ತಾಜಾ ಸುದ್ದಿ

ಸದ್ಯದಲ್ಲೇ ನಗರ, ಸ್ಥಳೀಯ ಸಂಸ್ಥೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಉಡುಪಿ: ಒಂದೂವರೆ ವರ್ಷದಿಂದ ಜನ ಪ್ರತಿನಿಧಿಗಳ ಆಡಳಿತ ವ್ಯವಸ್ಥೆ ಇಲ್ಲದೆ ಸೊರಗಿದ್ದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಕೊನೆಗೂ ಸರಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಹೊರಡಿಸಿದೆ.   ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗಳ ಅಧ್ಯಕ್ಷ, ಉಪಾ ಧ್ಯಕ್ಷರಿಗೆ ನಿಗದಿಗೊಳಿಸಿರುವ ಕರಡು ಮೀಸಲಾತಿ ಅಧಿಸೂಚನೆ ಅಧಿಕೃತವಾಗಿ ರಾಜ್ಯ ಪತ್ರದಲ್ಲಿ ಪ್ರಕಟ ಗೊಂಡಿದ್ದು ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ನಗರ ಸ್ಥಳೀಯ ಸಂಸ್ಥೆಗಳ ಕೆಲವು ಮೀಸಲಾತಿ ಮತ್ತು ಒಬಿಸಿ ಮೀಸ ಲಾತಿ ವಿಚಾರವಾಗಿ ಕೆಲವು ಮಂದಿ ಕೋರ್ಟ್‌ ಮೆಟ್ಟಿಲೇರಿದ್ದರು. …

Read More »

Rain Alert : ರಾಜ್ಯದಲ್ಲಿ ಇನ್ನೂ1 ವಾರ ಭಾರೀ ಮಳೆ : ಈ ಜಿಲ್ಲೆಗಳಿಗೆ ʻರೆಡ್‌ ಅಲರ್ಟ್‌ʼ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇಂದು ನಾಳೆ ಕೊಡಗು, ಧಾರವಾಡ, ಯಾದಗಿರಿ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜುಲೈ 22, 23 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, …

Read More »

ಮಂಗಳೂರು: ಚಾಲಕನ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಸೆರೆ

ಮಂಗಳೂರು: ನಗರದ ಮೇರಿಹಿಲ್ ಐಟಿ ಕಂಪೆನಿಯೊಂದರ ಚಾಲಕ ಸಂದೀಪ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ತೇಜಸ್ ಶೆಟ್ಟಿ, ಭವಿತ್ ಶೆಟ್ಟಿ, ಪ್ರೀತಂ, ದೀಕ್ಷಿತ್ ದೇವಾಡಿಗ ಬಂಧಿತ ಆರೋಪಿಗಳಾಗಿದ್ದು, ಇನ್ನೂ ಇಬ್ಬರ ಬಂಧನವಾಗಲು ಬಾಕಿಯಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ತೇಜಸ್ ಶೆಟ್ಟಿ ಕೂಡಾ ಈ ಸಂಸ್ಥೆಯಲ್ಲಿ ಚಾಲಕನಾಗಿದ್ದು, ಈತನಿಗೂ ಕೊಲೆಯತ್ನಕ್ಕೊಳಗಾದ ಸಂದೀಪ್‌ಗೂ ವೈಷಮ್ಯವಿತ್ತು ಎನ್ನಲಾಗಿದೆ. ಬುಧವಾರ ರಾತ್ರಿ ತೇಜಸ್ ಶೆಟ್ಟಿ ತನ್ನ ಪಾಳಿ ಮುಗಿದ ಬಳಿಕ ಇತರರ ಜೊತೆಗೂಡಿ ಕೊಲೆ ಯತ್ನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡ …

Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಐದು ತಾಲೂಕುಗಳ ಶಾಲೆ ,ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಅಂದರೆ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಇದೀಗ ಆದೇಶ ಹೊರಡಿಸಿದ್ದಾರೆ. ಅದರಂತೆ ಈ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಲಾಗಿದೆ. ಆದರೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಇರುವುದಿಲ್ಲ.

Read More »

ಉಡುಪಿ ಜಿಲ್ಲೆಯಲ್ಲಿ ನಾಳೆ (ಜುಲೈ 19 ) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19ರ ಶುಕ್ರವಾರ ರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ.

Read More »

ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದು 10 ಮಂದಿ, 6 ಮೃತದೇಹ ಪತ್ತೆ..! ಜಿಲ್ಲಾಧಿಕಾರಿ ಮಾಹಿತಿ

ಕಾರವಾರ: ಶಿರೂರಿನ  ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ದುರಂತದಲ್ಲಿ 10 ಮಂದಿ ಕಣ್ಣರೆಯಾಗಿದ್ದು, ಇದುವರೆಗೆ 6 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಶಿರೂರಿನ ಒಂದೇ ಕುಟುಂಬದ ನಾಲ್ಕು ಮತ್ತು ಅದೇ ಕುಟುಂಬದ ಸಂಬಂಧಿ ಜಗನ್ನಾಥ, ಉಳುವರೆ ಗ್ರಾಮದ ಸಣ್ಣಿ ಗೌಡ, ಮೂರು ಟ್ಯಾಂಕರ್ ಹಾಗೂ ಒಂದು ಲಾರಿಯ ಚಾಲಕ ಕಣ್ಮರೆಯಾಗಿರುವುದಾಗಿ ಅವರ ಕುಟುಂಬಗಳು ಮಾಹಿತಿ ನೀಡಿವೆ. ಈ ಪೈಕಿ ಶಿರೂರಿನ ನಾಲ್ವರು, ತಮಿಳುನಾಡಿನ ನಾಮಕ್ಕಲ್’ನ ಚಿಣ್ಣನನ್ ಎಂಬ ಟ್ಯಾಂಕರ್ ಚಾಲಕನ …

Read More »

ಉಡುಪಿ: ಸಗ್ರಿ ರೈಲ್ವೆ ಸೇತುವೆ ಬಳಿ ಮೃತದೇಹ ಪತ್ತೆ..!

ಉಡುಪಿ: ನಗರದ ಸಗ್ರಿ ರೈಲು ಸೇತುವೆ ಸಮೀಪದ ರೈಲು ಹಳಿಯ ಬಳಿ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ತಡರಾತ್ರಿ ಪತ್ತೆಯಾಗಿದೆ. ಮೃತವ್ಯಕ್ತಿಯನ್ನು ಉಡುಪಿ ಮೂಡಬೆಟ್ಟು ನಿವಾಸಿ ಪ್ರಸಾದ್ ಆಚಾರ್ಯ ಎಂದು ಗುರುತಿಸಲಾಗಿದೆ. ವ್ಯಕ್ತಿಯ ತಲೆ ಭಾಗ ಛಿದ್ರಗೊಂಡಿದ್ದು, ರೈಲು ಬಡಿದು ಅಥವಾ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಣಿಪಾಲ ಠಾಣೆಯ ಎಸ್ ಐ ರಾಘವೇಂದ್ರ ಸಿ ಹಾಗೂ  ತಂಡ ಮಹಜರು ಪ್ರಕ್ರಿಯೆ ನಡೆಸಿದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ಮೃತದೇಹವನ್ನು ಮಣಿಪಾಲದ ಶವಗಾರಕ್ಕೆ …

Read More »

ಉಡುಪಿ: ಸಿಎ ಅಂತಿಮ ಪರೀಕ್ಷೆಯಲ್ಲಿ ರಾಧಿಕಾ ಆರ್ ಉಪಾಧ್ಯ ಉತ್ತೀರ್ಣ

ಉಡುಪಿ ಚಿಟ್ಪಾಡಿ ಕಸ್ತೂರ್ಬಾ ನಗರದ ರಾಧಿಕಾ ಆರ್ ಉಪಾಧ್ಯ ಅವರು ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಭಾರತೀಶ & ಅಸೋಸಿಯೇಟ್ಸ್ ನಲ್ಲಿ ಆರ್ಟಿಕಲ್ ಶಿಪ್ ಪೂರೈಸಿರುವ ಅವರು ಕೆ. ರಾಘವೇಂದ್ರ ಉಪಾಧ್ಯಾಯ ಮತ್ತು ರಾಜಲಕ್ಷ್ಮೀ ದಂಪತಿಯ ಪುತ್ರಿ.

Read More »

ಮಂಗಳೂರು: ಸಾಫ್ಟ್‌ವೇರ್ ಕಂಪನಿಯ ಚಾಲಕರ ನಡುವೆ ಹೊಡೆದಾಟ- ಒಬ್ಬನಿಗೆ ಚೂರಿ ಇರಿತ..!

ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ‘ದಿಯಾ ಸಿಸ್ಟಮ್ಸ್’ ಸಾಫ್ಟ್ವೇರ್ ಕಂಪನಿಯ ಚಾಲಕರ ನಡುವೆ ಬುಧವಾರ ರಾತ್ರಿ ಜಗಳ ನಡೆದಿದ್ದು, ಒಬ್ಬ ಚಾಲಕನಿಗೆ ನಾಲ್ವರ ಗುಂಪು ಗಂಭೀರವಾಗಿ ಹಲ್ಲೆ ನಡೆಸಿದೆ. ಸಂದೀಪ್ ಹಲ್ಲೆಗೊಳಗಾದ ಚಾಲಕ. ಅದೇ ಕಂಪನಿಯ ಇನ್ನೊಬ್ಬ ಕಾರು ಚಾಲಕ ತೇಜಸ್ ಶೆಟ್ಟಿ, ಆತನ ಸೋದರ ಭವಿತ್ ಶೆಟ್ಟಿ, ಗೆಳೆಯರಾದ ಪ್ರೀತಮ್ ಹಾಗೂ ಪುನೀತ್ ದೇವಾಡಿಗ ಹಲ್ಲೆ ನಡೆಸಿದ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ತೇಜಸ್ ಶೆಟ್ಟಿ ಸಂದೀಪ್ ವಿರುದ್ಧ ಹಳೆ ವೈಷನ್ಯ ಹೊಂದಿದ್ದ. ಬುಧವಾರ ರಾತ್ರಿ ತನ್ನ ಪಾಳಿಯ ಕೆಲಸ …

Read More »

ಶಿರೂರು ಗುಡ್ಡ ಕುಸಿತ ಪ್ರಕರಣ : ಬಾಲಕಿ ಮತ್ತು ಟ್ಯಾಂಕರ್ ಚಾಲಕನ ಶವ ಪತ್ತೆ..!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಳೆದ ಎರಡು ದಿನಗಳ ಹಿಂದೆ ಗುಡ್ಡ ಕುಸಿದು ಹಲವರು ಮಣ್ಣಿನ ಅಡಿ ಸಿಲುಕಿ ಸಾವನ್ನಪ್ಪಿದ್ದರು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಬಾಲಕಿ ಅವಂತಿಕ ಹಾಗೂ ಇದೀಗ ಟ್ಯಾಂಕರ್ ಚಾಲಕನ ಶವ ಪತ್ತೆಯಾಗಿದೆ.   ಹೌದು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬಳಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲ ತಾಲೂಕಿನ ಮಂಜಗುಣಿ ಬಳಿ ಮತ್ತೊಂದು …

Read More »

You cannot copy content of this page.