ತಾಜಾ ಸುದ್ದಿ

ರಾಜ್ಯದಲ್ಲಿ ಮೊದಲ ಬಾರಿಗೆ ಝಿಕಾ ವೈರಸ್ ಪತ್ತೆ..! ಸೋಂಕಿನ ಲಕ್ಷಣಗಳೇನು?

ರಾಜ್ಯದಲ್ಲಿ ಮೊದಲ ಬಾರಿಗೆ ಝಿಕಾ ವೈರಸ್ ಪತ್ತೆಯಾಗಿದೆ. ಇದರಿಂದ ಕರ್ನಾಟಕದ ಜನತೆ ಆತಂಕಕ್ಕೀಡಾಗಿತ್ತು. ರಾಯಚೂರಿನಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ. 5 ವರ್ಷದ ಬಾಲಕಿಯಲ್ಲಿ ಸೋಂಕು ದೃಢಪಟ್ಟಿದೆ.ರಾಯಚೂರಿನ ಬಾಲಕಿಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಪುಣೆ ವೈರಾಲಜಿ ಲ್ಯಾಬ್‌ನಿಂದ ಪಾಸಿಟಿವ್ ರಿಪೋರ್ಟ್‌ ಬಂದಿದೆ. ಝೀಕಾ ವೈರಸ್‌ ಸೋಂಕಿನ ಬಾಲಕಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಇನ್ನು ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಈವರೆಗೂ ಲಭ್ಯವಾಗಿಲ್ಲ. ಹೀಗಾಗಿ ರಾಯಚೂರು ಜಿಲ್ಲಾಡಳಿತ ಬಾಲಕಿ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡುತ್ತಿದೆ. ಸೊಳ್ಳೆ ಕಡಿತದಿಂದ ಬರುವ ಝಿಕಾ …

Read More »

ಮಂಗಳೂರು: ಕುಡುಕನಿಗೆ ನೋಟಿನ ಬಂಡಲ್ ಪತ್ತೆ ಕೇಸ್ ಗೆ ಟ್ವಿಸ್ಟ್; ಠಾಣೆಗೆ ತೆರಳಿದ ವಾರಸುದಾರ..! ದೂರಿನಲ್ಲಿ ಏನಿದೆ ಗೊತ್ತಾ…?

ಮಂಗಳೂರು:ಪಂಪ್‌ವೆಲ್‌ನಲ್ಲಿ ಕುಡುಕನ ಬಳಿ ನೋಟಿನ ಬಾಕ್ಸ್ ಪತ್ತೆಯಾಗಿತ್ತು.‌ಸುದ್ದಿ ವೈರಲ್ ಅಗುತ್ತಿದ್ದಂತೆ ಭಾರೀ ಸಂಚಲನ ಕೂಡ ಮೂಡಿತ್ತು. ಇದೀಗ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ವರದಿಯಾಗಿದೆ. ಠಾಣೆಗೆ ಹಾಜರಾದ ವ್ಯಕ್ತಿ ತಾನು ಅಡಿಕೆ ವ್ಯಾಪಾರಿಯಾಗಿದ್ದು ಹಣ ತೆಗೆದುಕೊಂಡು ಹೋಗುವಾಗ ಬಿದ್ದಿದೆ.ಅದರಲ್ಲಿ ಒಟ್ಟು 10 ಲ.ರೂ ಇತ್ತು ಎಂಬುದಾಗಿ ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ಆ ವ್ಯಕ್ತಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ನ.26ರಂದು ಕುಡುಕನೋರ್ವನ ಕೈಯಲ್ಲಿ …

Read More »

ಬೆಳ್ತಂಗಡಿ: ಅರೆಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ..!

ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್  ವ್ಯಾಪ್ತಿಯ ಕೇಲ್ತಾಜೆ ಸಮೀಪ ಮೃತದೇಹವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೇಲ್ತಾಜೆ ಸಮೀಪ ರಬ್ಬರ್ ತೋಟದ ಚರಂಡಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಂಪೂರ್ಣವಾಗಿ ಕೊಳೆತ ಹೋಗಿದ್ದು, ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತಜ್ಞರು ಭೇಟಿ ನೀಡುವ ನಿರೀಕ್ಷೆಯಿದೆ.  ಕಟ್ಟಿಗೆ  ಹಾಕಿ ಸುಟ್ಟ ರೀತಿಯಲ್ಲಿ ಮೃತದೇಹವಿದ್ದು ವಾಸನೆ ಬಂದಾಗ ಹತ್ತಿರದ ಮನೆಯವರು ಬಂದು ನೋಡಿದಾಗ ಮೃತದೇಹ ಕಂಡು ಬಂದಿದೆ.

Read More »

‘ಪುಂಡರ ಗ್ಯಾಂಗ್’ ಹೆಡಮುರಿ ಕಟ್ಟಲು ‘ಲೇಡಿ ಪೊಲೀಸ್’, ಮಾಡಿದ್ದೇನು ಗೊತ್ತಾ…? ರೋಚಕ ಕಥೆ..!

ಇಂದೋರ್ : ಎಂಜಿಎಂ ವೈದ್ಯಕೀಯ ಕಾಲೇಜಿನ ರ್ಯಾಗಿಂಗ್ ಪ್ರಕರಣವನ್ನ ಮಧ್ಯಪ್ರದೇಶದ ಇಂದೋರ್ನ ಪೊಲೀಸರು ಅತ್ಯಂತ ವಿಶಿಷ್ಟ ರೀತಿಯಲ್ಲಿ ಭೇದಿಸಿದ್ದಾರೆ. ಜುಲೈ 24ರಂದು ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿರುವ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತಾದ್ರೂ, ಇದನ್ನ ನೀಡಿದ್ಯಾರು.? ಯಾರನ್ನ ರ್ಯಾಗಿಂಗ್ ಮಾಡಲಾಗ್ತಿದೆ ಅನ್ನೋ ಯಾವ ಮಾಹಿತಿಯೂ ಸಿಗದ ಕುರುಡು ಪ್ರಕರಣವಾಗಿತ್ತು. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಲು ಪೊಲೀಸರು ರಹಸ್ಯ ಪೊಲೀಸ್ ಅಧಿಕಾರಿ ಶಾಲಿನಿ ಚೌಹಾಣ್ ಅವ್ರನ್ನ ನೇಮಿಸಿದ್ದಾರೆ. ಈ ಕುರುಡು ರ್ಯಾಗಿಂಗ್ ಪ್ರಕರಣವನ್ನ ಹೇಗೆ ಬಯಲಿಗೆಳೆಯಲು ಸಜ್ಜಾದ ಶಾಲಿನಿ, ವೈದ್ಯಕೀಯ ವಿದ್ಯಾರ್ಥಿ ಎಂದು ಕಾಲೇಜಿಗೆ …

Read More »

ಸುಳ್ಯ: ಮದುವೆಗೆ ತೆರಳುತ್ತಿದ್ದ ಕಾರು ಪಲ್ಟಿ, ತಾಯಿ ಮಗು ಮೃತ್ಯು

ಸುಳ್ಯ:  ಜಾಲ್ಸೂರು ಕಾಸರಗೋಡು ರಸ್ತೆಯ ಪರಪ್ಪೆ ಬಳಿ ಮದುವೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾಗಿ ತಾಯಿ ಮತ್ತು ಮಗು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದ ನಾವೂರು ಬೋರುಗುಡ್ಡೆ ಅಬ್ದುಲ್ಲಾ ಎಂಬವರ ಪುತ್ರಿ, ಶಾನ್ ಎಂಬವರ ಪತ್ನಿ ಶಾಹಿನಾ (28) ಹಾಗೂ ಶಝಾ (3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ತಾಯಿ ಮತ್ತು ಮಗುವಿನ ಮೃತದೇಹಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Read More »

ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಫೋಟೋಗ್ರಾಫರ್ ಹೃದಯಾಘಾತದಿಂದ ಸಾವು.!

ಶಿವಮೊಗ್ಗ : ನಗರದ ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಫೋಟೋಗ್ರಾಫರ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇತ್ತೀಚಿನ ಕೋವಿಡ್ ಸಾಂಕ್ರಾಮಿಕ ಬಂದ ಬಳಿಕವಂತೂ ಎಲ್ಲೆಡೆ ಸಾವುಗಳು ಹೆಚ್ಚಾಗತೊಡಗಿದೆ. ಅದರಲ್ಲೂ ವಯಸ್ಸಿನ ಭೇಧವಿಲ್ಲದೇ ಯುವ ಜನಾಂಗ ಹೃದಯಾಘಾತದಿಂದ ಹೆಚ್ಚೆಚ್ಚು ಸಾವನ್ನಪ್ಪುತ್ತಿದ್ದಾರೆ. ಅಂತಹುದೇ ಒಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವನಪ್ಪಿದ್ದಾರೆ. ಸಾಗರ ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೆಲಿನ ಸೋಮೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಸಾಗರ ಪಟ್ಟಣದ ರಾಮನಗರದ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು …

Read More »

ಅಮೇರಿಕಾದಲ್ಲಿ ರೈಲು ಢಿಕ್ಕಿ-ಪುತ್ತೂರು ಮೂಲದ ವಿದ್ಯಾರ್ಥಿ ಮೃತ್ಯು

ಪುತ್ತೂರು: ಪುತ್ತೂರು ಮೂಲದ ವಿದ್ಯಾರ್ಥಿಯೋರ್ವ ಅಮೆರಿಕಾದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ದಾರುಣವಾಗಿ ಮೃತಪಟ್ಟ ಘಟನೆ ಡಿ.9ರಂದು ನಡೆದಿದೆ. ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೋಟೆಲ್‌ನಲ್ಲಿ ಉದ್ಯಮಿಯಾಗಿದ್ದ ಅನಂತಕೃಷ್ಣರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ (30) ಮೃತಪಟ್ಟ ವಿದ್ಯಾರ್ಥಿ. ಅವರು ಮದ್ರಾಸ್ ಐಯಟಿ ವಿದ್ಯಾರ್ಥಿಯಾಗಿದ್ದು ಕಳೆದ ಎರಡು ವರ್ಷಗಳಿಂದ ಅಮೇರಿಕಾದಲ್ಲೇ ಉನ್ನತ ಶಿಕ್ಷಣ ಪೂರೈಸಿಕೊಳ್ಳುತ್ತಿದ್ದರು ಎನ್ನಲಾಗಿದೆ.

Read More »

ಪಡುಬಿದ್ರಿ: ಮೀನುಗಾರಿಕಾ ದೋಣಿ ಮುಳುಗಡೆ

ಪಡುಬಿದ್ರಿ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದೆ. ಇಂದು ಉಚ್ಚಿಲದ ಶ್ರೀ ಗಿರಿಜಾ ದೋಣಿಯಲ್ಲಿ 7 ಮಂದಿ ಮೀನುಗಾರಿಕೆಗೆಂದು ತೆರಳಿದ್ದರು. ಚಂಡಮಾರುತದ ಪ್ರಭಾವದಿಂದಾಗಿ ಸಮುದ್ರ ಪ್ರಕ್ಷುಬ್ದಗೊಂಡು ದೋಣಿ ಮುಳುಗಿತ್ತು. ಈ ವೇಳೆ ದೋಣಿಯಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ದೋಣಿಯಲ್ಲಿದ್ದ ಬಲೆ ಹಾಗೂ ಹೈ ಸ್ಪೀಡ್ ಇಂಜಿನ್ ಸಮುದ್ರ ಪಾಲಾಗಿದ್ದು, ದೋಣಿಗೆ ಹಾನಿ ಉಂಟಾಗಿದೆ. ಘಟನೆಯಲ್ಲಿ ಸುಮಾರು ಆರೂವರೆ ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಮಾಲೀಕರು ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್ …

Read More »

ಬೆಳ್ತಂಗಡಿಯಲ್ಲಿ ನದಿಯ ಸೇತುವೆ ಬಳಿ ಒಂಟಿ ಸಲಗ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

ಮಂಗಳೂರು: ಜಿಲ್ಲೆಯ ಬೆಳ್ತಂಗಡಿಯ ಅಣಿಯೂರು ನದಿಯ ಸೇತುವೆಯ ಕೆಳಭಾಗದಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ. ಹೀಗಾಗಿ ನದಿಯ ಸೇತುವೆಯ ಕೆಳಭಾಗದಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆ. ಅಲ್ಲದೇ ಆನೆಯ ವಿಡಿಯೋವನ್ನು ಚಿತ್ರೀಕರಣ ಮಾಡಿದ್ದಾರೆ‌. ಚಾರ್ಮಾಡಿ, ನೆರಿಯ ಸೇರಿದಂತೆ ತಾಲೂಕಿನ ಹಲವೆಡೆ ಆನೆಗಳು ಕೃಷಿ ತೋಟಕ್ಕೆ ನುಗ್ಗಿ ಹಾನಿ ಮಾಡುತ್ತಿವೆ. ಈ ನಡುವೆ ಪೇಟೆಯಲ್ಲಿ ಆನೆ ಕಂಡುಬಂದಿದ್ದು, ಮತ್ತಷ್ಟು ಭಯವುಂಟು ಮಾಡಿದೆ. ತಕ್ಷಣ ಅರಣ್ಯ ಇಲಾಖೆ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಕೂಡಲೇ ಅರಣ್ಯಾಧಿಕಾರಿ ಕಾಡಾನೆ ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.

Read More »

BIGG NEWS : ಯುಪಿ ಶಾಲಾ ಬಾಲಕಿಯರಿಗೆ ಕರಾಟೆ ಕಡ್ಡಾಯ, ತರಬೇತಿಗೆ ಆದೇಶ : ಯೋಗಿ ಆದಿತ್ಯನಾಥ್

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಎಲ್ಲಾ ಶಾಲಾ ಬಾಲಕಿಯರಿಗೆ ಕರಾಟೆ ತರಬೇತಿಗೆ ಆದೇಶಿಸಿದ್ದಾರೆ. ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಪುರುಷರ ಮೇಲೆ ಹೇಗೆ ದಾಳಿ ಮಾಡಬೇಕು. ಈ ಕೃತ್ಯಗಳಿಂದ ತಪ್ಪಿಸಿಕೊಳ್ಳುವುದ ಬಗ್ಗೆ ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಲಾಗಿದೆ ಲೈಂಗಿಕ ಅಪರಾಧಗಳು ಹೆಚ್ಚಳ : ಇತ್ತೀಚಿನ …

Read More »

You cannot copy content of this page.