ತಾಜಾ ಸುದ್ದಿ

ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ನ್ಯಾಯಾಲಯದಿಂದ ಇಂದು ತೀರ್ಪು ಸಾಧ್ಯತೆ

ಮಂಗಳೂರು: ನಗರದ ಹೊರವಲಯದಲ್ಲಿರುವ ಗುರುಪುರ ಬಳಿಯ ಮಳಲಿ ಮಸೀದಿ ವಿವಾದ ಪ್ರಕರಣದಲ್ಲಿ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದಿಂದ ಇಂದು ತೀರ್ಪು ಹೊರ ಬರುವ ಸಾಧ್ಯತೆಯಿದೆ. ಮಳಲಿ ಮಸೀದಿ ನವೀಕರಣದ ವೇಳೆ ಹಿಂದೂ ದೇವಾಲಯ ಶೈಲಿಯ ಪಾರಂಪರಿಕ ಕಟ್ಟಡ ಪತ್ತರಯಾಗಿತ್ತು. ಆ ಬಳಿಕ ಹಿಂದೂ ಸಂಘಟನೆಗಳು ಮಳಲಿ ಭಜನಾಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟಿತ್ತು. ಈ ತಾಂಬೂಲ ಪ್ರಶ್ನೆಯಲ್ಲಿ ಆ ಜಾಗದಲ್ಲಿ ಹಿಂದೆ ಶಿವನಿಗೆ ಸಂಬಂಧಿಸಿದ ಗುರು ಪೀಠವಿತ್ತು ಎಂಬ ಅಂಶ ಉಲ್ಲೇಖವಾಗಿತ್ತು. ಈ ಹಿನ್ನಲೆಯಲ್ಲಿ ಮಸೀದಿ ಇರುವ ಸ್ಥಳದ ಕೋರ್ಟ್ ಕಮೀಷನರ್ ಮೂಲಕ ವಿಎಚ್ …

Read More »

ಕುಂದಾಪುರ: ಬೈಂದೂರಿನಲ್ಲಿ ಮೆಡಿಕಲ್ ಕಾಲೇಜು, ವಿಮಾನ ನಿಲ್ದಾಣ ಸ್ಥಾಪನೆಗೆ ಮನವಿ

ಕುಂದಾಪುರ: ಬೈಂದೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಅವರು ಉಡುಪಿ ಜಿಲ್ಲಾಡಳಿತ ವತಿಯಿಂದ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯ ನಗು ಸಿಟಿಯಲ್ಲಿ ಮನೆ ಮನೆಗೆ ಕುಡಿಯುವ ನೀರು, ಮರವಂತೆ ಮೀನುಗಾರಿಕೆ ಬಂದರು, ಏತ ನೀರಾವರಿ ಯೋಜನೆ ಸಹಿತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ, ಗಂಗೊಳ್ಳಿ ಬಂದರು ಅಭಿವೃದ್ಧಿಗೆ 100 ಕೋಟಿಯ …

Read More »

ಕನ್ನಡದ ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ 

ಬೆಂಗಳೂರು: ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಅವರು ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ ಎನ್ನಲಾಗಿದೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರುಅಕ್ಟೋಬರ್​ 4ರಂದು ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆಂಗ್ಲ ಪ್ರಾಧ್ಯಾಪಕಾರಾಗಿ ಅವರು ತಮ್ಮನ್ನು ಗುರುತಿಸಿಕೊಂಡಿದ್ದರು.

Read More »

ಬಂಟ್ವಾಳ: ಯುವಕನ ಕಿಡ್ನಾಪ್‌ – ಪೆಟ್ರೋಲ್ ಸುರಿದು ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌..!?

ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ಆರೋಪ ಥಳುಕು ಹಾಕಿಕೊಂಡಿದೆ. ಬಂಧಿತ ಆರೋಪಿಯಾಗಿರುವ ಬೋಳಂತೂರು ನಿವಾಸಿ ಆಟೋ ಚಾಲಕ ಅದ್ರಾಮ ಎಂಬಾತ 19 ವರ್ಷದ ಯುವಕ ಸಮದ್ ಎಂಬಾತನನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಸಲಿಂಗಕಾಮಿ ಆಟೋ ಚಾಲಕ ಅದ್ರಾಮ.?!ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಒಬ್ಬ ಕುಖ್ಯಾತ ಸಲಿಂಗಕಾಮಿ ಎನ್ನುವ ಆರೋಪ ಕೇಳಿಬಂದಿದೆ. ಈ ಹಿಂದೆಯೂ ಹಲವು ಅಪ್ರಾಪ್ತ ಬಾಲಕರನ್ನು ಬಳಸಿ ಸಾರ್ವಜನಿಕವಾಗಿ ಒದೆ ತಿಂದಿದ್ದ. ವಿಟ್ಲ ಬಂಟ್ವಾಳ …

Read More »

ಉಡುಪಿ : ಇಂದು ಕೃಷ್ಣಮಠದಲ್ಲಿ ಗ್ರಹಣ ಮೋಕ್ಷ ಬಳಿಕ ರಾತ್ರಿಯ ಮಹಾಪೂಜೆ

ಉಡುಪಿ: ಇವತ್ತು ಮತ್ತೊಂದು ಚಂದ್ರ ಗ್ರಹಣಕ್ಕೆ ಕ್ಷಣಗಣನೆ ಆರಂಭಗೊಂಡಿದೆ.ಶ್ರೀ ಕೃಷ್ಣಮಠದಲ್ಲಿ ಗ್ರಹಣ ಕಾಲದಲ್ಲೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇವತ್ತು ಬೆಳಗ್ಗಿನಿಂದಲೇ ಆಸ್ತಿಕರು ಕೃಷ್ಣ ದರ್ಶನಕ್ಕೆ ಬರುತ್ತಿದ್ದಾರೆ.ಶ್ರೀ ಕೃಷ್ಣನ ದರ್ಶನ ಮಾಡಿ ಕೈಮುಗಿದು ಭಕ್ತರು ತೆರಳಿತ್ತಿದ್ದಾರೆ.ಆದರೆಗ್ರಹಣ ಹಿನ್ನಲೆಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿರುವುದು ಕಂಡು ಬಂತು. ಇದೇವೇಳೆ ಬೆಳಗ್ಗಿನಿಂದಲೇ ಅಷ್ಟಮಠಗಳ ಯತಿಗಳು ಜಪತಪದಲ್ಲಿ ನಿರತರಾಗಿದ್ದಾರೆ. ಇವತ್ತು ಎಂದಿನಂತೆ ಭಕ್ತರಿಗೆ ಅನ್ನ ಪ್ರಸಾದ ಇರುವುದಿಲ್ಲ.ಹಾಗೆಯೇ ಮಠದಲ್ಲಿ ಗ್ರಹಣ ಮೋಕ್ಷ ಬಳಿಕ ರಾತ್ರಿಯ ಮಹಾಪೂಜೆ ನೆರವೇರಿಸಲಾಗುತ್ತದೆ.

Read More »

ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಐವರು ಗಂಭೀರ

ಕಡಬ : ಫಾರ್ಚ್ಯೂನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಮಂಗಳವಾರದಂದು ನಡೆದಿದೆ.ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಫಾರ್ಚ್ಯೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ.

Read More »

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್‌ ಶೆಟ್ಟಿಗೆ ಬೆದರಿಕೆ

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿಯಾಗಿರುವ ರೂಪೇಶ್‌ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ರೂಪೇಶ್‌ ಶೆಟ್ಟಿ ಅವರು ಬಿಗ್‌ಬಾಸ್‌ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್‌ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು, ಸೆನ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

Read More »

 ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ಯಾವ ನಕ್ಷತ್ರ, ರಾಶಿಗಳಿಗೆ ದೋಷ? ಏನ್‌ ಮಾಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದು ಕಾರ್ತಿಕ ಮಾಸ ಹುಣ್ಣಿಮೆ ದಿನ ರಾಹುಗ್ರಸ್ತ ಚಂದ್ರಗ್ರಹಣ ಗೋಚರಿಸಲಿದೆ.ಕರುನಾಡಿನಲ್ಲಿಯೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ 15 ದಿನದ ಅಂತರದಲ್ಲಿಯೇ ಕಾರ್ತಿಕ ಪೂರ್ಣಿಮೆಯ ದಿನ ರಾಹುಗ್ರಸ್ಥ ಚಂದ್ರಗ್ರಹಣ ಸಂಭವಿಸಲಿದೆ. 15 ದಿನದ ಅಂತರದಲ್ಲಿ ಎರಡು ಗ್ರಹಣ ಸಂಭವಿಸಿರೋದ್ರಿಂದ ಜ್ಯೋತಿಷ್ಯ ಶಾಸ್ತ್ರದಲ್ಲಿ ಸಹಜವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ. ಭರಣಿ ನಕ್ಷತ್ರ ಮೇಷರಾಶಿಯಲ್ಲಿ ಸಂಭವಿಸಲಿರುವ ಗ್ರಹಣದಿಂದ ಕೆಲ ರಾಶಿಯವರಿಗೆ ಅಪತ್ತು ಕೆಲ ರಾಶಿಯವರಿಗೆ ಉತ್ತಮವೂ ಆಗಲಿದೆ ಎನ್ನುವ ವಿಶ್ಲೇಷಣೆಗಳು ಕೇಳಿಬಂದಿದೆ. ರಾಹುಗ್ರಸ್ಥ ಚಂದ್ರ ಗ್ರಹಣದ ಅವಧಿ ಹೀಗಿದೆ:> ಗ್ರಹಣ …

Read More »

ಮಂಗಳೂರು: ವಿಮಾನಕ್ಕೆ ಬಳಕೆಯಾಗುವ ಪೆಟ್ರೋಲ್‌ಗೆ ಕಲಬೆರಕೆ ಪ್ರಕರಣ; ಅಧಿಕಾರಿಗಳಿಂದ ದಾಳಿ

ಮಂಗಳೂರು: ವಿಮಾನಕ್ಕೆ ಬಳಕೆ ಆಗುವ ಪೆಟ್ರೋಲ್‌ಗೆ ಸೀಮೆಎಣ್ಣೆ ರಾಸಾಯನಿಕ ಕಲಬೆರಕೆ ಮಾಡುವ ಪ್ರಕರಣವೊಂದು ಸುರತ್ಕಲ್ ಬಳಿಯ ಬಾಳಾದಲ್ಲಿ ನಡೆದಿದೆ ಎನ್ನಲಾಗಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿ ಹಾಗೂ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡು ಎರಡು ಟ್ಯಾಂಕರ್, ಪಿಕ್‌ಅಪ್ ಸಹಿತ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ವಿಮಾನಕ್ಕೆ ಬಳಕೆ ಮಾಡುತ್ತಿದ್ದ ದುಬಾರಿ ಬೆಲೆಯ ಪೆಟ್ರೋಲ್ ಸರಬರಾಜು ಆಗುತ್ತಿದ್ದ ಟ್ಯಾಂಕರ್ ನಿಂದ ಪೆಟ್ರೋಲ್ ಕಳ್ಳತನ ಮಾಡಿ ಅದಕ್ಕೆ ಸೀಮೆ ಎಣ್ಣೆ ಕಲಬೆರಕೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ದಾಳಿಯ …

Read More »

ಮೂಡುಬಿದಿರೆ: ಖಾಸಗಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡುಬಿದಿರೆ : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ವರದಿಯಾಗಿದೆ. ಇಲ್ಲಿನ ನ್ಯಾಚುರೋಪತಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿನಿ, ಮೈಸೂರು ಮೂಲದ ಮೇಘನಾ (19) ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಸೋಮವಾರ ಸಾಯಂಕಾಲ ಮಾಡಿಕೊಂಡಿದ್ದಾಳೆ.ಆಕೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ಬೇಸತ್ತು ಆತ್ಮಹತ್ಯೆಗೈದಿದ್ದಾಳೆಂದು ತಿಳಿದು ಬಂದಿದೆ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

You cannot copy content of this page.