ತಾಜಾ ಸುದ್ದಿ

ಆಸ್ಪತ್ರೆಯ ಕಪಾಟಿನಲ್ಲಿ ಮಗಳ, ಬೆಡ್ ಕೆಳಗಡೆ ತಾಯಿಯ ಮೃತದೇಹ ಪತ್ತೆ..!

ಗುಜರಾತ್:  ತಾಯಿ ಮತ್ತು ಮಗಳ ಶವ ಆಸ್ಪತ್ರೆಯಲ್ಲಿ ಪತ್ತೆಯಾದ ಘಟನೆ ಅಹಮದಾಬಾದ್‌ನ ಭೂಭಾಯ್ ಪಾರ್ಕ್ ಬಳಿ ನಡೆದಿದೆ. ಆಪರೇಷನ್ ಥಿಯೇಟರ್ ನ ಕಪಾಟಿನಲ್ಲಿ ಮಗಳ ಶವ ಪತ್ತೆಯಾಗಿದ್ದು, ನಂತರ ಹಾಸಿಗೆಯ ಕೆಳಗೆ ತಾಯಿಯ ಶವ ಪತ್ತೆಯಾಗಿದೆ. ಕಗ್ಡಾಪಿತ್ ಪೊಲೀಸ್ ಠಾಣೆ ವ್ಯಾಪ್ತಿಯ ಭೂಲಾಭಾಯಿ ಪಾರ್ಕ್ ಬಳಿ ಇರುವ ಆಸ್ಪತ್ರೆಯೊಳಗೆ ಕೆಟ್ಟ ವಾಸನೆ ಬರುತ್ತಿದೆ ಎಂದು ನಮಗೆ ಮಾಹಿತಿ ಬಂದಿತ್ತು.ಆಸ್ಪತ್ರೆಯ ಆಪರೇಷನ್ ಥಿಯೇಟರ್ ಒಳಗಿದ್ದ ಕಪಾಟು ವಾಸನೆ ಬರುತ್ತಿದ್ದನ್ನು ಆಸ್ಪತ್ರೆಯ ಸಿಬ್ಬಂದಿ ಅದನ್ನು ತೆರೆದರು.ಒಳಗೆ 30 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಬಳಿಕ ಆಸ್ಪತ್ರೆ ಕಪಾಟಿನಲ್ಲಿ …

Read More »

ದ್ವಿಚಕ್ರ ವಾಹನದಲ್ಲಿ ಹೋಗುವಾಗ ತಡೆದು ವಿವಾಹ ನಿಶ್ಚಯವಾಗಿದ್ದ ಯುವತಿಯ ಬರ್ಬರ ಕೊಲೆ

ದಾವಣಗೆರೆ: ಹಾಡಹಗಲೇ ದುಷ್ಕರ್ಮಿಯೋರ್ವ ನಡು ರಸ್ತೆಯಲ್ಲೇ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿನೋಬಾನಗರದ ನಿವಾಸಿ ಚಾಂದ್ ಸುಲ್ತಾನಾ (24) ಎಂದು ಗುರುತಿಸಲಾಗಿದೆ. ದಾವಣಗೆರಯ ಪಿಜೆ ಬಡಾವಣೆಯ ಚರ್ಚ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಗೆ ದುಷ್ಕರ್ಮಿ ಬರ್ಬರವಾಗಿ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರು ಪ್ರಾಣ ಉಳಿಸಲಾಗಲಿಲ್ಲ. ಈ ನಡುವೆ ಪರಿಸರದ ಸಿಸಿ ಟಿವಿಗಳನ್ನು ಪರಿಶೀಲಿಸಿ ಹಂತಕನನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ. ಚಾಂದ್ ಸುಲ್ತಾನಾಳಿಗೆ 8 ತಿಂಗಳ ಹಿಂದೆ ಹರಿಹರ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥ …

Read More »

ವರದಕ್ಷಿಣೆ ಕಿರುಕುಳ: ಮೂರು ತಿಂಗಳ ಗರ್ಭಿಣಿ ಬಲಿ

ಹಾಸನ: ವರದಕ್ಷಿಣೆ  ಕಿರುಕುಳಕ್ಕೆ ಮೂರು ತಿಂಗಳ ಗರ್ಭಿಣಿ ಬಲಿಯಾಗಿರುವ ಘಟನೆ ಹಾಸನ  ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಮುದ್ರವಳ್ಳಿ ಬಳಿ ನಡೆದಿದೆ. ಮೃತ ಗರ್ಭಿಣಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. ಮಗಳ ಸಾವಿಗೆ ಪತಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು  ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಪಶುಪತಿ ಗ್ರಾಮದ ಕುಮಾರ್-ಸುಧಾ ದಂಪತಿಯ ಮಗಳು ರೋಹಿಣಿಯನ್ನು ಅರಕಲಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದ ಸುಮಂತ್ ಎಂಬಾತನಿಗೆ ಮೇ 28ರಂದು ಕೇರಾಳಪುರದ ಕಲ್ಯಾಣಮಂಟಪದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಟ್ಟಿದ್ದರು. ಮದುವೆ ವೇಳೆ ಸುಮಂತ್‌ಗೆ …

Read More »

BREAKING NEWS : ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಗೀತಾ ಚಿಕಿತ್ಸೆ ಫಲಿಸದೇ ಸಾವು

ಹುಬ್ಬಳ್ಳಿ: ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ನಡೆಸಿದ ಅಮಾನವೀಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತ್ತಿದ್ದ ಅತಿಥಿ ಶಿಕ್ಷಕಿ ಗೀತಾ ಯಲ್ಲಪ್ಪ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಆರೋಪಿ ಮುತ್ತಪ್ಪ ಹಡಗಲಿ, ಶಾಲೆಯ 4ನೇ ತರಗತಿ ವಿದ್ಯಾರ್ಥಿ ಭರತ್ ಮೇಲೆ ಡಿ.19 ರ ಬೆಳಗ್ಗೆ ಹಲ್ಲೆ ನಡೆಸಿ, ಒಂದನೇ ಮಹಡಿಯಿಂದ ಕೆಳಗೆ ತಳ್ಳಿದ್ದ. ಬಳಿಕ ಶಿಕ್ಷಕಿ ಗೀತಾ ಯಲ್ಲಪ್ಪ ಅವರ …

Read More »

BREAKING NEWS : ಹಾವೇರಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ : ಹಾವೇರಿಯಲ್ಲಿ ಘೋರದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾವೇರಿ ತಾಲೂಕಿನ ಅಗಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಭಾರತಿ ಕಮದೊಳ್ಳಿ (40) ಮಗ ಕಿರಣ್ (21) ಹಾಗೂ ಸೊಸೆ ಸೌಜನ್ಯ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 3 ತಿಂಗಳ ಹಿಂದೆ ಕಿರಣ್, ಸೌಜನ್ಯ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ …

Read More »

ಮಗಳ ಬರ್ತ್‌ಡೇ ಆಚರಿಸಲು ಸುವರ್ಣ ಸೌಧ ಬಾಡಿಗೆಗೆ ಕೊಡಿ – ಹೀಗೆ ಕೇಳಲು ಕಾರಣವೇನು ಗೊತ್ತಾ..?

ಬೆಳಗಾವಿ: ಮಗಳ ಬರ್ತ್‌ಡೇ ಆಚರಣೆಗೆ ಸುವರ್ಣ ಸೌಧವನ್ನು ಬಾಡಿಗೆಗೆ ನೀಡುವಂತೆ ವಿಧಾನ ಪರಿಷತ್‌ ಸಭಾಪತಿಗೆ ವಕೀಲರೊಬ್ಬರು ಮನವಿ ಪತ್ರ ಸಲ್ಲಿಸಿರುವ ವಿಚಿತ್ರ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದ ವಕೀಲ ಮಲ್ಲಿಕಾರ್ಜುನ ಚೌಕಾಶಿ ಹೆಸರಿನ ವ್ಯಕ್ತಿ ಸುವರ್ಣ ಸೌಧ ಬಾಡಿಗೆಗೆ ನೀಡುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ಏನಿದೆ? ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ …

Read More »

ಉಡುಪಿ: ಮನೆಯ ಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ಮೌಲ್ಯದ ಸೊತ್ತು ಕಳವು ; ಆರೋಪಿಗಳ ಬಂಧನ

ಉಡುಪಿ: ಮನೆಯವರು ಮೆಹಂದಿಗೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕಂಗಿತ್ತು ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂದ ಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಅರಂಬೋಡಿ ಕಾಂತರಬೆಟ್ಟು ನಿವಾಸಿ ಪ್ರಸಾದ್‌ (34) ಹಾಗು ಕಳ್ಳತನಕ್ಕೆ ಸಹಕರಿಸಿದ ಆರೋಪದಲ್ಲಿ ಶಿಬಾ (39) ಎಂಬಾಕೆ ಬಂಧನಕ್ಕೆ ಒಳಗಾದ ಆರೋಪಿಗಳಾಗಿದ್ದಾರೆ. ಕಾರ್ಕಳ ತಾಲೂಕು ಕಲ್ಯಾ ಗ್ರಾಮದ ಕಂಗಿತ್ತುವಿನ ಉಷಾ ಜಗದೀಶ್‌ ಆಂಚನ್‌ ಅವರ ಮನೆಯಲ್ಲಿ ಡಿಸೆಂಬರ್ 3ರಂದು ಈ ಕಳವು ಪ್ರಕರಣ …

Read More »

ಪರೀಕ್ಷಾ ಕೊಠಡಿಗಳಲ್ಲಿ ಬುರ್ಖಾ ನಿಷೇಧ: ಮಹತ್ವದ ಆದೇಶ

ರಿಯಾದ್ : ಭಾರತದಲ್ಲಿ ಹಿಜಬ್ ವಿವಾದ ಸುಪ್ರೀಂಕೋರ್ಟ್ ಅಂಗಳದಲ್ಲಿರುವಂತೆ ಸೌದಿ ಅರೇಬಿಯಾ ತನ್ನ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬುರ್ಖಾವನ್ನು (ಅಬಯಾ) ನಿಷೇಧಿಸಿದೆ. ಸೌದಿ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ ಶಿಕ್ಷಣ ಸಚಿವಾಲಯದ ಜೊತೆ ಶೈಕ್ಷಣಿಕ ಹಾಗೂ ತರಬೇತಿ ವ್ಯವಸ್ಥೆಗೆ ಮಾನ್ಯತೆ ನೀಡುವ ಸಲುವಾಗಿ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬುರ್ಖಾ ಧರಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಘೋಷಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಧರಿಸಬೇಕು. ಎಲ್ಲಾ ಉಡುಪುಗಳೂ ಸಾರ್ವಜನಿಕ ಸಭ್ಯತೆಯ ನಿಯಮಗಳಿಗೆ ಬದ್ಧವಾಗಿರಬೇಕು ಎಂದು ಇಟಿಇಸಿ ಹೇಳಿದೆ. 2018 ರಲ್ಲಿಯೇ ಸೌದಿಯಲ್ಲಿ ಅಬಯಾವನ್ನು …

Read More »

ದೇಶದಲ್ಲಿ ಪುನಃ ಮಾಸ್ಕ್ ಕಡ್ಡಾಯವಾಗುವ ಸಾಧ್ಯತೆ! – ಕೇಂದ್ರ ಸರಕಾರ

ನವದೆಹಲಿ – ಚೀನಾದಲ್ಲಿ ಕೊರೋನಾ ದೊಡ್ಡ ಪ್ರಮಾಣದಲ್ಲಿ ಭೀಕರ ರೂಪವನ್ನು ತಾಳಿದೆ. ಇಲ್ಲಿ ಮುಂದಿನ ೩ ತಿಂಗಳಲ್ಲಿ ಲಕ್ಷಾಂತರ ಜನರ ಸಾವು ಸಂಭವಿಸಲಿರುವ ಸಾಧ್ಯತೆಯನ್ನು ಊಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಪೂರ್ಣ ಜಗತ್ತಿನಲ್ಲಿ ಜಾಗೃತೆಯಿಂದಿರಲು ಎಚ್ಚರಿಸಲಾಗಿದೆ. ಭಾರತದಲ್ಲಿಯೂ ಕೇಂದ್ರೀಯ ಆರೋಗ್ಯ ಮಂತ್ರಿಗಳಾದ ಡಾ. ಭಾರತಿ ಪವಾರರವರು ‘ದೇಶದಲ್ಲಿ ಪುನಃ ಮಾಸ್ಕನ್ನು ಖಡ್ಡಾಯಗೊಳಿಸುವ ಸಾಧ್ಯತೆ ನಿರ್ಮಾಣವಾಗಿದೆ’, ಎಂದು ಪತ್ರಿಕಾ ಪರಿಷತ್ತಿನಲ್ಲಿ ಹೇಳಿದ್ದಾರೆ. ಚೀನಾದ ಪರಿಸ್ಥಿತಿಯಿಂದಾಗಿ ಭಾರತದಲ್ಲಿ ಜಾಗೃತೆಯ ಕ್ರಮವೆಂದು ಉಪಾಯಯೋಜನೆಗಳನ್ನು ಮಾಡಲಾಗುತ್ತಿದೆ. ಕೇಂದ್ರೀಯ ಆರೋಗ್ಯ ಮಂತ್ರಾಲಯದಿಂದ ಮಾರ್ಗದರ್ಶಕ ತತ್ತ್ವಗಳನ್ನು ಜ್ಯಾರಿಗೊಳಿಸಲಾಗಿದೆ. ಕೇಂದ್ರೀಯ ಆರೋಗ್ಯ ಮಂತ್ರಿಗಳಾದ ಭಾರತಿ ಪವಾರರವರು ಪತ್ರಿಕಾ …

Read More »

ಕೋವಿಡ್ ಆತಂಕ : ರಾಜ್ಯದಲ್ಲಿ ಶೀಘ್ರವೇ ಹೊಸ ಮಾರ್ಗಸೂಚಿ ಬಿಡುಗಡೆ : ಆರೋಗ್ಯ ಸಚಿವ ಸುಧಾಕರ್

ಬೆಳಗಾವಿ : ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್‌ ಪಡೆಯಲು ಆದ್ಯತೆ ನೀಡಬೇಕಿದೆ. ಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್‌ ಸೀಕ್ವೆನ್ಸ್‌ ಪರೀಕ್ಷೆಗೆ ನೀಡಲು …

Read More »

You cannot copy content of this page.