ತಾಜಾ ಸುದ್ದಿ

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ – ಮಹಿಳೆಯ ಬಂಧನ, ಯುವತಿಯರ ರಕ್ಷಣೆ

ಉಳ್ಳಾಲ: ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ಮಾ. 07 ರ ರಾತ್ರಿ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು ,ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ.ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ,ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿ. ಮತ್ತೋರ್ವ ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ. ರುಕಿಯಾ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ …

Read More »

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭ: ಮಹತ್ವದ ಯೋಜನೆಗಳಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೆಲವೇ ಕ್ಷಣಗಳಲ್ಲಿ ಬಿಜೆಪಿ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆ ಎನ್ನುವಂತೆ, ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಆರಂಭಗೊಳ್ಳಲಿದೆ. ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ನಡೆಯುತ್ತಿರುವಂತ ಸಚಿವ ಸಂಪುಟ ಸಭೆಯಲ್ಲಿ, ಹಲವು ಮಹತ್ವದ ಯೋಜನೆಗಳಿಗೆ ಒಪ್ಪಿಗೆಯ ಅಂಕಿತದ ಮುದ್ರೆ ಒತ್ತುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹೌದು ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಆರಂಭಗೊಳ್ಳಲಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವಂತ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ …

Read More »

ಜಾತ್ರೆಗೆ ಬಂದ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಂದ ಪಾಗಲ್ ಪ್ರೇಮಿ..!

ವಿಜಯನಗರದ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಜಾತ್ರೆಗೆ ಬಂದಿದ್ದ ಗೃಹಿಣಿಯೊಬ್ಬಳು ಪಾಗಲ್ ಪ್ರೇಮಿಯ ಕೈಯಲ್ಲಿ  ಕೊಲೆಯಾಗಿ ಹೋಗಿದ್ದಾಳೆ. ಆರೋಪಿ ಹನುಮಂತ ಮತ್ತು ಕೊಲೆಯಾದ ಪ್ರತಿಭಾ ನಾಗರಾಜ್ ವಿಜಯನಗರ: ವಿಜಯನಗರದ ಹರಪ್ಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಜಾತ್ರೆಗಾಗಿ ಬಂದಿದ್ದ ಗೃಹಿಣಿಯೊಬ್ಬಳು ಪಾಗಲ್ ಪ್ರೇಮಿ ಕೈಯಲ್ಲಿ ಕೊಲೆಯಾಗಿ ಹೋಗಿದ್ದಾಳೆ. ಭಗ್ನ ಪ್ರೇಮಿಯೊಬ್ಬ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪ್ರತಿಭಾ ನಾಗರಾಜ್‌ (27) ಕೊಲೆಯಾದ ಮೃತ ದುರ್ದೈವಿ.ಚಿರಸ್ತಹಳ್ಳಿಯ ಮೂಕಪ್ಪನವರ ಹನುಮಂತ ಕೊಲೆ ಆರೋಪಿ ಆಗಿದ್ದಾನೆ. ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಗಾಗಿ ಚಿಕ್ಕಮ್ಮನ ಮನೆಗೆ …

Read More »

ಮಕ್ಕಳು ಕೈಬಿಟ್ಟಿದ್ದಕ್ಕೆ 1.5 ಕೋಟಿ ರೂ. ಮೊತ್ತದ ಆಸ್ತಿಯನ್ನು ಸರ್ಕಾರಕ್ಕೆ ಬರೆದ ವೃದ್ಧ..!

ಲಕ್ನೋ: ವೃದ್ಧನೊಬ್ಬ ತಮ್ಮ ಮಕ್ಕಳು ಕೈಬಿಟ್ಟಿದ್ದಕ್ಕೆ ಮನನೊಂದು 1.5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಉತ್ತರ ಪ್ರದೇಶ  ಸರ್ಕಾರಕ್ಕೆ ವಿಲ್ ಮಾಡಿರುವ ವಿಚಿತ್ರ ಘಟನೆ ನಡೆದಿದೆ. ಮುಜಾಫರ್‌ನಗರದ ನಿವಾಸಿಯಾದ 85 ವರ್ಷದ ನಾಥು ಸಿಂಗ್ ಉತ್ತರ ಪ್ರದೇಶ ಸರ್ಕಾರಕ್ಕೆ ವಿಲ್ ಬರೆದಿರುವ ವ್ಯಕ್ತಿ. ನಾಥು ಸಿಂಗ್ ಒಟ್ಟು 1.5 ಕೋಟಿ ಮೌಲ್ಯದ ಮನೆ ಹಾಗೂ ಜಮೀನನಲ್ಲಿ ತಮ್ಮ ಪತ್ನಿ ಸಂತೋಷದಿಂದ ಜೀವನ ನಡೆಸುತ್ತಿದ್ದರು. ಜೊತೆಗೆ ಇವರಿಗೆ ಓರ್ವ ಪುತ್ರ ಸೇರಿ ಐವರು ಮಕ್ಕಳಿದ್ದಾರೆ. ನಾಥುಸಿಂಗ್ ಪುತ್ರ ಶಾಲಾ ಶಿಕ್ಷಕನಾಗಿ ಸಹರಾನ್‍ಪುರದಲ್ಲಿ ವಾಸವಾಗಿದ್ದ. ಉಳಿದ ನಾಲ್ವರು …

Read More »

ಚಿತ್ರೀಕರಣದ ವೇಳೆ ಬಾಲಿವುಡ್ ನಟ ‘ಅಮಿತಾಭ್ ಬಚ್ಚನ್’ಗೆ ಗಂಭೀರ ಗಾಯ

ಶೂಟಿಂಗ್​ ವೇಳೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಬಿದ್ದು ಪಕ್ಕೆಲುಬಿಗೆ ಗಾಯವಾಗಿದೆ. ಸದ್ಯ ಅವರನ್ನು ಹೈದರಾಬಾದ್‌ನ AIG ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮಿತಾಭ್ ಬಚ್ಚನ್ ಹೈದರಾಬಾದ್ ನಲ್ಲಿ ಚಿತ್ರಿಕರಣ ಮಾಡುತ್ತಿರುವ ಸಮಯದಲ್ಲಿ ಈ ಅವಾಂತರ ನಡೆದಿದೆ. ಆಕ್ಷನ್ ಸಿನಿಮಾವೊಂದರ ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯಾರ ಭೇಟಿಗೂ ಅವಕಾಶ ನೀಡಲಾಗುತ್ತಿಲ್ಲ. ವೈದ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಭಿಮಾನಿಗಳು ಯಾವುದೇ ಕಾರಣಕ್ಕೂ ಆತಂಕ ಪಡಬಾರದು. ಯಾವುದೇ ಪ್ರಾಣಾಪಯವಿಲ್ಲ ಎಂದಿದ್ದಾರೆ. ಪ್ರಾಜೆಕ್ಟ್ ಕೆ ಚಿತ್ರೀಕರಣ ಈ ಹಿಂದೆ ಕೂಲಿ ಚಲನಚಿತ್ರ …

Read More »

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆಟೋ ಚಾಲಕ ಗೆ ಹೊಸ ಆಟೋ ಹಸ್ತಾಂತರ

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ  ಪುರುಷೋತ್ತಮ ಪೂಜಾರಿ ಅವರಿಗೆ  ನಿನ್ನೆ ಬಿಜೆಪಿ ವತಿಯಿಂದ ಹೊಸ ಆಟೋ ರಿಕ್ಷಾ ಹಾಗೂ 5 ಲಕ್ಷ ರೂಪಾಯಿ ನೆರವನ್ನು ನೀಡಲಾಯಿತು. ನಿನ್ನೆ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಮನೆಯಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ರಿಕ್ಷಾ, 5 ಲಕ್ಷ ರೂ ಗಳ ಚೆಕ್ ಅನ್ನು ಹಸ್ತಾಂತರಿಸಿದರು. ನವೆಂಬರ್ 19, 2022ರಂದು ಮಂಗಳೂರಿನ ನರೋಡಿ ಬಳಿಯಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಶಂಕಿತ ಉಗ್ರ ಶಾರೀಕ್ …

Read More »

ಮಂಗಳೂರು ಕುಕ್ಕರ್ ಬ್ಲಾಸ್ಟ್‌ ಮಾಡಿಸಿದ್ದು ನಾವೇ..!

ಮಂಗಳೂರು ಆಟೋ ರಿಕ್ಷಾ ಕುಕ್ಕರ್ ಸ್ಫೋಟ ಮತ್ತು ಕೊಯಮತ್ತೂರು ಕಾರು ಸ್ಫೋಟದ ಹೊಣೆಯನ್ನು ISKP (ಇಸ್ಲಾಮಿಕ್ ಸ್ಟೇಟ್ ಖುರಸಾನ್ ಪ್ರಾವಿನ್ಸ್) ಉಗ್ರ ಸಂಘಟನೆ ಹೊತ್ತುಕೊಂಡಿದೆ. ಇಸ್ಲಾಮಿಕ್ ಸ್ಟೇಟ್ ಖುರಸಾನ್ ಪ್ರಾವಿನ್ಸ್ ಎಂಬ ಉಗ್ರ ಸಂಘಟನೆಯು ಈ ಎರಡೂ ದಾಳಿಯನ್ನು ನಡೆಸಿದ್ದು ನಮ್ಮವರೇ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ದಕ್ಷಿಣ ಭಾರತದಲ್ಲಿ ಈಗಲೂ ಇಸ್ಲಾಮಿಕ್ ಸ್ಟೇಟ್ ಉಗ್ರರು ಸಕ್ರಿಯರಾಗಿದ್ದಾರೆ ಎಂದು ಎಚ್ಚರಿಸಿದ್ದಾರೆ. 2022ರ ಅಕ್ಟೋಬರ್ 23ರಂದು ಕೊಯಮತ್ತೂರಿನ ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಅದಾದ ಬಳಿಕ ನವೆಂಬರ್ 19, 2022 ರಂದು ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ಸಂಭವಿಸಿತ್ತು. ಕೊಯಮತ್ತೂರು, …

Read More »

ಬಂಟ್ವಾಳ: ಅಪ್ರಾಪ್ತ ಬಾಲಕನಿಗೆ ಮದುವೆ- ಧಿಢೀರ್‌ ದಾಳಿ ನಡೆಸಿ ಮುಚ್ಚಳಿಕೆ ಬರೆಸಿದ ಅಧಿಕಾರಿಗಳು

ಬಂಟ್ವಾಳ: ಅಪ್ರಾಪ್ತ ಬಾಲಕನಿಗೆ ಮದುವೆಗೆ ಸಿದ್ದತೆ ನಡೆಸುತ್ತಿರುವ ವೇಳೆ ಅಧಿಕಾರಿಗಳು ಮನೆಗೆ ದಾಳಿ ನಡೆಸಿ ಮದುವೆ ನಡೆಸದಂತೆ ಕುಟುಂಬಸ್ಥರಿಂದ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರ್ ಗ್ರಾಮದಲ್ಲಿ ನಡೆದಿದೆ. ತೆಂಕಕಜೆಕಾರ್ ಗ್ರಾಮದ ಮಿತ್ತಳಿಕೆ ಎಂಬ ಮನೆಯಲ್ಲಿ ಅಪ್ರಾಪ್ತ ಬಾಲಕನೋರ್ವನಿಗೆ ನಾಳೆ ಮಾ.5 ರಂದು ಮದುವೆಯ ಸಕಲಸಿದ್ಧತೆಗಳನ್ನು ನಡೆಸಲಾಗಿತ್ತು. ಈ ಬಗ್ಗೆ ಅಧಿಕಾರಿಗಳಿಗೆ ದೊರೆತ ಖಚಿತ ಮಾಹಿತಿಯಂತೆ ಮನೆಗೆ ಧಾವಿಸಿ, ಮದುವೆ ನಡೆಸದಂತೆ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಎರಡನೇ ಬಾರಿ ಮದುವೆಗೆ ಯತ್ನ ಕಳೆದ ವರ್ಷ ಇದೇ ಹುಡುಗನಿಗೆ ಮದುವೆಗಾಗಿ ಸಕಲ …

Read More »

ಕಾರ್ಕಳ: ಎಂಜಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ನಿಟ್ಟೆ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಜಿನಿಯರಿಂಗ್ ಕಲಿಯುತ್ತಿದ್ದ ಸೀಮಾ (22) ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಕುಂದಾಪುರದ ಶಿರೂರು ಮೂಲದ ಅವರು ಅಂತಿಮ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಅವರು ನರ, ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದರು. ಹಲವು ಕಡೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣವಾಗಿರಲಿಲ್ಲ. ಇದರಿಂದ ಮನನೊಂದು 4-5 ತಿಂಗಳ ಹಿಂದೆಯೂ ಒಮ್ಮೆ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಇದೇ ಕಾರಣವನ್ನೇ ಮುಂದಿಟ್ಟುಕೊಂಡು ಮಾರ್ಚ್ 2 ರಂದು ಅಪರಾಹ್ನ ಹಾಸ್ಟೆಲ್‌ನ ಕೊಠಡಿಯಲ್ಲಿನ ಫ್ಯಾನ್‌ಗೆ ಚೂಡಿದಾರ್ ಶಾಲ್‌ನಿಂದ ಕುತ್ತಿಗೆಗೆ ನೇಣು …

Read More »

ಎಚ್ಚರ: ಕರಾವಳಿಯಲ್ಲಿ ಬೀಸಲಿದೆ ಬಿಸಿ ಗಾಳಿ

ಉಡುಪಿ: ದ.ಕ., ಉಡುಪಿ ಸಹಿತ ಕರಾವಳಿ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಬಲವಾದ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೆ ಈ ಅವಧಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆಗಳಿದ್ದು, ಜನರ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ವಿಶೇಷ ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಕೆಲವು ಕಡೆಗಳಲ್ಲಿ ಬಿಸಿಗಾಳಿಯ ವಾತಾವರಣ ಕಂಡು ಬರಲಿದೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ಹೊರಡಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ. …

Read More »

You cannot copy content of this page.