ತಾಜಾ ಸುದ್ದಿ

ವಕೀಲರ ಮೇಲೆ ಹಲ್ಲೆ ಆರೋಪ : ಪುಂಜಾಲಕಟ್ಟೆ ಠಾಣೆಯ ಎಸ್.ಐ ಸುತೇಶ್ ಎಸ್.ಪಿ. ಕಚೇರಿಗೆ ವರ್ಗಾವಣೆ..!!!

ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರವರು ಮತ್ತು ಸಿಬ್ಬಂದಿಗಳು ಜಾಗದ ವಿಚಾರವೊಂದರ ಪ್ರಕರಣದಲ್ಲಿ ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ಅವರ ಮೇಲೆ ಕ್ರಮಕೈಗೊಳ್ಳುವಂತೆ ವಕೀಲರ ಸಂಘದಿಂದ ಪ್ರತಿಭಟನೆ ಕೂಡ ನಡೆಸಲಾಗಿತ್ತು ಎಂದು ತಿಳಿದು ಬಂದಿದೆ. ಈ ಬಗ್ಗೆ ಯಾವುದೇ …

Read More »

BIGG NEWS : ಮಂಗಳೂರಿನ ‘ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ’ ನಡುವೆ ಗಲಾಟೆ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಸುರತ್ಕಲ್ ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಮುಕ್ಕ ಕಾಲೇಜಿನ ವಿದ್ಯಾರ್ಥಿಗಳು ತಡರಾತ್ರಿವರೆಗೂ ಜಗಳವಾಡಿಕೊಂಡು ಗದ್ದಲ ಮಾಡುತ್ತಿದ್ದು, ದಿನಕ್ಕೊಬ್ಬರ ಬರ್ತ್ ಡೇ ಸೇರಿದಂತೆ ವಿವಿಧ ಕಾರಣಗಳನ್ನು ಹೇಳಿಕೊಂಡು ರಸ್ತೆಯ ಮಧ್ಯೆ ಪಟಾಕಿ ಹೊಡೆಯುವುದು ಸೇರಿದಂತೆ ವಿವಿಧ ರೀತಿಯಲ್ಲಿ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೂರ ನೀಡಲಾಗಿದೆ ಯುವಕರು ಮುಕ್ಕ ಪರಿಸರದ ಮನೆಯೊಂದರಲ್ಲಿ ವಾಸವಾಗಿದ್ದು, ಹೊಡೆದಾಡಿ ಕೊಂಡಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ಓರ್ವ ದೂರು ನೀಡಿರುವ ಪರಿಣಾಮ ಆತನೊಂದಿಗೆ ವಾಸವಾಗಿದ್ದ ಎಲ್ಲರನ್ನೂ …

Read More »

ಕೊಲೆ ಆಗಿದ್ದ ಮಹಿಳೆ ಏಳು ವರ್ಷಗಳ ಬಳಿಕ ಪತ್ತೆ..!

ಲಕ್ನೋ: ಏಳು ವರ್ಷಗಳ ಅನಂತರ ಕೊಲೆ ಯಾಗಿದ್ದಾಳೆ ಎಂದು ಹೇಳಲಾದ ಮಹಿಳೆಯು ಪತ್ತೆಯಾಗಿದ್ದು, ಇದರಿಂದ ಉತ್ತರ ಪ್ರದೇಶ ಅಲೀಗಢ ಜಿಲ್ಲೆಯಲ್ಲಿ ದಾಖಲಾದ ಹತ್ಯೆ ಪ್ರಕರಣ ವೊಂದಕ್ಕೆ ಹೊಸ ತಿರುವು ಸಿಕ್ಕಿದೆ. 2015ರಲ್ಲಿ 15 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಅಲೀಗಢ ಜಿಲ್ಲೆಯ ಗೊಂಡಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಆಕೆಯ ತಂದೆ ದೂರು ನೀಡಿದ್ದರು. ಕೆಲವು ದಿನಗಳ ಅನಂತರ ಆಗ್ರಾದಲ್ಲಿ ಬಾಲಕಿ ಯೊಬ್ಬಳ ಶವ ದೊರೆತಿತ್ತು. ಇದು ತನ್ನದೇ ಮಗಳ ದೇಹ ಎಂದು ದೂರುದಾರರು …

Read More »

ಉಡುಪಿ: ಯುವಕನಿಗೆ ಹಲ್ಲೆ, ಜೀವ ಬೆದರಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ..!

ಉಡುಪಿ: ಯುವಕನ ಮೇಲಿನ ಹಲ್ಲೆ ಮತ್ತು ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ನಿರಂತರ ನ್ಯಾಯಾಲಯಕ್ಕೆ ವಿಚಾರಣೆ ಹಾಜರಾಗದ ಎಸ್ಸೈ ಶಕ್ತಿ ವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ವಿರುದ್ಧ ಉಡುಪಿ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ನ.28ರಂದು ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಹೂಡೆಯ ಹಿದಾಯತುಲ್ಲ (27) ಎಂಬವರ ಮನೆಗೆ ಎಸ್ಸೆ ಶಕ್ತಿವೇಲು ಮತ್ತು ಪೊಲೀಸ್ ನಿರೀಕ್ಷಕ ಶರಣಗೌಡ ಮತ್ತು ಏಳು ಮಂದಿಯ ಪೊಲೀಸ್ ತಂಡ 2021ರ ನ.29ರ ತಡರಾತ್ರಿ ಅಕ್ರಮವಾಗಿ ನುಗ್ಗಿ ಹಿದಾಯತುಲ್ಲಾ …

Read More »

ಉಡುಪಿ: ಸುಳ್ಳು ದಾಖಲೆ ಸೃಷ್ಟಿಸಿ ಪಾಸ್ ಪೋರ್ಟ್ ಪಡೆದುಕೊಂಡ ಆರೋಪಿಗಳಿಗೆ ಜೈಲು ಶಿಕ್ಷೆ

ಉಡುಪಿ: ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್ ಗಳನ್ನು ಹೊಂದಿ ಸರ್ಕಾರಕ್ಕೆ ವಂಚಿಸಿದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪಲಿಮಾರು ಗ್ರಾಮದ ರಾಖಿ ವಿನ್‌ಸೆಂಟ್ ಡಿ ಸೋಜಾ ಎಂಬಾತನು ತನ್ನ ಅಣ್ಣನಾದ ಪಿಯೂಶ್ ಆಗಸ್ಟಿನ್ ಡಿಸೋಜರವರ ಹೆಸರನ್ನು ದುರ್ಬಳಕೆ ಮಾಡಿ, ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ ತನ್ನದೇ ಭಾವಚಿತ್ರ ಹಾಗೂ ಬೇರೆ ಬೇರೆ ಹೆಸರು ಮತ್ತು ವಿಳಾಸದ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದು, ಸದ್ರಿ ಪಾಸ್‌ಪೋರ್ಟ್‌ಗಳನ್ನು ಹೊಂದಲು ಪಾವುಲ್ ಡಿಸೋಜಾ ಎಂಬಾತನು ನಕಲಿ ಪಾಸ್‌ಪೋರ್ಟ್‌ಗಳನ್ನು ಸೃಷ್ಟಿಸಲು ಬೇಕಾಗುವ ಎಲ್ಲಾ …

Read More »

ಬಂಟ್ವಾಳದ ಯುವಕ ಕತಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತ್ಯು

ಬಂಟ್ವಾಳ : ಕತಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಂಟ್ವಾಳ ಮೂಲದ ಯುವಕ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಸಜಿಪದ ಚಟ್ಟೆಕ್ಕಲ್ ನಿವಾಸಿ ಫಹದ್ ಮೃತ ಯುವಕ. ಫಹದ್ ಕಳೆದ ಐದು ತಿಂಗಳ ಹಿಂದೆಯಷ್ಠೇ ಕತಾರ್ ಗೆ ಉದ್ಯೋಗದ ನಿಮಿತ್ತ ತೆರಳಿದ್ದ.ಅಲ್ಲಿ ಕೆಲಸ ಮಾಡುವ ಸ್ಥಳದಲ್ಲಿ ತನ್ನ ಮಾಲಕನ ಮಗನನ್ನು ರೆಸಾರ್ಟ್ ಗೆ ಬಿಟ್ಟು ಬರಲು ಕಾರಿನಲ್ಲಿ ತೆರಳಿದ್ದಾನೆ. ಕಾರಿನಲ್ಲಿ ಬಿಟ್ಟು ವಾಪಾಸ್ಸು ಬರುವಾಗ ಕಾರು ಪಲ್ಟಿಯಾಗಿ ಫಹದ್ ಗೆ ಗಂಭೀರವಾದ ಗಾಯಗಳಾಗಿದೆ. ತಕ್ಷಣ ಪಹದ್ ಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೆ …

Read More »

ಮಂಗಳೂರು: ಪಂಪ್ ವೆಲ್ ನಲ್ಲಿ ನೋಟಿನ ಬಂಡಲ್ ಪತ್ತೆ: ಪೊಲೀಸ್ ಆಯುಕ್ತರಿಂದ ಮಾಹಿತಿ

ಮಂಗಳೂರು: ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್‌ ಆಯುಕ್ತರು ಮಾಹಿತಿ ನೀಡಿದ್ದಾರೆ. ನೋಟಿಮ ಬಂಡಲ್‌ ನಲ್ಲಿ ಕೆಲ ನೋಟುಗಳನ್ನು ತುಕಾರಾಮ್ ಎನ್ನುವವರಿಗೆ ನೀಡಿದ್ದ. ತುಕಾರಾಮ್ ಮನೆಯವರು 2.99 ಲ.ರೂ.ಗಳನ್ನು ತಂದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿವರಾಜ್ ಬಳಿ ಇದ್ದ 49,000 ರೂ. ಕೂಡ ಪೊಲೀಸರ ಸುಪರ್ದಿಯಲ್ಲಿದೆ. ಬಂಡಲ್ ಗಳಲ್ಲಿ ಒಟ್ಟು ಎಷ್ಡು ಹಣ ಇತ್ತು, ಅದನ್ನು ಯಾರು ತಂದಿಟ್ಟಿದ್ದರು, ಆ ಬಂಡಲ್ ನಿಂದ ಬೇರೆ ಯಾರಾದರೂ ಹಣ ಪಡೆದುಕೊಂಡು ಹೋಗಿದ್ದಾರೆಯೇ …

Read More »

ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ -ಸಿಪಿಐ, ಪತ್ನಿ ಸಾವು

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ವಿಜಯಪುರ ಜಿಲ್ಲಾ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಅವರ ಪತ್ನಿ ಸಾವಿಗೀಡಾಗಿದ್ದಾರೆ. ಬುಧವಾರ ಮಧ್ಯಾಹ್ನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು (Swift Desire Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ (43), ಪತ್ನಿ ಮಧು (40) ದುರ್ಮರಣ ಹೊಂದಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ಸಿಪಿಐ ದಂಪತಿ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ …

Read More »

ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ. ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಡಿ 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು …

Read More »

ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು. ಈ ಕುರಿತು ವಿಕಾಸಸೌಧದಲ್ಲಿ ಮಂಗಳವಾರ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಕ್ಕೆ ಪ್ರತಿ ತಿಂಗಳು 75 ಯೂನಿಟ್ ಉಚಿತ ವಿದ್ಯುತ್ ಒದಗಿಸುವ ಯೋಜನೆಯ ವಾಸ್ತವಿಕ ಅನುಷ್ಠಾನ ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಯೋಜನೆ ಜಾರಿಗೆ ಎದುರಾಗುವ …

Read More »

You cannot copy content of this page.