ತಾಜಾ ಸುದ್ದಿ

ಉಡುಪಿ: ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ಒಂದು ಭಾಗ ಕುಸಿತ, ಆತಂಕದಲ್ಲಿ ಸ್ಥಳೀಯರು

ಉಡುಪಿ: ಉಡುಪಿಯ ಸಂತೆಕಟ್ಟೆ ಬಳಿ ಕಾಮಗಾರಿ ಹಂತದಲ್ಲಿರುವ ಓವರ್ ಪಾಸ್ ಕಾಮಗಾರಿಯ ಬೃಹತ್ ಹೊಂಡದ ಒಂದು ಭಾಗ ಕುಸಿದಿದ್ದು, ಸ್ಥಳೀಯರಲ್ಲಿ ಆತಂಕ‌ ಸೃಷ್ಟಿಯಾಗಿದೆ. ಮಳೆಗಾಲಕ್ಕೂ ಮುನ್ನ ಓವರ್ ಪಾಸ್ ಕಾಮಗಾರಿ ಪ್ರಾರಂಭಿಸಲಾಗಿತ್ತು. ಅದಕ್ಕಾಗಿ ಬೃಹತ್ ಹೊಂಡ ತೋಡಲಾಗಿತ್ತು. ಹೊಂಡದಲ್ಲಿ ಭಾರೀ ಪ್ರಮಾಣದ ಬಂಡೆ ಕಲ್ಲು ಕಂಡುಬಂದ ಕಾರಣ ಕಾಮಗಾರಿ ಬಹುತೇಕ ನಿಧಾನಗೊಂಡಿತ್ತು. ಬಳಿಕ ಭಾರೀ ಮಳೆಗೆ ಟಾರ್ಪಲ್ ಅಳವಡಿಕೆ ಮಾಡಲಾಗಿತ್ತು. ಆದರೆ ಇಂದು ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿಯುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.

Read More »

ಬರಲಿದೆ ಕೇಸರಿ ಬಣ್ಣದ ವಂದೇ ಭಾರತ್ ರೈಲು

ಚೆನ್ನೈ: ಈಗಾಗಲೇ ಬಿಳಿ ಮತ್ತು ನೀಲಿ ಬಣ್ಣದ ವಂದೇ ಭಾರತ್ ಹೈಸ್ಪೀಡ್ ರೈಲುಗಳು ದೇಶದ ಹಲವೆಡೆ ಸಂಚರಿಸುತ್ತಿವೆ. ಬರುವ ದಿನಗಳಲ್ಲಿ ಕೇಸರಿ ಬಣ್ಣದ ವಂದೇ ಭಾರತ್ ರೈಲು ಓಡಾಡಲಿದೆ. ಇದು ವಂದೇ ಭಾರತ್ ಎಕ್ಸ್‌ಪ್ರೆಸ್ ಹೈ ಸ್ಪೀಡ್ ರೈಲಿನ 28ನೇ ಆವೃತ್ತಿಯಾಗಿದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಕೇಸರಿ ವರ್ಣದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇನ್ನೂ ಕಾರ್ಯಾಚರಣೆಗೆ ಇಳಿದಿಲ್ಲ. ಅದು ಪ್ರಸ್ತುತ ವಂದೇ ಭಾರತ್ ರೈಲುಗಳು ತಯಾರಾಗುವ ತಮಿಳುನಾಡಿನ ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ (ಐಸಿಎಫ್) ಸಿದ್ಧವಾಗಿ ನಿಂತಿದೆ. ಇದುವರೆಗಿನ ರೈಲುಗಳು …

Read More »

ಟೊಮೆಟೋ ಕಾಯಲು ಅಂಗಡಿ ಬಳಿ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ತರಕಾರಿ ವ್ಯಾಪಾರಿ

ಟೊಮ್ಯಾಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾತ್ರೋರಾತ್ರಿ ಟೊಮ್ಯಾಟೊ ಕದ್ದೊಯ್ಯುತ್ತಿದ್ದಾರೆ. ಹೀಗಾಗಿ ತರಕಾರಿ ವ್ಯಾಪಾರಿ ಟೊಮೆಟೋ ಕಾಯಲು ಇಬ್ಬರು ಬೌನ್ಸರ್ ಗಳನ್ನು ನೇಮಿಸಿ ಸುದ್ದಿಯಾಗಿದ್ದಾನೆ. ಈ ಕುರಿತ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಉತ್ತರ ಪ್ರದೇಶದ ವಾರಣಸಿಯ ತರಕಾರಿ ವ್ಯಾಪಾರಿ ಅಜಯ್ ಫೌಜಿ ಟೊಮ್ಯಾಟೊ ಕಾಯಲು ಇಬ್ಬರು ಬೌನ್ಸರ್ ನೇಮಿಸಿದ್ದಾರೆ. ಟೊಮ್ಯಾಟೊ ಬೆಲೆ ಗಗನಕ್ಕೇರಿದೆ.ಹಲವೆಡೆ ಟೊಮ್ಯಾಟೊ ಕಳ್ಳತನ ನಡೆದಿವೆ.ಹೀಗಾಗಿ ಈ ಸಮಸ್ಯೆ ಇಲ್ಲಿ ಆಗಬಾರದು ಎಂದು ಇಬ್ಬರು ಬೌನ್ಸರ್ ನೇಮಕ ಮಾಡಿದ್ದೇನೆ ಎಂದು ಅಜಯ್ ಫೌಜಿ ಹೇಳಿದ್ದಾರೆ. ಟೊಮ್ಯಾಟೊ ಪಕ್ಕದಲ್ಲೇ ನಿಂತುಕೊಂಡಿರುವ …

Read More »

ಜೈನಮುನಿ ಹತ್ಯೆ ಖಂಡಿಸಿ ಇಂದು ವಿಧಾನಸಭೆಯಲ್ಲಿ BJP ಹೋರಾಟ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಸೋಮವಾರದ ಇಂದು ವಿಧಾನಸಭೆಯ ಒಳಗೆ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸ್ವಾಮೀಜಿಯ ಅಮಾನವೀಯ ಕೊಲೆ ಖಂಡಿಸಿ ಅನ್ನ ನೀರು ಬಿಟ್ಟು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹುಬ್ಬಳ್ಳಿಯ ವರೂರು ಶ್ರೀಕ್ಷೇತ್ರದ ಶ್ರೀ ಗುಣಧರ ನಂದಿ ಮಹಾರಾಜರಿಗೆ ದೂರವಾಣಿ ಮೂಲಕ ಮಾತನಾಡಿ ಈ ಘಟನೆಯನ್ನು ಉಗ್ರವಾಗಿ ಖಂಡಿಸಿರುವುದಾಗಿ ತಿಳಿಸಿದ್ದಾರೆ.   ಅಲ್ಲದೇ ಈ ಬಗ್ಗೆ ಉನ್ನತ ಮಟ್ಟಡ ತನಿಖೆ ನಡೆಸುವಂತೆ ಸರ್ಕಾರಕ್ಕೆ …

Read More »

ಇನ್ನೆರಡು ವರ್ಷದಲ್ಲಿ ಕಾಂಗ್ರೆಸ್ ಇಬ್ಬಾಗ, ಬಿಜೆಪಿ-ಜೆಡಿಎಸ್ ಮೈತ್ರಿ ಸರಕಾರ ಅಧಿಕಾರಕ್ಕೆ- ಖ್ಯಾತ ಜ್ಯೋತಿಷಿ ಭವಿಷ್ಯ

ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ 5 ಗ್ಯಾರಂಟಿಗಳ ಭರವಸೆಯ ಆಧಾರದಲ್ಲಿ ಚುನಾವಣಾ ಎದುರಿಸಿದ್ದ ಕಾಂಗ್ರೆಸ್ 135 ಕ್ಷೇತ್ರಗಳನ್ನು ಗೆದ್ದುಕೊಂಡು ಸರಕಾರ ರಚನೆ ಮಾಡಿದೆ. ಇದೀಗ ಕರ್ನಾಟಕದ ರಾಜಕೀಯ ಭವಿಷ್ಯದ ಕುರಿತು ಖ್ಯಾತ ಜ್ಯೋತಿಷಿ ಅನಿರುದ್ ಮಿಶ್ರ ಭವಿಷ್ಯ ನುಡಿದಿದ್ದಾರೆ. ಅನಿರುದ್ ಮಿಶ್ರ ಹಿಂದೆ 2017ರಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಬಗ್ಗೆ ಭವಿಷ್ಯ ನುಡಿದಿದ್ದು, ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಇನ್ನೂ ಎರಡು ವರ್ಷ ಮೂರು ತಿಂಗಳಲ್ಲಿ ಪ್ರಾರಂಭವಾಗಲಿದೆ ಎಂದಿದ್ದರು. ಅದರಂತೆ 2019 ರ ನವಂಬರ್ 9 ರಂದು ಸುಪ್ರೀಂ ಕೋರ್ಟ್ ನಿಂದ ಮಹತ್ವದ ತೀರ್ಪು ದೊರೆತಿದ್ದು, …

Read More »

ಬೆಳ್ತಂಗಡಿ: ಸ್ಕೂಟರ್ ಗೆ ಪಿಕಪ್ ಡಿಕ್ಕಿ ಓರ್ವ ಸಾವು-ಮಹಿಳೆ ಗಂಭೀರ

ಬೆಳ್ತಂಗಡಿ: ಪಿಕಪ್ ವಾಹನವೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ಇಂದು ಅಪರಾಹ್ನ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

Read More »

ಕಾರ್ಕಳ: ಮರ ಬಿದ್ದು ಮೃತಪಟ್ಟ ಪ್ರವೀಣ್ ಕುಟುಂಬಕ್ಕೆ ಪರಿಹಾರ ವಿತರಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಕಾರ್ಕಳ:  ಪಡುಬಿದ್ರೆ- ಕಾರ್ಕಳ ನಡುವೆ ಹಾಗೂ ಹೋಗಿರುವ ರಾಜ್ಯ ಹೆದ್ದಾರಿ 1ರ ಬೆಳ್ಮಣ್ ಪೇಟೆಯಲ್ಲಿ ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿದ ಪರಿಣಾಮ ಬೈಕ್ ಸವಾರ ಪಿಲಾರು ನಿವಾಸಿ ಪ್ರವೀಣ್(30) ಮೃತಪಟ್ಟಿದ್ದು, ಅವರ ಮನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆಯವರಿಗೆ ಪರಿಹಾರ ವಿತರಿಸಿದರು. ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಸಮುದ್ರ ಕೊರೆತದ ಪ್ರದೇಶ ವೀಕ್ಷಿಸಿ ಮಾತನಾಡಿದ ಅವರು ಮಳೆಯಿಂದ ಜೀವ ಹಾನಿ, ಮನೆ ಹಾನಿ,  ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಕೂರ್ಮಾರಾವ್ …

Read More »

ಜೈನಮುನಿಯ ಹತ್ಯೆ ಪ್ರಕರಣ: ಕಾನೂನು ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು,  ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ.ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು ತನಿಖೆ ಚುರುಕುಗೊಳಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಆರೋಪಿ ಕಾನೂನಿನಿಂದ …

Read More »

ಬಂಟ್ವಾಳ: ಓಮ್ನಿ ಮತ್ತು ಸ್ವಿಫ್ಟ್ ಕಾರು ನಡುವೆ ಅಪಘಾತ -ಮಕ್ಕಳು ಸಹಿತ ಹಲವರಿಗೆ ಗಂಭೀರ ಗಾಯ

ಬಂಟ್ವಾಳ: ಒಮ್ನಿ ವಾಹನವೊಂದಕ್ಕೆ ಹಿಂಬದಿಯಿಂದ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿಯಾಗಿ ಒಮ್ನಿ ಕಾರು ಪಲ್ಟಿಯಾಗಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಬೆಳಿಗ್ಗೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ನಡೆದಿದೆ. ಒಮ್ನಿ ಕಾರು ಚಾಲಕ ರಾಯಿಸನ್ ಹಾಗೂ ಜೊತೆಯಲ್ಲಿ ಮಕ್ಕಳು ಸಹಿತ ಮೂರು ಜನ ಹಾಗೂ ಸ್ವಿಫ್ಟ್ ಕಾರು ಚಾಲಕ ಆದಿಲ್ ಎಂಬವರಿಗೂ ಗಾಯವಾಗಿದೆ. ಎರಡು ಕಾರುಗಳು ವಗ್ಗದಿಂದ ಬರುತ್ತಿದ್ದು, ಪರ್ಲ ಚರ್ಚ್ ಬಳಿಗೆ ಬರುತ್ತಿದ್ದಂತೆ ಒಮ್ನಿ ಕಾರು ಚರ್ಚ್ ಗೆ ಹೋಗುವ ಉದ್ದೇಶದಿಂದ ಕಾರನ್ನು …

Read More »

ಮಂಗಳೂರು : ಯುವಕನ ಬರ್ಬರ ಕೊಲೆ – ಆರೋಪಿ ತೌಸಿಫ್ ಬಂಧನ..!

ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ. ಜಗ್ಗು (35) ಕೊಲೆಯಾದ ಯುವಕನಾಗಿದ್ದು ಆರೋಪಿ ತೌಸಿಫ್ ಹುಸೈನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ಬೆಳಗ್ಗೆ ತನ್ನ ಸ್ಟೋರಿನಲ್ಲಿ ಕೆಲಸಕ್ಕಿದ್ದ ಜಗ್ಗುವನ್ನು ಕ್ಷುಲ್ಲಕ ಕಾರಣಕ್ಕೆ ಆತನನ್ನು ಕೊಲೆ ಮಾಡುವ ಉದ್ದೇಶದಿಂದ ಬೆಂಕಿ ಕೊಟ್ಟು ಸುಟ್ಟು ನಂತರ ಸಾಕ್ಷಿ ನಾಶ ಮಾಡುವ ಹಾಗೂ ಪ್ರಕರಣದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಅಪರಾಹ್ನ 1.30 ರ ಸುಮಾರಿಗೆ ಅಂಗಡಿಯ ಸುತ್ತಮುತ್ತಲಿನ ಸಾರ್ವಜನಿಕರಿಗೆ ವಿದ್ಯುತ್ ಸ್ಪರ್ಶವಾಗಿರುವುದಾಗಿ ತೌಸಿಫ್ ಹೇಳಿದ್ದಾನೆ. ಕೂಡಲೇ ಸ್ಥಳೀಯರು …

Read More »

You cannot copy content of this page.