ತಾಜಾ ಸುದ್ದಿ

ದ.ಕ ಜಿಲ್ಲಾದ್ಯಂತ ಇಂದು (ಜುಲೈ 20) ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು:ಧಾರಾಕಾರ ಮಳೆ ಹಿನ್ನಲೆ ಇಂದು (ಜುಲೈ 20) ಶನಿವಾರ ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆ ಇದ್ದ ಕಾರಣ ಜಿಲ್ಲೆಯ ಐದುತಾಲೂಕಿನಲ್ಲಿ ಶುಕ್ರವಾರ ರಜೆ ಘೋಷಿಸಲಾಗಿತ್ತು.ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಜಿಲ್ಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ನದಿ ಪಾತ್ರದ ಜನರು ಆತಂಕದಲ್ಲೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಜನರು …

Read More »

ನಾಳೆ (ಜು.20) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 20-07-2024 ರಂದು ರಜೆಯನ್ನು ಘೋಷಿಸಲಾಗಿದೆ.

Read More »

ಪೂಂಜಾಲಕಟ್ಟೆ: ಲಾರಿ ಪಲ್ಟಿಯಾಗಿ ಒಬ್ಬ ಸ್ಥಳದಲ್ಲೇ ಮೃತ್ಯು : ಹಲವರಿಗೆ ಗಾಯ

ಪುಂಜಾಲಕಟ್ಟೆ: ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ವಿವಿಧೆಡೆ ವಿವಿಧ ದುರಂತಗಳು ಸಂಭವಿಸುತ್ತಿವೆ. ಪೂಂಜಾಲಕಟ್ಟೆ ಬಳಿ ಇಂದು ಮುಂಜಾನೆ ಲಾರಿಯೊಂದು ಪಲ್ಟಿಯಾಗಿ ಒಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಫರಂಗಿಪೇಟೆ ನಿವಾಸಿ ಕಾರ್ತಿಕ್‌ ಎಂಬವರು ಮೃತಪಟ್ಟವರು. ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಲಾರಿಯೊಳಗೆ ಹತ್ತು ಮಂದಿ ಇದ್ದರು ಎನ್ನಲಾಗಿದೆ. ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಪೂಂಜಾಲಕಟ್ಟೆಯ ಶ್ರೀರಾಮಾಂಜನೇಯ ಭಜನಾ ಮಂದಿರದ ಬಳಿ ಲಾರಿ ಪಲ್ಟಿಯಾಗಿದೆ. ಕಾವಳಪಡೂರು ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಇದರಲ್ಲಿ ಶಾಮಿಯಾನದ ಸಾಮಗ್ರಿಗಳಿದ್ದವು ಎಂದು ತಿಳಿದುಬಂದಿದೆ. ಲಾರಿಯಡಿಯಲ್ಲಿ ಸಿಲುಕಿದ್ದವರನ್ನು ಮೇಲಕ್ಕೆತ್ತಲು …

Read More »

ಮಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ.ಎ ವಿದ್ಯಾರ್ಥಿನಿ ಸಾವು..!

ಮಂಗಳೂರು: ಗದ್ದೆಯಲ್ಲಿ ದನ ಕಟ್ಟಿ ಹಾಕಲು ಮನೆಯಿಂದ ತೆರಳಿದ್ದ ವೇಳೆ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ. ಎ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಸಿ. ಎ ವಿದ್ಯಾರ್ಥಿನಿ ಆಶ್ನಿ (21) ಎಂದು ಗುರುತಿಸಲಾಗಿದೆ. ತಂದೆಯೊಂದಿಗೆ ಗದ್ದೆಗೆ ಹೋಗಿದ್ದ ಆಶ್ನಿ ಜೊತೆಗೆ ಮನೆಯ ಸಾಕು ನಾಯಿ ಕೂಡಾ ತೆರಳಿದ್ದು, ನಾಯಿಗೆ ಮೊದಲು ವಿದ್ಯುತ್ ಶಾಕ್ ತಗುಲಿದೆ. ಶಾಕ್ ಹೊಡೆದಿದ್ದರಿಂದ ನಾಯಿ ಗದ್ದೆಯಲ್ಲಿ ಬಿದ್ದು ಹೊರಳಾಡುವುದನ್ನು ನೋಡಿ ಆಶ್ನಿ ನಾಯಿಯ ರಕ್ಷಣೆಗೆ ಮುಂದಾಗಿದ್ದು ಈ ವೇಳೆ ಗಮನಿಸದೇ ತುಂಡಾಗಿ ಬಿದ್ದಿದ್ದ …

Read More »

ಸದ್ಯದಲ್ಲೇ ನಗರ, ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಉಡುಪಿ: ಒಂದೂವರೆ ವರ್ಷದಿಂದ ಜನ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದೆ ಸೊರಗಿದ್ದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಕೊನೆಗೂ ಸರಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಹೊರಡಿಸಿದೆ.   ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಅಧ್ಯಕ್ಷ, ಉಪಾ ಧ್ಯಕ್ಷರಿಗೆ ನಿಗದಿಗೊಳಿಸಿರುವ ಕರಡು ಮೀಸಲಾತಿ ಅಧಿಸೂಚನೆ ಅಧಿಕೃತವಾಗಿ ರಾಜ್ಯ ಪತ್ರದಲ್ಲಿ ಪ್ರಕಟ ಗೊಂಡಿದ್ದು ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ನಗರ ಸ್ಥಳೀಯ ಸಂಸ್ಥೆಗಳ ಕೆಲವು ಮೀಸಲಾತಿ ಮತ್ತು ಒಬಿಸಿ ಮೀಸ ಲಾತಿ ವಿಚಾರವಾಗಿ ಕೆಲವು ಮಂದಿ ಕೋರ್ಟ್‌ ಮೆಟ್ಟಿಲೇರಿದ್ದರು. …

Read More »

Rain Alert : ರಾಜ್ಯದಲ್ಲಿ ಇನ್ನೂ1 ವಾರ ಭಾರೀ ಮಳೆ : ಈ ಜಿಲ್ಲೆಗಳಿಗೆ ʻರೆಡ್‌ ಅಲರ್ಟ್‌ʼ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇಂದು ನಾಳೆ ಕೊಡಗು, ಧಾರವಾಡ, ಯಾದಗಿರಿ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜುಲೈ 22, 23 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, …

Read More »

ಮಂಗಳೂರು: ಚಾಲಕನ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಸೆರೆ

ಮಂಗಳೂರು: ನಗರದ ಮೇರಿಹಿಲ್ ಐಟಿ ಕಂಪೆನಿಯೊಂದರ ಚಾಲಕ ಸಂದೀಪ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ, ದೀಕ್ಷಿತ್ ದೇವಾಡಿಗ ಬಂಧಿತ ಆರೋಪಿಗಳಾಗಿದ್ದು, ಇನ್ನೂ ಇಬ್ಬರ ಬಂಧನವಾಗಲು ಬಾಕಿಯಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ತೇಜಸ್ ಶೆಟ್ಟಿ ಕೂಡಾ ಈ ಸಂಸ್ಥೆಯಲ್ಲಿ ಚಾಲಕನಾಗಿದ್ದು, ಈತನಿಗೂ ಕೊಲೆಯತ್ನಕ್ಕೊಳಗಾದ ಸಂದೀಪ್‌ಗೂ ವೈಷಮ್ಯವಿತ್ತು ಎನ್ನಲಾಗಿದೆ. ಬುಧವಾರ ರಾತ್ರಿ ತೇಜಸ್ ಶೆಟ್ಟಿ ತನ್ನ ಪಾಳಿ ಮುಗಿದ ಬಳಿಕ ಇತರರ ಜೊತೆಗೂಡಿ ಕೊಲೆ ಯತ್ನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಐದು ತಾಲೂಕುಗಳ ಶಾಲೆ ,ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಅಂದರೆ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಇದೀಗ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಲಾಗಿದೆ. ಆದರೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಇರುವುದಿಲ್ಲ.

Read More »

ಉಡುಪಿ ಜಿಲ್ಲೆಯಲ್ಲಿ ನಾಳೆ (ಜುಲೈ 19 ) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19ರ ಶುಕ್ರವಾರ ರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ.

Read More »

ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದು 10 ಮಂದಿ, 6 ಮೃತದೇಹ ಪತ್ತೆ..! ಜಿಲ್ಲಾಧಿಕಾರಿ ಮಾಹಿತಿ

ಕಾರವಾರ: ಶಿರೂರಿನ  ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ 10 ಮಂದಿ ಕಣ್ಣರೆಯಾಗಿದ್ದು, ಇದುವರೆಗೆ 6 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಶಿರೂರಿನ ಒಂದೇ ಕುಟುಂಬದ ನಾಲ್ಕು ಮತ್ತು ಅದೇ ಕುಟುಂಬದ ಸಂಬಂಧಿ ಜಗನ್ನಾಥ, ಉಳುವರೆ ಗ್ರಾಮದ ಸಣ್ಣಿ ಗೌಡ, ಮೂರು ಟ್ಯಾಂಕರ್ ಹಾಗೂ ಒಂದು ಲಾರಿಯ ಚಾಲಕ ಕಣ್ಮರೆಯಾಗಿರುವುದಾಗಿ ಅವರ ಕುಟುಂಬಗಳು ಮಾಹಿತಿ ನೀಡಿವೆ. ಈ ಪೈಕಿ ಶಿರೂರಿನ ನಾಲ್ವರು, ತಮಿಳುನಾಡಿನ ನಾಮಕ್ಕಲ್’ನ ಚಿಣ್ಣನನ್ ಎಂಬ ಟ್ಯಾಂಕರ್ ಚಾಲಕನ …

Read More »

You cannot copy content of this page.