ತಾಜಾ ಸುದ್ದಿ

ಉಳ್ಳಾಲ: ಅಪಘಾತದಿಂದ ಯುವಕನ ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ

ಉಳ್ಳಾಲ: ಶನಿವಾರ ತಡರಾತ್ರಿ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನೀಡಲು ಮುಂದಾಗಿದ್ದಾರೆ. ಅಪಘಾತ ನಂತರ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದಾರೆ. ಸಂಜೆ 4 ಗಂಟೆ ನಂತರ ನಡೆದ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು. ಮೃತ ಭೂಷಣ್ …

Read More »

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ವಿಟ್ಲ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚದಲ್ಲಿ ನಡೆದಿದೆ. ಮೃತ ಬಾಲಕನನ್ನು ಪುಣಚ ಮಣಿಲ ನಿವಾಸಿ, ದೇವಿನಗರ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಹೇಮಂತ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಹೇಮಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Read More »

ಹೃದಯಾಘಾತದಿಂದ 12 ವರ್ಷದ ಬಾಲಕ‌ ಸಾವು

ಕೊಡಗು: ಇತ್ತೀಚೆಗೆ ಹೃದಯಾಘಾತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಯುವಕರು ಮತ್ತು ಬಾಲಕರು ಹೃದಯಾಘತದಿಂದ ಸಾವನ್ನಪ್ಪುತ್ತಿದ್ದಾರೆ. ಇದರಿಂದಾಗಿ ಪೋಷಕರಲ್ಲಿ ಆತಂಕ ಮೂಡಿಸಿದೆ. ಈಗ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ 12 ವರ್ಷದ ಬಾಲಕ‌ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 12 ವರ್ಷದ ಕೀರ್ತನ್ ಮೃತ ದುರ್ದೈವಿ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಪುತ್ರ ಕೀರ್ತನ್ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು. ಕೀರ್ತನ್​ ಶನಿವಾರ ತಡರಾತ್ರಿ ಅನಾರೋಗ್ಯದಿಂದ ಬಳಲಿದ್ದನು, ಇಂದು ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Read More »

ಮಡಿಕೇರಿಯಲ್ಲಿ ಮತಾಂತರಕ್ಕೆ ಯತ್ನ: ಆರೋಗ್ಯ ಇಲಾಖೆಯ FDA ಅರೆಸ್ಟ್

ಮಡಿಕೇರಿ: ಜಿಲ್ಲೆಯಲ್ಲಿ ಮತಾಂತರಕ್ಕೆ ಪ್ರಚೋದಿಸಿ ಯತ್ನಿಸಿದಂತ ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕನನ್ನು ಪೊಲೀಸರು ಬಂಧಿಸಿರೋದಾಗಿ ತಿಳಿದು ಬಂದಿದೆ. ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಸ್ ನಿಲ್ದಾಣದ ಬಳಿಯಲ್ಲಿ, ಕ್ರೈಸ್ತ ಧರ್ಮ ಮತಾಂತರಕ್ಕೆ ಪ್ರಚೋದಿಸಿದ್ದ ಎಂಬ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ನಿಶಾಂತ್ ಹೆಚ್ ಬಿ ಎನ್ನುವವರನ್ನು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.   ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ನಿಶಾಂತ್ ಬಳಿಯಲ್ಲಿ ಇದ್ದಂತ ಕ್ರೈಸ್ತ ಮಿಷನರಿ ಪುಸ್ತಕಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ನಿಶಾಂತ್ ಹೆಚ್ ಬಿ ಅವರನ್ನು ಬಂಧಿಸಿ, ವಿಚಾರಣೆ …

Read More »

ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷನ ಮೇಲೆ ಗುಂಡಿನ ದಾಳಿ: ಜಿಲ್ಲೆಯಲ್ಲಿ ಕಟ್ಟೆಚ್ಚರ

ಬೆಳಗಾವಿ ಸಮೀಪದ ಹಿಂಡಲಗಾ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್‌ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್‌ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಶ್ರೀರಾಮ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ ಪ್ರಕರಣದ ತನಿಖೆಗೆ 4 ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ತಿಳಿಸಿದ್ದಾರೆ. ಬೆಳಗಾವಿ …

Read More »

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜ. 9ರಿಂದ 15ರ ವರೆಗೆ ಸಪ್ತೋತ್ಸವ

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜ. 9ರಿಂದ 15ರ ವರೆಗೆ ಸಪ್ತೋತ್ಸವ ನಡೆಯಲಿದೆ. ಜ. 14 ಮಕರಸಂಕ್ರಾಂತಿಯಂದು ಮೂರು ರಥಗಳ ಉತ್ಸವ ಮತ್ತು ಜ. 15ರಂದು ಚೂರ್ಣೋತ್ಸವ ಜರಗಲಿದೆ. ಈ ಎಲ್ಲ ದಿನಗಳಲ್ಲಿ ಬೆಳಗ್ಗೆ ಪಾರಾಯಣ, ತುಳಸಿ ಅರ್ಚನೆ, ಸಂಜೆ ಪ್ರವಚನಗಳು ನಡೆಯಲಿವೆ. ಮಕರಸಂಕ್ರಾಂತಿಯಂದು ಬ್ರಹ್ಮರಥದ ಉತ್ಸವ ಆರಂಭವಾಗಲಿದೆ.

Read More »

ಶಿವಮೊಗ್ಗದಲ್ಲಿ `ಸ್ಟೆಬಿಲೈಜರ್’ ಸ್ಪೋಟಗೊಂಡು ಘೋರ ದುರಂತ : ತಂದೆ ಸಾವು, ಮಗನ ಸ್ಥಿತಿ ಗಂಭೀರ

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸ್ಟೆಬಿಲೈಜರ್ ಸ್ಪೋಟಗೊಂಡು ತಂದೆ ಸಾವನ್ನಪ್ಪಿದ್ದು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನ ಮನೆಯಲ್ಲಿ ಸ್ಟೆಬಿಲೈಜರ್ ಸ್ಪೋಟಗೊಂಡ ಪರಿಣಾಮ ಪ್ರತಿಷ್ಠಿತ ಭೂಪಾಳಂ ಕುಟುಂಬದ ಶರತ್ (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶರತ್ ಪುತ್ರ ಸಂಚಿತ್ (12) ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕನ್ಯಾನ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾನ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವ ಫೆ. 6 ರಿಂದ 16 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ,ಆಶೀರ್ವಚನ ನೀಡಿ ಧರ್ಮದ ಚೌಕಟ್ಟಿನಲ್ಲಿ ಬದುಕಿನ ಔನ್ನತ್ಯ ನಿಂತಿದೆ. ಬ್ರಹ್ಮಕಲಶದಂತಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ಬದುಕಿನಲ್ಲಿ ಸಿಗುವ ಅಪರೂಪದ ಅವಕಾಶ. ಪ್ರತಿಯೊಬ್ಬರೂ ತಮ್ಮ ಕರ್ತವ್ಯ ಎಂಬಂತೆ ಸೇವೆ ನೀಡಬೇಕಾಗಿದೆ ಎಂದರು. ಮಾಣಿಲ ಶ್ರೀ ಧಾಮ ಶ್ರೀ ಮಹಾಲಕ್ಷ್ಮೀ …

Read More »

ಭ್ರಷ್ಟಾಚಾರ ಆರೋಪ ಹಿನ್ನೆಲೆ-ಪಂಜಾಬ್ ಸಚಿವ ಸರಾರಿ ರಾಜೀನಾಮೆ

ಚಂಡೀಗಢ: ಕಳೆದ ನಾಲ್ಕು ತಿಂಗಳಿನಿಂದ ಕೇಳಿ ಬರುತ್ತಿದ್ದ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಕೊನೆಗೂ ಪಂಜಾಬ್ ಸಚಿವ ಫೌಜಾ ಸಿಂ ಸರಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್‌ ತೋಟಗಾರಿಕೆ, ಆಹಾರ ಸಂಸ್ಕರಣೆ ಹಾಗೂ ರಕ್ಷಣಾ ಸೇವೆಗಳ ಕಲ್ಯಾಣ ಸಚಿವರಾಗಿದ್ದ ಅವರು ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮುಖ್ಯಮಂತ್ರಿಯವರು ಇದಕ್ಕೆ ಅನುಮೋದನೆ ನೀಡಿದ್ದಾರೆ. ಅಲ್ಲದೆ, ಸರಾರಿ ರಾಜೀನಾಮೆಯಿಂದ ತೆರವಾದ ಖಾತೆಯ ಜವಾಬ್ದಾರಿಯನ್ನು ಪಟಿಯಾಲ ಗ್ರಾಮೀಣ ಶಾಸಕ ಡಾ. ಬಲಬೀರ್‌ ಸಿಂಗ್‌ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಸರ್ಕಾರಿ ಅಧಿಕಾರಿಗಳ ಮೂಲಕ …

Read More »

ಕಾಂತಾರ ಹೋಲುವ ಘಟನೆ: ಕೋರ್ಟಿನಲ್ಲಿ ನೋಡಿಕೊಳ್ಳುತ್ತೇನೆ ಎಂದ ವ್ಯಕ್ತಿ ಮೃತ್ಯು

ಉಡುಪಿ: ಕಾಂತಾರ ಸಿನಿಮಾ ಎಲ್ಲರನ್ನೂ ನಿಬ್ಬೆರಗುಗೊಳಿಸಿದ್ದು ಮಾತ್ರವಲ್ಲದೆ, ಕರ್ನಾಟಕದ ಕರಾವಳಿಯ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ್ದು ಸುಳ್ಳಲ್ಲ. ಇದರಲ್ಲಿ ಕಂಡು ಬಂದ ಅದೆಷ್ಟೋ ದೃಶ್ಯಗಳು ನೈಜತೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ದೈವ-ದೇವರ ಮೇಲಿನ ನಂಬಿಕೆ ಇಲ್ಲಿನ ಜನರನ್ನು ಯಾವ ರೀತಿ ಕಾಪಾಡಿಕೊಂಡು ಬಂದಿದೆ ಎಂಬುದನ್ನು ಸಿನಿಮಾದಲ್ಲಿ ಅಚ್ಚುಕಟ್ಟಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಕಂಡುಬಂದ ದೃಶ್ಯವೊಂದು ನಿಜವಾಗಿದ್ದು, ಈ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಕಾಂತಾರ ಸಿನಿಮಾದಲ್ಲಿ ಅನಾವರಣಗೊಂಡ ದೈವ ಮತ್ತು ಕೋರ್ಟ್ ನ ಸನ್ನಿವೇಶದ ಕಥೆ ಉಡುಪಿಯಲ್ಲಿ ಸಂಭವಿಸಿದೆ. ದೈವದ ವಿರುದ್ಧ …

Read More »

You cannot copy content of this page.