ತಾಜಾ ಸುದ್ದಿ

ಉಡುಪಿ: 6ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!

ಉಡುಪಿ: 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಬ್ರಹ್ಮಗಿರಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಕಾಪು ಮೂಲದ ದಂಪತಿ ಪುತ್ರಿ ಮಂಗಳಾದೇವಿ(11) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಕಾಪುವಿನ ಖಾಸಗಿ ಶಾಲೆಯ ವಿದ್ಯಾರ್ಥಿನಿ. ಶಾಲೆ ರಜೆ ಹಿನ್ನಲೆ ಮನೆಯಲ್ಲೇ ಇದ್ದರು, ತಂದೆ ತಾಯಿ ಕೆಲಸಕ್ಕೆ ಹೋಗಿದ್ದ ವೇಳೆ ಬಾಲಕಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ನಗರ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಆಕೆ ಉಪಯೋಗಿಸುತ್ತಿದ್ದ ಟ್ಯಾಬ್ ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಗೆ ಕಾರಣ …

Read More »

ಮಡಿಕೇರಿ: ಆದಿವಾಸಿಗಳನ್ನ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ : ಬಜರಂಗದಳದ ಕಾರ್ಯಕರ್ತರು ತರಾಟೆ

ಕೊಡಗು : ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ರೇಷ್ಮೆ ಹಡ್ಲು ಹಾಡಿಯಲ್ಲಿ ಆದಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ಭಜರಂಗದಳದ ಕಾರ್ಯಕರ್ತರು ತರಾಟೆ ತೆಗೆದುಕೊಂಡಿದ್ದಲ್ಲದೇ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಐವರು ವಶಕ್ಕೆ ಪಡೆಯಲಾಗಿದೆ. ಸಂಕ್ರಾಂತಿ ಹಬ್ಬದ ಹಿನ್ನೆಲೆ ಹಡ್ಲು ಹಾಡಿಯಲ್ಲಿರುವ ಆದಿವಾಸಿ ನಿವಾಸಿಗಳಿಗೆ ಎಳ್ಳು ಬೆಲ್ಲ ಹಂಚೋದಕ್ಕೆ ಭಜರಂಗದಳದ ಕಾರ್ಯಕರ್ತರು ತೆರಳಿದಾಗ ಬೈಬಲ್ ಬೋಧನೆಯನ್ನು ಮಾಡುತ್ತಿರುವು ಕಂಡು ಬಂದಿದೆ. ಆಗ ಭಜರಂಗದಳದ ಕಾರ್ಯಕರ್ತರು ತರಾಟೆ ತೆಗೆದುಕೊಂಡಿದ್ದಾರೆ. ಈ ಸಂಬಂದ ಈಗಾಗಲೇ ಸುಮಾರು 500 ಕುಟುಂಬಗಳಲ್ಲಿ 250 ಮಂದಿಯನ್ನು ಮತಾಂತರ ಆಗಿದ್ದಾರೆಂಬ ಆರೋಪಿಸಿದ್ದು, ಐವರು …

Read More »

BIG UPDATE: ವಿಮಾನ ದುರಂತ: ಸಾವಿನ ಸಂಖ್ಯೆ 68ಕ್ಕೆ ಏರಿಕೆ

ನೇಪಾಳ: ಇಂದು ಪೋಖಾರಾ ವಿಮಾನ ನಿಲ್ದಾಣದಲ್ಲಿ ಸಂಭವಿಸಿದಂತ ವಿಮಾನ ದುರಂತ ( Nepal Aircraft crash ) ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 68ಕ್ಕೆ ಏರಿಕೆಯಾಗಿರೋದಾಗಿ ನೇಪಾಳದ ನಾಗರೀಕ ವಿಮಾನಯಾನ ಪ್ರಾಧಿಕಾರ ಖಚಿತ ಪಡಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ನೇಪಾಳ ನಾಗರೀಕ ವಿಮಾನಯಾನ ಪ್ರಾಧಿಕಾರವು, ಇಂದು ಪೋಖಾರಾ ವಿಮಾನ ನಿಲ್ದಾಣದ ಬಳಿಯಲ್ಲಿ ಅಪಘಾತಗೊಂಡ ವಿಮಾನದಲ್ಲಿ ಐವರು ಭಾರತೀಯರು, 15 ವಿದೇಶಿಗರು ಸೇರಿದಂತೆ 72 ಮಂದಿ ಪ್ರಯಾಣಿಸುತ್ತಿದ್ದರು. ಇವರಲ್ಲಿ ಈವರೆಗೆ 68 ಮಂದಿ ಸಾವನ್ನಪ್ಪಿರೋದಾಗಿ ತಿಳಿಸಿದೆ. ಸ್ಥಳಕ್ಕೆ ನೇಪಾಳ ಪ್ರಧಾನಿ ಪಿಎಂ ಪ್ರಚಂಡ, ಗೃಹ ಸಚಿವ …

Read More »

ಪುತ್ತೂರು ಮೂಲದ ಯುವಕನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ..!

ಮುಂಬಯಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜಯೇಶ್ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಎನ್ನುವುದು ತಿಳಿದು ಬಂದಿದೆ. ಜಯೇಶ್‌ ಕುಮಾರ್‌ ಪುತ್ತೂರಿನ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಪಟ್ಟಿದ್ದಾನೆ. ಈ ಹಿಂದೆ ಜೈಲಿನಲ್ಲೇ ಇದ್ದುಕೊಂಡು ಎಡಿಜಿಪಿ ಅಲೋಕ್‌ ಕುಮಾರ್‌ ಅವರಿಗೂ ಜೀವ ಬೆದರಿಕೆ ಕರೆಯನ್ನು ಮಾಡಿದ್ದ. ಆರೋಪಿಯ ಬಳಿ ಡೈರಿಯೊಂದು ಪತ್ತೆಯಾಗಿದ್ದು, ಈ ಡೈರಿಯಲ್ಲಿ ನಿನ್ನೆ ಸಚಿವರ ಕಚೇರಿಗೆ …

Read More »

ಹಿಂದೂ ವಿವಾಹ ಕಾಯ್ದೆಯಡಿ ಅಂತರ್ ಧರ್ಮೀಯ ನಡುವಿನ ಮದುವೆಗೆ ಸುಪ್ರೀಂ ಕೋರ್ಟ್ ಹೇಳಿದ್ದೆನು….?

ನವದೆಹಲಿ:ಹಿಂದೂ ವಿವಾಹ ಕಾಯ್ದೆಯಡಿ ಅಂತರ್ ಧರ್ಮೀಯ ದಂಪತಿಗಳ ನಡುವಿನ ಯಾವುದೇ ವಿವಾಹವು ಅನೂರ್ಜಿತವಾಗಿದೆ ಮತ್ತು ಹಿಂದೂಗಳು ಮಾತ್ರ ಅದೇ ಕಾನೂನಿನ ಅಡಿಯಲ್ಲಿ ಮದುವೆಯಾಗಬಹುದು ಎಂದು ಸುಪ್ರೀಂ ಕೋರ್ಟ್ ಜನವರಿ 13 ರಂದು ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಆಗಸ್ಟ್ 2017 ರಲ್ಲಿ ತೆಲಂಗಾಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. ಇದೇ ವೇಳೇ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆಬ್ರವರಿಯಲ್ಲಿ ಮುಂದೂಡಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 494 ರ ಅಡಿಯಲ್ಲಿ ಅರ್ಜಿದಾರರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲು …

Read More »

ಶಬರಿಮಲೆಗೆ ತೆರಳಿದ್ದ ಮಡಿಕೇರಿ ಯುವಕ ಕೇರಳದಲ್ಲಿ ಸಮುದ್ರ ಪಾಲು : ಇಬ್ಬರ ರಕ್ಷಣೆ

ಕೊಡಗು : ಮಡಿಕೇರಿಯಿಂದ ಅಯ್ಯಪ್ಪಸ್ವಾಮಿ ಮಾಲೆಯನ್ನು ಧರಿಸಿ ಶಬರಿಮಲೆಗೆ ಹೋಗಿದ್ದ ಯುವಕನೊಬ್ಬ ಸಮುದ್ರ ಪಾಲಾದ ಘಟನೆ ಕೇರಳದ ಕಣ್ಣೂರು ಬೀಚ್ ನಲ್ಲಿ ನಡೆದಿದೆ. ಮೃತನನ್ನು ಮಡಿಕೇರಿ ನಗರದ ಜಲಾಶಯ ಬಡಾವಣೆ ನಿವಾಸಿ ಶಶಾಂಕ್ (25) ಎಂದು ಗುರುತಿಸಲಾಗಿದೆ. ಶಬರಿಮಲೆಯಿಂದ ವಾಪಸ್ ಆಗುವ ವೇಳೆ ಕಣ್ಣೂರು ಬೀಚ್ ಗೆ ತೆರಳಿದ್ದ ವೇಳೆ ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಸಮುದ್ರದಲ್ಲಿ ಮುಳುಗಿ ಶಶಾಂಕ್ ಮೃತಪಟ್ಟಿದ್ದಾನೆ. ಸಮುದ್ರದ ಅಲೆಗೆ ಸಿಕ್ಕು ಕೊಚ್ಚಿ ಹೋಗುತ್ತಿದ್ದ ಇನ್ನಿಬ್ಬರು ಯುವಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಕೇರಳದ ಕಣ್ಣೂರು ಪೊಲೀಸ್ …

Read More »

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ, ನಾಲ್ವರ ಬಂಧನ

ಬೆಳ್ತಂಗಡಿ: ದಲಿತ ಯುವಕ ಶ್ರೀಧರ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಶಿಬಾಜೆಯ ತಿಮ್ಮಪ್ಪ, ಲಕ್ಷ್ಮಣ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಬಂಧಿತ ಆರೋಪಿಗಳು. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆಯ ಶ್ರೀಧರ ಎಂಬವರ ಮೃತದೇಹ ಕಳೆದ ಡಿ. 18ರಂದು ಕೆಲಸ ಮಾಡುವ ತೋಟದ ಮೂಲೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದಿತ್ತು.ಇದೊಂದು ಕೊಲೆ‌ ಎಂದು ದೂರು ದಾಖಲಾಗಿತ್ತು.

Read More »

ಇನ್ಮುಂದೆ 10 ಸೆಂಟ್ಸ್ ವರೆಗೆ ಕನ್ವರ್ಷನ್ ಸುಲಭ- ಶಾಸಕ ರಘುಪತಿ ಭಟ್

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ 10 ಸೆಂಟ್ಸ್‌ವರೆಗೆ ಕೃಷಿ ಭೂಮಿಯನ್ನು ವಸತಿ ವಲಯಕ್ಕೆ ಬದಲಾವಣೆ ಮಾಡಲು ಅವಕಾಶ ಕಲ್ಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ,ಇದರೊಂದಿಗೆ ಉಡುಪಿ ಜನತೆಯ ಬಹುಕಾಲದ ಬೇಡಿಕೆಗೆ ಕಳೆದ ಮೂರ್ನಾಲ್ಕು ವರ್ಷಗಳಿಂದ ನಡೆಸಿದ ಅವಿರತ ಶ್ರಮಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ ಎಂದು ಹೇಳಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೃಷಿ ವಲಯದಲ್ಲಿ 10 ಸೆಂಟ್ಸ್ ಜಾಗ ಅಥವಾ 3000 ಚದರ ಅಡಿವರೆಗೆ ಕೃಷಿ ವಲಯದಲ್ಲಿ …

Read More »

ತೀವ್ರ ಅನಾರೋಗ್ಯದಿಂದ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು..!

ನವದೆಹಲಿ:  ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೃತಕ ಆಮ್ಲಜನಕ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕು ಮತ್ತು ನ್ಯುಮೋನಿಯಾ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಲಲಿತ್ ಮೋದಿ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಸಂಬಂಧ ಮಾಹಿತಿ ನೀಡಲಾಗಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕು ತಗುಲಿತ್ತು. ನ್ಯುಮೋನಿಯಾವೂ ಇದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ …

Read More »

ಅಯ್ಯಪ್ಪ ಪ್ರಸಾದಕ್ಕೆ ಬಳಸುವ ಏಲಕ್ಕಿಯಲ್ಲಿ ಕೀಟನಾಶಕದ ಅಂಶ: ಅರವಣ ಪ್ರಸಾದಮ್‌ ವಿತರಣೆಗೆ ಹೈಕೋರ್ಟ್‌ ನಿಷೇಧ

ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಅರವಣ ಪ್ರಸಾದಮ್‌ ವಿತರಣೆಯನ್ನು ತಕ್ಷಣ ನಿಲ್ಲಿಸುವಂತೆ ಕೇರಳ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ಅಯ್ಯಪ್ಪಸ್ವಾಮಿ ಪ್ರಸಾದಕ್ಕೆ ಬಳಕೆಯಾಗುವ ಏಲಕ್ಕಿಯನ್ನು ತಪಾಸಣೆಗೆ ಒಳಪಡಿಸಿದಾಗ ಕೀಟನಾಶಕದ ಉಳಿಕೆ ಪ್ರಮಾಣವು ಅಪಾಯಕಾರಿ ಮಟ್ಟದಲ್ಲಿದ್ದ ಸಂಗತಿ ಬೆಳಕಿಗೆ ಬಂದಿದೆ.. ‘ಮನುಷ್ಯರ ಬಳಕೆಗೆ ಇದು ಸುರಕ್ಷಿತ ಅಲ್ಲ’ ಎಂದು ಆಹಾರ ವಿಜ್ಞಾನಿಗಳು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್​ ಪ್ರಸಾದ ವಿತರಣೆ ನಿಲ್ಲಿಸುವಂತೆ ಆದೇಶ ಹೊರಡಿಸಿತು.

Read More »

You cannot copy content of this page.