ತಾಜಾ ಸುದ್ದಿ

ಕುಂದಾಪುರ: ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯ ರಕ್ಷಣೆ

ಕುಂದಾಪುರ : ಮನೆ ಸಮೀಪದ ಬಾವಿಯಲ್ಲಿ ನೀರೆತ್ತುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ಮಹಿಳೆಯನ್ನು ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ ಘಟನೆ ತೆಕ್ಕಟ್ಟೆ ಸಮೀಪದ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಇಲ್ಲಿನ ನಿವಾಸಿ ರತ್ನಾವತಿ ಶೆಟ್ಟಿ ಉಳ್ಳೂರು (52) ರಕ್ಷಿಸಲ್ಪಟ್ಟ ಮಹಿಳೆ. ಇದೀಗ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗ್ತಿದೆ.

Read More »

ಕರ್ನಾಟಕ ಬಜೆಟ್ 2023-24: ಹೀಗಿವೆ ಸಂಪೂರ್ಣ ಮುಖ್ಯಾಂಶಗಳು

1. 2023-24ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. 2. ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ. 3. ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ. ಇದೇ ಸಂದರ್ಭದಲ್ಲಿ G-20 ಶೃಂಗಸಭೆಯ ಅಧ್ಯಕ್ಷತೆ ಭಾರತಕ್ಕೆ ಒಲಿದಿರುವುದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ …

Read More »

ಕರಾವಳಿಯಲ್ಲಿ ಮತ್ತೆ ಚಂಡಮಾರುತ ಆರ್ಭಟ : ನೀರಿಗೆ ಇಳಿಯದಂತೆ ‘ಮೀನುಗಾರಿಕೆಗೆ ಎಚ್ಚರಿಕೆ’

ದಕ್ಷಿಣಕನ್ನಡ : ಬಂದರು ನಗರಿ ಮಂಗಳೂರಿನ ಕರಾವಳಿ , ಕೇರಳದ ಹಲವು ಭಾಗದಲ್ಲಿ ಭಾರೀ ಚಂಡಮಾರುತ ಆರ್ಭಟ ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ. ಇಂದು ರಾತ್ರಿ ಕರಾವಳಿ ಮತ್ತು ಕೇರಳದ ಹಲವೆಡೆ ಎತ್ತರದ ಅಲೆಗಳು ಮತ್ತು ಸಮುದ್ರದ ಅಲೆಗಳು 1.4 ರಿಂದ 2.0 ಮೀಟರ್ ಎತ್ತರದಷ್ಟು ಆರ್ಭಟ ಹೆಚ್ಚಾಗಲಿದೆ. ವೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಷ್ಟೇ ಅಲ್ಲದೇ ಸಮುದ್ರ ದಡಗಳಲಿ ವಾಸಿಸುವ ಕರಾವಳಿ ನಿವಾಸಿಗಳು ಸಮುದ್ರ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ. ಇನ್ನೂ ಕಡಲತೀರಗಳಿಗೆ …

Read More »

ರಾಜ್ಯದ ಮೀನುಗಾರರಿಗೆ ಭರ್ಜರಿ ಗುಡ್ ನ್ಯೂಸ್: ಡೀಸೆಲ್ ಮಿತಿ 1.5 ಲಕ್ಷ ಕಿ.ಲೀ ನಿಂದ 2 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು: ರಾಜ್ಯದ ಮೀನುಗಾರರ ದೋಣಿಗಳಿಗಾಗಿ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು ಸದ್ಯ 1.5 ಲಕ್ಷ ಕಿಲೋ ಲೀಟರ್ ಗಳಿಂದ 2 ಲಕ್ಷ ಕಿಲೋ ಲೀಟರ್ ಗಳವರೆಗೆ ಹೆಚ್ಚಿಸಲಾಗುವುದು. ಇದರಿಂದ ಮೀನುಗಾರರಿಗೆ ರಾಜ್ಯ ಸರ್ಕಾರದಿಂದ 250 ಕೋಟಿ ರೂಗಳ ನೆರವಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ಮೀನುಗಾರರಿಗೆ ನೀಡುತ್ತಿರುವ ಸೀಮೆಎಣ್ಣೆ ಸಹಾಯಧನ ಪ್ರಕ್ರಿಯೆಯನ್ನು ಸರಳೀಕರಿಸಿ ಪ್ರಸಕ್ತ ಸಾಲಿನಿಂದ ಡಿಬಿಟಿ ಮುಖಾಂತರ ನೇರವಾಗಿ ಮೀನಾಗರರ ಖಾತೆಗೆ ಜಮೆ ಮಾಡಲಾಗುವುದು ಎಂದರು. ಮೀನುಗಾರರಿಗೆ ವಸತಿ ಸೌಕರ್ಯ ಕಲ್ಪಿಸಲು ಆದ್ಯತೆ …

Read More »

ಉಡುಪಿ: ವ್ಯಕ್ತಿಯ ಮೃತದೇಹ ಕಸದ ಕೊಂಪೆಯಲ್ಲಿ ಎಸೆದ ದುರುಳರು..ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಉಡುಪಿ: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ‌ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಉಡುಪಿಯ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲೆ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ …

Read More »

ಯೂಟ್ಯೂಬ್ ನೂತನ ಸಿಇಒ ಆಗಿ ಭಾರತೀಯ ಮೂಲದ ನೀಲ್ ಮೋಹನ್ ನೇಮಕ

ನವದೆಹಲಿ: ಯೂಟ್ಯೂಬ್ ಸಿಇಒ ಸುಸಾನ್ ವೊಜ್ಸಿಕಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು ಅವರ ಸ್ಥಾನಕ್ಕೆ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ. ಯೂಟ್ಯೂಬ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುಸಾನ್ ವೊಜ್ಸಿಕಿ ಅವರು ಒಂಬತ್ತು ವರ್ಷಗಳ ನಂತರ ವಿಶ್ವದ ಅತಿದೊಡ್ಡ ಆನ್‌ಲೈನ್ ವೀಡಿಯೊ ಪ್ಲಾಟ್‌ಫಾರ್ಮ್‌ನ ಚುಕ್ಕಾಣಿ ತ್ಯಜಿಸಿದ್ದಾರೆ. ಯೂಟ್ಯೂಬ್‌ನ ಮುಖ್ಯ ಉತ್ಪನ್ನ ಅಧಿಕಾರಿ ನೀಲ್ ಮೋಹನ್ ಅವರು ಯೂಟ್ಯೂಬ್‌ನ ಹೊಸ ಮುಖ್ಯಸ್ಥರಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ. 54 ವರ್ಷದ ಸುಸಾನ್ ವೊಜ್ಸಿಕಿ ಅವರು “ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಬಗ್ಗೆ ನಾನು ಆಸಕ್ತಿ …

Read More »

ಉಡುಪಿ: ಒಂದೇ ದಿನ ಸಂಗೀತದ ಸ್ವರ ನಿಲ್ಲಿಸಿದ ಸಹೋದರರು….!!

ಉಡುಪಿ: ಅಣ್ಣ ಹಾಗೂ ತಮ್ಮ ಒಂದೇ ದಿನ ಸಾವನ್ನಪ್ಪಿದ ಘಟನೆ ಗುರುವಾರ ಬ್ರಹ್ಮಾವರ ತಾಲೂಕಿನ ದೇವಾಡಿಗರಬೆಟ್ಟು ಎಂಬಲ್ಲಿ ಸಂಭವಿಸಿದೆ. ದೇವಾಡಿಗರಬೆಟ್ಟು ರಘುನಾಥ ದೇವಾಡಿಗ ಹಾಗೂ ಸುಮತಿ ದೇವಾಡಿಗ ಅವರ ಪುತ್ರರಾದ ರಾಘವೇಂದ್ರ ಯಾನೇ ಮೋನ (40) ಗಣೇಶ್ ದೇವಾಡಿಗ (51) ಸಾವನ್ನಪ್ಪಿದವರು. ಗುರುವಾರ ಬೆಳಗ್ಗೆ ರಾಘವೇಂದ್ರ ಯಾನೆ ಮೋನ ಇವರು ಅಲ್ಪಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದು, ಸುದ್ದಿ ತಿಳಿದು ಮಧ್ಯಾಹ್ನ ಗಣೇಶ್ ದೇವಾಡಿಗ ಅವರೂ ಕೂಡ ಮೃತಮಟ್ಟಿದ್ದಾರೆ. ಇವರು ಇಬ್ಬರೂ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಇಬ್ಬರೂ ಕೂಡ ವಾದ್ಯ ಸಂಗೀತ ದಲ್ಲಿ ನಾಡಿನಾದ್ಯಂತ ಪ್ರಸಿದ್ಧಿ ಪಡೆದವರಾಗಿದ್ದು, …

Read More »

ಯಕ್ಷಗಾನದ ಬಲಿಪ ನಾರಾಯಣ ಭಾಗವತ ನಿಧನ ..!

ಮಂಗಳೂರು :ಯಕ್ಷಗಾನದ ತೆಂಕು ತಿಟ್ಟಿನ ಹೆಸರಾಂತ ಭಾಗವತರಾದ ಬಲಿಪ ನಾರಾಯಣ ಭಾಗವತ ಅವರು ಇಂದು ಗುರುವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. 1938 ರಲ್ಲಿ ಕಾಸರಗೋಡು ಜಿಲ್ಲೆಯ ಎಣ್ಮಕಜೆ ಗ್ರಾಮದ ಪಡ್ರೆ ಎಂಬಲ್ಲಿ ಬಲಿಪ ಮಾಧವ ಭಟ್ಟ ಮತ್ತು ಸರಸ್ವತಿ ದಂಪತಿಗೆ ಜನಿಸಿದ ಬಲಿಪ ನಾರಾಯಣ ಭಾಗವತರಿಗೆ ಅಜ್ಜ ಹಿರಿಯ ಬಲಿಪ ನಾರಾಯಣ ಭಟ್ಟ ಮತ್ತು ತಂದೆ ಬಲಿಪ ಮಾಧವ ಭಟ್ಟರೇ ಗುರುಗಳಾಗಿದ್ದು 6 ದಶಕಗಳ ಅನುಭವ ಹೊಂದಿದ್ದಾರೆ. ಮೂಡಬಿದಿರೆಯ ಸಮೀಪದ ನೂಯಿ ಎಂಬಲ್ಲಿ ವಾಸವಾಗಿದ್ದರು. ಬಲಿಪ ಭಾಗವತರ ನಿಧನಕ್ಕೆ ಗಣ್ಯರು, ಜನಪ್ರತಿನಿಧಿಗಳು …

Read More »

BIGG NEWS : ಭಜನಾ ಕಾರ್ಯಕ್ರಮ ರದ್ದುಗೊಳಿಸಿ, ಇಲ್ಲ ಪರಿಣಾಮಗಳ ಎದುರಿಸಿ- ಹಿಂದೂ ದೇಗುಲಕ್ಕೆ ಬೆದರಿಕೆ ಕರೆ

ಆಸ್ಟ್ರೇಲಿಯಾ : ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿರುವ ಹಿಂದೂ ದೇವಾಲಯವೊಂದಕ್ಕೆ ಬೆಕರಿಕೆ ಕರೆ ಬಂಬಿದ್ದು,ಧಾರ್ಮಿಕ ಕಾರ್ಯಕ್ರಮವನ್ನು ರದ್ದುಗೊಳಿಸಿ ಇಲ್ಲದೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಕರೆ ಬಂದಿದೆ ಎಂದು ವರದಿಯಾಗಿದೆ.   ಮೆಲ್ಬೋರ್ನ್‌ನ ಉತ್ತರ ಉಪನಗರ ಕ್ರೇಗಿಬರ್ನ್‌ನಲ್ಲಿರುವ ಕಾಳಿ ಮಾತಾ ಮಂದಿರದ ಅರ್ಚಕರಿಗೆ ಮಂಗಳವಾರ ಪಂಜಾಬಿ ಭಾಷೆಯಲ್ಲಿ ಮಾತನಾಡುವ ವ್ಯಕ್ತಿಯಿಂದ ಕರೆ ಬಂದಿದೆ ಎಂದು ಆಸ್ಟ್ರೇಲಿಯಾ ಟುಡೇ ಸುದ್ದಿ ಸಂಸ್ಥೆ ವರದಿ ಮಾಡಿದೆ. ‘ನೋ ಕಾಲರ್ ಐಡಿ’ (ಕಾಲ್ ರಿಸೀವರ್‌ಗೆ ಫೋನ್ ಸಂಖ್ಯೆಯನ್ನು ತೋರಿಸುತ್ತಿಲ್ಲ) ನಿಂದ ತನಗೆ ಕರೆ ಬಂದಿದೆ. ‘ಅಮೃತಸರ-ಜಲಂಧರ್’ ಪಂಜಾಬಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯೊಬ್ಬ, …

Read More »

ಹಿಂದೂ ಯುವತಿಯರೇ ಪರ್ಸ್‌ನಲ್ಲಿ ಲಿಪ್‌ಸ್ಟಿಕ್‌ ಬದಲು ಚಾಕು ಇಟ್ಟುಕೊಳ್ಳಿ: ಸಾಧ್ವಿ ಪ್ರಾಚಿ

ಭೋಪಾಲ್‌: ಹಿಂದೂ ಯುವತಿಯರೇ ನಿಮ್ಮ ಪರ್ಸ್‌ನಲ್ಲಿ ಲಿಪ್‌ಸ್ಟಿಕ್‌, ಬಾಚಣಿಗೆ ಇಟ್ಟುಕೊಳ್ಳೋದನ್ನ ಬಿಡಿ. ಅದರ ಬದಲು ಚಾಕು ಇಟ್ಟುಕೊಳ್ಳಿ ಎಂದು ವಿಶ್ವ ಹಿಂದೂ ಪರಿಷತ್‌ನ ನಾಯಕಿ ಸಾಧ್ವಿ ಪ್ರಾಚಿ ಕರೆಕೊಟ್ಟಿದ್ದಾರೆ. ಭೋಪಾಲ್‌ನಲ್ಲಿ ಮಾತನಾಡಿದ ಅವರು, ಮುಸ್ಲಿಂ ಹೆಣ್ಣುಮಕ್ಕಳಂತೆ ಹಿಂದೂ ಹೆಣ್ಣುಮಕ್ಕಳು ತಮ್ಮ ಸಂಪ್ರದಾಯವನ್ನು ಬಿಡಬಾರದು. ಪ್ರೀತಿಯ ನಾಟಕವಾಡಿ ಜಿಹಾದಿಗಳು ನಿಮ್ಮ ಕುತ್ತಿಗೆ ಹಿಸುಕಲು ಮುಂದಾದ್ರೆ ಅದಕ್ಕೂ ಮೊದಲೇ ನೀವು ಅವರ ಕುತ್ತಿಗೆ ಹಿಸುಕಿ ಎಂದು ಸಾಧ್ವಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

Read More »

You cannot copy content of this page.