ತಾಜಾ ಸುದ್ದಿ

ಉಡುಪಿ: ಚಲಿಸುತ್ತಿದ್ದಾಗಲೇ ಕಳಚಿದ KSRTC ಬಸ್ಸಿನ ಟಯರ್..!

ಉಡುಪಿ: ಚಲಿಸುತ್ತಿದ್ದಾಗಲೇ ಕೆಎಸ್‌ಆರ್‌ಟಿಸಿ ಬಸ್ಸಿನ ಟಯರ್ ಕಳಚಿದ್ದು, ಸಂಭವನೀಯ ಅನಾಹುತ ತಪ್ಪಿದ ಘಟನೆ ಕುಂದಾಪುರ ಆಜ್ರಿ ಸಮೀಪದ ಹೆಮ್ಮಕ್ಕಿ ಬಳಿ ಶನಿವಾರ ನಡೆದಿದೆ. ಆಜ್ರಿಯಿಂದ ಕುಂದಾಪುರಕ್ಕೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್ ಇದಾಗಿದೆ. ಬಸ್ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದರಿoದ ಯಾವುದೇ ಅನಾಹುತ ಸಂಭವಿಸದೆ ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಆಜ್ರಿಯ ನಿವಾಸಿ ಚಂದ್ರಹಾಸ ಅವರು ಪ್ರತಿಕ್ರಿಯೆ ನೀಡಿದ್ದು, ಕೆಎಸ್‌ಆರ್‌ಟಿಸಿ ಹಾಗೂ ಡಿಪೋ ಮೆಕ್ಯಾನಿಕ್‌ಗಳ ನಿರ್ಲಕ್ಷö್ಯದಿಂದ ಈ ಘಟನೆ ಸಂಭವಿಸಿದೆ. ಪ್ರಯಾಣಿಕರ ಜೀವದೊಂದಿಗೆ ಚೆಲ್ಲಾಟ ಆಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Read More »

ಉಡುಪಿ: ನಗರದಲ್ಲಿ ಹಲವರಿಗೆ ಹುಚ್ಚು ನಾಯಿ ಕಡಿತ!!

ಉಡುಪಿ: ಹುಚ್ಚು ನಾಯಿಯೊಂದು ಹಲವಾರು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಸಂಭವಿಸಿದೆ. ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿರುವುದನ್ನು ಸ್ಥಳೀಯರು ಗಮನಿಸಿದರು. ಬಳಿಕ ನಾಯಿಯು ತೀರಾ ಸುಸ್ತಾಗಿ ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ ಬಂದು ಬಿದ್ದಿರುವುದನ್ನು ಸಾರ್ವಜನಿಕರು ಗುರುತಿಸಿ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ …

Read More »

32 ಹಲ್ಲುಗಳೊಂದಿಗೆ ಜನಿಸಿದ ಅಪರೂಪದ ಮಗು.!

ಸಾಮಾನ್ಯವಾಗಿ ಜನಿಸಿದ ಮಗುವಿಗೆ 9 ತಿಂಗಳು ಅಥವಾ ಕೆಲವರಿಗೆ ಬೆಳವಣಿಗೆ ಮೇಲೆ 10, 11 ಅಥವಾ ಒಂದು ವರ್ಷಗಳ ಬಳಿಕ ಒಂದರಿಂದ ಮೂರು ಹಲ್ಲುಗಳು ಬರುತ್ತದೆ. ಆದರೆ ವಿಚಿತ್ರ ಎಂಬಂತೆ ಇಲ್ಲೊಬ್ಬ ಮಗು 32 ಹಲ್ಲುಗಳೊಂದಿಗೆ ಹೊಟ್ಟಿದ್ದು, ಈ ಮಗುವಿನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಮಗು ಹುಟ್ಟಿದ ಹಲವು ವರ್ಷಗಳು ಕಳೆದ ಬಳಿಕ ಆ ಮಗುವಿಗೆ ಸಂಪರ್ಣವಾಗಿ ಹಲ್ಲುಗಳು ಬರುತ್ತವೆ. ಆದರೆ ಇಲ್ಲೊಂದು ಮಗು 32 ಹಲ್ಲುಗಳೊಂದಿಗೆ ಜನಿಸಿದ್ದು, ನೋಡುಗರನ್ನು ಆಶ್ಚರ್ಯಕ್ಕೀಡು ಮಾಡಿದೆ. ಅಮೆರಿಕದ ಮಹಿಳೆಯೊಬ್ಬರು ಈ ಹೆಣ್ಣು …

Read More »

ಉಡುಪಿ: 8 ಮಂದಿಗೆ ಕಚ್ಚಿದ ಹುಚ್ಚು ನಾಯಿ..!

ಉಡುಪಿ: ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸ್ಥಳೀಯವಲ್ಲದ ಎಲ್ಲಿಂದಲೋ ಬಂದ ಈ ನಾಯಿಗೆ ಹುಚ್ಚು ಹಿಡಿದಿರುವುದನ್ನು ಸ್ಥಳೀಯರು ಗಮನಿಸಿದರು. ಬಳಿಕ ನಾಯಿಯು ತೀರಾ ಸುಸ್ತಾಗಿ ಉಡುಪಿಯ ನಾರ್ತ್ ಶಾಲೆಯ ಆವರಣದಲ್ಲಿ ಬಂದು ಬಿದ್ದಿರುವುದನ್ನು ಸಾರ್ವಜನಿಕರು ಗುರುತಿಸಿ, ಉಡುಪಿ …

Read More »

ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನ~ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ಬೆಳಕಿನ ಬಾಗಿಲು ಕನ್ನಡ ಶಾಲೆ~ಉಳಿಸಲು ಬೇಕು ಮಕ್ಕಳ ಲೀಲೆ ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ಶಾಲೆ ಬೆಳೆಸಿ- ಕಲೆ ಸಂಸ್ಕೃತಿ ಉಳಿಸಿ ಅಭಿಯಾನದ ಬಿತ್ತಿಪತ್ರವನ್ನು ಉಡುಪಿ ಜನಪ್ರಿಯ ಶಾಸಕ ಯಶ್ ಪಾಲ್ ಸುವರ್ಣ ಅವರು ಉಡುಪಿಯ ಬೋರ್ಡ್ ಹೈಸ್ಕೂಲಿನ ಆವರಣದಲ್ಲಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿ ಕಸಾಪ ಉಡುಪಿ ತಾಲೂಕು ಘಟಕ ನಡೆಸುತ್ತಿರುವ ಅಭಿಯಾನ ಅತ್ಯಂತ ಮಹತ್ವದ್ದಾಗಿದೆ ಮತ್ತು ಶ್ಲಾಘನೀಯ ಕೆಲಸ ಎಂದರು. ಶಾಸಕರ ನೆಲೆಯಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆಯಿತ್ತರು. ತಾಲೂಕು ಘಟಕದ ಮಾಜಿ …

Read More »

ಬಂಟ್ವಾಳ: ಶಾಮಿಯಾನದ ಕೆಲಸಗಾರ ವಿದ್ಯುತ್ ಶಾಕ್ ಗೆ ಬಲಿ

ಬಂಟ್ವಾಳ : ಶಾಮಿಯಾನ  ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿದ ಕರೆಂಟ್ ಶಾಕಿಗೆ ಓರ್ವ ಮೃತಪಟ್ಟರೆ ಇತರ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕದ ಸಲುವಾಗಿ ಈ ಶಾಮಿಯಾನ ಹಾಕುತ್ತಿದ್ದಾಗ ದುರ್ಘಟನೆ ಸಂಭವಿಸಿದ್ದು ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದಾನೆ. ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಮೃತದೇಹವನ್ನು …

Read More »

ಮಣಿಪಾಲ: ಅಪ್ಲಾಸ್ಟಿಕ್ ಅನೀಮಿಯಾದಿಂದ ಬಳಲುತ್ತಿದ್ದ 15 ವರ್ಷದ ಬಾಲಕನ ಚಿಕಿತ್ಸೆಗೆ 20 ಲಕ್ಷ ಸಂಗ್ರಹಿಸಿ ನೆರವಾದ ಹೋಮ್ ಡಾಕ್ಟರ್ ಫೌಂಡೇಶನ್

ಮಣಿಪಾಲ:ಅಪ್ಲಾಸ್ಟಿಕ್ ಅನೀಮಿಯಾ ದಿಂದ ಬಳಲುತ್ತಿರುವ 15 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿಯೊಂದೆ ಪರಿಹಾರ ವಾಗಿತ್ತು. ಇದಕ್ಕೆ ಸುಮಾರು 20 ರಿಂದ 20 ಲಕ್ಷ ಖರ್ಚು ಹಾಗಬಹುದೆಂದು ಚಿಕಿತ್ಸೆ ನೀಡುತ್ತಿರುವ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯರು ತಿಳಿಸಿದ್ದರು. ಬಡವರಾಗಿದ್ದ ಕುಟುಂಬಸ್ಥರಿಗೆ ಇದನ್ನು ಭರಿಸುವುದು ಕಷ್ಟವಾಗಿತ್ತು. ಈ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ನೇತೃತ್ವವಹಿಸಿದ್ದ ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲಜಿ ವಿಭಾಗದ ಮುಖ್ಯಸ್ಥರಾದ ಡಾ ವಾಸುದೇವ್ ಭಟ್ ತಂಡದವರು ಹೋಂ ಡಾಕ್ಟರ್ ಫೌಂಡೇಶನ್ ನ ನೇತೃತ್ವ ವಹಿಸಿರುವ ಡಾ. ಶಶಿಕಿರಣ್ ಶೆಟ್ಟಿ ಅವರಿಗೆ …

Read More »

ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣ: ಆ.24ಕ್ಕೆ ಸಾಕ್ಷಿ ವಿಚಾರಣೆ ಮುಂದೂಡಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿ ಜು.18ರಂದು ಆದೇಶ ನೀಡಿದೆ. ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯೂ, ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆವರೆಗೆ ಉಡುಪಿ ನ್ಯಾಯಾಲಯದ …

Read More »

ಕುಂದಾಪುರ: ಮನೆ ಮೇಲೆ ಬಿದ್ದ ಬೃಹತ್‌ ಮರ..!

ಕುಂದಾಪುರ: ಭಾರೀ ಗಾಳಿಗೆ ಮನೆಯೊಂದರ ಮೇಲೆ ಬೃಹತ್ ಅಶ್ವಥ ಮರ ಬುಡ ಸಹಿತ ಬಿದ್ದ ಘಟನೆ ಕುಂದಾಪುರ ಹಡವು ಗ್ರಾಮದಲ್ಲಿ ನಡೆದಿದೆ. ಹಡವು ಗ್ರಾಮದ ಚಿಕ್ಕು ದೇವಾಡಿಗ ಎಂಬವರ ಮನೆಯ ಮೇಲೆ ಮರ ಬೀಳುವ ಶಬ್ದ ಕೇಳಿ ಮನೆಯವಲ್ಲಿದ್ದವರೆಲ್ಲರೂ ಹೊರಗೆ ಓಡಿ ಬಂದರು. ಇದರಿಂದ ಅವರೆಲ್ಲ ಅಪಾಯದಿಂದ ಪಾರಾಗಿದ್ದಾರೆ. ಪರಿಣಾಮ ಮನೆಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

Read More »

ಆ.15ರಿಂದ ‘ಶೃಂಗೇರಿ ಶಾರದಾಂಬೆ’ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿ, ಈ ಉಡುಪು ಕಡ್ಡಾಯ

 ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದು ಶೃಂಗೇರಿಯ ಶಾರಾಂಬೆಯ ಶ್ರೀಮಠ. ಆಗಸ್ಟ್.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಆಗಸ್ಟ್.15, 2024ರಿಂದ ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ. ಶ್ರೀ ಶಾರದಾಂಬೆಯ ದರ್ಶನಕ್ಕೆ ಬರುವಂತವರು ನಿಗದಿತ ಉಡುಪುಗಳನ್ನು ಹೊರತುಪಡಿಸಿ …

Read More »

You cannot copy content of this page.