ತಾಜಾ ಸುದ್ದಿ

ಬಂಟ್ವಾಳ ಫ್ಲೈ ಓವರ್ ಅಡಿಯಲ್ಲಿ ಅನಾಥ ಸ್ಥಿತಿಯಲ್ಲಿದ್ದ ಕಾರು ‘ಸ್ಯಾಂಟ್ರೋ ರವಿ’ದ್ದು!?

ಬಂಟ್ವಾಳ : ಕಳೆದ ಕೆಲವು ದಿನಗಳಿಂದ ಟೊಯೋಟಾ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿಸಿರೋಡಿನಲ್ಲಿ ಅನಾಥವಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಕಾರಿನ ಬಗ್ಗೆ ಸಾಕಷ್ಟು ಸಂಶಯಗಳು ಮೂಡಿದೆ. ಬಿ ಸಿ ರೋಡಿನ ಭಾರತ್ ಸ್ಟೋರ್ ಮುಂಭಾಗದಲ್ಲಿ ಪ್ಲೈ ಓವರ್ ನ ಅಡಿಭಾಗದಲ್ಲಿ ಕೆ ಎಲ್ ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿದ್ದು , ಸಾರ್ವಜನಿಕ ವಲಯದಲ್ಲಿ ಇದು ಇತ್ತೀಚಿಗೆ ಬಾರೀ ಸುದ್ಧಿಯಾಗಿತ್ತು. ಅಲ್ಲದೆ ಇದು ಸ್ಯಾಂಟ್ರೋ ರವಿ ಅವರಿಗೆ ಸೇರಿದ ಕಾರು ಎಂಬ ವದಂತಿ ಹರಡಿದೆ. ಅಸಲಿಗೆ ಇದು ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ …

Read More »

BREAKING NEWS : ಮುಂಬೈ-ಗೋವಾ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : 9 ಮಂದಿ ಸ್ಥಳದಲ್ಲೇ ಸಾವು

ಮುಂಬೈ : ಮುಂಬೈ-ಗೋವಾ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಮುಂಬೈ-ಗೋವಾ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟರೆ, 4 ವರ್ಷದ ಮಗು ಗಂಭೀರವಾಗಿ ಗಾಯಗೊಂಡಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಿದರು. ಸ್ಥಳೀಯರ ಸಹಾಯದಿಂದ ಗಾಯಗೊಂಡ ಮಗುವನ್ನು ಕಾರಿನಿಂದ ಹೊರತೆಗೆದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಘಾತದ ಕಾರಣದ …

Read More »

Good News : ರಾಜ್ಯದ `BPL’ ಕುಟುಂಬಗಳಿಗೆ ಮಾಸಿಕ 2,000 ರೂ. ಆರ್ಥಿಕ ನೆರವು : ಆರ್.ಅಶೋಕ್ ಘೋಷಣೆ

ಕಲಬುರಗಿ : ರಾಜ್ಯ ಸರ್ಕಾರವು ಬಿಪಿಎಲ್ ಕುಟುಂಬಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2,000 ರೂ. ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ. ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್. ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ರೂ. ನೆರವು ನೀಡಲು ರಾಜ್ಯ ಸರ್ಕಾರನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ 2000 ರೂ. ನೀಡುವುದಾಗಿ ಹೇಳಿದ್ದಾರೆ. …

Read More »

ರಾಷ್ಟ್ರೀಯ ತರಬೇತುದಾರರಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ

ನವದೆಹಲಿ: ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಭಾರತದ ಇತರ ಅಗ್ರ ಕುಸ್ತಿಪಟುಗಳೊಂದಿಗೆ ಬುಧವಾರ ನವದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಫೋಗಟ್‌, “ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. WFI ಅಧಿಕಾರಿಗಳು ಅಥ್ಲೀಟ್‌ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ” ಎಂದು ಆರೋಪಿಸಿದ್ದಾರೆ. ಅಲ್ಲದೇ, ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ಸ್ಥಾನದಿಂದ ವಜಾಗೊಳಿಸಬೇಕು ಎಂದು …

Read More »

ಶಾಲೆಯಲ್ಲಿ ಹೃದಯಾಘಾತ: 8ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ರಾಜ್​ಕೋಟ್: ಶಾಲಾ ಮಕ್ಕಳೂ ಹೃದಯಾಘಾತಕ್ಕೀಡಾಗಿ ಸಾವಿಗೀಡಾಗುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಈ ಪಟ್ಟಿಗೆ ಇದೀಗ ಇನ್ನೊಂದು ಹೆಸರು ಸೇರಿಕೊಂಡಿದೆ. ಎಂಟನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾಳೆ. ಗುಜರಾತ್​ನ ರಾಜ್​ಕೋಟ್​ ಎಂಬಲ್ಲಿನ ಶ್ರೀಅಮೃತ್​ಲಾಲ್ ವೀರ್​ಚಂದ್ ಜಸಾನಿ ವಿದ್ಯಾಮಂದಿರದಲ್ಲಿ ಮಂಗಳವಾರ ಬೆಳಗ್ಗೆ ಈ ಪ್ರಕರಣ ನಡೆದಿದೆ. ಇಲ್ಲಿನ ಎಂಟನೇ ತರಗತಿ ವಿದ್ಯಾರ್ಥಿನಿ ರಿಯಾ ಸೋನಿ ಸಾವಿಗೀಡಾದ ಬಾಲಕಿ. ಮಂಗಳವಾರ ಬೆಳಗ್ಗೆ 7.23ಕ್ಕೆ 8ನೇ ತರಗತಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ರಿಯಾ ಸೋನಿ ಅಸ್ವಸ್ಥಗೊಂಡಿದ್ದು, ಕೂಡಲೇ ಆಕೆಯ ಪಾಲಕರಿಗೆ ಮಾಹಿತಿ ನೀಡಲಾಗಿತ್ತು. ಅವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಆಕೆ ಅಲ್ಲಿಗೆ …

Read More »

ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ಇತ್ತೀಚೆಗೆ ಹೊಸಕೋಟೆಯ  ಅಮಾನಿಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಒಂದು ಪತ್ತೆಯಾಗಿತ್ತು. ಶವ ಪತ್ತೆಯಾದ 24 ಗಂಟೆಯಲ್ಲಿ ಪೊಲೀಸರು ಘಟನೆಯ ಅಸಲಿಯತ್ತನ್ನು ಪತ್ತೆ ಹಚ್ಚಿದ್ದಾರೆ. ಜನವರಿ 6 ರಂದು ನಾಪತ್ತೆಯಾಗಿದ್ದ 30 ವರ್ಷದ ಯುವಕನನ್ನು ದುಷ್ಕರ್ಮಿಗಳು ಬೇರೆಡೆ ಕರೆದುಕೊಂಡು ಹೋಗಿ ಕೊಲೆ ಮಾಡಿ ಕೆರೆಯಲ್ಲಿ  ಶವವನ್ನು ಎಸೆದಿದ್ದರು. ಇದೀಗ ಪೊಲೀಸರು ಹಂತಕರ ಹೆಡೆಮುರಿಕಟ್ಟಿದ್ದಾರೆ. ಮೃತ ವ್ಯಕ್ತಿಯ ಕೈ ಮೇಲಿದ್ದ ಹಚ್ಚೆಯಿಂದ ಪೊಲೀಸರು ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನವರಿ 1 ರಂದು ನಂದಿನಿ ಲೇಔಟ್ ನಿವಾಸಿ ಗೋಪಾಲ ಕೆಲಸದ ನಿಮಿತ್ತ ಮನೆಯಿಂದ ಹೊರಟಿದ್ದರು. ಆದರೆ 6-7 …

Read More »

ಉಪ್ಪಿನಂಗಡಿ: ಟಯರ್ ಅಂಗಡಿಯಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟ, ಓರ್ವ ದುರ್ಮರಣ

ಉಪ್ಪಿನಂಗಡಿ: ಟಯರ್ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಓರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿ ನಡೆದಿದೆ. ಆಲಂಕಾರು ನಿವಾಸಿ ರಾಜೇಶ್ ಪೂಜಾರಿ (43) ಮೃತ ವ್ಯಕ್ತಿ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ ಆದರೆ ಅವರು ಮೃತಪಟ್ಟಿದ್ದರು. ಇನ್ನು ಸ್ಫೋಟದಿಂದಾಗಿ ಅಂಗಡಿಯಲ್ಲೆ ಹೊಗೆ ಕಾಣಿಸಿದೆ. ಅಂಗಡಿಗೂ ಹಾನಿಯಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ಕೋಳಿಗಳನ್ನು ಅರೆಸ್ಟ್ ಮಾಡಿದ ಪೋಲಿಸ್!

ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರ ಹತ್ತಿರದ ಬಸವಣ್ಣ ಕ್ಯಾಂಪ್‍ನಲ್ಲಿ ಸಂಕ್ರಮಣ ನಿಮಿತ್ತ ಕೋಳಿ ಕಾಳಗ ನಡೆದಿತ್ತು. ಮಂಗಳವಾರ ಸಂಜೆ ಜೂಜು ಅಡ್ಡೆ ಮೇಲೆ ದಾಳಿ ಮಾಡಿರುವ ಪೊಲೀಸರು ಯಾವೊಬ್ಬ ಗ್ಯಾಂಬ್ಲರ್ ಅನ್ನು ಬಂಧಿಸಿಲ್ಲ. ಬದಲಾಗಿ ಹುಂಜಗಳು ಸಿಕ್ಕಿದ್ದು, ಜೊತೆಗೆ ಬೈಕ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಸಿಕ್ಕಿರುವ ಹುಂಜಗಳನ್ನು ಕರೆತಂದಿರುವ ಪೊಲೀಸರು ಸೆಲ್‌ನಲ್ಲಿ ಇಟ್ಟಿದ್ದಾರೆ. ದಾಳಿ ವೇಳೆ ಜೂಜುಕೋರರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ಸಬೂಬು ಹೇಳಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಂಕ್ರಾಂತಿ, ಯುಗಾದಿ, ದೀಪಾವಳಿ ಹಬ್ಬದ ನೆಪದಲ್ಲಿ …

Read More »

ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ

ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ 5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು …

Read More »

ಸುಳ್ಯ; ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ರಾ.ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Read More »

You cannot copy content of this page.