ತಾಜಾ ಸುದ್ದಿ

ಧರ್ಮಸ್ಥಳ ಸಂಘದಲ್ಲಿ ಸಾಲ ಮಾಡಿದವರಿಗೆ ಸಿಹಿ ಸುದ್ದಿ.! ಶೀಘ್ರದಲ್ಲೇ ಸಾಲ ಮನ್ನ ಮಹತ್ವದ ಸುಳಿವು!

ಕರ್ನಾಟಕದ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಧರ್ಮಸ್ಥಳ ಕ್ಷೇತ್ರವೂ ಕೂಡ ಒಂದು. ನಾಡಿನಾದ್ಯಂತ ಅಪಾರ ಸಂಖ್ಯೆಯಲ್ಲಿ ಧರ್ಮಸ್ಥಳ ಮಂಜುನಾಥನ ಭಕ್ತಾದಿಗಳು ಇದ್ದಾರೆ. ಆ ಕಾರಣಕ್ಕಾಗಿ ಧರ್ಮಸ್ಥಳ ಕ್ಷೇತ್ರದ ಖ್ಯಾತಿಯು ನಾಡಿನ ಹೊರಗೆ ಕೂಡ ಪಸರಿಸುತ್ತಿದೆ. ದರ್ಮಸ್ಥಳ ಕ್ಷೇತ್ರವು ಭಕ್ತಿ ಪ್ರಧಾನ ಕೇಂದ್ರ ಈ ವಿಚಾರವಾಗಿ ಹಾಗೂ ಅಲ್ಲಿನ ಆಚಾರ ವಿಚಾರ ಪದ್ಧತಿಗಳಿಂದ ಕೂಡ ಸುದ್ದಿಯಾಗಿದೆ. ಇದರ ಜೊತೆಗೆ ಧರ್ಮಸ್ಥಳ ಟ್ರಸ್ಟ್ ನಡೆಸುವ ಜನಸ್ನೇಹಿ ಕೆಲಸಗಳಿಂದ ಕೂಡ ಧರ್ಮಸ್ಥಳ ಕ್ಷೇತ್ರದ ಹೆಸರು ದೇಶದಾದ್ಯಂತ ಪಸರಿಸುತ್ತಿದೆ. ಧರ್ಮಸ್ಥಳ ಟ್ರಸ್ಟ್ ವತಿದಿಂದ ನಾಡಿನ ಅನೇಕ ಸ್ಥಳಗಳಲ್ಲಿ ರೂಟ್ ಝಡ್ ಎನ್ನುವ ತರಬೇತಿ …

Read More »

ಶಿಕ್ಷೆ ತಡೆ ಕೋರಿ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

ನವದೆಹಲಿ:ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದರಿಂದ ರಾಹುಲ್ ಗಾಂಧಿಗೆ ಭಾರಿ ಹಿನ್ನಡೆಯಾಗಿದೆ. ‘ಮೋದಿ ಉಪನಾಮ(Modi surname)’ ಹೇಳಿಕೆಗೆ ಸಂಬಂಧಿಸಿದಂತೆ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನ ಗುಜರಾತ್ ಹೈಕೋರ್ಟ್ ಆಲಿಸಿತ್ತು.   ರಾಹುಲ್ ಗಾಂಧಿ ವಿರುದ್ಧ ಕನಿಷ್ಠ 8 ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳು ಬಾಕಿ ಉಳಿದಿವೆ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವು ಯಾವುದೇ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಮಾನನಷ್ಟ ಮೊಕದ್ದಮೆಯಲ್ಲಿ ಎರಡು …

Read More »

ಉಡುಪಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಉಡುಪಿ: ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಇಂದು ಸಂಜೆ ಉಡುಪಿಗೆ ಭೇಟಿ ನೀಡಲಿರುವ ಸಚಿವರು, ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದರು. ಮೂರು ದಿನಗಳಲ್ಲಿ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಈ ವರೆಗೆ ಒಟ್ಟು …

Read More »

ಕಾರ್ಕಳ: ಬೃಹತ್ ಗಾತ್ರದ ಮರ ಬಿದ್ದು ಬೈಕ್ ಸವಾರ ಮೃತ್ಯು

ಉಡುಪಿ: ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಹಲವು ಗಂಟೆಗಳ ಕಾಲ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ ಮಾಡಿದರು. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿದ್ದಾರೆ

Read More »

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ(ಜುಲೈ 7) ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕೆಳಕಂಡ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಹಾಗೂ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 7ರಂದು ರಜೆ ಸಾರಲಾಗಿದೆ. ಗ್ರಾಮೀಣ ಪ್ರದೇಶಗಳಿಂದ ಬರುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗಲು ಅನಾನುಕೂಲವಾಗು ಸಂದರ್ಭದಲ್ಲಿ …

Read More »

ಬಂಟ್ವಾಳ: ಕಾರು ಅಪಘಾತ – ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಧರೆಗೆ ಗುದ್ದಿ ಪಲ್ಟಿಯಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು  ರಾಷ್ಟ್ರೀಯ ಹೆದ್ದಾರಿ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಪುತ್ತೂರು ಕೂರ್ನಡ್ಕ ನಿವಾಸಿ ಇಬ್ರಾಹಿಂ ರವರ ಪುತ್ರಿ ಖತೀಜಹನ (20 ವ.) ಮೃತಪಟ್ಟ ವಿದ್ಯಾರ್ಥಿನಿ. ಕಾರಿನಲ್ಲಿದ್ದ ಖತೀಜಹನರ ತಾಯಿ ಸಮೀಮ ಮತ್ತು ಚಾಲಕ ಶಾನ್ ಯಾವುದೇ ಅಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಖತೀಜಹನ ಅವರು ತಾಯಿ ಸಮೀಮಾ ಅವರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಅಲರ್ಜಿ ರೋಗಕ್ಕೆ ಚಿಕಿತ್ಸೆ ಪಡೆಯುವ ಹಿನ್ನೆಲೆಯಲ್ಲಿ ವೈದ್ಯರನ್ನು ಬೇಟಿ ಮಾಡಲು ಕಾರಿನಲ್ಲಿ ಪುತ್ತೂರಿನಿಂದ …

Read More »

ಮೂಡುಬಿದಿರೆಯಲ್ಲಿ ವರುಣನಾರ್ಭಟ – ಮನೆಗಳು ಜಲಾವೃತ ,ಓರ್ವ ಮೃತ್ಯು..!

ಮೂಡುಬಿದಿರೆ: ಜೈನ ಕಾಶಿ ಮೂಡುಬಿದಿರೆಯಲ್ಲೂ ವರ್ಷಧಾರೆಯಾಗುತ್ತಿದ್ದು ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಬೈಲಾರೆಯಲ್ಲಿ‌‌ ಮೂರು ಮನೆಗಳು ಜಲಾವೃತಗೊಂಡಿದೆ. ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗ್ಗೆ ಸುರಿದ‌ ಬಾರಿ ಮಳೆಗೆ ಪೇಟೆಯ ಸಮೀಪವಿರುವ ಬೈಲಾರೆಯ ಮೂರು ಮನೆಗಳಿಗೆ ನೀರು ನುಗ್ಗಿದೆ. ಕಲ್ಯಾಣಿ ಪೂಜಾರ್ತಿ, ಲಲಿತಾ ಪೂಜಾರ್ತಿ ಹಾಗೂ ಉದಯ ಎಂಬವರ ಮನೆಗಳಿಗೆ ನೀರು ನುಗ್ಗಿದ್ದು ಅಪಾರ ಹಾನಿ ಸಂಭವಿಸಿದೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಂಟ್ರಾಡಿಯ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಕೆರೆಗೆ ಬಿದ್ದು, ಮೃತಪಟ್ಟಿದ್ದಾರೆ. ನೆಲ್ಲಿಕಾರು ಗ್ರಾಮ ಪಂಚಾಯಿತಿ ಕಚೇರಿ ಬಳಿಯ ನಿವಾಸಿ …

Read More »

ಮಂಗಳೂರು: ಅಪಾಯಕಾರಿ ಹೋರ್ಡಿಂಗ್, ಫ್ಲೆಕ್ಸ್ ತಕ್ಷಣ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು, ಅಲ್ಲಲ್ಲಿ ವಿಕೋಪಗಳು ಸಂಭವಿಸುತ್ತಿದೆ. ಆದ್ದರಿಂದ ಅಪಾಯಕಾರಿ ಹೋರ್ಡಿಂಗ್, ಫ್ಲೆಕ್ಸ್ ಗಳನ್ನು ತಕ್ಷಣ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚನೆ ನೀಡಿದ್ದಾರೆ. ಮಂಗಳೂರಿನಲ್ಲಿ ನಿನ್ನೆ ಸುರಿದ ಗಾಳಿ ಮಳೆಗೆ ಬಿಕರ್ನಕಟ್ಟೆಗೆ ಹೋರ್ಡಿಂಗ್ ಬಿದ್ದು ಹಲವಾರು ದ್ವಿಚಕ್ರ ವಾಹನಗಳು ಜಖಂಗೊಂಡಿತ್ತು. ಅಲ್ಲದೆ ತಲಪಾಡಿಯ ಶಾರದಾ ವಿದ್ಯಾಲಯದ ಮೇಲ್ಛಾವಣಿ ಆರು ಅಂತಸ್ತಿನ ಮೇಲ್ಗಡೆಯಿಂದ ಕೆಳಗೆ ಹಾರಿಬಿದ್ದಿದೆ. ಆದರೆ ಯಾವು ಜೀವ ಹಾನಿ ಸಂಭವಿಸಿಲ್ಲ. ಇದೇ ರೀತಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ದೃಷ್ಟಿಯಿಂದ ಜಿಲ್ಲೆಯ ರಸ್ತೆ ಬದಿಗಳಲ್ಲಿ ಅಳವಡಿಸಿರುವ ಅಪಾಯಕಾರಿ ಫ್ಲೆಕ್ಸ್, ಹೋರ್ಡಿಂಗ್ …

Read More »

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಇನ್ಮುಂದೆ ಮೂರನೇ ಶನಿವಾರ ‘ಬ್ಯಾಗ್‌ ರಹಿತ’ ದಿನವಾಗಿ ಆಚರಣೆ

ಬೆಂಗಳೂರು: ಈಗಾಗಲೇ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಯಾಗ್ ತೂಕದ ಮಿತಿಯನ್ನು ನಿಗದಿ ಪಡಿಸಲಾಗಿತ್ತು. ಈ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ತಿಂಗಳ 3ನೇ ಶನಿವಾರವನ್ನು ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ ಕಾರ್ಯಕ್ರಮವಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.   ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿತ್ತು, 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರವನ್ನು ಶಾಲಾ ಹಂತದಲ್ಲಿ ಚಟುವಟಿಕೆ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಇನ್ನೂ ಮಕ್ಕಳಿಗೆ …

Read More »

ಉಡುಪಿ: ಕರಾವಳಿಯಲ್ಲಿ ರಣ ಭೀಕರ ಮಳೆ; ತಗ್ಗು ಪ್ರದೇಶದ ಮನೆಗಳು ಜಲಾವೃತ, ಹಲವರ ಸ್ಥಳಾಂತರ

ಉಡುಪಿ: ಕರಾವಳಿಯಾದ್ಯಂತ ಮಂಗಳವಾರ ,ಬುಧವಾರ ಮತ್ತು ಗುರುವಾರ ಸುರಿದ ಭಾರೀ ಮಳೆಗೆ ಹಲವು ಮನೆಗಳು ಜಲಾವೃತಗೊಂಡಿವೆ. ರಾತ್ರಿಯಿಡೀ ಮಳೆಯಾದ ಕಾರಣ ಉಡುಪಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವು ಮನೆಗಳಿಗೆ ನೀರು ನುಗ್ಗಿವೆ.ಬೈಲಕೆರೆ ,ಕಲ್ಸಂಕ ,ಬನ್ನಂಜೆ ಮುಂತಾದೆಡೆಗಳಲ್ಲಿ ಜನರಿಗೆ ಮನೆಗಳಿಂಸ ಹೊರಬರಲೂ ಆಗುತ್ತಿಲ್ಲ. ಇಂದು ಬೆಳಿಗ್ಗಿನಿಂದಲೇ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮನೆಗಳಲ್ಲಿ ಬಂಧಿಯಾಗಿದ್ದ ಹಲವರನ್ನು ದೋಣಿ ಮೂಲಕ ಅಗ್ನಿಶಾಮಕ‌ ಸಿಬ್ಬಂದಿ ಸ್ಥಳಾಂತರ ಮಾಡಿದರು. ಮಳೆ ಸಂಬಂಧಿ ದುರ್ಘಟನೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಿನ್ನೆತನಕ ಇಬ್ಬರು ಸಾವನ್ನಪ್ಪಿದ್ದಾರೆ.

Read More »

You cannot copy content of this page.