ತಾಜಾ ಸುದ್ದಿ

ಉಡುಪಿ: ಜನವರಿ 4 ರಂದು ಸರಕಾರಿ ಆಸ್ಪತ್ರೆಗಳಲ್ಲಿ ಬೂಸ್ಟರ್ ಡೋಸ್ ಲಸಿಕಾ ಮೇಳ

ಉಡುಪಿ: ಚೀನಾ, ಕೊರಿಯಾ, ಜಪಾನ್, ಯುಎಸ್ಎ, ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 4ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ. ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನ ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಹತ್ತಿರದ …

Read More »

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ, ಸುಂದರಿ(25) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.ಮದ್ಯ ಸೇವನೆಯ ಚಟ ಹೊಂದಿದ್ದರು ಎನ್ನಲಾಗಿದ್ದು, ವಿಷ ಸೇವಿಸಿದ್ದು ಡಿ 27ರಂದು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More »

ಮುಲ್ಕಿ: ಬಸ್ ಢಿಕ್ಕಿ; ಬಾಲಕ ಸ್ಥಳದಲ್ಲೇ ಮೃತ್ಯು

ಮುಲ್ಕಿ:ಬಸ್ ಢಿಕ್ಕಿ ಹೊಡೆದು ಶಾಲಾ ಬಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ನಡೆದಿದೆ. ಉಲ್ಲಂಜೆ ನಿವಾಸಿ ಚರಣ್ (15) ಮೃತ ಬಾಲಕ.ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ.ಸಂಜೆ ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಹೋಗುವಾಗ ಉಲ್ಲಂಜೆ ಜುಮಾದಿ ಗುಡ್ಡೆ ತಿರುವು ಬಳಿ ಬಸ್ ಡಿಕ್ಕಿ ಹೊಡೆದಿದ್ದು, ಅಪಘಾತ ರಭಸಕ್ಕೆ ಬಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಈ ಕುರಿತು ಬಜ್ಪೆ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More »

ಮಾನವನ ಶವವನ್ನು ಗೊಬ್ಬರ ಮಾಡುವ ಪ್ರಕ್ರಿಯೆಗೆ ಒಪ್ಪಿಗೆ ನೀಡಿದ ನ್ಯೂಯಾರ್ಕ್

ನ್ಯೂಯಾರ್ಕ್‌: ಮಾನವ ದೇಹವನ್ನು ಗೊಬ್ಬರವನ್ನಾಗಿ ಪರಿವರ್ತಿಸುವ ‘ಹಸಿರು ಅಂತ್ಯಕ್ರಿಯೆ’ಗೆ ಅಮೆರಿಕ ನ್ಯೂಯಾರ್ಕ್‌ ರಾಜ್ಯ ಒಪ್ಪಿಗೆ ನೀಡಿದೆ. ಆ ಮೂಲಕ ಮಾನವನ ದೇಹವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಅವಕಾಶ ಕಲ್ಪಿಸಿಕೊಟ್ಟ ಅಮೆರಿಕ ಆರನೇ ರಾಜ್ಯ ಎನಿಸಿಕೊಂಡಿದೆ. ಈ ಕ್ರಿಯೆಯನ್ನು ‘ಹ್ಯೂಮನ್‌ ಕಾಂಪೋಸ್ಟಿಂಗ್‌’ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಮೃತಪಟ್ಟ ಬಳಿಕ ಅವರ ದೇಹವನ್ನು ವೈಜ್ಞಾನಿಕ ಪ್ರಕ್ರಿಯೆಗಳ ಮೂಲಕ ಗೊಬ್ಬರವನ್ನಾಗಿ ಪರಿವರ್ತಿಸುವ ಕ್ರಿಯೆಗೆ ಹ್ಯೂಮನ್ ಕಾಂಪೋಸ್ಟಿಂಗ್‌ ಎನ್ನಲಾಗುತ್ತದೆ. ಬಳಿಕ ಆ ಮಣ್ಣನ್ನು ಸಸಿಗಳಿಗೆ ಗೊಬ್ಬರವನ್ನಾಗಿ ಬಳಕೆ ಮಾಡಲಾಗುತ್ತದೆ. ಇದು ಪ್ರಕೃತಿ ಸ್ನೇಹಿ ಪ್ರಕ್ರಿಯೆ. 2019ರಲ್ಲಿ ವಾಷಿಂಗ್ಟನ್‌ ಈ ‘ಹಸಿರು ಸಂಸ್ಕಾರ’ಕ್ಕೆ ಅನುಮತಿ …

Read More »

‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಟನೆ, ಪಾತ್ರ ಸಸ್ಪೆನ್ಸ್

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. ಈ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ಇವರೊಂದಿಗೆ ಕಲಾವಿದ …

Read More »

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು.!!

ಮಧ್ಯಪ್ರದೇಶ: ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ವರದಿಯಾಗಿದೆ. ಮೃತ ಮಹಿಳೆಯನ್ನು ಮಮತಾ ಕುಶ್ವಾಹಾ ಎಂದು ಗುರುತಿಸಲಾಗಿದೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಈ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆ ಈ ಕೃತ್ಯವನ್ನು ಎಸಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ ಅಪಹರಿಸಿ, ಆಕೆಯ ಮೇಲೆ ದೈಹಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ದೂರು ದಾಖಲಾಗಿತ್ತು. …

Read More »

ತಾನು ʻತೋಳʼದಂತೆ ಕಾಣಲು 18 ಲಕ್ಷ ರೂ. ಖರ್ಚು ಮಾಡಿದ ಜಪಾನ್‌ ವ್ಯಕ್ತಿ..!

ಜಪಾನ್‌: ಜಪಾನ್‌ನಲಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತಾನು ʻತೋಳ(wolf)ʼದಂತೆ ಕಾಣಲು ಸುಮಾರು 3,000,000 ಯೆನ್ (18.5 ಲಕ್ಷ ರೂ.) ಪಾವತಿಸಿದ್ದಾನೆ. ವ್ಯಕ್ತಿಯು ತನ್ನ ಜೀವಿತಾವಧಿಯ ಕನಸನ್ನು ನನಸಾಗಿಸಲು ಜೆಪ್ಪೆಟ್ ಎಂಬ ಕಂಪನಿಯಿಂದ ತಮ್ಮ ಕಸ್ಟಮೈಸ್ ಮಾಡಿದ ವೇಷಭೂಷಣಕ್ಕಾಗಿ 3,000,000 ಯೆನ್ (ರೂ. 18.5 ಲಕ್ಷಗಳು) ಖರ್ಚು ಮಾಡಿದ್ದಾನೆ. ಈ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬರು ಮಾಹಿತಿ ನೀಡಿರುವ ಪ್ರಕಾರ, ʻಬಾಲ್ಯದಿಂದಲೂ ಪ್ರಾಣಿಗಳ ಮೇಲಿನ ಪ್ರೀತಿಯಿಂದಾಗಿ ತೋಳದಂತೆ ಕಾಣಬೇಕೆಂದು ಆತ ಬಯಸಿದ್ದನು. ಹೀಗಾಗಿ, ಈ ವೇಷಭೂಷಣಕ್ಕಾಗಿ ಸುಮಾರು 18.85 ಲಕ್ಷ ರೂ. ಖರ್ಚು ಮಾಡಿದ್ದಾರೆ. …

Read More »

ಕಾಲೇಜಿನಲ್ಲೇ ಯುವತಿಗೆ ಯುವಕನಿಂದ ಚಾಕು ಇರಿತ, ಸ್ಥಳದಲ್ಲೇ ಸಾವು

ಬೆಂಗಳೂರು : ಹಾಡಹಗಲೇ ಬೆಂಗಳೂರಿನಲ್ಲಿ ಕಾಲೇಜಿನಲ್ಲೇ ವಿದ್ಯಾರ್ಥಿನಿ ಮೇಲೆ ಚಾಕು ಇರಿತ ಸ್ಥಳದಲ್ಲೇ ಸಾವನ್ನಪ್ಪಿದ ದುರಂತ ಘಟನ ರಾಜಾನುಕುಂಟೆ ಬಳಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ನಡೆದಿದೆ ಎಂದು ಬೆಳಕಿಗೆ ಬಂದಿದೆ.ಈ ಘಟನೆ ತಿಳಿದು ಸಿಲಿಕಾನ್‌ ಸಿಟಿ ಜನರೇ ಬೆಚ್ಚಿ ಬೀಳಿಸುವಂತಾಗಿದೆ. ವಿದ್ಯಾರ್ಥಿನಿ ಚಾಕು ಇರಿದು ಕೊಂದ ಬಳಿಕ ತಾನು ಚಾಕುವಿನಿಂದ ಇರಿದು ಕೊಂಡಿದ್ದಾನೆ ಎಂಬ ಮಾಹಿತಿ ತಿಳಿದಿದೆ. ಪ್ರೀತಿ ಪ್ರೇಮದ ವಿಚಾರಕ್ಕೆ ಹತ್ಯೆಗೈದು ಆತ್ಯಹತ್ಯೆಗೆ ಯತ್ನಿಸಲಾಗಿದೆ. ಘಟನಾ ಸ್ಥಳಕ್ಕೆ ರಾಜಾನುಕುಂಟೆ ಪೊಲೀಸರುಭೇಟಿ ಪರಿಶೀಲನೆ ನಡೆಸಿದ್ದಾರೆ ಇದೀಗ ಬಂದ ಸುದ್ದಿಯಾಗಿದ್ದು, ಹೆಚ್ಚಿನ ಮಾಹಿತಿ ತಿಳಿದ ತಕ್ಷಣ ಅಪ್‌ಡೇಟ್‌ …

Read More »

ಸಂಸದ ರಾಘವೇಂದ್ರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಸಾವು…!!

ರಾಮನಗರ : ಕೆರೆಯಲ್ಲಿ ಈಜಲು ಹೋಗಿ ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಮುಳುಗಿ ಸಾವನ್ನಪ್ಪಿದ ಘಟನೆ ಭಾನುವಾರ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ನಿವಾಸಿಯಾಗಿರುವ ಪ್ರಸನ್ನ ಭಟ್ (25) ಎಂದು ಗುರುತಿಸಲಾಗಿದೆ. ಪ್ರಸನ್ನ ಭಟ್ ಆರು ಜನರ ತಂಡ ಕನಕಪುರದ ಸ್ನೇಹಿತನ ಮನೆಗೆ ಬಂದಿದ್ದರು. ಅಂತೆಯೇ ಸಂಜೆ ಈಜಾಡಲು ಎಂದು ಮಾವತ್ತೂರು ಕೆರೆ ತೆರಳಿದ್ದರು. ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ …

Read More »

ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ಬಾಲಕನ ಮೇಲೆ ಪೊಲೀಸರು ಲಾಠಿಯಿಂದ ಹಲ್ಲೆ: ಸ್ಥಳೀಯರಿಂದ ಆಕ್ರೋಶ

ಮಂಗಳೂರು: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ನಡೆದಿದೆ. ನಗರದ ತಣ್ಣೀರುಬಾವಿ ಬೀಚ್ ಸಮೀಪದಲ್ಲಿ ಕ್ರಿಕೆಟ್ ಆಟ ಆಡುತ್ತಿದ್ದ ತಂಡವೊಂದು ಕ್ರಿಕೆಟ್‌ನಲ್ಲಿ ಜಯಗಳಿಸಿ ವಾಪಸ್ಸು ತೆರಳುವ ಸಂದರ್ಭದಲ್ಲಿ ಜಯಘೋಷಗಳನ್ನು ಮೊಳಗಿಸಿ ಹೋಗುತ್ತಿದ್ದರು. ಈ ಸಂದರ್ಭ ಕೆಲವು ಪೊಲೀಸರು ಯುವಕರನ್ನು ತಡೆ ಹಿಡಿದು ವಿಚಾರಣೆ ನಡೆಸಿದ್ದಾರೆ. ಪೊಲೀಸ್‌ ಸಿಬ್ಬಂದಿಯೊಬ್ಬ ಪುಟ್ಟ ಬಾಲಕನ ಮೇಲೆ ಬಾಸುಂಡೆ ಬರುವ ಹಾಗೆ ಎಡಕೈಗೆ ಲಾಠಿಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. …

Read More »

You cannot copy content of this page.