ತಾಜಾ ಸುದ್ದಿ

ಉಡುಪಿ ಜಿಲ್ಲೆಯಲ್ಲಿ ನಾಳೆ (ಆ.01) ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನಲೆ ನಾಳೆ ಆಗಸ್ಟ್ 01 ಉಡುಪಿ ಜಿಲ್ಲೆಯಲ್ಲಿ ಶಾಲೆ – ಪಿಯು ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಶಾಲೆ, ಮತ್ತು ಪಿಯು ಕಾಲೇಜುಗಳಿಗೆ ಮಾತ್ರ ರಜೆ ಘೊಷಿಸಲಾಗಿದೆ.ಇಂಜಿನಿಯರಿಂಗ್, ಐಟಿಐ, ಪದವಿ ಕಾಲೇಜು, ಸ್ನಾತಕೋತ್ತರ ಪದವಿ, ಡಿಪ್ಲೋಮಾ ತರಗತಿಗೆ ರಜೆ ಇಲ್ಲ.

Read More »

ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ…!!

ಮಂಗಳೂರು: ಕೇರಳದ ಕ್ಯಾಲಿಕಟ್ ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಐದು ವರ್ಷಗಳ ಹಿಂದಿನ ಹಳೆ ಪ್ರಕರಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಹಳೆ ಆರೋಪಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಗಡಿಭಾಗ ತಲೆಕ್ಕಿ ಗ್ರಾಮದ ನಿವಾಸಿ ಮೊಹಮ್ಮದ್ ಬಶೀರ್ ಬಂಧಿತ ವ್ಯಕ್ತಿ. ಈತನ ವಿರುದ್ಧ ಕೋಣಾಜೆ ಠಾಣೆಯಲ್ಲಿ ಗಾಂಜಾ ಮಾರಾಟ, ವಂಚನೆ ಪ್ರಕರಣ ದಾಖಲಾಗಿತ್ತು. ಕೋರ್ಟಿನಿಂದ ವಾರೆಂಟ್ ಇದ್ದರೂ 5 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡಿಕೊಂಡಿದ್ದ. ಇದೀಗ ಕ್ಯಾಲಿಕಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದಾಗ ಹಳೆ ಕೇಸು ಇದ್ದುದರಿಂದ ವಶಕ್ಕೆ ಪಡೆದಿದ್ದಾರೆ. ಕೋಣಾಜೆ ಪೊಲೀಸ್ …

Read More »

ಕಾರ್ಕಳ : ವಿದ್ಯುತ್‌ ಪರಿವರ್ತಕದ ಕಂಬಕ್ಕೆ ಕಾರು ಡಿಕ್ಕಿ..!

ಕಾರ್ಕಳ : ಕಾರ್ಕಳ ಪಡುಬಿದಿರೆ ರಾಜ್ಯ ಹೆದ್ದಾರಿಯ ನಂದಳಿಕೆ ಲಕ್ಷ್ಮೀ ಜನಾರ್ದನ ಶಾಲಾ ತಿರುವು ಬಳಿ ಬ್ಯಾಲೆನೋ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್‌ ಪರಿವರ್ತಕದ ಕಂಬಕ್ಕೆ ಡಿಕ್ಕಿಯಾದ ಘಟನೆ ಜು. 31ರಂದು ಸಂಭವಿಸಿದೆ. ಘಟನೆಯಿಂದ ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.

Read More »

ಸಿಹಿಸುದ್ದಿ: ಗೃಹಲಕ್ಷ್ಮಿ ಜೂನ್‌, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ಆಗಸ್ಟ್‌ ಮೊದಲ ವಾರವೇ ಜೂನ್‌, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ ಮಾಡಲಿದೆ ಎಂದು ತಿಳಿಸಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ಮಾಡಲಾಗುತ್ತಿದ್ದು, ಅಂತಿಮ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಗಸ್ಟ್‌ ಮೊದಲ ವಾರವೇ ಖಾತೆಗೆ ಹಣ ಮಾಡಲಾಗುತ್ತದೆ ಎನ್ನಲಾಗಿದೆ. ಇನ್ನೂ ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ …

Read More »

ವಯನಾಡ್ ಭೂಕುಸಿತ ದುರಂತ : 143 ಕ್ಕೇರಿದ ಸಾವಿನ ಸಂಖ್ಯೆ , 130 ಮಂದಿಗೆ ಗಾಯ…!!

ವಯನಾಡ್ : ಕೇರಳದ ವಯನಾಡ್ ನಲ್ಲಿ ಭೀಕರ ಭೂಕುಸಿತಕ್ಕೆ ಸಿಲುಕಿ ನಲುಗಿ ಹೋಗಿರುವ ಕೇರಳದ ವಯನಾಡ್ ನಲ್ಲಿ ಸಾವನ್ನಪ್ಪಿದ ದುರ್ದೈವಿಗಳ ಸಂಖ್ಯೆ 143 ಕ್ಕೇರಿದೆ. ಒಟ್ಟು 45 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, 3,069 ಜನರಿಗೆ ವಸತಿ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ. ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ ನಂತರ ಕನಿಷ್ಠ 143 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 130 ಜನರು ಗಾಯಗೊಂಡಿದ್ದಾರೆ ಎಂದು ಕೇರಳ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ, ಸುಮಾರು 100 ಜನರು …

Read More »

ವಾಹನ ಸವಾರರೇ ಗಮನಿಸಿ : ರಾಜ್ಯದಲ್ಲಿ ನಾಳೆಯಿಂದ ಜಾರಿಯಾಗಲಿವೆ ಈ ಹೊಸ ನಿಯಮಗಳು!

ಬೆಂಗಳೂರು : ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ …

Read More »

ದ.ಕ. ಜಿಲ್ಲೆಯಾದ್ಯಂತ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಅಂದರೆ ಜು.31ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಅದರಂತೆ ಬುಧವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ & ಪಿಯು ಕಾಲೇಜುಗಳವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ನಾಳೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿರುವುದರಿಂದ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.

Read More »

ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಾರಿ ಮಳೆಯಾಗಲಿದ್ದು, ಗಾಳಿ 30 – 40 ಕಿಲೋ ಮೀಟರ್ ಬೀಸಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More »

ಉಡುಪಿ: ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು…!!

ಉಡುಪಿ: ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು.

Read More »

ಉಡುಪಿ: ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಆರೋಪ- ಪ್ರಕರಣ ದಾಖಲು..!

ಉಡುಪಿ: ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಬಾಗಲಕೋಟೆ ಜಿಲ್ಲೆಯ ಕಮಾಲಾಕ್ಷಿ (34) ಎಂದು ಗುರುತಿಸಲಾಗಿದೆ. ಇವರು 12 ವರ್ಷಗಳ ಹಿಂದೆ ರಾಜು ಎಂಬವರನ್ನು ವಿವಾಹವಾಗಿದ್ದು, ಅವರು ಕಳೆದ 7-8 ವರ್ಷಗಳಿಂದ ಬೈಲೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಮಕ್ಕಳೊಂದಿಗೆ ವಾಸಮಾಡಿಕೊಂಡಿದ್ದರು. ರಾಜು ಮದ್ಯಪಾನ ಮಾಡಿ ಹೆಂಡತಿಗೆ ಕಿರುಕುಳ ನೀಡುತ್ತಿದ್ದು ಇದೇ ಚಿಂತೆಯಲ್ಲಿ ಮನನೊಂದ ಕಮಾಲಾಕ್ಷಿ ಜು.26ರಂದು ಮಧ್ಯಾಹ್ನ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ದೂರಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಆಕೆ, …

Read More »

You cannot copy content of this page.