ತಾಜಾ ಸುದ್ದಿ

ಮುಂದುವರೆದ ಗ್ರಾ.ಪಂ. ನೌಕರರ ಪ್ರತಿಭಟನೆ; ಬೇಡಿಕೆ ಈಡೇರಿಸದಿದ್ರೆ ಗ್ರಾ.ಪಂ. ಬಂದ್‌ ಎಚ್ಚರಿಕೆ

ಬೆಂಗಳೂರು : ಗ್ರಾಮ ಪಂಚಾಯಿತಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಅದಕ್ಕೆ ಸರ್ಕಾರ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಇಂದಿನಿಂದ ನಮ್ಮ ಬೇಡಿಕೆಗಳು ಈಡೇರುವವರಿಗೂ ಎಲ್ಲಾ ಗ್ರಾಮ ಪಂಚಾಯಿತಿ ನೌಕರರು ಕೆಲಸಕ್ಕೆ ಹಾಜರಾಗದೆ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದೇವೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್‌ಡಿಪಿಆರ್ ಹೇಳಿದೆ. ಸಂಘದ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ ಬೊಲ್ಮಾ ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ …

Read More »

ಮುಲ್ಕಿ: ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೂಲ್ಕಿ:ಕಾಲೇಜು ಉಪನ್ಯಾಸಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿ ಎಂಬಲ್ಲಿ ನಡೆದಿದೆ. ಅಮಿತಾ ಬಿವಿ (34) ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಓರ್ವ ಮಗಳಿದ್ದಾಳೆ.ಅಮಿತಾ ಅವರಿಗೆ ವಿವಾಹವಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಅಮಿತಾ ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

Read More »

ಶಾಲೆಯಲ್ಲಿ ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

ದಾವಣಗೆರೆ;ಮಕ್ಕಳಿಗೆ ಪಾಠ ಮಾಡುವಾಗಲೇ ಶಿಕ್ಷಕ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಘಟನೆ ನಡೆದಿದ್ದು ಇಂಗ್ಲೀಷ್ ವಿಷಯದ ಶಿಕ್ಷಕ ವಿಜಯ್ ಕುಮಾರ್ (54) ಮೃತರು. ವಿಜಯ್ ಕುಮಾರ್ ಬೆಳಗ್ಗೆ ಶಾಲೆಯಲ್ಲಿ ಪ್ರಾರ್ಥನೆ ಮುಗಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

Read More »

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ – ಆರೋಪಿಗಳ ಬಗ್ಗೆ ಮಹತ್ವದ ಸುಳಿವು

ಉಡುಪಿ : ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಇದೀಗ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಕೊಲೆ ನಡೆಸಿದ ಆರೋಪಿಗಳು ಪಾಂಗಾಳ ಆಲಡೆ ರಸ್ತೆಯತ್ತ ತೆರಳಿರುವ ಸಾಧ್ಯತೆಗಳಿದ್ದು, ಘಟನೆ ನಡೆದ ಸಂದರ್ಭದಲ್ಲಿ ಆ ಕಡೆಗೆ ಬೈಕ್‌ನಲ್ಲಿ ಮೂವರು ಕತ್ತಿ ಹಿಡಿದುಕೊಂಡು ಮತ್ತು ಓರ್ವ ನಡೆದುಕೊಂಡು ಓಡಿ ಹೋಗಿರುವುದು ಸಿಸಿ ಕ್ಯಾಮೆರಾ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಶ್ವಾನ ದಳದ ನಾಯಿ ಕೂಡಾ ಆಲಡೆ ರಸ್ತೆಯವರೆಗೂ ಓಡಿ ಬಳಿಕ ಹಿಂದೆ ಬಂದಿದ್ದು, ಕೃತ್ಯದಲ್ಲಿ ನಾಲ್ಕು ಮಂದಿ ಪಾಲ್ಗೊಂಡಿರುವ ಬಗ್ಗೆ ಪೊಲೀಸರಿಗೆ …

Read More »

ಮೂಡುಬಿದಿರೆ: ಟಿಪ್ಪರ್ ಹರಿಸಿ ಕೊಲೆ ಮಾಡಿದ ಆರೋಪಿ ಚಾಲಕ ಅರೆಸ್ಟ್..!

ಮೂಡುಬಿದಿರೆ;ಟಿಪ್ಪರ್ ಚಲಾಯಿಸಿ ವ್ಯಕ್ತಿಯನ್ನು ಕೊಲೆ ಮಾಡಿದ ಆರೋಪಿ ಟಿಪ್ಪರ್‌ ಚಾಲಕ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಕೋಟೆಬಾಗಿಲಿನ ನಿವಾಸಿ ಹಾರೀಸ್ ಬಂಧಿತ ಆರೋಪಿ.ಈತ ಕಳೆದ ಶುಕ್ರವಾರ ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಅವರ ಜೊತೆ ನಡೆದ ವಾಗ್ವಾದದ ಬಳಿಕ ಪೈಯಾಝ್ ಗೆ ರಾಡ್‌ನಿಂದ ತಲೆಗೆ ಹೊಡೆದು, ಅವರು ಕೆಳಗೆ ಬಿದ್ದಾಗ ಅವರ ಮೇಲೆ ಟಿಪ್ಪರ್‌ ಚಲಾಯಿಸಿ ಕೊಲೆ ಮಾಡಿದ್ದ. ಘಟನೆ ಬಳಿಕ ಟಿಪ್ಪರ್ ಚಾಲಕ ತಲೆ ಮರೆಸಿಕೊಂಡಿದ್ದ ಟಿಪ್ಪರ್‌ ಚಾಲಕ ಹಾರೀಸ್‌ನನ್ನು ಸೆರೆ ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿ ಬಲೆ ಬೀಸಿದ್ದರು.ಇದೀಗ ಉಳಾಯಿ …

Read More »

ಮಧ್ಯರಾತ್ರಿ ಬೆತ್ತಲೆಯಾಗಿ ಮನೆ ಬೆಲ್ ಬಾರಿಸ್ತಿದ್ದ ಮಹಿಳೆ ರಹಸ್ಯ ಬಯಲು

ಉತ್ತರ ಪ್ರದೇಶದ ರಾಂಪುರದಲ್ಲಿ ಮಧ್ಯರಾತ್ರಿ ವೇಳೆ ಮಹಿಳೆಯೊಬ್ಬರು ಬೆತ್ತಲೆಯಾಗಿ ಓಡಾಡುತ್ತಾರೆಂಬ ಪ್ರಕರಣದಲ್ಲಿ ಸತ್ಯಾಂಶ ಬಯಲಾಗಿದೆ. ಮಹಿಳೆಯೊಬ್ಬರು ತಮ್ಮ ಮನೆಯ ಡೋರ್‌ಬೆಲ್‌ ಬಾರಿಸುತ್ತಾರೆ ಎಂಬ ಭಯದ ನಡುವೆ, ರಾಂಪುರ ಪೊಲೀಸರು ಮಹಿಳೆ ಮಾನಸಿಕವಾಗಿ ಸ್ಥಿರವಾಗಿಲ್ಲ. ಆಕೆ ಐದು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಬೆತ್ತಲೆ ಮಹಿಳೆಯೊಬ್ಬರು ಮಧ್ಯರಾತ್ರಿ ತಮ್ಮ ಮನೆಗಳ ಡೋರ್‌ಬೆಲ್‌ಗಳನ್ನು ಬಾರಿಸುವ ಸಿಸಿಕ್ಯಾಮೆರಾ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಜಿಲ್ಲೆಯ ಜನರಲ್ಲಿ ಭೀತಿ ಆವರಿಸಿತ್ತು. ಮಿಲಾಕ್ ಗ್ರಾಮದಲ್ಲಿ ಬೆತ್ತಲೆ ಮಹಿಳೆಯೊಬ್ಬರು ಮಧ್ಯರಾತ್ರಿಯಲ್ಲಿ ಮನೆ ಬಾಗಿಲ ಬೆಲ್ ಮಾಡಿ ನಾಪತ್ತೆಯಾಗುತ್ತಿದ್ದಾರೆ …

Read More »

ಉಡುಪಿ: ಪ್ಲಾಸ್ಟಿಕ್ ತ್ಯಾಜ್ಯದಿಂದ ರಸ್ತೆ ನಿರ್ಮಾಣ – ಯಶಸ್ವಿಯಾದ ಪ್ರಯೋಗ

ಉಡುಪಿ: ಸಾರ್ವಜನಿಕರ ದೈನಂದಿನ ಜೀವನದಲ್ಲಿ ಹಾಸುಹೊಕ್ಕಿರುವ ಪ್ಲಾಸ್ಟಿಕ್ ನ ಬಳಕೆಯ ನಂತರ, ಅದರ ತ್ಯಾಜ್ಯ ವಿಲೇವಾರಿ ಸಮಸ್ಯೆ ಎಲ್ಲೆಡೆ ಕಂಡುಬರುತ್ತಿದೆ. ಪ್ಲಾಸ್ಟಿಕ್ ನಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬೇಕಾದ ಬೃಹತ್ ಸಮಸ್ಯೆಯೂ ನಮ್ಮ ಮುಂದಿದೆ. ಪ್ಲಾಸ್ಟಿಕ್ ಅನ್ನು ಒಂದು ತ್ಯಾಜ್ಯವೆಂದು ಪರಿಗಣಿಸುವ ಬದಲಿಗೆ ಅದನ್ನು ಸೂಕ್ತ ರೀತಿಯಲ್ಲಿ ಮರುಬಳಕೆ ಮಾಡಿದರೆ ಅದು ಒಂದು ಸಂಪನ್ಮೂಲವಾಗುತ್ತದೆ ಎಂಬುದಕ್ಕೆ ಉಡುಪಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಿಸಿದ ರಸ್ತೆ ಸಾಕ್ಷಿಯಾಗಿದೆ. ಪ್ಲಾಸ್ಟಿಕ್ ತ್ಯಾಜ್ಯದ ಮರುಬಳಕೆ ಕುರಿತಂತೆ 2019 ರ ಡಿಸೆಂಬರ್ 10 ರಂದು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಅಡಿಯಲ್ಲಿ ಪ್ಲಾಸ್ಟಿಕ್ …

Read More »

ವಿಟ್ಲ: ಮನೆಮನೆಗೆ ತೆರಳಿ ಮತದಾನ ಸಮೀಕ್ಷೆ; ಸಂಶಯಗೊಂಡು ಪೊಲೀಸರಿಗೊಪ್ಪಿಸಿದ ಸ್ಥಳೀಯರು..!!

ವಿಟ್ಲ: ಮನೆಮನೆಗೆ ತೆರಳಿ ಮತದಾನ ಸಮೀಕ್ಷೆ ನಡೆಸುತ್ತಿದ್ದ ತಂಡವನ್ನು ಸಂಶಯಗೊಂಡ ಸ್ಥಳೀಯರು ಅವರನ್ನು ವಿಟ್ಲ ಪೊಲೀಸರ ವಶಕ್ಕೆ ನೀಡಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಸಾಲೆತ್ತೂರು ಭಾಗಕ್ಕೆ ಆಗಮಿಸಿದ ತಂಡದಲ್ಲಿ ಸುಮಾರು 11 ಜನರಿದ್ದು, ಅದರಲ್ಲಿ 6 ಮಂದಿ ಯುವತಿಯರ ತಂಡ ಮನೆಮನೆಗೆ ತೆರಳಿ, ಜನರ ಬಳಿ ನಿಮ್ಮ ಕ್ಷೇತ್ರ ಯಾವುದು? ಯಾವ ಪಕ್ಷಕ್ಕೆ ಮತದಾನ ಮಾಡುತ್ತೀರಿ? ಇತ್ಯಾದಿ ಪ್ರಶ್ನೆಗಳನ್ನು ಕೇಳುತ್ತಿದ್ದರು. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಅವರನ್ನು ವಿಚಾರಿಸಿದಾಗ ನಾವು ಧ್ರುವ ಕಂಪೆನಿ ವತಿಯಿಂದ ಬಂದಿದ್ದು, ಮತದಾನ ಸಮೀಕ್ಷೆ ಮಾಡುತ್ತಿದ್ದೇವೆ ಎಂದು ಹೇಳಿದರೆ ಹೊರತು …

Read More »

ಮದುವೆ ಹಿಂದಿನ ದಿನ ವರ ಎಸ್ಕೇಪ್​: ಮರುಕ್ಷಣವೇ ವಧು ತೆಗೆದುಕೊಂಡ ನಿರ್ಧಾರ ಕೇಳಿ ಹುಬ್ಬೇರಿಸಿದ ಅತಿಥಿಗಳು

ಕೊಟ್ಟಾಯಂ: ಮದ್ವೆ ಅನ್ನೋದು ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ತರ ಘಟ್ಟ. ನೂರಾರು ಕನಸಿನ ಬುತ್ತಿಯೊಂದಿಗೆ ವಧು-ವರರು ದಾಂಪತ್ಯಕ್ಕೆ ಕಾಲಿಡುತ್ತಾರೆ. ಅದಕ್ಕೂ ಮುನ್ನ ಮದ್ವೆ ಹೀಗೆ ನಡೆಯಬೇಕು ಎಂದು ಯೋಜನೆ ರೂಪಿಸಿರುತ್ತಾರೆ. ಆದರೆ, ನಮ್ಮ ಕೈಯಲ್ಲಿ ಏನೂ ಇಲ್ಲ ಎನ್ನುವಂತೆ ಕೆಲವೊಮ್ಮೆ ಅನಿರೀಕ್ಷಿತ ಘಟನೆಗಳು ನಡೆದುಬಿಡುತ್ತವೆ. ಇದಕ್ಕೆ ತಾಜಾ ನಿದರ್ಶನ ಎಂಬಂತೆ ಕೇರಳದಲ್ಲಿ ಒಂದು ಘಟನೆ ನಡೆದಿದೆ. ನಾಳೆ ಮದುವೆ ನಡೆಯಬೇಕು ಅನ್ನುವಷ್ಟರಲ್ಲಿ ಮದುವೆಯ ಹಿಂದಿನ ದಿನದಂದು ವರ ನಾಪತ್ತೆಯಾದ ಸಂಗತಿ ವಧುವಿನ ಕುಟುಂಬವನ್ನು ಆಘಾತಕ್ಕೆ ದೂಡಿತು. ಆದರೆ, ನಂತರ ನಡೆದಿದ್ದು ಮದುವೆಗೆ ಬಂದಿದ್ದ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿತು. …

Read More »

ಮಂಗಳೂರು:ವಿಷಾಹಾರ ಸೇವಿಸಿ 137 ವಿದ್ಯಾರ್ಥಿಗಳು ಅಸ್ವಸ್ಥ; ಜಿಲ್ಲಾಧಿಕಾರಿ, ಶಾಸಕರ ಭೇಟಿ ಪರಿಶೀಲನೆ

ಮಂಗಳೂರು: ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಚಿಕಿತ್ಸೆಗಾಗಿ ನಗರದ ನಗರ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಹಾಗೂ ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಕೆ.ಜಗದೀಶ, ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌, ಶಾಸಕ ವೇದವ್ಯಾಸ ಕಾಮತ್‌ ಹಾಗೂ ಕಾಂಗ್ರೆಸ್‌ ಮುಖಂಡ ಜೆ.ಆರ್‌.ಲೋಬೊ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ. ಭಾನುವಾರವೂ ಆಹಾರ ಸೇವಿಸಿದ್ದ ಕೆಲವು ವಿದ್ಯಾರ್ಥಿನಿಯರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು. ಸೋಮವಾರ ಮಧ್ಯಾಹ್ನ ಹಾಸ್ಟೆಲ್‌ನ ಬಹುತೇಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಬಳಿಕ ಎ.ಜೆ ಆಸ್ಪತ್ರೆಯಲ್ಲಿ 52, …

Read More »

You cannot copy content of this page.