ತಾಜಾ ಸುದ್ದಿ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ, ಉಡುಪಿ ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯ 2024-2026ರ ತಪ್ತ ಮುದ್ರಾಧಾರಣೆ ಜು. 17ರ ಬುಧವಾರ ಬೆಳಿಗ್ಗೆ 8 ಗಂಟೆಗೆ ನಡೆಯಿತು. ಆಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು, ಪರ್ಯಾಯ ಮಠಾಧೀಶರಿಂದ ಮುದ್ರೆ ಹಾಕಿಸಿಕೊಂಡರು.

Read More »

ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ಫಾಸ್ಟ್ಯಾಗ್‌ ಇದ್ರೂ ಕಟ್ಟಬೇಕು ದುಪ್ಪಟ್ಟು ಹಣ!

 ದೆಹಲಿ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಡಿಯಲ್ಲಿ ಬರುವ ಏಜೆನ್ಸಿಯಾದ ಎನ್‌ಎಚ್‌ಎಂಸಿಎಲ್, ಫಾಸ್ಟ್ಯಾಗ್ಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಸೂಚಿಸಿದೆ. ನೀವು ಫಾಸ್ಟ್ಟ್ಯಾಗ್ ಹೊಂದಿದ್ದರೆ ಮತ್ತು ನೀವು ಅದನ್ನು ಕಾರಿನ ಗಾಜಿನ ಮೇಲೆ ಹಾಕದಿದ್ದರೆ, ಖಂಡಿತವಾಗಿಯೂ ಈಗಲೇ ಅದನ್ನು ಅನ್ವಯಿಸಿ.   ಏಕೆಂದರೆ ಈಗ ನೀವು ನಿಮ್ಮ ಕೈಯಲ್ಲಿ ಫಾಸ್ಟ್ಟ್ಯಾಗ್ ಹೊಂದಿರುವ ಟೋಲ್ ಅನ್ನು ಕಡಿತಗೊಳಿಸಲು ಪ್ರಯತ್ನಿಸಿದರೆ, ನೀವು ಫಾಸ್ಟ್ಯಾಗ್ ಆಗಿದ್ದರೂ ಸಹ ನೀವು ದುಪ್ಪಟ್ಟು ಟೋಲ್ ಪಾವತಿಸಬೇಕಾಗಬಹುದು. ಎಕ್ಸ್ ಪ್ರೆಸ್ ವೇಗಳು ಮತ್ತು ಗ್ರೀನ್ ಫೀಲ್ಡ್ ಹೆದ್ದಾರಿಗಳಲ್ಲಿನ ಕೆಲವು ಬಳಕೆದಾರರು ಗಾಜಿನ ಮೇಲೆ ಫಾಸ್ಟ್ …

Read More »

ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಖಾಸಗಿ ಬಸ್ ಟೈರ್​ಗಳು!

ಚಿಕ್ಕಮಗಳೂರು : ಬಸ್ ಚಲಿಸುತ್ತಿದ್ದಾಗಲೇ ಹಿಂಬದಿಯ ಟಯರ್ ಗಳು ಕಳಚಿ ಬಿದ್ದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ ನಿಯಂತ್ರಣಕ್ಕೆ ಸಿಲುಕಿ ಸ್ಥಳದಲ್ಲೇ ನಿಂತಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಲಿಸುತ್ತಿರುವಾಗಲೇ ಹಿಂಬದಿಯ ಎರಡು ಟಯರ್ ಗಳು ಕಳಚಿ ನಿಂತಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂದಲೆಳೆ ಅಂತರದಲ್ಲಿ ಭಾರೀ ದುರ್ಘಟನೆ ತಪ್ಪಿದೆ. ಘಾಟಿ ಪ್ರದೇಶದಲ್ಲೂ ಬಸ್ ಸಂಚರಿಸಿದ್ದು ಅಲ್ಲೇನಾದರೂ ಸಂಭವಿಸಿದ್ದರೆ ದೊಡ್ಡ ಅವಘಡಕ್ಕೆ ಕಾರಣವಾಗುತ್ತಿತ್ತು.ಬಾಳೆಹೊನ್ನೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

Read More »

ಉಡುಪಿ: ಪಾರ್ಟ್‌ಟೈಮ್ ಜಾಬ್ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಪಾರ್ಟ್‌ ಟೈಮ್ ಜಾಬ್ ಹೆಸರಿನಲ್ಲಿ ಟಾಸ್ಕ್ ನೀಡಿ ಯುವತಿಯೋರ್ವಳಿಗೆ ಲಕ್ಷಾಂತರ ರೂ. ಆನ್‌ಲೈನ್ ಮೂಲಕ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಶ್ಚಿತಾ(25) ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ ಪಾರ್ಟ್‌ ಟೈಮ್ ಜಾಬ್ ಬಗ್ಗೆ ಜಾಹೀರಾತು ಬಂದಿದ್ದು ಅದನ್ನು ನಂಬಿ ಲಿಂಕ್‌ನ್ನು ಕ್ಲಿಕ್ ಮಾಡಿ ನೊಂದಣಿ ಮಾಡಿಕೊಂಡಿದ್ದರು. ನಂತರ ಅಪರಿಚಿತ ವ್ಯಕ್ತಿ ಕರೆ ಮಾಡಿ ಕೆಲವೊಂದು ಟಾಸ್ಕ್ ಗಳನ್ನು ನೀಡಿ, ಹೆಚ್ಚು ಹಣ ಪಡೆಯುವ ಬಗ್ಗೆ ನಂಬಿಸಿದ್ದರು. ಅದರಂತೆ ಅವರು ಜು.11ರಿಂದ 14ರವರೆಗೆ ಹಂತ ಹಂತವಾಗಿ ಒಟ್ಟು 2,06,507 …

Read More »

ಉಡುಪಿ: ದಂಪತಿ ಜಗಳ ಠಾಣೆಯಲ್ಲಿ ಇತ್ಯರ್ಥ – ವಾಪಾಸ್ ಬರುವಾಗ ಪತಿ ಹೊಳೆಗೆ ಹಾರಿ ಆತ್ಮಹತ್ಯೆ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವ್ಯಕ್ತಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆ ಕಾಳಾವರ ಜನತಾ ಕಾಲೋನಿ ನಿವಾಸಿ ಹರೀಶ್ ಎಂದು ತಿಳಿದು ಬಂದಿದೆ. ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಇಬ್ಬರ ಮನಸ್ತಾಪವನ್ನು ಅಲ್ಲೇ ಸರಿಪಡಿಸಿದ್ದಾರೆ‌ ಠಾಣೆಯಿಂದ ಆಟೋದಲ್ಲಿ ಬರುವಾಗ ಹೊಳೆ ಹತ್ತಿರ ನಿಲ್ಲಿಸಿ ಬ್ರಿಜ್ ಮೇಲಿಂದ ನದಿಗೆ ಹಾರಿದ್ದಾರೆ ಎಂದು ತಿಳಿಯಲಾಗಿದೆ. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಕಂಡ್ಲೂರು ನದಿಯಲ್ಲಿ ಹರೀಶ್ ಅವರ ಶವ ಹುಡುಕಾಟದಲ್ಲಿದ್ದಾರೆ.

Read More »

‘ಮನೆಯೇ ಗ್ರಂಥಾಲಯ’ ಸುವರ್ಣ ಸಂಭ್ರಮ- ಗಾಂಧಿ ಆಸ್ಪತ್ರೆಯಲ್ಲಿ ಸುಸಜ್ಜಿತ ಗ್ರಂಥಾಲಯ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ ನಡೆಯುತ್ತಿರುವ ವಿನೂತನ ಕಾರ್ಯಕ್ರಮ “ಮನೆಯೇ ಗ್ರಂಥಾಲಯ ” ಇದರ ಸುವರ್ಣ ಸಂಭ್ರಮವು ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಡೆಯಿತು. ಕನ್ನಡದ ಪ್ರಸಿದ್ಧ ವಿಮರ್ಶಕ ಪ್ರೊ. ಮುರುಳೀಧರ ಉಪಾಧ್ಯ ಹಿರಿಯಡ್ಕ ಅವರು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಹರೀಶ್ಚಂದ್ರ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಮಾಡುವ ಮೂಲಕ ರೋಗಿಗಳ ಸ್ವಸ್ಥ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ತಿಳಿಸಿದರು. ಅಲ್ಲದೆ ರೋಗಿಗಳ ಮನಸ್ಥಿತಿಗೆ ಅನುಗುಣವಾಗಿ ವಿವಿಧ ರೀತಿಯ ಆರೋಗ್ಯಕ್ಕೆ, …

Read More »

ಉಡುಪಿ: ಬಾರ್ ಮಾಲೀಕನ ಮನೆಯಲ್ಲಿ ಅಗ್ನಿ ಅವಘಡ ಪ್ರಕರಣ – ಉದ್ಯಮಿಯ ಪತ್ನಿಯೂ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಉಡುಪಿ: ಉಡುಪಿ ನಗರದ ಮನೆಯೊಂದರಲ್ಲಿ ನಡೆದಿದ್ದ ಭಾರೀ ಬೆಂಕಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲೀಕ ರಮಾನಂದ್ ಶೆಟ್ಟಿ ಅವರ ಪತ್ನಿ ಅಶ್ವಿನಿ (45) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿನ್ನೆ ಮುಂಜಾನೆ ನಡೆದಿದ್ದ ಅಗ್ನಿ ಅವಘಡದಲ್ಲಿ ಅಶ್ವಿನಿ ಅವರ ಪತಿ ರಮಾನಂದ್ ಶೆಟ್ಟಿ ಮೃತಪಟ್ಟಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಕೂಡ ಮೃತಪಟ್ಟಿದ್ದು ಕುಟುಂಬದಲ್ಲಿ ಶೋಕ ಮುಗಿಲು ಮುಟ್ಟಿದೆ. ಉಡುಪಿ ನಗರದಲ್ಲಿ ವಾಸ ಮಾಡುತ್ತಿದ್ದ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಮನೆಯಲ್ಲಿ ನಿನ್ನೆ ಮುಂಜಾನೆ ಶಾರ್ಟ್ ಸರ್ಕ್ಯುಟ್ ನಿಂದ ಅಗ್ನಿ …

Read More »

ಬೆಳ್ತಂಗಡಿ: ಚಾರ್ಮಾಡಿ ಬಳಿ ಲಾರಿಯಲ್ಲಿ ಭಾರತ್ ಬ್ರಾಂಡ್‌ ಅಕ್ಕಿ ಮಾರಾಟ – ಸ್ಥಳೀಯರಿಂದ ತಡೆ

ಬೆಳ್ತಂಗಡಿ: ಉಜಿರೆಯ ಚಾರ್ಮಾಡಿ ರಸ್ತೆಯಲ್ಲಿರುವ ಎಸ್.ಆರ್. ಬಾರ್ ಬಳಿ ಭಾರತ್ ಬ್ರಾಂಡ್‌ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಲಾರಿ ಒಂದನ್ನು ಸ್ಥಳೀಯರು ತಡೆ ಹಿಡಿದಿದ್ದಾರೆ. ಪಿ.ಕೆ.ಮಳಗಿ ಆಟ್ರೊ ಟೆಕ್ ಎಂಬ ಬೋರ್ಡ್ ಹೊಂದಿರುವ ಕೆಎ27 ಸಿ6204 ನೋಂದಣಿ ಸಂಖ್ಯೆಯ ಲಾರಿಯಲ್ಲಿ ಭಾರತ್ ಅಕ್ಕಿ ಮೂಟೆಗಳಿದ್ದು, ಕೆ.ಜಿ.ಗೆ 29 ರೂ.ನಂತೆ ಮಾರಾಟ ಮಾಡಲಾಗುತ್ತಿದ್ದು, ಇದನ್ನು ನೋಡಿ ಅನುಮಾನಗೊಂಡು ಸ್ಥಳೀಯರು ವಾಹನವನ್ನುತಡೆದಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಪೃಥ್ವಿಸಾನಿಕಂ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಯನ್ನು ಬೆಳ್ತಂಗಡಿ ಠಾಣೆಗೆ ಕೊಂಡೊಯ್ಯುವಂತೆ ತಹಶೀಲ್ದಾ‌ರ್ ಸೂಚಿಸಿದ್ದಾರೆ. ಈ ವೇಳೆ …

Read More »

ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ- ಸವಾರ ಗಂಭೀರ

ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ಈ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಮಾಜಸೇವಕ ಈಶ್ವರ ಮಲ್ಪೆ ಮತ್ತು ತಂಡದವರು ಸಹಕರಿಸಿದರು. ಇವರಿಗೆ ಗುಂಡಿಬ್ಯೆಲಿನಲ್ಲಿ ವರ್ಕ್ ಶಾಪ್ ಇದೆ ಎನ್ನಲಾಗುತ್ತಿದೆ. ಮಲ್ಪೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ ನ ಹಿಂಭಾಗ ಜಖಂಗೊಂಡಿದೆ.

Read More »

ಸುಬ್ರಹ್ಮಣ್ಯ:  ಕುಮಾರಧಾರ ನದಿಯಲ್ಲಿ ಆನೆಯ ಮೃತದೇಹ ಪತ್ತೆ

ಸುಬ್ರಹ್ಮಣ್ಯ:  ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ  ತಡ ರಾತ್ರಿ ಪತ್ತೆಯಾದ ಆನೆಯ ಮೃತದೇಹ ಪತ್ತೆಯಾಗಿದ್ದು,  ಕಾಡಿನಲ್ಲಿದ್ದ ಆನೆ ನದಿಯ ಪ್ರವಾಹಕ್ಕೆ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ನಿನ್ನೆ ರಾತ್ರಿ ಪ್ರವಾಹ ನೀರಿನಲ್ಲಿ ಆನೆ ಮೃತದೇಹ ಕೊಚ್ಚಿ ಕೊಂಡು ಬಂದಿದೆ, ಇದೀಗ  ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಆನೆಯ ಮೃತದೇಹಕ್ಕೆ ಅರಣ್ಯ ಇಲಾಖೆ ಹುಡುಕಾಟ ಆರಂಭಿಸಿದ್ದಾರೆ.

Read More »

You cannot copy content of this page.