ತಾಜಾ ಸುದ್ದಿ

ಮಂಗಳೂರು: ಉದ್ಯೋಗಕ್ಕೆ ತೆರಳಿದ್ದ ಯುವತಿ ನಾಪತ್ತೆ

ಮಂಗಳೂರು: ನಗರದ ಮಣಪ್ಪುರಂ ಫೈನಾನ್ಸ್‌ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ 5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು ಕನ್ನಡ ಭಾಷೆ ಮಾತನಾಡುತ್ತಾರೆ.ಮನೆಯಿಂದ ಹೊರಟು ಹೋದಾಗ ಹಸಿರು …

Read More »

ಸುಳ್ಯ; ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ರಾ.ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಕಾರು ಚಲಾಯಿಸಿಕೊಂಡು ಬರುತ್ತಿದ್ದು, ಅರಂತೋಡು ಬಳಿ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Read More »

ಮಂಗಳೂರು: ಲಯನ್ಸ್ ವತಿಯಿಂದ ರಸ್ತೆ ಸುಕ್ಷತಾ ಕಾರ್ಯಗಾರ

ಮಂಗಳೂರು:  ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ವತಿಯಿಂದ ಅಶೋಕ ಭವನ ಕದ್ರಿ ಯಲ್ಲಿ ನಡೆದ ಲಯನ್ಸ್ ಸಭೆಯಲ್ಲಿ ರಸ್ತೆ ಸುರಕ್ಷತಾ ಅಭಿಯಾನ ಕಾರ್ಯಕ್ರಮ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ಮತ್ತು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಪ್ರತಿಭಾ ಕ್ಷೇತ್ರದಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳಾದ ಕುಮಾರಿ ಸಮೃದ್ಧಿ ಹಾಗೂ ಸಿಂಚನ ರವರಿಗೆ ಮತ್ತು ಕೃಷಿ ಕ್ಷೇತ್ರದ ರಾಸಾಯನಿಕ ಮುಕ್ತ ಸಾವಯವ ಕೃಷಿ ಬಗ್ಗೆ ಸುರೇಶ್ ರೈ ಮಾತಾಡಿ ಮಾಹಿತಿ ನೀಡಿದರು. ಸಾಧನೆಗೈದ ಇಬ್ಬರು ಕೃಷಿಕರಿಗೆ ಸನ್ಮಾನ. ಮತ್ತು ಇಬ್ಬರು ರಾಜ್ಯ ಮತ್ತು ಅಂತರ್ ರಾಜ್ಯ ಮಟ್ಟದ ಹಲವಾರು …

Read More »

BREAKING NEWS : ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತ : ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಉಡುಪಿ : ಉಡುಪಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ನಿಯಂತ್ರಣ ತಪ್ಪಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಮಂಜುನಾಥ ಪೆಟ್ರೋಲ್ ಬಂಕ್ ಬಳಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ಕಳೆದುಕೊಮಡು ಟ್ರಕ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಸಾಲಿಗ್ರಾಮ ಸಮೀಪದ ಸಮಿತ್ ಕುಮಾರ್ ಎಮ್ ಜಿ (19) ಮತ್ತು ವಾಗೀಶ್ ಕೆದ್ಲಾಯ (19) ಎಂದು ಗುರುತಿಸಲಾಗಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಪುತ್ತೂರು: ಯುವತಿಯ ಬರ್ಬರ ಹತ್ಯೆಗೆ ಪ್ರೀತಿ ನಿರಾಕರಣೆ ಕಾರಣ-ಪ್ರೀತಿಸುತ್ತಿದ್ದ ಯುವಕನ ವಿರುದ್ಧ ದೂರು

ಪುತ್ತೂರು: ತಾಲೂಕಿನ ಮುಂಡೂರು ಗ್ರಾಮದ ಕಂಪ ನಿವಾಸಿ ಗಿರಿಜಾ ಎಂಬವರ ಪುತ್ರಿ ಜಯಶ್ರೀ(23) ಎಂಬಾಕೆಯ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಯುವತಿಯ ಹಳೆಯ ಪ್ರಿಯತಮನ ವಿರುದ್ಧ ಪುತ್ತೂರು ಠಾಣೆಗೆ ದೂರು ನೀಡಲಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಉಮೇಶ್ ಎಂಬಾತ ಹತ್ಯೆ ನಡೆಸಿರುವ ಸಾಧ್ಯತೆ ಇದ್ದು, ಈ ಕುರಿತು ಠಾಣೆಗೆ ದೂರು ನೀಡಿದ್ದಾರೆ. ಜಯಶ್ರೀಯನ್ನು ಕನಕಮಜಲಿನ ಉಮೇಶ ಎಂಬವನು ಕೆಲವು ಸಮಯದಿಂದ ಪ್ರೀತಿಸುತ್ತಿದ್ದ. ಆತನು ಆಗಾಗೆ ಗಿರಿಜಾರವರ ಮನೆಗೂ ಬರುತ್ತಿದ್ದ. ಆದರೆ ಇತ್ತೀಚೆಗೆ ಅವನ ಗುಣ ನಡತೆ ಜಯಶ್ರೀಗೆ ಇಷ್ಟವಾಗದ ಕಾರಣ 2022ನೇ ನವೆಂಬರ್ ವೇಳೆಗೆ ಜಯಶ್ರೀಯು ಉಮೇಶನನ್ನು ದೂರ …

Read More »

ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ

ಶಿವಮೊಗ್ಗ: ಸೈಕಲ್‌ ಹೊಡೆಯುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪದಲ್ಲಿ ನಡೆದಿದೆ. ಸೈಕಲ್‌ನಲ್ಲಿ ಬರುತ್ತಿದ್ದ ಬಾಲಕ ಸನತ್‌ (7) ಮೇಲೆ ಏಕಾಏಕಿ ಗೂಳಿ ದಾಳಿ ಮಾಡಿದೆ. ಮನೆ ಸಮೀಪದ ಅಂಗಡಿಯಿಂದ ಹಾಲು ತರುವಾಗ ಗೂಳಿ ಏಕಾಏಕಿ ಬಾಲಕನ ಮೇಲೆರಗಿದೆ. ಬಾಲಕನನ್ನ ಕೊಂಬಿನಿಂದ ಎತ್ತಿ ಬಿಸಾಕಿ, ಚೆನ್ನಾಗಿ ತಿವಿದಿದೆ. ಈ ರೋಚಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಗೂಳಿ ದಾಳಿಯಲ್ಲಿ ಬಾಲಕನ ತಲೆ ಮತ್ತು ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ನೆರವಿಗೆ ಬಂದಿದ್ದರಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Read More »

ಪುತ್ತೂರು: ಚೂರಿ ಇರಿದು ಯುವತಿಯ ಹತ್ಯೆ ಪ್ರಕರಣ; ಓರ್ವ ಪೊಲೀಸ್‌ ವಶಕ್ಕೆ..!!

ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು , ಯುವತಿ ಮೃತಪಟ್ಟಿದ್ದಳು. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದಿದ್ದು , ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಜಯಶ್ರೀ ಈ ಮೊದಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲ ಸಮಯದಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದಳು ಎಂದು ತಿಳಿದು ಬಂದಿದೆ.ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ತನಿಖೆಯ ನಂತರ ತಿಳಿಯಬೇಕಿದೆ. …

Read More »

ವಸತಿ ಶಾಲೆಯಲ್ಲಿ ವಿಷಪೂರಿತ ಊಟ ಸೇವಿಸಿದ 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಶಿವಮೊಗ್ಗ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಷಪೂರಿತ ಊಟ ಸೇವಿಸಿದ ಪರಿಣಾಮ ಅಸ್ವಸ್ಥಗೊಂಡ ಮಕ್ಕಳ ಸಂಖ್ಯೆ 100 ಕ್ಕೆ ಏರಿಕೆಯಾಗಿದೆ. ಮೊರಾರ್ಜಿ ದೇಸಾಯಿ ವಸತಿಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಾದವರ ಸಂಖ್ಯೆ 100 ಕ್ಕೆ ಏರಿಕೆಯಾಗಿದೆ. ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟದ ವಿದ್ಯಾರ್ಥಿಗಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದ್ದು, ಕೂಡಲೇ ಎಲ್ಲಾ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಊಟದ ಬಳಿಕ ವಿದ್ಯಾರ್ಥಿಗಳಿಗೆ ವಾಂತಿ ಬೇಧಿ ಶುರುವಾಗಿದ್ದು, ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದರು. ನಂತರ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ …

Read More »

ಕೋವಿಡ್ ಹೆಚ್ಚಳ ಪ್ರಕರಣ : ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ‌ ಕೇರಳ

ಕೇರಳ: ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಎಲ್ಲಾ ಜನರು ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೇರಳ ಸರ್ಕಾರ ಸೋಮವಾರ ಘೋಷಿಸಿದೆ. ಕೇರಳದಲ್ಲಿ ಕೊವಿಡ್ -19 ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರವು ನಿರ್ದೇಶಿಸಿದೆ. ಕೋವಿಡ್ ವೈರಸ್ ದಾಳಿಯಿಂದ ಜನ ಸುರಕ್ಷತೆಯನ್ನು ಹೊಂದಲು ಕೈ ತೊಳೆಯುವ ಮತ್ತು ಸ್ಯಾನಿಟೈಸರ್‌ಗಳನ್ನು ಬಳಸುವ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲು ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ಸರ್ಕಾರ ಸೂಚಿಸಿದೆ.

Read More »

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗೂಡಾಂಗಡಿಗೆ ನುಗ್ಗಿದ ಲಾರಿ; ಓರ್ವನಿಗೆ ಗಂಭೀರ ಗಾಯ

ಕಾಪು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದೆ. ಲಾರಿಯು ಮಂಗಳೂರಿನಿಂದ ಉಡುಪಿ ಕಡೆಗೆ ಸಂಚಾಸುತ್ತಿದ್ದು, ಗೂಡಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಗಳು ಸರ್ವೀಸ್ ರಸ್ತೆಯಲ್ಲೇ ಸಂಚಾರ ನಡೆಸುತ್ತಿವೆ. ಈ ವೇಳೆ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಲಾರಿ ಗೂಡಂಗಡಿಗೆ ನುಗ್ಗಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. …

Read More »

You cannot copy content of this page.