ತಾಜಾ ಸುದ್ದಿ

ಸುರತ್ಕಲ್: ಮನೆ ಮೇಲೆ ‌ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುರತ್ಕಲ್: ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಜೋಕಟ್ಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು ಮುಲ್ಕಿ ಸಮೀಪದ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ. ಉಳಿದಂತೆ ಮನೆಯೊಳಗಿದ್ದ ಸಂಜೀವ (55), ಸುರೇಶ್ (20), ಸವಿತಾ ( 19), ಸಖಿ (1) ಅವರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು ಗಾಯಾಳುಗಳನ್ನು ರಕ್ಷಿಸಲಾಗಿದೆ. ಮಂಗಳೂರಿನ ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ದಳದವರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಧ್ಯರಾತ್ರಿ ಬೀಸಿದ …

Read More »

ಮುತ್ತೂರು: ಕೊಳವೂರು ಶಕ್ತಿ ಕೇಂದ್ರದ ಭಾರತೀಯ ಜನತಾ ಪಾರ್ಟಿಯ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು: ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರದ ಭಾರತೀಯ ಜನತಾ ಪಾರ್ಟಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು . ಆಯ್ಕೆ ಪ್ರಕ್ರಿಯೆಯನ್ನು ಎಡಪದವು ಮಹಾ ಶಕ್ತಿ ಕೇಂದ್ರದ ಪ್ರಭಾರಿ ಸೋಹನ್ ಅತಿಕಾರಿ ಇವರು ನಡೆಸಿಕೊಟ್ಟರು . ಕೊಳವೂರು ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಬಳ್ಳಾಜೆ , ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ದುರ್ಗಾಕೋಡಿ , ಸದಸ್ಯರಾಗಿ ಅಜಯ್ ಅಮೀನ್ ನಾಗಂದಡಿ , ಶೇಖರ್ ನೆಲಚ್ಚಿಲ್ , ಸದಾನಂದ ಶೆಟ್ಟಿ ಕೊಳವೂರು ಗುತ್ತು ಇವರು ಆಯ್ಕೆಯಾದರು . ಈ ಸಂಧರ್ಭದಲ್ಲಿ …

Read More »

ಬಂಟ್ವಾಳ: ಯುವಕ ನೇಣು ಬಿಗಿದು ಆತ್ಮಹತ್ಯೆ ..!

ಬಂಟ್ವಾಳ: ಯುವಕನೋಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬುಧವಾರ ನಡೆದಿದೆ. ಮೃತ ಯುವಕನನ್ನು ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ. ಸುಶಾಂತ್ ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

Read More »

ಉಡುಪಿ: ಕೊರಗ ಸಮುದಾಯದ ಬೇಡಿಕೆಗಳ ಬಗ್ಗೆ ಸ್ಪೀಕರ್ ಯು ಟಿ ಖಾದರ್ ಗೆ ಮನವಿ ಸಲ್ಲಿಸಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿಯಲ್ಲಿ ಕೊರಗ ಸಮುದಾಯದ ಸಂಘಟನೆಗಳು ತಮ್ಮ ನ್ಯಾಯ ಸಮ್ಮತ ಬೇಡಿಕೆಗಳಾದ ಭೂಮಿ ಹಕ್ಕು, ವಿದ್ಯಾವಂತ ನಿರುದ್ಯೋಗಿ ಯುವ ಜನತೆಗೆ ಅರ್ಹ ಉದ್ಯೋಗ ಹಾಗೂ ಪರಿಶಿಷ್ಟ ಪಂಗಡದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ರವರನ್ನು ಭೇಟಿಯಾಗಿ ಕೊರಗ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸುವಂತೆ ಸೂಚನೆ ನೀಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು. ಈಗಾಗಲೇ ರಾಜ್ಯ ಸರ್ಕಾರ ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ.22-29ರವರೆಗೆ 26ನೇ ವರ್ಷದ ಭಜನಾ ಕಮ್ಮಟ

ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22ರಿಂದ ಸೆಪ್ಟೆಂಬರ್ 29ರವರೆಗೆ ನಡೆಯಲಿದೆ. ಕೊನೆಯ ದಿನ ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ. ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು ಈ ಕೆಳಗಿನಂತಿವೆ. * 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು. * ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು. * ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು. * ಒಂದು ಭಜನಾ ಮಂಡಳಿಯಿಂದ 2 ಜನ …

Read More »

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನ ಯಶಸ್ವಿ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀನ ಮಾದರಿಯ ಎಂಡೋಸ್ಕೋಪಿಕ್‌ ಕಾರ್ಯ ವಿಧಾನವನ್ನು ನಡೆಸಲಾಯಿತು. ಎಂಡೋಲ್ಟ್ರಾಸೌಂಡ್‌-ಗೈಡೆಡ್‌ ಗ್ಯಾಸ್ಟ್ರೋಜೆಜುನೋಸ್ಟೊಮಿ ಕಾರ್ಯ ವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮೊದಲ ಆಸ್ಪತ್ರೆ ಇದಾಗಿದೆ. ತೀವ್ರ ರೀತಿಯ ಗ್ಯಾಸ್ಟ್ರಿಕ್‌ ಔಟ್ಲೆಟ್‌ ಅಡಚಣೆಯಿಂದ ಬಳಲುತ್ತಿದ್ದ ಹಿರಿಯ ವ್ಯಕ್ತಿಯೊಬ್ಬರಿಗೆ ಇದನ್ನು ಮಾಡಲಾಯಿತು. ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿಯ ಪ್ರಾಧ್ಯಾಪಕ ಡಾ| ಶಿರನ್‌ ಶೆಟ್ಟಿ ನೇತೃತ್ವದ ವೈದ್ಯಕೀಯ ತಂಡವು ಕನಿಷ್ಟ ಅರಿವಳಿಕೆಯಲ್ಲಿ ಈ ಅತ್ಯಾಧುನಿಕ ವಿಧಾನವನ್ನು ಕೈಗೊಳ್ಳಲು ನಿರ್ಧರಿಸಿತು. ಇದು ಜಪಾನಿನ ಎಂಡೋಸ್ಕೋಪಿಸ್ಟ್‌ಗಳ ಆವಿಷ್ಕಾರವಾಗಿದೆ. ಈ ಕಾರ್ಯವಿಧಾನದ ಮೂಲಕ ಹೊಟ್ಟೆಯನ್ನು ಸಣ್ಣ ಕರುಳಿಗೆ ಸಂಪರ್ಕಿಸಲು ಸಾಧ್ಯವಾಗುತ್ತದೆ. ಇದರಿಂದಾಗಿ ಆಹಾರ ಸೇವಿಸಲು ಇದ್ದ …

Read More »

ಉಡುಪಿ: PUC ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!

ಉಡುಪಿ: ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಹಿರಿಯಡ್ಕ ನಿವಾಸಿ ನಯನಾ(17) ಎಂದು ಗುರುತಿಸಲಾಗಿದೆ. ತನ್ನ ಮನೆಯಲ್ಲಿ ಒಬ್ಬಂಟಿ ಇದ್ದಾಗ ಯುವತಿ ಈ ಕೃತ್ಯ ಎಸಗಿದ್ದಾಳೆ. ಆಕೆಯ ತಾಯಿ ಶೋಭಾ ಈ ಬಗ್ಗೆ ಹಿರಿಯಡ್ಕ ಠಾಣೆಗೆ ದೂರು ನೀಡಿದ್ದಾರೆ. ತನ್ನದೇ ಚೂಡಿದಾರ್ ಶಾಲನ್ನು ಬಳಸಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Read More »

ನಕಲಿ ಪರುಶುರಾಮ ಮೂರ್ತಿ ಪ್ರಕರಣ – ಬೆಂಗಳೂರಿನಲ್ಲಿ ಶಾಸಕ ಸುನೀಲ್ ಕುಮಾರ್ ವಿರುದ್ದ ಪ್ರತಿಭಟನೆ

ಬೆಂಗಳೂರು: ಕಾರ್ಕಳದಲ್ಲಿ ನಿರ್ಮಿಸಿರುವ ಪರುಶುರಾಮ ಮೂರ್ತಿ ನಕಲಿಯಾಗಿದ್ದು, ಅದರನ್ನು ನಿರ್ಮಿಸಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳ್ಳನ್ನ ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್ ಅವರಿಗಿದೆ. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿರುವೆ, ನನಗೂ ಗೊತ್ತಿದೆ ಎಷ್ಟು ಸಮಯ ಬೇಕಾಗುತ್ತದೆ ಎಂದು. ಆದರೆ ಕೇವಲ 3 ತಿಂಗಳಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ. ಇಂಥ ಪ್ರತಿಮೆಗಳನ್ನು …

Read More »

AI ಬಂದ ಬಳಿಕ ‘ಉದ್ಯೋಗ’ ಕ್ಕೆ ಬರಲಿದೆಯಾ ಕುತ್ತು ? ಇಲ್ಲಿದೆ ಕೇಂದ್ರ ಸರ್ಕಾರ ನೀಡಿದ ಉತ್ತರ

ಇಡೀ ಜಗತ್ತು ಕೃತಕ ಬುದ್ಧಿಮತ್ತೆ AI ಮೇಲೆ ಕೆಲಸ ಮಾಡುತ್ತಿದೆ. ಆದರೆ ಹೊಸ ತಂತ್ರಜ್ಞಾನ ಉದ್ಯೋಗಿಗಳಲ್ಲಿ ಭಯಹುಟ್ಟಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಕುರಿತು ವರದಿಯನ್ನು ಮಂಡಿಸಿದ್ದಾರೆ. ಎಐ ಬಂದ್ಮೇಲೆ ಉದ್ಯೋಗದ ಮೇಲೆ ಯಾವ ಪರಿಣಾಮ ಬೀರಬಹುದು ಎಂಬುದನ್ನು ಅವರು ಹೇಳಿದ್ದಾರೆ. ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ ನಿರ್ಮಲಾ ಸೀತಾರಾಮನ್‌ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ. ಎಐ ಆಗಮನದಿಂದ ಕೆಲವು ಉದ್ಯೋಗಗಳು ಅಪಾಯಕ್ಕೆ ಸಿಲುಕಬಹುದು ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಎಐನಿಂದ ಕೆಲವು ಪ್ರದೇಶಗಳಲ್ಲಿ ಉದ್ಯೋಗದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಅದೇ …

Read More »

ಕೇಂದ್ರ ಬಜೆಟ್‌ 2024 : ಯಾವ ವಸ್ತುಗಳು ಅಗ್ಗ, ಯಾವುದು ದುಬಾರಿ?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಗಳವಾರ (ಜುಲೈ 23) ಲೋಕಸಭೆಯಲ್ಲಿ 2024-2025ನೇ ಸಾಲಿನ ಬಜೆಟ್‌ ಮಂಡಿಸಿದ್ದರು. ಈ ಬಾರಿಯ ಮುಂಗಡ ಪತ್ರದಲ್ಲಿ ಯಾವೆಲ್ಲಾ ವಸ್ತುಗಳು ದುಬಾರಿ, ಯಾವೆಲ್ಲಾ ಅಗ್ಗವಾಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ… ಯಾವುದು ಅಗ್ಗ: ಕ್ಯಾನ್ಸರ್‌ ಔಷಧ ಪೆಟ್ರೋಲ್‌ ದರ 2 ರೂ. ಇಳಿಕೆ ಮೊಬೈಲ್‌ ಫೋನ್‌ ಆಮದು ಚಿನ್ನ, ಆಮದು ಬೆಳ್ಳಿ ಚರ್ಮದ ವಸ್ತು ಸೀ ಫುಡ್‌ ವಿದ್ಯುತ್‌ ತಂತಿ ಎಕ್ಸರೇ ಮೆಷಿನ್‌ ಸೋಲಾರ್‌ ಪ್ಯಾನಲ್ ಯಾವುದು ದುಬಾರಿ: ವಿದ್ಯುತ್‌ ಉಪಕರಣ ಪ್ಲಾಸ್ಟಿಕ್‌ ಬಟ್ಟೆ ಮೊಬೈಲ್‌ ಟವರ್

Read More »

You cannot copy content of this page.