ತಾಜಾ ಸುದ್ದಿ

ಹೊಸ ಮನೆ, ಹೊಸ ಬಾಡಿಗೆದಾರರಿಗೆ 58 ಯುನಿಟ್ ಉಚಿತ ವಿದ್ಯುತ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಹೊಸ ಬಾಡಿಗೆದಾರರು ಮತ್ತು ಹೊಸ ಮನೆ ಕಟ್ಟಿದವರಿಗೂ ಮಾಸಿಕ 53 ಯುನಿಟ್ ಜೊತೆಗೆ 10% ಉಚಿತ ವಿದ್ಯುತ್ ಸಿಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಬಾಡಿಗೆದಾರರು, ಹೊಸ ಮನೆ ನಿರ್ಮಿಸಿದವರಿಗೆ ಸರಾಸರಿ 53 ಯುನಿಟ್ ಜೊತೆಗೆ ಹೆಚ್ಚುವರಿಯಾಗಿ ಶೇ. 10% ರಷ್ಟು ಯುನಿಟ್ ಬಳಕೆಯ ಮಿತಿಯನ್ನು ವಿಧಿಸಲು ನಿರ್ಧರಿಸಲಾಗಿದೆ.ಒಂದು ವರ್ಷದವರೆಗೆ ಲೆಕ್ಕ ಸಿಗದವರಿಗೆ ಇದು ಅನ್ವಯವಾಗಲಿದೆ. 12 ತಿಂಗಳ ಬಳಿಕ ಸರಾಸರಿ ತೆಗೆದುಕೊಂಡು ಹೊಸ ಸರಾಸರಿ …

Read More »

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ, ಇಬ್ಬರ ಬಂಧನ

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಕೊಣಾಜೆ ಬಳಿ ನಡೆದಿದೆ. ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯದ್ದೀನ್ (41),ದೇರಳಕಟ್ಟೆಯ ಆರೀಫ್ (40) ಬಂಧಿತರು. ಕೊಣಾಜೆ ಪೊಲೀಸರಿಗೆ ಇವರು ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಸಿಕ್ಕಿದೆ.ಅದರಂತೆ ಕೊಣಾಜೆ ಪಿಎಸ್ ಐ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಬಂಧಿತರಿಂದ 20 ಗ್ರಾಂ ಮೆಥಾಂಪೆಟಾಮೈನ್ ಹಾಗೂ ಒಂದು ಸ್ಕೂಟರ್ ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಪಡಿಸಿದ …

Read More »

ಉಳ್ಳಾಲದಲ್ಲಿ ತೀವ್ರಗೊಂಡ ಕಡಲ್ಕೊರೆತ : ಉಚ್ಚಿಲ ಬೆಟ್ಟಂಪಾಡಿಯಲ್ಲಿ ತೀರದ ಮನೆ, ಮರ-ಮಟ್ಟುಗಳು ಸಮುದ್ರಗಾಹುತಿ..!

ಉಳ್ಳಾಲ : ಕಳೆದೆರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಸಮುದ್ರವು ಬಿರುಸುಗೊಂಡಿದ್ದು ಉಳ್ಳಾಲದ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದ ಅಲೆಗಳ ಆರ್ಭಟ ಕೂಡ ಜೋರಾಗಿದ್ದು ದಡಕ್ಕೆ ಅಪ್ಪಳಿಸುತ್ತಿದೆ. ಉಳ್ಳಾಲದ ತೀರದ ಪ್ರದೇಶಗಳಾದ ಕೈಕೋ, ಸೀಗ್ರೌಂಡ್, ಮೊಗವೀರಪಟ್ಣ, ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದ ಅಲೆಗಳು ದಡಕ್ಕಪ್ಪಳಿಸುತ್ತಿದೆ. ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಾತ್ಕಾಲಿಕ ಕಾಮಗಾರಿ ನಡೆಯುತ್ತಿದ್ದರೂ ಸಮುದ್ರದ ಸಮುದ್ರದ ಅಲೆಗಳು ತೀರದ ಮನೆಗಳಿಗೆ ಅಪ್ಪಳಿಸುತ್ತಿದ್ದು ತೀರದ ಪ್ರದೇಶದ ಮರ ಗಿಡಗಳು, ಅನೇಕ ಮನೆಗಳು, ರಸ್ತೆ ಸಮುದ್ರ ಪಾಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ …

Read More »

ಚಿತ್ರದುರ್ಗ: ಕಾರು-ಲಾರಿ ನಡುವೆ ಭೀಕರ ಅಪಘಾತ- ಮೂರು ತಿಂಗಳ ಶಿಶು‌ ಸೇರಿ ಬೆಂಗಳೂರಿನ ಮೂವರ ಸಾವು

ಚಿತ್ರದುರ್ಗ: ತಾಲ್ಲೂಕಿನ ವಿಜಯಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂರು ತಿಂಗಳ ಶಿಶು ಸೇರಿ ಮೂವರು ಮೃತಪಟ್ಟಿದ್ದಾರೆ. ಬೆಂಗಳೂರಿನ ಎಚ್.ಎಸ್.ಆರ್ ಬಡಾವಣೆ ನಿವಾಸಿಗಳಾದ ಜಾಕೀರ್ ಅಹಮ್ಮದ್ (60), ತಬಸೂಮ್ (28) ಹಾಗೂ ಮೂರು ತಿಂಗಳ ಹಯಾತ್ ಫಾತಿಮಾ ಮೃತಪಟ್ಟವರು. ನಯಾಜ್ (22), ಇಮ್ರಾನ್ ಖಾನ್ (32), ತಬ್ರೀಜ್ ಅಹಮ್ಮದ್ (27), ಸಬಾ (26) ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಲಾರಿಗೆ ಅಪ್ಪಳಿಸಿದೆ. …

Read More »

ಲವ್ ಜಿಹಾದ್ ಯತ್ನ: ಮುಸ್ಲಿಂ ಯುವಕನಿಂದ ರಕ್ಷಣೆ ಕೋರಿ ಪೊಲೀಸ್ ಮೊರೆ ಹೋದ ಹಿಂದೂ ಯುವತಿ..!

ಬೆಂಗಳೂರು: ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರು ನಗರದಲ್ಲಿ ಲವ್ ಜಿಹಾದ್​ಗೆ  ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಮೋಸದ ಬಗ್ಗೆ ತಿಳಿದು ದೂರವಾದ ಯುವತಿ ಮತ್ತು ಕುಟುಂಬವನ್ನು ಮುಗಿಸುವ ಬೆದರಿಕೆ ಹಾಕಿದ ಮತಾಂಧನೊಂದಿಗೆ ಆಕೆಯನ್ನು ಕೆಲಸದಿಂದ ತೆಗೆದು ಆಕೆ ಕೆಲಸ ಮಾಡುತ್ತಿದ್ದ ಕಂಪನಿಯೇ ಕೈಜೋಡಿಸಿದೆ. ಸದ್ಯ ಕಿರಾತಕನಿಂದ ರಕ್ಷಣೆ ಕೋರಿ ಹಿಂದೂ ಯುವತಿ ಠಾಣೆಗೆ ಮೆಟ್ಟಿಲೇರಿದ್ದಾಳೆ. ಅಷ್ಟಕ್ಕೂ ಯುವಕನ ಲವ್ ಜಿಹಾದ್ ಯತ್ನ ಹೇಗಿತ್ತು? ಕಂಪನಿ ಮಾಡಿದ್ದೇನು? ಇಲ್ಲಿದೆ ನೋಡಿ.. ಲವ್ …

Read More »

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಸರ್ಕಾರದಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸುವ ಉದ್ದೇಶದಿಂದ, ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವ ಕುರಿತಂತೆ ಸರ್ಕಾರ ಗಮನ ಸೆಳೆಯಲಾಗುವುದು ಮತ್ತು ಸಾರಿಗೆ ಸಚಿವರೊಂದಿಗೆ ಚಿರ್ಚಿಸಿ, ಮುಖ್ಯ ಮಂತ್ರಿಗಳ ಗಮನಕ್ಕೆ ಶೀಘ್ರದಲ್ಲಿ  ಪ್ರಯತ್ನಿಸುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. …

Read More »

ʻನಮಗೆ ಶೌಚಾಲಯದ ನೀರು ಕುಡಿಯಲು ಒತ್ತಾಯಿಸುತ್ತಿದ್ರುʼ; ನೈಜೀರಿಯಾ ಸೆರೆಯಿಂದ ಬಿಡುಗಡೆಯಾದ ನಾವಿಕರಿಂದ ಆಘಾತಕಾರಿ ಮಾಹಿತಿ

ಕೊಚ್ಚಿ: 10 ತಿಂಗಳ ನಂತರ ನೈಜೀರಿಯಾದ ಸೆರೆಯಿಂದ ಬಿಡುಗಡೆಯಾಗಿ ಜೂನ್ 10 ರಂದು ಮನೆಗೆ ಬಂದ ಮೂವರು ಕೇರಳದ ನಾವಿಕರು, ʻನಮಗೆ ಸೆರೆಯಲ್ಲಿ ಶೌಚಾಲಯದ ನೀರನ್ನು ಕುಡಿಯಲು ಒತ್ತಾಯಿಸುತ್ತಿದ್ದರುʼ ಎಂದು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.   ಹಡಗಿನ ಮುಖ್ಯ ಅಧಿಕಾರಿಯಾಗಿದ್ದ ಕೊಚ್ಚಿಯ ಸಾನು ಜೋಸೆಫ್, ಕೊಲ್ಲಂನ ಹಡಗಿನ ಮೂರನೇ ಅಧಿಕಾರಿ ವಿ ವಿಜಿತ್ ಮತ್ತು ಕೊಚ್ಚಿಯ ಮುಳವುಕಾಡ್‌ನಿಂದ ಹಡಗಿನ ಆಯಿಲರ್ ಮಿಲ್ಟನ್ ಡಿ’ಕೌತ್ ಅವರೊಂದಿಗೆ ವೀರ್ ಇಧುನ್ ಶನಿವಾರ ಮನೆಗೆ ತಲುಪಿದ್ದಾರೆ. ಹಡಗನ್ನು ಅದರ ಸಿಬ್ಬಂದಿಯೊಂದಿಗೆ ಮೊದಲು ಈಕ್ವಟೋರಿಯಲ್ ಗಿನಿಯು ತನ್ನ ಪ್ರಾದೇಶಿಕ ನೀರನ್ನು …

Read More »

ರಾಂಪ್ ವಾಕ್ ಮಾಡುವಾಗ ಕಬ್ಬಿಣದ ಕಂಬ ಬಿದ್ದು 24 ವರ್ಷದ ಮಾಡೆಲ್ ಸ್ಥಳದಲ್ಲೇ ಸಾವು

ನೋಯ್ಡಾ: ನೊಯ್ಡಾದಲ್ಲಿ ಫ್ಯಾಶನ್ ರನ್‌ವೇಯಲ್ಲಿ ರಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಮಾಡೆಲ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ವಂಶಿಕಾ ಚೋಪ್ರಾ ಎಂದು ಗುರುತಿಸಲಾಗಿದೆ. ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಈ ಅಪಘಾತ ಸಂಭವಿಸಿದೆ. ವೇದಿಕೆ ಮೇಲೆ ಲೈಟ್ಸ್‌ಗಾಗಿ ಅಳವಡಿಸಲಾಗಿದ್ದ ಕಬ್ಬಿಣದ ಕಂಬವನ್ನು ಅಳವಡಿಸಲಾಗಿತ್ತು. ರಾಂಪ್ ವಾಕ್ ವೇಳೆ ಕಬ್ಬಿಣದ ಕಂಬ ಬಿದ್ದು ಮಾಡೆಲ್ ತಕ್ಷಣವೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಾಬಿ ರಾಜ್ ಎಂಬ ವ್ಯಕ್ತಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ಹೆಬ್ರಿ: ಬಸ್ ಮತ್ತು ಕಾರು ನಡುವೆ ಅಪಘಾತ – ಉಡುಪಿಯ ಇಬ್ಬರು ಶಿಕ್ಷಕರು ಮೃತ್ಯು, ಮತ್ತೋರ್ವ ಗಂಭೀರ

ಹೆಬ್ರಿ: ಸೀತಾನದಿ ಜಕ್ಕನಮಕ್ಕಿ ಬಳಿ ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟು, ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ. ಇನ್ನು ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ …

Read More »

ಉಚಿತ ಬಸ್ ಪ್ರಯಾಣಕ್ಕೆ ಅಧಿಕೃತ ಚಾಲನೆ

ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಗೆ ಅಧಿಕೃತ ಚಾಲನೆ ದೊರೆತಿದೆ. ವಿಧಾನಸೌಧದ ಮುಂಭಾಗ ಸಿಎಂ ಸಿದ್ದರಾಮಯ್ಯ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಹಸಿರು ನಿಶಾನೆ ತೋರಿದರು. ಡಿಸಿಎಂ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಿಎಂಗೆ ಸಾಥ್ ಕೊಟ್ಟರು. ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಯ ಬಳಿಕ ರಾಜ್ಯಾದ್ಯಂತ ಸಾಮಾನ್ಯ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

Read More »

You cannot copy content of this page.