ತಾಜಾ ಸುದ್ದಿ

BREAKING ಮಂಗಳೂರು:ರಾತ್ರಿ ಊಟ ಸೇವಿಸಿದ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ, ವಿವಿಧ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ರವಾನೆ

ಮಂಗಳೂರು;ನಗರದ‌ ನರ್ಸಿಂಗ್ ಕಾಲೇಜಿನ ಹಾಸ್ಟೆಲೊಂದರಲ್ಲಿ ರಾತ್ರಿ ಆಹಾರ ಸೇವಿಸಿದ ಬಳಿಕ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ವಿಷ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿದ್ದು ತಕ್ಷಣ ವಿದ್ಯಾರ್ಥಿಗಳನ್ನು ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಜೆ ಆಸ್ಪತ್ರೆ, ಸಿಟಿ ಆಸ್ಪತ್ರೆ, ಮಂಗಳ ಆಸ್ಪತ್ರೆ, ಫಾದರ್ ಮುಲ್ಲರ್ ಸೇರಿ ವಿವಿಧ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More »

ಕಾರ್ಕಳ : ಟಿಪ್ಪರ್ ಗೆ ಬೈಕ್ ಡಿಕ್ಕಿ – ಇಬ್ಬರಿಗೆ ಗಾಯ

ಕಾರ್ಕಳ : ಬೈಕ್ ಟಿಪ್ಪರ್ ಗೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಾಳ ಘಾಟಿಯ ಅಬ್ಬಾಸ್ ಕಟ್ಟಿಂಗ್ ಎಂಬಲ್ಲಿ ಫೆ.5ರಂದು ನಡೆದಿದೆ.ಬೈಕ್ ಸವಾರ ಸಾಕ್ಷತ್ ಹಾಗೂ ಸಹಸವಾರ ಸತೀಶ್ ಗಾಯಗೊಂಡವರು. ಸಾಕ್ಷತ್ ತನ್ನ ಬೈಕಿನಲ್ಲಿ ಸತೀಶ ಅವರೊಂದಿಗೆ ಎಸ್‌ಕೆ ಬಾರ್ಡರ್ ಕಡೆಯಿಂದ ಮಾಳ ಕಡೆಗೆ ಹೋಗುತ್ತಿದ್ದಾಗ ಅಬ್ಬಾಸ್ ಕಟ್ಟಿಂಗ್ ಎಂಬಲ್ಲಿ ರಸ್ತೆಯ ತಿರುವಿನಲ್ಲಿ ತೀರಾ ಬಲಭಾಗಕ್ಕೆ ಬಂದು ಮಾಳ ಕಡೆಯಿಂದ ಎಸ್‌ಕೆ ಬಾರ್ಡರ್ ಕಡೆಗೆ ಹೋಗುತ್ತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಟಿಪ್ಪರ್‌ನ ಚಕ್ರದ ಅಡಿಗೆ ಸಿಲುಕಿದ …

Read More »

ಮಂಗಳೂರು: ಜುವೆಲ್ಯರಿ ಸಿಬ್ಬಂದಿ ಹತ್ಯೆ ಕೇಸ್ – ಪೊಲೀಸರಿಂದ ಶಂಕಿತನ ಪೋಟೋ ಬಿಡುಗಡೆ

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ …

Read More »

ದುಷ್ಕರ್ಮಿಗಳಿಂದ 14 ಹಿಂದೂ ದೇವಾಲಯಗಳ ಧ್ವಂಸ…!

ಢಾಕಾ: ವಾಯವ್ಯ ಬಾಂಗ್ಲಾದೇಶದ 14 ಹಿಂದೂ ದೇವಾಲಯಗಳನ್ನು ಅಪರಿಚಿತ ದುಷ್ಕರ್ಮಿಗಳು ರಾತ್ರೋರಾತ್ರಿ ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಠಾಕೂರ್‌ಗಾಂವ್‌ನ ಬಲಿಯಾದಂಗಿ ಉಪಜಿಲಾದಲ್ಲಿನ ಹಿಂದೂ ಸಮುದಾಯದ ಮುಖಂಡ ವಿದ್ಯಾನಾಥ್ ಬರ್ಮನ್ ಮಾತನಾಡಿ, ‘ಅಪರಿಚಿತ ದುಷ್ಕರ್ಮಿಗಳು ರಾತ್ರೋರಾತ್ರಿ ದಾಳಿ ನಡೆಸಿ 14 ದೇವಾಲಯಗಳ ವಿಗ್ರಹಗಳನ್ನು ಧ್ವಂಸಗೊಳಿಸಿದ್ದಾರೆ. ಅಪರಾಧಿಗಳನ್ನು ಇನ್ನೂ ಗುರುತಿಸಲಾಗಿಲ್ಲ. ಅವರಿಗೆ ಶೀಘ್ರವೇ ಶಿಕ್ಷೆಯಾಗಬೇಕು ಎಂದು ನಾವು ಬಯಸುತ್ತೇವೆ’ ಎಂದು ಹೇಳಿದ್ದಾರೆ. ಬಲಿಯಡಂಗಿ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಖೈರುಲ್ ಅನಮ್ ಮಾತನಾಡಿ, ಶನಿವಾರ ರಾತ್ರಿ ಮತ್ತು ಭಾನುವಾರ ಮುಂಜಾನೆ ಹಲವಾರು ಗ್ರಾಮಗಳಲ್ಲಿ ದಾಳಿಗಳು ನಡೆದಿವೆ. …

Read More »

ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಸ್ಪರ್ಧೆಯಿಂದ ಹಿಂದುಗಳ ಮತ ವಿಭಜನೆ: ವಿ ಸುನೀಲ್​​​ಕುಮಾರ್

ಗಂಗಾವತಿ: ಹಿಂದುತ್ವದ ಅಜೆಂಡಾದೊಂದಿಗೆ ಕಾರ್ಕಳದಿಂದ ಸ್ಪರ್ಧಿಸುವುದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್​ ಮುತಾಲಿಕ್ ನೀಡಿರುವ ಹೇಳಿಕೆ ಸ್ವಾಗತಾರ್ಹ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು. ತಾಲೂಕಿನ ಶ್ರೀರಾಮನಗರದಲ್ಲಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುತಾಲಿಕ್ ಸ್ಪರ್ಧೆಯಿಂದ ಹಿಂದುತ್ವದ ವೋಟ್ ಡಿವೈಡ್ ಆಗಲಿದೆ. ಹಿಂದು ಪರ ರಾಜಕೀಯಕ್ಕೆ ಹಿನ್ನಡೆ ಆಗುವುದು ನಿಜ. ಆದರೆ, ಇದು ಇನ್ನೊಬ್ಬರಿಗೆ ಅನುಕೂಲ ಕಲ್ಪಿಸಿದಂತಾಗಲಿದೆ. ಈ ಬಗ್ಗೆ ಮುತಾಲಿಕ್ ಇನ್ನೊಮ್ಮೆ ಪರಿಶೀಲಿಸಬೇಕು ಎಂದು ಮನವಿ ಮಾಡಿದರು. ಪ್ರಮೋದ್ ಮುತಾಲಿಕ್ ಎಲ್ಲಾದರೂ ಸ್ಪರ್ಧಿಸಲಿ, …

Read More »

ವಿಟ್ಲ: ಫೆ.6 ರಿಂದ 16 ರವರೆಗೆ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ವಿಟ್ಲ: ಇತಿಹಾಸ ಪ್ರಸಿದ್ಧ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.6 ರಿಂದ 16 ರವರೆಗೆ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ನಡೆಯಲಿದೆ. ವಿವಿಧ ವೈದಿಕ,ತಾಂತ್ರಿಕ,ಧಾರ್ಮಿಕ ಹಾಗೂ ಸಾಂಸ್ಕತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ,ಶ್ರೀ ಧಾಮ ಮಾಣಿಲದ ಪರಮಪೂಜ್ಯ ಯೋಗಿ ಕೌಸ್ತುಭ ಕರ್ಮಯೋಗಿ ಶ್ರೀ ಶ್ರೀ ಶ್ರೀ ಮೊಹನದಾಸ ಪರಮಹಂಸ ಸ್ವಾಮೀಜಿ, ಹಾಗೂ ಶ್ರೀ ಚಾಮುಂಡೇಶ್ವರೀ ದೇವಿ ಸನ್ನಿಧಿ ಕಣಿಯೂರು ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಇವರು ಪಾಲ್ಗೊಂಡು …

Read More »

ಕಾಪು: ವ್ಯಕ್ತಿಯನ್ನು ಇರಿದು ಕೊಲೆ ಮಾಡಿದ ದುಷ್ಕರ್ಮಿಗಳು..!

ಉಡುಪಿ :  ಉಡುಪಿ ಜಿಲ್ಲೆಯಲ್ಲಿ ವ್ಯಕ್ತಿಯೋರ್ವರನ್ನು ದುಷ್ಕರ್ಮಿಗಳು ಇರಿದು ಕೊಲೆ ಮಾಡಿದ್ದಾರೆ. ಉಡುಪಿ ಜಿಲ್ಲೆ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳದಲ್ಲಿ ಈ ಘಟನೆ ನಡೆದಿದ್ದು ಮೃತರನ್ನು 39 ವರ್ಷದ ಶರತ್ ಶೆಟ್ಟಿ ಎಂದು ಗುರುತ್ತಿಸಲಾಗಿದೆ. ಭೂ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶರತ್ ಶೆಟ್ಟಿ ಭೂ ವ್ಯವಹಾರ ಮಾಡಿಕೊಂಡಿದ್ದರು ಎನ್ನಲಾಗಿದೆ. ಪಾಂಗಾಳದಲ್ಲಿ ನೇಮೋತ್ಸದಲ್ಲಿದ್ದ ಶರತ್ ಶೆಟ್ಟಿಯಲ್ಲಿ ಕರೆ ಮಾಡಿ ಪಾಂಗಾಳ ಸೇತುವೆ ಬಳಿ ಬರಲು ಹೇಳಿದ ದುಷ್ಕರ್ಮಿಗಳು ಅಲ್ಲಿ ಬಂದ ಶೆಟ್ಟರ ಮೇಲೆ ಡ್ರಾಗರ್‌ನಿಂದ ಹಲ್ಲೆ ಮಾಡಿ ಬಳಿಕ ಪರಾರಿಯಾಗಿದ್ದಾರೆ, …

Read More »

ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಮತ್ತೆ ಬದಲಾವಣೆ

ನವದೆಹಲಿ: ಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದು, ಸೇನಾಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ(CEE) ಹಾಜರಾಗಬೇಕು. ನಂತರ ದೈಹಿಕ ಸಾಮರ್ಥ್ಯ ಮತ್ತು ವೈದ್ಯಕೀಯ ಪರೀಕ್ಷೆಗಳು ನಡೆಯಲಿವೆ. ಪ್ರಕ್ರಿಯೆಯಲ್ಲಿನ ಬದಲಾವಣೆಯ ಕುರಿತು ವಿವಿಧ ಪತ್ರಿಕೆಗಳಲ್ಲಿ ಸೇನೆಯು ಜಾಹೀರಾತುಗಳನ್ನು ನೀಡಿದೆ. ಈ ಸಂಬಂಧ ಫೆಬ್ರವರಿ ಮಧ್ಯದಲ್ಲಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ ಎಂದು ಶನಿವಾರ ಮೂಲಗಳು ತಿಳಿಸಿವೆ. ಮೊದಲ ಆನ್‌ಲೈನ್ ಸಿಇಇ ಏಪ್ರಿಲ್‌ನಲ್ಲಿ ದೇಶದಾದ್ಯಂತ ಸುಮಾರು 200 ಸ್ಥಳಗಳಲ್ಲಿ ನಡೆಯಲಿದೆ ಮತ್ತು ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಅಂತಿಮಗೊಳಿಸಲಾಗಿದೆ ಎಂದು …

Read More »

ಒಣ ಮೀನು ತಯಾರಿಸಲು ಯಂತ್ರ ಬಳಸಿ…

ಮಂಗಳೂರು: ಒಣ ಮೀನು ಪ್ರಿಯರಿಗೆ ಒಣ ಮೀನು ಸಿಕ್ಕಾರೆ ಆಯ್ತು, ಒಂದು ಚಂದದ ಮಸಾಲೆ ರೆಡಿ ಮಾಡಿ ಒಣ ಮೀನು ಸಾರು ಮಾಡುತ್ತಾರೆ. ಆದರೆ ಒಣ ಮೀನು ರೆಡಿ ಮಾಡೋ ಪ್ರಕ್ರಿಯೆಯನ್ನ ನೀವು ನೋಡಿದ್ರೆ ಮೀನು ತಿನ್ನೋ ಆಸೆಯನ್ನೇ ಬಿಟ್ಟುಬಿಡ್ತೀರ! ಹೌದು, ಒಣ ಮೀನು ಖರೀದಿ ಮಾಡುವವರು ಅದನ್ನು ಯಾವ ರೀತಿ ಸಂಸ್ಕರಣೆ ಮಾಡಿರುತ್ತಾರೆ ಎಂದು ಯೋಚಿಸಿರುವುದಿಲ್ಲ. ಮಂಗಳೂರಿನ ಬಹುತೇಕ ಮೀನುಗಾರ ಕುಟುಂಬಗಳೂ ಒಣ ಮೀನು ಉದ್ಯಮವನ್ನು ಮಾಡುತ್ತವೆ. ಹಸಿ ಮೀನನ್ನು ಉಪ್ಪಿನಲ್ಲಿ ಶೇಖರಿಸಿ ಕೊಳೆಸಿ ಒಣ ಮೀನು ತಯಾರಿಸಲಾಗುತ್ತದೆ. ಬಯಲು ಪ್ರದೇಶಗಳಲ್ಲಿ ಈ …

Read More »

ಉಡುಪಿ: ಸ್ವಚ್ಛತೆಗೆ ಮಾದರಿಯಾದ ಜಿಲ್ಲಾಧಿಕಾರಿ ವಸತಿಗೃಹ-ವಿನೂತನ ಕಾಂಪೋಸ್ಟ್ ಬೆಡ್ ನಿರ್ಮಾಣ

ಉಡುಪಿ : ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಯೋಜನೆಗಳನ್ನು ರೂಪಿಸಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆಯು ಪ್ರಸ್ತುತ ಮತ್ತೊಂದು ವಿನೂತನ ಸ್ವಚ್ಛತಾ ಕಾರ್ಯಕ್ರಮದ ಪ್ರಾಯೋಗಿಕ ಯೋಜನೆಗೆ ಜಿಲ್ಲಾಧಿಕಾರಿಗಳ ವಸತಿಗೃಹ ಸಾಕ್ಷಿಯಾಗಿದೆ. ಮನೆಯ ಕಾಂಪೌ0ಡ್ ನಲ್ಲಿ ಬೀಳುವ ಒಣಕಸವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡುವ ವಿಧಾನವನ್ನು ಉಡುಪಿ ಜಿಲ್ಲಾಧಿಕಾರಿಗಳ ವಸತಿಗೃಹದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿದ್ದು, ವಸತಿಗೃಹದಲ್ಲಿನ ಕೈ ತೋಟದ ಒಣ ಹುಲ್ಲು, ತೋಟದ ಗಿಡಗಳಿಂದ ಬಿದ್ದಿದ್ದ ಗಿಡದ ಎಲೆಗಳು, ಮರದ ಮೇಲಿಂದ ಬಿದ್ದ ಒಣ ಎಲೆಗಳನ್ನು ಒಟ್ಟುಗೂಡಿಸಿ, “ಡ್ರೈ ಲೀವ್ಸ್ …

Read More »

You cannot copy content of this page.