ತಾಜಾ ಸುದ್ದಿ

ಉಡುಪಿ ತಾಲೂಕು, ಹದಿಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ನವಂಬರ್ 25,26ರಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನ ಭವಾನಿ ಮಂಟಪದ ಡಾ.ಮುರಾರಿ ಬಲ್ಲಾಳ್ ವೇದಿಕೆಯಲ್ಲಿ ನಡೆಯಲಿರುವ ಉಡುಪಿ ತಾಲೂಕು ಹದಿಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಶ್ರೀ ಕೂರ್ಮ ಎಂ ರಾವ್ ಬಿಡುಗಡೆಗೊಳಿಸಿದರು. ಹಿರಿಯ ಸಾಹಿತಿ ಟಿ. ತಿರುಮಲೇಶ್ವರ ಭಟ್ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಸಾಹಿತಿ ವೀಣಾ ಬನ್ನಂಜೆ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಪರೀಕ್ಷಾರ್ಥಿ ಭಾರತೀಯ ಆಡಳಿತ ಸೇವಾಧಿಕಾರಿ ಯತೀಶ್ ಆರ್, ಉಡುಪಿ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ …

Read More »

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ತಂದೆಯಿಂದ ಅತ್ಯಾಚಾರ

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ನಡೆಸಿ ಗರ್ಭಾವತಿಯನ್ನಾಗಿ ಮಾಡಿದ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ.ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ ಆರೋಪಿ. ವೆಂಕಟೇಶ ಕಾರಂತ ಅವರು ತುಂಬೆಯಲ್ಲಿ ಪುರೋಹಿತ ಕೆಲಸ ಮಾಡುತ್ತಿದ್ದು, ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿಗೆ ವೆಂಕಟೇಶ ಕಾರಂತ ಅವರು ಮಲತಂದೆ ಸಂಬಂಧ. ಬಾಲಕಿಯ ತಂದೆ ಅಪಘಾತದಲ್ಲಿ ಮರಣ ಹೊಂದಿದ ನಂತರ ಬಾಲಕಿಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ …

Read More »

ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಇನ್ಮುಂದೆ ಕ್ಲಿಯರೆನ್ಸ್ ಅಗತ್ಯವಿಲ್ಲ

ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಇನ್ನು ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯವಿರುವುದಿಲ್ಲ. ಸೌದಿ ವೀಸಾಗೆ ಅರ್ಜಿ ಸಲ್ಲಿಸಲು ಭಾರತೀಯರು ಇನ್ನು ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ನೀಡುವ ಅಗತ್ಯವಿಲ್ಲ. ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಬಲಗೊಳಿಸುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತದಲ್ಲಿನ ಸೌದಿ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇನ್ನು ಮುಂದೆ ಭಾರತೀಯ ಪ್ರಜೆಗಳು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ರಾಯಭಾರ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ನವದೆಹಲಿಯಲ್ಲಿರುವ ಸೌದಿ ಅರೇಬಿಯಾ ರಾಯಭಾರ ಕಚೇರಿ ಗುರುವಾರ ತಿಳಿಸಿದೆ. …

Read More »

SHOCKING NEWS: ಅನಸ್ತೇಷಿಯಾ ನೀಡದೇ ʻಸಂತಾನಹರಣ ಶಸ್ತ್ರಚಿಕಿತ್ಸೆʼ ಮಾಡಿದ ವೈದ್ಯರು: ಮಹಿಳೆಯರಿಗೆ ನರಕಯಾತನೆ

ಬಿಹಾರ: ಬಿಹಾರದ ಖಗಾರಿಯಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು 23 ಮಹಿಳೆಯರಿಗೆ ಅನಸ್ತೇಷಿಯಾ ನೀಡದೇ ʻಸಂತಾನಹರಣ ಶಸ್ತ್ರಚಿಕಿತ್ಸೆʼ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯರಿಗೆ ಅನಸ್ತೇಷಿಯಾ ನೀಡದೇ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯರು ನೋವಿನಿಂದ ಕಿರುಚುತ್ತಾ ಅಳುತ್ತಿದ್ದರೂ, ಅವರ ಬಾಯಿಯನ್ನು ಮುಚ್ಚಿ, ಕೈ ಮತ್ತು ಕಾಲುಗಳನ್ನು ಹಿಡಿದುಕೊಂಡು ಬಲವಂತವಾಗಿ ಆಪರೇಷನ್ ಮಾಡಲಾಗಿದೆ ಎಂದು ಸಂತ್ರಸ್ತ ಮಹಿಳೆಯರು ಆರೋಪಿಸಿದ್ದಾರೆ. ಗ್ಲೋಬಲ್ ಡೆವಲಪ್‌ಮೆಂಟ್ ಇನಿಶಿಯೇಟಿವ್ ಎಂಬ ಖಾಸಗಿ ಏಜೆನ್ಸಿ ಈ ಮಹಿಳೆಯರಿಗೆ ಆಪರೇಷನ್ ಮಾಡಿಸಿದೆ ಎನ್ನಲಾಗಿದೆ. ಇದೇ …

Read More »

ಕಿನ್ನಿಗೋಳಿ: ಬೈಕ್‌ ಮತ್ತು ಆಟೋ ಡಿಕ್ಕಿ; ಸವಾರ ಮೃತ್ಯು

ಕಿನ್ನಿಗೋಳಿ: ಪೆಟ್ರೋಲ್‌ ಬಂಕ್‌ ಬಳಿ ಬೈಕ್‌ ಸವಾರನೋರ್ವ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಸಾವನ್ನಪ್ಪಿದ ಘಟನೆ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಕೊಲ್ನಾಡು ಸಸಿತೋಟ ನಿವಾಸಿ ಶರತ್ ಶೆಟ್ಟಿ (49) ಎಂದು ಗುರುತಿಸಲಾಗಿದೆ. ಮೃತ ಶರತ್ ಶೆಟ್ಟಿ ಹಳೆಯಂಗಡಿಯ ಸಂಸ್ಥೆಯೊಂದರಲ್ಲಿ ಚಾಲಕನಾಗಿ ದುಡಿಯುತ್ತಿದ್ದು ಕೆಲಸ ಮುಗಿಸಿ ವಾಪಸ್ಬರುವ ವೇಳೆ ಪಕ್ಷಿಕೆರೆ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ವಿರುದ್ಧ ದಿಕ್ಕಿನಿಂದ ಬಂದ ಆಟೋಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಶರತ್ …

Read More »

ಮದರಸಾಗೆ ತೆರಳುತ್ತಿದ್ದ ಬಾಲಕಿಯನ್ನು ಎತ್ತಿ ನೆಲಕ್ಕೆಸೆದ ಕಿರಾತಕ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಕಾಸರಗೋಡು (ಕೇರಳ): ಮದರಸಾಕ್ಕೆಂದು ಬರುತ್ತಿದ್ದ ಆ ಪ್ರಾಪ್ತ ವಯಸ್ಕಳನ್ನು ಮೇಲೆತ್ತಿ ರಸ್ತೆಗೆ ಎಸೆದ 31 ವರ್ಷದ ವ್ಯಕ್ತಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರದ ಬೆಳಿಗ್ಗೆ ಎಂಟು ವರ್ಷದ ಬಾಲಕಿ ತನ್ನ ಚಿಕ್ಕಪ್ಪನನ್ನು ಕರೆದೊಯ್ಯಲು ಮದರಸಾದ ಹೊರಗೆ ಕಾಯುತ್ತಿದ್ದಾಗ ಈ ಭಯಾನಕ ಘಟನೆ ಸಂಭವಿಸಿದೆ. ಘಟನೆ ಸಂಬಂಧ ಸ್ಥಳೀಯ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಎಂಬಾತನನ್ನು ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಆಕೆಯ ಸಂಬಂಧಿಕರು ಪರಿಶೀಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದ್ದು, …

Read More »

ಇಂದಿನ ರಾಶಿಭವಿಷ್ಯ ನೋಡಿ (ತಾ-18-11-2022 ರ ಶುಕ್ರವಾರ)

ಮೇಷ ರಾಶಿ:ಈ ರಾಶಿಯವರು ಇಂದು ಕೆಲಸದಲ್ಲಿ ನಿರತರಾಗಿರುತ್ತಾರೆ. ಈ ಚಿಹ್ನೆಯ ರಾಶಿಯವರು ಇಂದು ಕೆಲವು ಅನುಭವಿ ಜನರನ್ನು ಭೇಟಿ ಮಾಡುತ್ತಾರೆ. ಅವರು ಕೆಲವು ವಿಷಯಗಳಲ್ಲಿ ನಿಮಗೆ ಮಾರ್ಗದರ್ಶನ ನೀಡುತ್ತಾರೆ. ಹೊಸ ವ್ಯಾಪಾರ ಯೋಜನೆಗಳನ್ನು ಕಾರ್ಯಗತಗೊಳಿಸಲು ಇಂದು ನಿಮಗೆ ಉತ್ತಮ ಸಮಯ. ವ್ಯಾಪಾರಿಗಳು ಇಂದು ಕೆಲವು ಉತ್ತಮ ವ್ಯವಹಾರಗಳನ್ನು ಪಡೆಯುವ ಸಾಧ್ಯತೆಯಿದೆ. ನೌಕರರು ಅಧಿಕಾರಿಗಳೊಂದಿಗೆ ವಾಗ್ವಾದದಲ್ಲಿ ತೊಡಗಬಾರದು. ಮತ್ತೊಂದೆಡೆ, ಇಂದು ನಿಮ್ಮ ಪ್ರೀತಿಪಾತ್ರರ ಜೊತೆ ಸಮಯ ಕಳೆಯುವ ಅವಕಾಶವನ್ನು ನೀವು ಪಡೆಯುತ್ತೀರಿ. ಹವಾಮಾನ ಬದಲಾವಣೆಯಿಂದ ಕೆಲವು ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ನೀವು ಇಂದು 85 ಪ್ರತಿಶತದಷ್ಟು …

Read More »

 ಯಾರೂ ಇಲ್ಲದಿದ್ದಾಗ ಹುಡುಗಿಯರು ಗೂಗಲ್ ನಲ್ಲಿ ಏನೆಲ್ಲಾ ಸರ್ಚ್ ಮಾಡುತ್ತಾರೆ ಗೊತ್ತಾ?

ಇತ್ತೀಚೆಗೆ, ಗೂಗಲ್ ತನ್ನ ಸರ್ಚ್ ರಿಸಲ್ಟ್ ವರದಿಯನ್ನು ಪ್ರಸ್ತುತಪಡಿಸಿದೆ. ಇದರಲ್ಲಿ ಮಹಿಳೆಯರು ಇಂಟರ್ನೆಟ್ ಬಳಕೆಗೆ ಸಂಬಂಧಿಸಿದ ಅನೇಕ ಆಸಕ್ತಿದಾಯಕ ವಿಷಯಗಳು ಬೆಳಕಿಗೆ ಬಂದಿವೆ. ಹೊಸ ವರದಿಯ ಪ್ರಕಾರ, ದೇಶದ ಒಟ್ಟು 15 ಕೋಟಿ ಇಂಟರ್ನೆಟ್ ಬಳಕೆದಾರರಲ್ಲಿ ಭಾರತದಲ್ಲಿ ಸುಮಾರು 60 ಮಿಲಿಯನ್ ಮಹಿಳೆಯರು ಈಗ ಆನ್‌ಲೈನ್‌ನಲ್ಲಿದ್ದಾರೆ. ಇದರಲ್ಲಿ 75% ಮಹಿಳೆಯರು 15-34 ವರ್ಷ ವಯಸ್ಸಿನವರಾಗಿದ್ದಾರೆ. ಇದಲ್ಲದೆ, ಹುಡುಗಿಯರು ಗೂಗಲ್‌ನಲ್ಲಿ ಏನು ಹುಡುಕುತ್ತಾರೆ ಎಂಬುದನ್ನು ತಿಳಿದುಕೊಳ್ಳುವುದು ತುಂಬಾ ಆಸಕ್ತಿದಾಯಕವಾಗಿದೆ. ವರದಿಯ ಪ್ರಕಾರ, ಹುಡುಗಿಯರು ಬಾಲ್ಯದಿಂದಲೂ ಮಹತ್ವಾಕಾಂಕ್ಷೆಯವರಾಗಿದ್ದಾರೆ. ಅವರು ತಮ್ಮ ವೃತ್ತಿಜೀವನಕ್ಕೆ ಗರಿಷ್ಠ ಗಮನ ನೀಡುತ್ತಾರೆ. ಅಂತಹ …

Read More »

ಮಣಿಪಾಲ: ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಣಿಪಾಲಕ್ಕೆ , ನಗರದಲ್ಲಿ ಬಿಗಿ ಭದ್ರತೆ

ಉಡುಪಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಮಾಹೆ ವಿಶ್ವವಿದ್ಯಾನಿಲಯದ 30ನೇ ಘಟಿಕೋತ್ಸವಕ್ಕೆ ಆಗಮಿಸಲಿದ್ದು, ಆ ಪ್ರಯುಕ್ತ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆದಿ ಉಡುಪಿಯ ಹೆಲಿಪ್ಯಾಡ್‌ನಿಂದ ಮಣಿಪಾಲದ ವರೆಗೆ ಪ್ರಾಯೋಗಿಕವಾಗಿ ಝೀರೋ ಟ್ರಾಫಿಕ್ ಮಾಡಲಾಗುತ್ತಿದೆ. ಉಡುಪಿಯಲ್ಲಿ ಎನ್‌ ಎಸ್‌ ಜಿ ಮತ್ತು ಜಿಲ್ಲಾ ಪೊಲೀಸರು ಬೀಡುಬಿಟ್ಟಿದ್ದಾರೆ. 100ರಿಂದ 150 ಮಂದಿ ಜಿಲ್ಲೆಯ ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಸಂಜೆ 4ರವರೆಗೆ ನಗರದಾದ್ಯಂತ ಬಿಗು ಪೊಲೀಸ್ ಭದ್ರತೆ ಇರಲಿದೆ.

Read More »

ಶ್ರದ್ಧಾ ಹತ್ಯೆ ಪ್ರಕರಣ- ಸಾಕ್ಷಿ ನಾಶಕ್ಕೆ OLXನಲ್ಲಿ ಫೋನ್ ಮಾರಿದ

ನವದೆಹಲಿ: ಲೀವ್ ಇನ್ ರಿಲೇಶನ್ ಶಿಪ್‍ನಲ್ಲಿದ್ದ ಗೆಳತಿಯನ್ನು ಭೀಕರವಾಗಿ ಹತ್ಯೆಗೈದು 35 ಪೀಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಭಯಾನಕ ವಿಷಯಗಳು ಹೊರಬರುತ್ತಿವೆ. ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ಹತ್ಯೆ ಬಳಿಕ ಡೇಟಿಂಗ್ ಆ್ಯಪ್ ಮೂಲಕ ಹಲವು ಯುವತಿಯರ ಜೊತೆ ಮಾತನಾಡುತ್ತಿದ್ದ. ಅದಾದ ಬಳಿಕ ಕೊಲೆ ಮಾಡಿದ್ದಕ್ಕೆ ಸಾಕ್ಷಿ ಸಿಗಬಾರದು ಎಂದು ತನ್ನ ಫೋನ್‍ನನ್ನು ಒಎಲ್‍ಎಕ್ಸ್‌ನಲ್ಲಿ ಮಾರಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ ಅಫ್ತಾಬ್ ಮತ್ತು ಶ್ರದ್ಧಾ ಡೇಟಿಂಗ್ ಅಪ್ಲಿಕೇಶನ್ ಬಂಬಲ್ ಮೂಲಕ ಪರಸ್ಪರ ಭೇಟಿಯಾಗಿದ್ದರು. ಅದಾದ ಬಳಿಕ ಕಳೆದ 3 ವರ್ಷಗಳ ಕಾಲ …

Read More »

You cannot copy content of this page.