ತಾಜಾ ಸುದ್ದಿ

ಮೃ‍ತಪಟ್ಟ ಅನಾಥ ಸನ್ಯಾಸಿ ಮನೆಯಲ್ಲಿ ಬರೊಬ್ಬರಿ 30 ಲಕ್ಷ ನಗದು ಪತ್ತೆ..!

ಚಿತ್ರದುರ್ಗ: ಕಳೆದ ವಾರ ಮೃ‍ತಪಟ್ಟಿದ್ದ ಸನ್ಯಾಸಿಯೋರ್ವರ ಮನೆಯಲ್ಲಿ ಬರೊಬ್ಬರಿ 30 ಲಕ್ಷ ನಗದು ಪತ್ತೆಯಾಗಿದೆ. ಗಂಗಾಧರಯ್ಯ ಶಾಸ್ತ್ರಿ ಅವರ ಮನೆಯಲ್ಲಿ ಬರೋಬ್ಬರಿ 30 ಲಕ್ಷ ನಗದು ಪತ್ತೆಯಾಗಿದೆ. 10, 20, 50, 100, 200, 500 ಮುಖಬೆಲೆಯ ನೋಟುಗಳು ಮನೆಯಲ್ಲಿ ದೊರೆತಿವೆ.ಒಂದು, ಎರಡು, ಐದು ರೂಪಾಯಿ ಮುಖಬೆಲೆಯ ನಾಣ್ಯಗಳ ಮೌಲ್ಯವೇ ಸುಮಾರು 46,000 ರಷ್ಟಿತ್ತು. ಮನೆಯಲ್ಲಿ ತೆಂಗಿನಕಾಯಿ ರಾಶಿಯ ಕೆಳಗೆ ನೋಟು ತುಂಬಿದ ಹಲವು ಚೀಲಗಳು ಪತ್ತೆಯಾಗಿವೆ. ಮನೆಯ ಅಟ್ಟದ ಮೇಲೆ ಹಣ ತುಂಬಿದ ಕೊಡವೊಂದು ಸಿಕ್ಕಿದೆ ಎನ್ನಲಾಗಿದೆ. ಗಂಗಾಧರಯ್ಯ ಅವರು ಪಟ್ಟಣದ ಮದಕರಿ …

Read More »

ಮೇಕ್ ಇನ್ ಇಂಡಿಯಾದಿಂದ ಭಾರತ ಅಭಿವೃದ್ಧಿ – ಮೋದಿಯನ್ನು ನಾವು ಅನುಸರಿಸಬೇಕು ರಷ್ಯಾ ಅಧ್ಯಕ್ಷ ಪುಟಿನ್

ಪ್ರಧಾನಿ ಮೋದಿ ‘ಮೇಕ್ ಇನ್ ಇಂಡಿಯಾ’ ಭಾರತದ ಆರ್ಥಿಕತೆಯ ಮೇಲೆ ಪ್ರಭಾವಶಾಲಿ ಪರಿಣಾಮ ಬೀರಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ಮೋದಿಯನ್ನು ಶ್ಲಾಘಿಸಿದ್ದಾರೆ. ಮೋದಿ ಅವರ ‘ಮೇಕ್ ಇನ್ ಇಂಡಿಯಾ’ ಉಪಕ್ರಮವು ಭಾರತದ ಆರ್ಥಿಕತೆಯ ಮೇಲೆ ನಿಜವಾಗಿಯೂ ಪ್ರಭಾವಶಾಲಿ ಪರಿಣಾಮವನ್ನು ಬೀರಿದೆ ಎಂದು ಹೇಳಿದ್ದಾರೆ. ಮಾಸ್ಕೋದಲ್ಲಿ ರಷ್ಯಾದ ಏಜೆನ್ಸಿ ಫಾರ್ ಸ್ಟ್ರಾಟೆಜಿಕ್ ಇನಿಶಿಯೇಟಿವ್ಸ್ ಆಯೋಜಿಸಿದ್ದ ವೇದಿಕೆಯಲ್ಲಿ ಪುಟಿನ್ ಮಾತನಾಡಿ, ಸ್ಥಳೀಯವಾಗಿ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಲು, ತಯಾರಿಸಲು ಮತ್ತು ಜೋಡಿಸಲು ಕಂಪನಿಗಳನ್ನು ಪ್ರೋತ್ಸಾಹಿಸುವ ದೇಶಕ್ಕೆ ಭಾರತವನ್ನು ಉದಾಹರಣೆಯಾಗಿ …

Read More »

‘ಗೃಹ ಲಕ್ಷ್ಮೀ’ಯರಿಗೆ ಗುಡ್ ನ್ಯೂಸ್: ಜುಲೈ.3ರಂದು ನೊಂದಣಿಗೆ ದಿನಾಂಕ ಪ್ರಕಟ

ಬೆಂಗಳೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಸರ್ಕಾರದಿಂದ 2000 ರೂ ಪ್ರತಿ ತಿಂಗಳು ನೀಡುವಂತ ಗೃಹ ಲಕ್ಷ್ಮಿ ಯೋಜನೆ ( Gruha Lakshmi Scheme ) ಘೋಷಣೆ ಮಾಡಿತ್ತು. ಈ ಯೋಜನೆಗೆ ಮಹಿಳೆಯರು ನೋಂದಾಯಿಸಿಕೊಳ್ಳಲು ಜುಲೈ.3ರಂದು ಅಧಿಕೃತ ದಿನಾಂಕ ಪ್ರಕಟವಾಗಲಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ನೋಂದಣಿ ಪ್ರಕ್ರಿಗೆ ಜುಲೈ.14ರಿಂದ ಚಾಲನೆ ನೀಡಲು ತಾತ್ಕಾಲಿಕ ಚರ್ಚೆಯಾಗಿದ್ದು, ಜುಲೈ.3ರಂದು ಅಧಿಕೃತ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದ್ದಾರೆ.   ಜುಲೈ.3ರಿಂದ ನೋಂದಣಿ …

Read More »

ಮಹಿಳೆಯರಿಗೆ ಮತ್ತೊಂದು ಗುಡ್‌ ನ್ಯೂಸ್: ಧರ್ಮಸ್ಥಳದ ಸಂಘ ಸೇರಿ ಸ್ತ್ರೀ ಶಕ್ತಿ ಸಂಘದಲ್ಲಿ ಸಾಲ ಮಾಡಿದವರ ಸಾಲ ಮನ್ನಾ

ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಘೋಷಿಸಿದೆ. ಅವುಗಳಲ್ಲಿ ಒಂದು ಈಗಾಗಲೇ ಜಾರಿಗೆ ಬಂದಿದೆ. ಇನ್ನೊಂದು, ಗೃಹಲಕ್ಷ್ಮೀ ಯೋಜನೆಗಳ ಜೊತೆಗೆ ಇನ್ನೊಂದು ಗ್ಯಾರಂಟಿ ನೀಡಿದ್ದಾರೆ. ತಮ್ಮ ಚುನಾವಣಾ ಪ್ರಚಾರದ ಸಮಯದಲ್ಲಿ ಸಿದ್ದರಾಮಯ್ಯನವರು ಮಹಿಳೆಯರ ಶ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಈಗ ಮಹಿಳಾ ಸಂಘಟನೆಗಳು ಈ ವಿಷಯವನ್ನು ಗಟ್ಟಿಯಾಗಿ ಹಿಡಿದುಕೊಂಡಿವೆ. ನಿನ್ನೆ ಕೂಡ ಸಿದ್ದರಾಮಯ್ಯನವರ ನಿವಾಸ ಎದುರು ಕೋಲಾರ ಮತ್ತು ಚಿಕ್ಕಬಳ್ಳಾಪುರದ ಮಹಿಳಾ ಸಂಘ ಸಂಸ್ಥೆಗಳು ಸಾಲ ಮನ್ನಾ ಮಾಡುವಂತೆ ಪ್ರತಿಭಟನೆ ನಡೆಸಿದ್ದವು.ಬುಧವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಸ್ತ್ರೀಶಕ್ತಿ …

Read More »

ಇನ್ ಸ್ಟಾಗ್ರಾಂನಲ್ಲಿ ಪರಿಚಯದ ಅನೀಶ್ ರೆಹಮಾನ್- ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ..!

ಮಂಗಳೂರು: ದಿನಾಂಕ 26-06-2023 ರಂದು 24 ವರ್ಷ ಪ್ರಾಯದ ಸಂತ್ರಸ್ಥೆ ಮಹಿಳೆಯು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಬಂದು ನೀಡಿದ ಲಿಖಿತ ಪಿರ್ಯಾದಿಯಲ್ಲಿ ತನಗೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನು ಇನ್ ಸ್ಟಾಗ್ರಾಂ ಮುಖಾಂತರ ಪರಿಚಯವಾಗಿ ಬಳಿಕ ಪರಸ್ಪರ ಪ್ರೀತಿಸುತ್ತಿದ್ದು, ಆರೋಪಿತನು ಸಂತ್ರಸ್ತ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಮಂಗಳೂರಿನ ಪೂಂಜಾ ಇಂಟರ್ ನ್ಯಾಷನಲ್ ಹೊಟೇಲ್ ಗೆ ಕರೆದುಕೊಂಡು ಹೋಗಿ ರೂಮ್ ಪಡೆದುಕೊಂಡು ದಿನಾಂಕ 28-05-2023 ರಿಂದ ಸುಮಾರು 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಪರ್ಕ ನಡೆಸಿದ್ದು, ನಂತರ ಪಿರ್ಯಾದಿದಾರರಾದ ಸಂತ್ರಸ್ಥೆ ಮಹಿಳೆಗೆ …

Read More »

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ಬಕ್ರಿದ್ ಹಬ್ಬ ಆಚರಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್ ಹಬ್ಬ)ವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು ಬ್ರಹ್ಮಾವರ ಕುಂದಾಪುರ ಬೈಂದೂರ್ ಹೆಬ್ರಿ ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಂ ಬಾಂಧವರು ಬೆಳಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಮುಸ್ಲಿಮ್ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ …

Read More »

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ. ಈ ಮೂರು ಜಿಲ್ಲೆಗಳಿಗೆ ಗುರುವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರುವ ಸಾಧ್ಯತೆಯಿದೆ. ಕರಾವಳಿಯಲ್ಲಿ 40-45 ಕಿ.ಮೀ.ಯಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ …

Read More »

ಮುಂಬೈನಲ್ಲಿ ಭಾರಿ ಮಳೆ, ಮರ ಬಿದ್ದು ಇಬ್ಬರು ಸಾವು

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದ ಉಪನಗರ ರೈಲು ಸೇವೆ ವಿಳಂಬವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಬೃಹನ್ ಮುಂಬೈ ಮಹಾನಗರ ಪಾಲಿಕೆ(BMC)ಯ ವರದಿಯ ಪ್ರಕಾರ, ಉತ್ತರ ಮುಂಬೈನ ಕೆಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 8 ರಿಂದ ಸಂಜೆ 6ರ ನಡುವೆ 100 ಮಿಮೀ ಗಿಂತ ಹೆಚ್ಚು ಮಳೆಯಾಗಿದೆ. ಪಕ್ಕದ …

Read More »

ಆಪರೇಷನ್ ಥಿಯೇಟರ್​ನಲ್ಲೂ ಹಿಜಾಬ್ ಧರಿಸಲು ಅನುಮತಿ ಕೋರಿದ ವೈದ್ಯಕೀಯ ವಿದ್ಯಾರ್ಥಿನಿಗಳು.!

ತಿರುವನಂತಪುರಂ: ಆಪರೇಷನ್ ಥಿಯೇಟರ್‌ನಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕೆಂದು ತಿರುವನಂತಪುರದ ಸರ್ಕಾರಿ ಮೆಡಿಕಲ್ ಕಾಲೇಜಿನ 7 ಜನ ವಿದ್ಯಾರ್ಥಿನಿಯರು ಜೂನ್‌ 26ರಂದು ಪ್ರಾಂಶುಪಾಲೆಗೆ ಪತ್ರ ಬರೆದಿದ್ದಾರೆ. ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಮುಸ್ಲಿಂ ಮಹಿಳೆಯರು ತಲೆ ಮುಚ್ಚಿಕೊಳ್ಳುವುದು ಕಡ್ಡಾಯ. ಆಸ್ಪತ್ರೆ ನಿಯಮಗಳ ಪ್ರಕಾರ ಆಪರೇಷನ್ ಥಿಯೇಟರ್‌ನಲ್ಲಿ ಸೂಚನೆಗಳನ್ನು ಅನುಸರಿಸಿ, ಹಿಜಾಬ್ ಧರಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಹೀಗಾಗಿ ಉದ್ದನೆಯ ತೋಳಿನ ಸ್ಕ್ರಬ್ ಜಾಕೆಟ್ ಹಾಗೂ ಸರ್ಜಿಕಲ್ ಹುಡ್​​ ಧರಿಸಲು ಅವಕಾಶ ಮಾಡಿಕೊಡಬೇಕು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಈ ಸಂಬಂಧ 2020ನೇ ಬ್ಯಾಚ್‌ನ ಮೆಡಿಕಲ್ ವಿದ್ಯಾರ್ಥಿನಿ ಪತ್ರ …

Read More »

ಉಡುಪಿ: ಕಾಣಿಕೆ ಡಬ್ಬಿ ಕಳವು- ಕಳ್ಳರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಯುವಕರು

ಉಡುಪಿ: ಕಟಪಾಡಿ- ಶಿರ್ವ ಮುಖ್ಯರಸ್ತೆಯ ಪಂಜಿಮಾರು ಫಲ್ಕೆ ಶ್ರೀ ವ್ಯಾಘ್ರ ಚಾಮುಂಡಿ ಸನ್ನಿಧಾನದ ಕಾಣಿಕೆ ಡಬ್ಬಿ ಕಳವು ಮಾಡಿದ ಇಬ್ಬರು ಯುವಕರನ್ನು ಪಂಜಿಮಾರಿನ ಯುವಕರ ತಂಡ ಹಿಡಿದು ಶಿರ್ವ ಪೊಲೀಸರಿಗೊಪ್ಪಿಸಿದ ಘಟನೆ ಜೂ. 28 ರಂದು ಬೆಳಿಗ್ಗೆ ನಡೆದಿದೆ. ಅಪರಿಚಿತ ಯುವಕರಿಬ್ಬರು ಕಾಣಿಕೆ ಡಬ್ಬಿಯನ್ನು ಕಳವು ಮಾಡಿ ಸಮೀಪದ ಕಾಡಿನಲ್ಲಿ ಡಬ್ಬಿ ಒಡೆಯಲು ಪ್ರಯತ್ನಿಸಿದ್ದರು. ಶಬ್ದ ಕೇಳಿದ ಪರಿಸರದ ನಾಗರಿಕರು ಪಂಜಿಮಾರಿನ ಯುವಕರಿಗೆ ಮಾಹಿತಿ ನೀಡಿದ್ದರು.ಯುವಕರ ತಂಡ ಬಂದೊಡನೆ ಓರ್ವ ಬಸ್ಸಿನಲ್ಲಿ ಪರಾರಿಯಾಗಿದ್ದು, ಬೆನ್ನಟ್ಟಿದ ಯುವಕರು ಆತನನ್ನು ಬಂಟಕಲ್ಲಿನಲ್ಲಿ ಇಳಿಸಿ ಕರೆತಂದಿದ್ದಾರೆ. ಮತ್ತೋರ್ವ ಕಾಡಿನಲ್ಲಿ …

Read More »

You cannot copy content of this page.