ತಾಜಾ ಸುದ್ದಿ

ಪುತ್ತೂರು ಕಂಬಳದಲ್ಲಿ ನನಗೆ ಯಾರೂ ಹೊಡೆದಿಲ್ಲ – ಸಾನ್ಯಾ ಅಯ್ಯರ್ ಸ್ಪಷ್ಟನೆ

ಬೆಂಗಳೂರು: ಪುತ್ತೂರು ಕಂಬಳದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಸ್ಪಷ್ಟನೆ ನೀಡಿದ್ದು, ಕಪಾಳ ಮೋಕ್ಷೆ ಮಾಡುವಂಥದ್ದು ಏನೂ ನಡೆದೇ ಇಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಪುತ್ತೂರಿನಲ್ಲಿ ನಡೆದ ಕಂಬಳಕ್ಕೆ ನಾನು ಅತಿಥಿಯಾಗಿ ಹೋಗಿದ್ದೆ. ಅವತ್ತು ಕಂಬಳವನ್ನು ಸರಿಯಾಗಿ ನೋಡಲು ಆಗದೇ ಇರುವ ಕಾರಣಕ್ಕಾಗಿ ಮತ್ತೆ ಸ್ನೇಹಿತೆಯರ ಜೊತೆ ಹೋದೆ. ಆಗ ಒಬ್ಬ ಹುಡುಗ ನನ್ನ ಫ್ರೆಂಡ್ಸ್ ಕೈ ಹಿಡಿದು ಎಳೆದ. ಭಯ ಆಯಿತು. ಆನಂತರ ಇದನ್ನು ಆಯೋಜಕರ ಗಮನಕ್ಕೆ ತಂದೆವು. ಆ ಹುಡುಗ …

Read More »

ಫೆ. 11ಕ್ಕೆ ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 11ರಂದು ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು, ಬಿಜೆಪಿ ನಾಯಕರು, ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಸೇರಿದಂತೆ ಬಿಜೆಪಿ ನಾಯಕರ ದಂಡೇ ಸಮಾವೇಶಕ್ಕೆ ಆಗಮಿಸಲಿದೆ. ದ.ಕ ಜಿಲ್ಲೆಯಾದ್ಯಂತ …

Read More »

ಅಬ್ಬಾ..! ಯೂಟ್ಯೂಬ್ ನೋಡಿ ಕಳ್ಳತನ ಕಲಿತ ‘ಖತರ್ನಾಕ್ ಜೋಡಿ’

ಧಾರವಾಡ: ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಒಡೆತನದ ಸಹಕಾರಿ ಬ್ಯಾಂಕ್ ಗೆ ಖದೀಮರು ನುಗ್ಗಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಯುವರಾಜ ರಾಂಪುರ ಹಾಗೂ ವೈಷ್ಣವಿ ಶಾಹೀನ್ ಎಂದು ಗುರುತಿಸಲಾಗಿದೆ. ಯುವರಾಜ ರಾಂಪುರ ಬ್ಯಾಂಕ್ ನ ಮಾಜಿ ಉದ್ಯೋಗಿಯಾಗಿದ್ದು, ವೈಷ್ಣವಿ ಬ್ಯಾಂಕ್ ನ ನಿರ್ದೇಶಕರ ಮಗಳು ಎಂದು ತಿಳಿದು ಬಂದಿದೆ. ಇವರಲ್ಲದೇ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯೂಟ್ಯೂಬ್ ವಿಡಿಯೋ …

Read More »

ಕಾರ್ಕಳ – ಲಾರಿ ಚಾಲಕರ ಗಲಾಟೆ ಕೊಲೆಯಲ್ಲಿ ಅಂತ್ಯ..!

ಕಾರ್ಕಳ : ಲಾರಿ ಚಾಲಕರ ನಡುವೆ ಪ್ರಾರಂಭವಾದ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಎಂಬಲ್ಲಿ ಜನವರಿ 30ರಂದು ರಾತ್ರಿ ವೇಳೆ ನಡೆದಿರುವುದಾಗಿ ವರದಿಯಾಗಿದೆ. ತಮಿಳುನಾಡಿನ ಲಾರಿ ಚಾಲಕ ಚಾಲಕ ಮಣಿ (36) ಎಂಬವರು ಕೊಲೆಯಾಗಿದ್ದು, ಕೊಲೆ ಆರೋಪಿ ಇನ್ನೋರ್ವ ಲಾರಿ ಚಾಲಕ ವೀರಬಾಹು ಎಂದು ಗುರುತಿಸಲಾಗಿದೆ. ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅದರಲ್ಲಿ‌ ಬಂದವರು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. …

Read More »

ಮಂಗಳೂರು: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ

ಮಂಗಳೂರು:ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಎಂಬಲ್ಲಿ ನಡೆದಿದೆ ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ.ಈತ ಹೆಚ್ಚು ಮೊಬೈಲ್ ಪೋ‌ನ್ ಬಳಕೆ ಮಾಡುತ್ತಿದ್ದ.ಇದಕ್ಕೆ ತಾಯಿ ಮೊಬೈಲ್ ಬಳಸದಂತೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ಬಾಗಿಲು ಹಾಕಿಕೊಂಡು ಜ್ಞಾನೇಶ್ ಕುಳಿತುಕೊಂಡಿದ್ದ.ಕೆಲ ಸಮಯದ ಬಳಿಕ ಪೋಷಕರು ನೋಡಿದಾಗ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ. ತಕ್ಷಣ ಬಾಗಿಲು ತೆರೆದು ನೇಣನ್ನು ಕತ್ತರಿಸಿ ಕೆಳಗೆ ಇಳಿಸಿ ನೋಡಿದಾಗ ಬಾಲಕ ಮೃತಪಟ್ಟಿರುವುದು ಕಂಡು ಬಂದಿದೆ.

Read More »

ಪುತ್ತೂರು: ಯುವಕ ಪ್ರಿಯತಮೆಯ ಜೂತೆ ಮಾತನಾಡುತ್ತಿರುವಾಗ ಮಾಜಿ ಪ್ರಿಯಕರ ತಂಡ ಕಟ್ಟಿಕೊಂಡು ಬಂದು ಹಲ್ಲೆ..!

ಯುವಕನೋರ್ವ ತನ್ನ ಪ್ರಿಯತಮೆ ಜೊತೆ ಮಾತನಾಡುತ್ತಿರುವಾಗ ಆಕೆಯ ಮಾಜಿ ಪ್ರಿಯಕರ ಸ್ನೇಹಿತರೊಂದಿಗೆ ಬಂದು ಹಲ್ಲೆ ನಡೆಸಿದ್ದಾನೆಂದು ಆರೋಪಿಸಿ ಯುವಕನೋರ್ವ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾನೆ. ಮಂಗಳೂರು ಕೋಡಿಕಲ್ ನಿವಾಸಿ ಸಾಗರ್ (23) ನೀಡಿದ ದೂರಿನ ಮೇರೆಗೆ ಕೌಶಿಕ್, ಯಜ್ಞೇಶ್, ಕೇಶವ, ಸೃಜನ್, ವಿನೀತ್, ಲತೇಶ್, ಮನ್ವಿತ್, ಮೋಹಿತ್, ಹೇಮಂತ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.29 ರಂದು ಮಧ್ಯಾಹ್ನ ಸಾಗರ್ ಕಂಬಳಗದ್ದೆಯಲ್ಲಿರುವ ವೇಳೆ ಆತನ ಪ್ರೇಯಸಿ ಕೂಡ ಇದ್ದು, ಅವಳಲ್ಲಿ ಮಾತನಾಡುತ್ತಿರುವಾಗ ಕೌಶಿಕ್ ಎಂಬಾತ ಬಂದು ‘ನೀನು ಯಾರು..!!??, ಎಲ್ಲಿಯವ..!!??, …

Read More »

ಸತೀಶ್‌ ಜಾರಕಿಹೊಳಿಗೆ ತಾಕತ್ತಿದ್ದರೆ ಹಿಂದೂ ಮತಗಳು ಬೇಡ ಅಂತಾ ಹೇಳಲಿ: ನಳಿನ್ ಕುಮಾರ್ ಕಟೀಲ್ ಸವಾಲ್‌

ಬೆಳಗಾವಿ: ಸತೀಶ್ ಜಾರಕಿಹೋಳಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದೂ ಸಮಾಜವನ್ನು ಅಶ್ಲೀಲ ಎಂದು ಹೇಳಿದ್ದ ಸತೀಶ್‌ ಜಾರಕಿಹೊಳಿಗೆ ಧಮ್‌ ಇದ್ದರೆ ಚುನಾವಣೆಗೆ ಹಿಂದೂ ಮತಗಳು ಬೇಡ ಅಂತಾ ಅವರು ಹೇಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಮಕನಮರಡಿ ಮತಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ ಎಂದರು.‌ಯಾವ ಹಿಂದೂ ಸಮಾಜವನ್ನು ಅಶ್ಲೀಲ ಸಮಾಜ ಅಂತ ಹೇಳಿದ್ದಾರೆಯೋ, ಅವರು ತಾಕತ್ತಿದ್ದರೆ ಹಿಂದೂ ಮತಗಳು ಬೇಡ ಅಂತ ಹೇಳಲಿ ಎಂದು ಸವಾಲ್‌ ಹಾಕಿದ್ದಾರೆ.

Read More »

ಮುಸ್ಲಿಂ ಬಾಲಕನಿಂದ ಶಿವಾಜಿ ಬಗ್ಗೆ ನಿಂದನೆ : ವಶಕ್ಕೆ ಪಡೆದ ಪೊಲೀಸರು

ವಿಜಯಪುರ: ಕಾನೂನು ಸಂಘರ್ಷಕ್ಕೊಳಗಾದ ಬಾಲಕ ವಾಟ್ಸಾಪ್ ನಲ್ಲಿ ಹರಿಬಿಟ್ಟ ಶಿವಾಜಿ ಮಹಾರಾಜರ ಕುರಿತ ನಿಂದನೆಯ ಘಟನೆ ಚಡಚಣ ಪಟ್ಟದಿಂದ ವರದಿಯಾಗಿದೆ. ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳು ಹೋರಾಟಕ್ಕೆ ಸಿದ್ಧವಾಗುತ್ತಿರುವ ಬೆನ್ನಲ್ಲೇ ಪೊಲೀಸರು ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾನೂನು ಸಂಘರ್ಷಕ್ಕೊಳಗಾದ ಬಾಲಕ ಸೋಮವಾರ ರಾತ್ರಿ ತನ್ನ ವಾಟ್ಸಾಪ್ ಸ್ಟೇಟಸ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಅಶ್ಲೀಲ ಪದ ಬಳಸಿ ನಿಂದನೆ ಮಾಡಿದ್ದ. ಸದರಿ ವಿಡಿಯೋ ಬೆಳಕು ಹರಿಯುವ ವೇಳೆಗೆ ವೈರಲ್ ಅಗಿದ್ದು, ವಿಷಯ ತಿಳಿದು ಕುಪಿತರಾದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು …

Read More »

ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ

ದೆಹಲಿಯ ಪಶ್ಚಿಮ ವಿಹಾರ್‌ ನಲ್ಲಿ ಸೋಮವಾರ 32 ವರ್ಷದ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪೊಲೀಸರ ಪ್ರಕಾರ, ಮೃತರನ್ನು ಜ್ಯೋತಿ ಎಂದು ಗುರುತಿಸಲಾಗಿದ್ದು, ಘಟನೆ ಸಂಭವಿಸಿದಾಗ ಸಂಜೆ 7:30 ರ ಸುಮಾರಿಗೆ ತನ್ನ ಕಚೇರಿಯಿಂದ ಹಿಂತಿರುಗುತ್ತಿದ್ದರು. ಮಹಿಳೆ ಫ್ಲಿಪ್‌ ಕಾರ್ಟ್‌ ನ ಕೊರಿಯರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೃತಳ ಪತಿ ದೀಪಕ್ ಅವರು ತಮ್ಮ ಮನೆಗೆ ಹೋಗುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಬೈಕ್‌ ನಲ್ಲಿ ಬಂದಿದ್ದು, ಗುಂಡು ಹಾರಿಸಿದ್ದಾರೆ ಎಂದು ಹೇಳಿದ್ದಾರೆ.

Read More »

ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ ಭೇಟಿ : ಫೆ. 6 ರಂದು ಬೆಂಗಳೂರು, ತುಮಕೂರಿನ ಸಮಾವೇಶದಲ್ಲಿ ಭಾಗಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ನೀಡಲಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಚುನಾವಣೆ ನಡೆಯಲಿರುವ ಕರ್ನಾಟಕಕ್ಕೆ ಇದು ಅವರ ಮೂರನೇ ಭೇಟಿಯಾಗಿದೆ. ಫೆಬ್ರವರಿ 6 ರಂದು ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಮೋದಿ ಅವರು ಇಂಡಿಯಾ ಎನರ್ಜಿ ವೀಕ್ ಅನ್ನು ಉದ್ಘಾಟಿಸಲಿದ್ದಾರೆ. ನಂತರ ತುಮಕೂರಿನ ಗುಬ್ಬಿ ತಾಲ್ಲೂಕಿನ ಬಿದರಹಳ್ಳಿ ಕಾವಲ್ ಗೆ ತೆರಳಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಹೆಲಿಕಾಪ್ಟರ್ ಫ್ಯಾಕ್ಟರಿಯನ್ನು ಉದ್ಘಾಟಿಸಲಿದ್ದು, ಚಿಕ್ಕನಾಯಕನಹಳ್ಳಿ ಮತ್ತು ತಿಪಟೂರಿನಲ್ಲಿ ಜಲ ಜೀವನ್ ಮಿಷನ್ ಯೋಜನೆಗಳಿಗೆ …

Read More »

You cannot copy content of this page.