ತಾಜಾ ಸುದ್ದಿ

ಮಂಗಳೂರು: ಹಣದಾಸೆಗಾಗಿ ಹಣತೆ ವ್ಯಾಪಾರಿಯ ಹತ್ಯೆ..! ಮೃತದೇಹದ ಅವಶೇಷಗಳು ಪತ್ತೆ-..!

ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ ರವಿ ಯಾನೆ ವಕೀಲ್ ನಾಯ್ಕ್ (42) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಕೊಲೆಯಾದ ಮಾಯವೇಳ್ ಪೆರಿಯಸಾಮಿ ಅವರ ಮೃತ ದೇಹದ ಅವಶೇಷಗಳಾದ ತಲೆಬುರುಡೆ, ಮೂಳೆ ಇತ್ಯಾದಿಗಳು ಕೂಳೂರು ಮೈದಾನದ ಬಳಿ ಪತ್ತೆಯಾಗಿವೆ. ಮಾಯಾವೇಳ್ ಪೆರಿಯಸಾಮಿ ಮತ್ತವರ ಪತ್ನಿ ಅಕ್ಟೋಬರ್‌ 14ರಂದು ಮಂಗಳೂರಿಗೆ ಆಗಮಿಸಿ ಕುದ್ರೋಳಿಯ ಅಳಕೆ ಮಾರ್ಕೆಟ್ …

Read More »

BIGG NEWS : ಬೆಳ್ತಂಗಡಿಯಲ್ಲಿ ವಿಷಯುಕ್ತ ‘ ಅಣಬೆಯ ಖಾದ್ಯ ಸೇವನೆ ‘: ಒಂದೇ ಕುಟುಂಬದ ಇಬ್ಬರ ಸಾವು

ಬೆಳ್ತಂಗಡಿ : ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಆತಂಕಕ್ಕೀಡಾಗಿದ್ದರು. ಪರಿಶೀಲಿಸಿದಾಗ ಸೋಮವಾರ ರಾತ್ರಿ ಕಾಡಿನ ಯಾವುದೋ ವಿಷಪೂರಿತ ಅಣಬೆಯನ್ನು …

Read More »

ವಿಟ್ಲ: ಅಪ್ರಾಪ್ತ ಹಿಂದೂ ಬಾಲಕಿ ಜೊತೆಗೆ ಅನ್ಯಕೋಮಿನ ಯುವಕರು ಪತ್ತೆ..!

ಮಂಗಳೂರು: ಅಪ್ರಾಪ್ತ ಹಿಂದೂ ಬಾಲಕಿಯನ್ನು ಅನ್ಯ ಕೋಮಿನ ಇಬ್ಬರು ಯುವಕರು ಅಪಹರಿಸಿ ಪುತ್ತೂರು ವಿಟ್ಲ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅಳಕಮಜಲು ಸಮೀಪದ ನಿನ್ನಿಕಲ್ಲು ಗುಡ್ಡಕ್ಕೆ ಕರೆದುಕೊಂಡು ಹೋಗಿರುವುದಾಗಿ ಬಾಲಕಿಯ ಪೋಷಕರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸರಕಾರದ ವತಿಯಿಂದ ಕಬಕ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ಕಂಪ್ಯೂಟರ್ ಶಿಕ್ಷಣ ಆಯೋಜಿಸಲ್ಲಾಗಿದ್ದು ಅಲ್ಲಿಗೆ ಸಂತ್ರಸ್ತ ಯುವತಿ ಎಂದಿನಂತೆ ತೆರಳಿದ್ದಳು. ಒಬ್ಬ ಅಪ್ರಾಪ್ತ ಬಾಲಕನ ಸಹಿತ ಇಬ್ಬರು ಯುವಕರು ಆ ಬಾಲಕಿಯನ್ನು ಪುಸಲಾಯಿಸಿ ಅಲ್ಲಿಂದ ಹೊರಗೆ ಕರೆದುಕೊಂಡು ಬಂದಿದ್ದಾರೆ. ಇನ್ನು …

Read More »

ಉಡುಪಿ: ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಮಹಿಳೆ ನಾಪತ್ತೆ

ಉಡುಪಿ: ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮದ ತೊಟ್ಟಂ ನಿವಾಸಿ ರೂಪಾ (26 ವರ್ಷ) ಎಂಬ ಮಹಿಳೆಯು ನವೆಂಬರ್ 13  ರಂದು ಬೆಳಗ್ಗೆ 6:30ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 1 ಇಂಚು ಎತ್ತರ, ಗೋಧಿ ಮೈ ಬಣ್ಣ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕನ್ನಡ, ಹಿಂದಿ, ನೇಪಾಳಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆಯ ದೂ.ಸಂಖ್ಯೆ: 0820—2537999, ಮೊ.ನಂ.: 9480805447, ಉಡುಪಿ ವೃತ್ತ ನಿರೀಕ್ಷಕರ ಕಚೇರಿ ಮೊ.ನಂ: 9480805430 …

Read More »

BIGG NEWS : ರಾಜ್ಯದಲ್ಲಿ ‘ಲವ್ ಜಿಹಾದ್ ನಿಷೇಧ’ ಕಾಯ್ದೆ ಜಾರಿಗೆ ಸರ್ಕಾರ ಚಿಂತನೆ…!

ಬೆಂಗಳೂರು : ರಾಜ್ಯದಲ್ಲಿ ಲವ್ ಜಿಹಾದ್ ( Love jihad) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ( karnataka Govt) ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ.   ಈಗಾಗಲೇ ಮತಾಂತರ ಮತ್ತು ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಲವ್ ಜಿಹಾದ್ ನಿಷೇಧಿಸುವ ಕಾಯ್ದೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಡಿಸೆಂಬರ್ 19ರಿಂದ ಬೆಳಗಾವಿಯ ಸುವರ್ಣ ವಿಕಾಸಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಲವ್ ಜಿಹಾದ್ …

Read More »

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ!

ಮಂಗಳೂರು: ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬೆ‌ನ್ನಲ್ಲೇ ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಮಂಗಳೂರಿನ ಬಸ್ ನಿಲ್ದಾಣದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ನ.19 ರಂದು ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿರುವುದರಿಂದ ಆತಂಕ ಸೃಷ್ಟಿಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಇಂದಷ್ಟೇ ಪತ್ತೆಯಾಗಿತ್ತು. ಇದಾದ ಕೆಲಹೊತ್ತಿನಲ್ಲಿ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಕಂಡು ಬಂದಿತ್ತು. ಬಸ್ ನಿಲ್ದಾಣದಲ್ಲಿ ಆತಂಕ ಸೃಷ್ಟಿಸಿದ ಬ್ಯಾಗ್ ಬಾಂಬ್ ನಿಗ್ರಹ ದಳ, …

Read More »

BREAKING NEWS : ಕರಾವಳಿಯಲ್ಲಿ ‘ಮತ್ತೊಂದು ಲವ್‌ಜಿಹಾದ್‌ ‘ : ಹಿಂದೂ ಯುವತಿಯೊಂದಿಗೆ ಮುಸ್ಲಿಂ ಯುವಕ

ಕರಾವಳಿ ಭಾಗದಲ್ಲಿ ಕೋಮು ಸಂಘರ್ಷಕ್ಕೆ ಮತ್ತೊಂದು ಲವ್‌ಜಿಹಾದ್‌ ಸಿದ್ಧವಾಗಿದೆ ಹಿಂದೂ ಯುವತಿಯೊಂದಿಗೆ ಬೆಂಗಳೂರಿನ ಮುಸ್ಲಿಂ ಯುವಕ ವಿವಾಹವಾಗಿರುವ ಸಂದೇಶ ಸೋಷಿಯಲ್‌ ಮಿಡಿಯಾಗಳಲ್ಲಿ ರವಾನೆಯಾಗುತ್ತಿದೆ. ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯ ಹೊಂದಿರುವ ಪುತ್ತೂರು ಮೂಲದ ಹಿಂದೂ ಯುವತಿಯೊಂದಿಗೆ ಬೆಂಗಳೂರಿನ ಮುಸ್ಲಿಂ ಯುವಕರೊಬ್ಬರು ವಿವಾಹವಾಗುವುದಾಗಿ ವಿವಾಹ ನೋಂದಾಣಿ ಕಚೇರಿಯಲ್ಲಿ ಅಳವಡಿಸಿರುವ ಆಕ್ಷೇಪಣಾ ಸಲ್ಲಿಸಲು ಮಾಹಿತಿ ಇರುವ ನೋಟೀಸ್‌ವೊಂದು ಸಾಮಾಜಿಕ ಜಾಲಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಹಿಂದೂ ಸಂಘಟನೆಗಳು ಇದೊಂದು ಲವ್ ಜಿಹಾದ್ ಎಂದು ಆರೋಪಿಸಿದ್ದಾರೆ. ಪುತ್ತೂರು ಮೂಲದವರಾಗಿದ್ದು ಇದೀಗ ಬೆಂಗಳೂರಿನಲ್ಲಿ ವಾಸ್ತವ್ಯ …

Read More »

ಕಾರ್ಕಳ: ಕಣಿವೆಗೆ ಉರುಳಿಬಿದ್ದ ಕಾರು :ವಿದ್ಯಾರ್ಥಿ ಮೃತ್ಯು

ಕಾರ್ಕಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿಬಿದ್ದ ಪರಿಣಾಮ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಬೋಳ ಕೆದಿಂಜೆ ಸಮೀಪದ ಮಂಜರಪಲ್ಕೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಮೃತರನ್ನು ಕಾಪು ತಾಲೂಕಿನ ಉಚ್ಚಿಲ ಮೂಲದ ವೈಷ್ಣವ್ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಖಾಸಗಿ ಕಾಲೇಜಿನ  ಪ್ರಥಮ ಪಿಯುಸಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಮಹಿಳೆಯರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಷ್ಣವ್ ಉಚ್ಚಿಲದಲ್ಲಿರುವ ತಮ್ಮ ಮನೆಯಲ್ಲಿ ಬಾಡಿಗೆಗೆ ಇರುವ ಕುಟುಂಬದ ಸದಸ್ಯರೊಟ್ಟಿಗೆ ಬೆಂಗಳೂರಿಗೆ ತಿರುಗಾಡಲು ಹೋಗಿ …

Read More »

ಶ್ರದ್ದಾ ಹತ್ಯೆ ಪ್ರಕರಣ-ತಲೆಬುರುಡೆ ಭಾಗಗಳು ಪತ್ತೆ

ನವದೆಹಲಿ: ತನ್ನ ಲಿವ್ ಇನ್ ಸಂಗಾತಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದ ಶ್ರದ್ದಾ ವಾಲ್ಕರ್ ತಲೆ ಬುರುಡೆ ಭಾಗಗಳು ದಿಲ್ಲಿಯ ಮೆಹ್ರೌಲಿ ಅರಣ್ಯದಲ್ಲಿ ಪತ್ತೆಯಾಗಿವೆ. ಶ್ರದ್ದಾಳನ್ನು ಹತ್ಯೆಗೈದ ಬಳಿಕ ಆರೋಪಿ ಅಫ್ತಾಬ್ ಆಕೆಯ ದೇಹವನ್ನು 35 ಭಾಗಗಳಾಗಿ ಕತ್ತರಿಸಿ ಮೆಹ್ರೌಲಿ ಅರಣ್ಯದಲ್ಲಿ ಎಸೆದಿದ್ದ. ಬಳಿಕ ಪೊಲೀಸರು ವಿಚಾರಣೆ ವೇಳೆ ಆತ ದೇಹವನ್ನು ತುಂಡು ತುಂಡಾಗಿ ಎಸೆದಿದ್ದ ಅರಣ್ಯಕ್ಕೆ ಆತನನ್ನು ಕರೆದೊಯ್ದಿದ್ದರು. ಈ ವೇಳೆ ವಿವಿಧ ಭಾಗಗಳು ಪತ್ತೆಯಾಗಿದ್ದವು. ಆದರೆ ತಲೆಬುರುಡೆ ಸಿಕ್ಕಿರಲಿಲ್ಲ. ಇದೀಗ ತಲೆ ಬುರುಡೆಯೂ ಪತ್ತೆಯಾಗಿದೆ. ಇನ್ನು ಜೂನ್‌ನಲ್ಲಿ ಆತ ಮುಂಬೈನಿಂದ ಫ್ರಡ್ಜ್, ಪಾತ್ರೆ, ಗೃಹ …

Read More »

ಮೂಡಬಿದಿರೆ: ಬೈಕ್ ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ – ಸವಾರ ಮೃತ್ಯು

ಮೂಡುಬಿದಿರೆ: ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಮೂಡುಬಿದಿರೆಗೆ ಬೈಕ್ ನಲ್ಲಿ ಮರಳುತ್ತಿದ್ದ ವೇಳೆ ಭಾನುವಾರ ರಾತ್ರಿ ಬೆಳುವಾಯಿಯಲ್ಲಿ ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ ಚಿಕ್ಕಮಗಳೂರಿನ ರಾಜೇಶ್ (28)ಮೃತಪಟ್ಟ ಬೈಕ್ ಸವಾರ. ರಾಜೇಶ್ ಅವರು ಭಾನುವಾರ ಬಾಳೆಹೊನ್ನೂರಿನಲ್ಲಿ ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ, ಮೂಡುಬಿದಿರೆಗೆ ಮರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಗಾಗಿ ಮರ ಕಡಿದು ರಸ್ತೆ ಪಕ್ಕದಲ್ಲಿ ಹಾಕಲಾಗಿದ್ದು,ಬೆಳುವಾಯಿ ಬಳಿ ಬೈಕ್ ಸ್ಕಿಡ್ ಆಗಿ, ಸವಾರನ …

Read More »

You cannot copy content of this page.