವಾಸಿಯೊಬ್ಬರು ಮೃತಪಟ್ಟಿದ್ದು ಅವರ ಮೃತದೇಹವನ್ನು ಪಂಚಾಯತ್ ಎದುರು ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಅವರ …

Read More »

ಉಡುಪಿ: ಜಿಲ್ಲಾಧಿಕಾರಿ ಕೂರ್ಮಾರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

ಉಡುಪಿ : ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 1 ವರ್ಷ 10 ತಿಂಗಳ ಕಾಲ ಕಾರ್ಯನಿರ್ವಹಿಸಿದ್ದು ಅತ್ಯುತ್ತಮ ರೀತಿಯ ಮರೆಯಲಾಗದ ಅನುಭವ ನೀಡಿದೆ, ಜಿಲ್ಲೆಯ ಅಭಿವೃದ್ದಿಗಾಗಿ ಮುಂದಿನ ದಿನದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ತನ್ನಿಂದ ಅಗತ್ಯವಿರುವ ಸಹಕಾರ ನೀಡಲಾಗುವುದು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಉಡುಪಿ ಜಿಲ್ಲೆಯನ್ನು ರಾಜ್ಯದಲ್ಲೇ ಸದಾ ಮಾದರಿ ಜಿಲ್ಲೆಯನ್ನಾಗಿ ಮಾಡುವ ತುಡಿತ ಜಿಲ್ಲೆಯ ಸಾರ್ವಜನಿಕರು ಮತ್ತು ನೌಕರರ ವಲಯದಲ್ಲಿದೆ ಈ ಸ್ಪೂರ್ತಿ ಸದಾ ಕಾಲ …

Read More »

You cannot copy content of this page.